ಅಥವಾ
(9) (5) (2) (1) (1) (0) (1) (0) (4) (0) (0) (2) (0) (0) ಅಂ (1) ಅಃ (1) (5) (0) (2) (0) (0) (2) (0) (0) (0) (0) (0) (0) (0) (0) (0) (2) (0) (3) (0) (7) (2) (0) (5) (2) (5) (0) (1) (0) (0) (0) (0) (0) (2) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಎಲೆ ಎಲೆ ತಾಯೆ ನೋಡವ್ವಾ! ಇರುಳು ತೊಳಲುವ ಜಕ್ಕವಕ್ಕಿಯಂತೆ ಹಲಬುತ್ತಿದ್ದೆ ನೋಡವ್ವಾ! ಮಾಗಿಯ ಕೋಗಿಲೆಯಂತೆ ಮೂಗಿಯಾಗಿದ್ದೆ ನೋಡವ್ವಾ! ಮಹಾಲಿಂಗ ಗಜೇಶ್ವರನ ಅನುಭಾವಸಂಬಂದ್ಥಿಗಳ ಬರವೆನ್ನ ಪ್ರಾಣದ ಬರವು ನೋಡವ್ವಾ
--------------
ಗಜೇಶ ಮಸಣಯ್ಯ
ಎನ್ನ ಕರಸ್ಥಲವೇ ಬಸವಣ್ಣನಯ್ಯಾ. ಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯಾ. ಎನ್ನ ಭಾವಸ್ಥಲವೇ ಪ್ರಭುದೇವರಯ್ಯಾ. ಇಂತೆನ್ನ ಕರ ಮನ ಭಾವಂಗಳಲ್ಲಿ ಇಷ್ಟ ಪ್ರಾಣ ಭಾವಂಗಳು ತಲ್ಲೀಯವಾಗಿ ಮಹಾಲಿಂಗ ಗಜೇಶ್ವರಾ, ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲಿ ಕಂಡು ಪರಮಸುಖಿಯಾಗಿರ್ದೆನು.
--------------
ಗಜೇಶ ಮಸಣಯ್ಯ
ಎವೆ ಎವೆ ಹಳಚದೆ ಮೊಲೆಯ ಮೇಲಣ ಗಾಯ ಬಿಳಿಯ ರಕ್ತದ ಧಾರೆ ಸುರಿದಲ್ಲಿ ಸಸಿವಸರೆ ಬಸವಂತವೆಸೆದನವ್ವಾ. ಅಪ್ಪಿನ ಸೋಂಕಿನ ಸುಖ ಅಚ್ಚುಗವಳಿದುಳಿದಡೆ ಮಹಾಲಿಂಗ ಗಜೇಶ್ವರದೇವ ನಿರಾಸನಾಗಿರ್ದನವ್ವಾ.
--------------
ಗಜೇಶ ಮಸಣಯ್ಯ
ಎನ್ನ ಕಡೆಗಣ್ಣು ಕೆಂಪಾಯಿತವ್ವಾ. ಎನ್ನ ನಳಿತೋಳು ಉಡುಗಿದವವ್ವಾ. ಇಕ್ಕಿದ ಹವಳದ ಸರ ಬೆಳುಹಾದವವ್ವಾ. ಮುಕ್ತಾಫಳ ಹಾರದಿಂದ ಆನು ಬೆಂದೆನವ್ವಾ. ಇಂದೆನ್ನ ಮಹಾಲಿಂಗ ಗಜೇಶ್ವರನು ಬಹಿರಂಗವನೊಲ್ಲದೆ ಅಂತರಂಗದಲಿ ನೆರೆದ ಕಾಣೆಅವ್ವಾ!
--------------
ಗಜೇಶ ಮಸಣಯ್ಯ