ಅಥವಾ

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ವಬ್ರಹ್ಮಾಂಡವ ಒಬ್ಬ ದೇವ ನುಂಗಿಕೊಡಿಪ್ಪ ನೋಡಾ. ಆ ದೇವನ ನೆನಹಿನಿಂದ ಪರಶಿವನಾದ. ಆ ಪರಶಿವನ ಸಂಗದಿಂದ ಸದಾಶಿವನಾದ. ಆ ಸದಾಶಿವನ ಸಂಗದಿಂದ ಈಶ್ವರನಾದ. ಆ ಈಶ್ವರನ ಸಂಗದಿಂದ ರುದ್ರನಾದ. ಆ ರುದ್ರನ ಸಂಗದಿಂದ ವಿಷ್ಣುವಾದ. ಆ ವಿಷ್ಣುವಿನ ಸಂಗದಿಂದ ಬ್ರಹ್ಮನಾದ ಆ ಬ್ರಹ್ಮನ ಸಂಗದಿಂದ ಸಕಲ ಜಗಂಗಳು ಉತ್ಪತ್ತಿಯಾದವು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಪೂರ್ವದಲ್ಲಿ ಓಂಕಾರವೆಂಬ ಲಿಂಗದ ಸಂಗದಿಂದ ಪ್ರಣವವೆ ಆದಿಯಾಯಿತ್ತು ನೋಡಾ. ಆ ಆದಿಯ ಸಂಗದಿಂದ ಒಬ್ಬ ಶಿವನಾದ. ಆ ಶಿವನ ಸಂಗದಿಂದ ಈಶ್ವರನಾದ. ಆ ಈಶ್ವರನ ಸಂಗದಿಂದ ರುದ್ರನಾದ. ಆ ರುದ್ರನ ಸಂಗದಿಂದ ವಿಷ್ಣುವಾದ. ಆ ವಿಷ್ಣುವಿನ ಸಂಗದಿಂದ ಬ್ರಹ್ಮನಾದ. ಬ್ರಹ್ಮಂಗೆ ಸರಸ್ವತಿಯಾದಳು, ವಿಷ್ಣುವಿಂಗೆ ಲಕ್ಷ್ಮಿಯಾದಳು, ರುದ್ರಂಗೆ ಕ್ರಿಯಾಶಕ್ತಿಯಾದಳು, ಈಶ್ವರಂಗೆ ಸ್ವಯಂಭೂಶಕ್ತಿಯಾದಳು, ಸದಾಶಿವಂಗೆ ಜ್ಞಾನಶಕ್ತಿಯಾದಳು. ಈ ಐವರ ಸಂಗದಿಂದ ನರರು ಸುರರು ದೇವಾದಿದೇವರ್ಕಳು ಕಿನ್ನರಕಿಂಪುರುಷರು ಗರುಡಗಂಧರ್ವರು ಹುಟ್ಟಿದರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ದಶನಾದಗಳು ಇಲ್ಲದಂದು, ಸುನಾದಗಳು ನೆಲೆಗೊಳ್ಳದಂದು, ಝೇಂಕಾರವು ಮೊನೆದೋರದಂದು, ಅತ್ತತ್ತಲೆ ನಿಶ್ಚಿಂತ ನಿರಾಕುಳನಾಗಿದ್ದನಯ್ಯ. ತನ್ನ ನೆನವಿನ ಮಂತ್ರದಲ್ಲಿ ಓಂಕಾರನೆಂಬ ಮೂರ್ತಿಯಾದನಯ್ಯ. ಆ ಓಂಕಾರನೆಂಬ ಮೂರ್ತಿಂಗೆ ಚಿಚ್ಫಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ಪರಶಿವನಾದ. ಆ ಪರಮಶಿವಂಗೆ ಪರಾಶಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ಸದಾಶಿವನಾದ, ಆ ಸದಾಶಿವಂಗೆ ಜ್ಞಾನಶಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ಈಶ್ವರನಾದ, ಆ ಈಶ್ವರಂಗೆ ಇಚ್ಫಾಶಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ರುದ್ರನಾದ, ಆ ರುದ್ರಂಗೆ ಕ್ರಿಯಾಶಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ವಿಷ್ಣುವಾದ, ಆ ವಿಷ್ಣುವಿಂಗೆ ಲಕ್ಷ್ಮಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ಬ್ರಹ್ಮನಾದ, ಆ ಬ್ರಹ್ಮಂಗೆ ಸರಸ್ವತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ನರಲೋಕಾದಿ ಲೋಕಂಗಳು ಆದವು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಪ್ರಥಮಕಾಲದಲ್ಲಿ ಓಂಕಾರವೆಂಬ ಲಿಂಗಕ್ಕೆ ನಾದಮೂರ್ತಿಯಾದ. ಆ ನಾದಮೂರ್ತಿಗೆ ಬಿಂದುಮೂರ್ತಿಯಾದ. ಆ ಬಿಂದುಮೂರ್ತಿಗೆ ಕಳಾಮೂರ್ತಿಯಾದ. ಆ ಕಳಾಮೂರ್ತಿಗೆ ಶಿವನಾದ, ಆ ಶಿವನಿಂಗೆ ಸದಾಶಿವನಾದ, ಆ ಸದಾಶಿವಂಗೆ ಈಶ್ವರನಾದ, ಆ ಈಶ್ವರಂಗೆ ರುದ್ರನಾದ, ಆ ರುದ್ರಂಗೆ ವಿಷ್ಣುವಾದ, ಆ ವಿಷ್ಣುವಿಂಗೆ ಬ್ರಹ್ಮನಾದ, ಆ ಬ್ರಹ್ಮಂಗೆ ನರರು ಸುರರು ದೇವಾದಿದೇವರ್ಕಳಾದರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಪೃಥ್ವಿ-ಅಪ್ಪು-ತೇಜ-ವಾಯು-ಆಕಾಶವಿಲ್ಲದಂದು, ರವಿ-ಶಶಿ-ಆತ್ಮರಿಲ್ಲದಂದು, ನಾದ-ಬಿಂದು-ಕಲೆಗಳಿಲ್ಲದಂದು, ಸಾಕ್ಷಿ-ಸಭೆಗಳಿಲ್ಲದಂದು, ಶೂನ್ಯ-ನಿಃಶೂನ್ಯವಿಲ್ಲದಂದು, ಏನೇನೂ ಇಲ್ಲದಂದು ಅತ್ತತ್ತಲೆ, ಅಪರಂಪರ ನಿರಾಳ ತಾನೇ ನೋಡಾ. ಆ ನಿರಾಳನ ಚಿದ್ವಿಲಾಸದಿಂದ ಪರಬ್ರಹ್ಮನಾದನಯ್ಯ. ಆ ಪರಬ್ರಹ್ಮನ ಭಾವದಿಂದ ಪರಶಿವನಾದ. ಆ ಪರಶಿವನ ಭಾವದಿಂದ ಸದಾಶಿವನಾದ. ಆ ಸದಾಶಿವನ ಭಾವದಿಂದ ಈಶ್ವರನಾದ. ಆ ಈಶ್ವರನ ಭಾವದಿಂದ ರುದ್ರನಾದ. ಆ ರುದ್ರನ ಭಾವದಿಂದ ವಿಷ್ಣುವಾದ. ಆ ವಿಷ್ಣುವಿನ ಭಾವದಿಂದ ಬ್ರಹ್ಮನಾದ. ಆ ಬ್ರಹ್ಮಂಗೆ ಸರಸ್ವತಿಯ ಸಂಬಂಧಿಸಿ ಧಾರೆಯನೆರೆದರು. ವಿಷ್ಣುವಿಂಗೆ ಲಕ್ಷ್ಮಿಯ ಸಂಬಂಧಿಸಿ ಧಾರೆಯನೆರೆದರು. ರುದ್ರಂಗೆ ಕ್ರಿಯಾಶಕ್ತಿಯ ಸಂಬಂಧಿಸಿ ಧಾರೆಯನೆರೆದರು. ಈಶ್ವರಂಗೆ ಇಚ್ಫಾಶಕ್ತಿಯ ಸಂಬಂಧಿಸಿ ಧಾರೆಯನೆರೆದರು. ಸದಾಶಿವಂಗೆ ಜ್ಞಾನಶಕ್ತಿಯ ಸಂಬಂಧಿಸಿ ಧಾರೆಯನೆರೆದರು. ಪರಶಿವಂಗೆ ಪರಾಶಕ್ತಿಯ ಸಂಬಂಧಿಸಿ ಧಾರೆಯನೆರೆದರು. ಪರಬ್ರಹ್ಮಕೆ ಚಿತ್‍ಶಕ್ತಿಯ ಸಂಬಂಧಿಸಿ ಧಾರೆಯನೆರೆದರು. ಇಂತೀ ಭೇದವನರಿತು ಇರಬಲ್ಲರೆ ಅವರೇ ಪ್ರಾಣಲಿಂಗಸಂಬಂಧಿಗಳು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
-->