ಅಥವಾ
(52) (19) (6) (1) (11) (4) (0) (0) (26) (0) (1) (12) (1) (0) ಅಂ (10) ಅಃ (10) (56) (0) (14) (1) (0) (6) (0) (6) (0) (0) (0) (0) (0) (0) (0) (21) (0) (5) (2) (26) (16) (1) (20) (10) (28) (0) (2) (0) (13) (10) (8) (0) (24) (30) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಊರ ನಡುವೆ ಒಂದು ಬೇಂಟೆ ಬಿದ್ದಿತ್ತು. ಆರು ಕಂಡವರು ತೋರಿರಯ್ಯಾ. ಊರಿಗೆ ದೂರುವೆನಗುಸೆಯನಿಕ್ಕುವೆ ಅರಸುವೆನೆನ್ನ ಬೇಂಟೆಯ. ಅರಿತು ಅರಿಯದೆ ಒಂದು ಬೇಂಟೆಯನಾಡಿದೆನು. ಅರಸಿಕೊಡಾ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಊರ ಸೀರೆಗೆ ಅಸಗ ತಡಬಡಗೊಂಬಂತೆ ಹೊನ್ನೆನ್ನದು, ಮಣ್ಣೆನ್ನದು ಎಂದು ನೆನೆನೆನೆದು ಬಡವಾದೆ. ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಊರ ಮುಂದೆ ಹಾಲತೊರೆ ಇರಲು ನೀರಡಸಿ ಬಂದೆನಲ್ಲಯ್ಯ ನಾನು. ಬರುದೊರೆವೋದವಳನೆನ್ನನಪ್ಪದಿರಯ್ಯಾ. ನೀನೊತ್ತಿದ ಕಾರಣ ಬಂದೆನಯ್ಯ. ಹೆರಿಗೆ ಕೂತವಳ ತೆಗೆದಪ್ಪುವನೆಗ್ಗ ನೋಡಾ ? ಈ ಸೂನೆಗಾರಂಗೆ ಕುರಿಯ ಮಾರುವರೆ ? ಮಾರಿದರೆಮ್ಮವರೆನ್ನ ನಿನಗೆ. ಎನ್ನತ್ತ ಮುಂದಾಗದಿರು, ಎನ್ನಮೇಲೆ ಕಾಲನಿಡದಿರು. ಚೆನ್ನಮಲ್ಲಿಕಾರ್ಜುನಂಗೆ ಸಲೆ ಮಾರುವೋದವಳಾನು.
--------------
ಅಕ್ಕಮಹಾದೇವಿ
ಊಡಿದಡುಣ್ಣದು, ನೀಡಿದಡೊಲಿಯದು. ಕಾಡದು ಬೇಡದು ಒಲಿಯದು ನೋಡಾ. ಊಡಿದಡುಂಡು ನೀಡಿದಡೊಲಿದು ಬೇಡಿದ ವರವ ಕೊಡುವ ಜಂಗಮಲಿಂಗದ ಪಾದವ ಹಿಡಿದು ಬದುಕಿದೆ, ಕಾಣಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ