ಅಥವಾ

ಒಟ್ಟು 32 ಕಡೆಗಳಲ್ಲಿ , 3 ವಚನಕಾರರು , 24 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ಅರುವತ್ತು ಲಕ್ಷದ ಮೇಲೆ ಸಾವಿರದಾ ಐನೂರಾತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮೇಘವಾಹನವೆಂಬ ಭುವನ. ಆ ಭುವನದೊಳು ಚಂಡಮಾರುತನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾತೊಂಬತ್ತೈದು ಕೋಟಿ ನಾರಾಯಣ-ರುದ್ರ-ಬ್ರಹ್ಮ-ಇಂದ್ರಾದಿಗಳಿಹರು ನೋಡಾ. ಏಳುನೂರಾ ತೊಂಬತ್ತೈದು ಕೋಟಿ ವೇದಪುರುಷರು ಮುನೀಂದ್ರರು ಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತುನಾಲ್ಕು ಸಾವಿರದ ಏಳುನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರಜೇಷವೆಂಬ ಭುವನ. ಆ ಭುವನದೊಳು ಕಪಾಲಮಾಲಾಧರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಎಪ್ಪತ್ತುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು, ಮುನ್ನೂರಾ ಎಪ್ಪತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತೇಳು ಸಾವಿರದಾ ಏಳುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಗಾಂಧರ್ವವೆಂಬ ಭುವನ. ಆ ಭುವನದೊಳು ಉಗ್ರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಎಂಬತ್ತೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳು ಇಂದ್ರಚಂದ್ರಾದಿತ್ಯರಿಹರು ನೋಡಾ. ಮುನ್ನೂರ ಎಂಬತ್ತೈದು ಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತಾರುಲಕ್ಷದ ಮೇಲೆ ಸಾವಿರದಾ ಐನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಜಟಾಧರವೆಂಬ ಭುವನ. ಆ ಭುವನದೊಳು ಜಟಾಜೂಟನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ಎಪ್ಪತ್ತೈದುಕೋಟಿ ಇಂದ್ರ ಬ್ರಹ್ಮ ನಾರಾಯಣ ರುದ್ರರಿಹರು. ಏಳುನೂರಾ ಎಪ್ಪತ್ತೈದುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತೆರಡು ಸಾವಿರದಾ ಏಳುನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅಕೃತವೆಂಬ ಭುವನ. ಆ ಭುವನದೊಳು ತ್ರಿಯಂಬಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರ ಅರವತ್ತುಕೋಟಿ ನಾರಾಯಣ-ಬ್ರಹ್ಮ ರುದ್ರಾದಿಗಳಿಹರು ನೋಡಾ. ಮುನ್ನೂರರವತ್ತು ಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪ್ರಸಾದ ಪ್ರಸಾದವೆಂದು ನುಡಿದುಕೊಂಡುಂಬಿರಿ. ಎಲ್ಲರಿಗೆಲ್ಲಿಹುದೊ ಶಿವಪ್ರಸಾದ ? ಇಂತಪ್ಪ ಪ್ರಸಾದದ ಘನವಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರೋ. ಪ್ರಸಾದವೆಂಬುದು, ಪರಾಪರನಾಮವುಳ್ಳ ಪರಮಾನಂದವೇ ಪ್ರಸಾದ ಕಾಣಿರೋ. ಪ್ರಸಾದವೆಂಬುದು, ಪರಮನಿರಂಜನ ಪರಬ್ರಹ್ಮವೇ ಪ್ರಸಾದ ಕಾಣಿರೋ. ಪ್ರಸಾದವೆಂಬುದು, ಅಖಿಳಕೋಟಿ ಬ್ರಹ್ಮಾಂಡಗಳ ಗಮಿಸುವುದಕ್ಕೆ ಲಯಿಸುವುದಕ್ಕೆ ಮಾತೃಸ್ಥಾನವಾದ ಚಿತ್ಪ್ರಕಾಶವೇ ಪ್ರಸಾದ ಕಾಣಿರೋ. ಪ್ರಸಾದವೆಂಬುದು, ಪರಶಿವತತ್ವ ಪರಿಪೂರ್ಣತ್ವ ಪರಂಜ್ಯೋತಿ ಪರಮಪ್ರಕಾಶವೇ ಪ್ರಸಾದ ಕಾಣಿರೋ. ಇಂತಪ್ಪ ವಿಚಾರವ ತಿಳಿದು ಪ್ರಸಾದವ ಕೊಡಬಲ್ಲರೆ ಗುರುಲಿಂಗಜಂಗಮರೆಂದೆನ್ನಬಹುದು. ಇಂತಪ್ಪ ನಿರ್ಣಯವ ತಿಳಿದು ಪ್ರಸಾದವ ಕೊಳಬಲ್ಲಡೆ ಪ್ರಸಾದಿಗಳೆನ್ನಬಹುದು; ಪ್ರಳಯವಿರಹಿತರೆಂದೆನ್ನಬಹುದು. ಸತ್‍ಸದ್ಭಕ್ತರೆಂದೆನ್ನಬಹುದು. ಇಂತೀ ಭೇದವ ತಿಳಿಯದೆ ನೀರು ಕೂಳಿಗೆ ಪಾದೋದಕ ಪ್ರಸಾದವೆಂದು ಒಡಲಹೊರವುದು ಪ್ರಸಾದವಲ್ಲ. ಅಂತಪ್ಪ ಘನಮಹಾಪ್ರಸಾದದ ಸಕೀಲಸಂಬಂಧವನರಿದು ನಿರ್ಧರಿಸಿದವರಾರೆಂದರೆ, ಹಿಂದಕ್ಕೆ ಬಸವಾದಿ ಪ್ರಭುದೇವರಾಂತ್ಯಮಾದ ಏಳುನೂರಾ ಎಪ್ಪತ್ತು ಪ್ರಮಥಗಣಂಗಳು ಕೊಂಡುದು ಇದೇ ಪ್ರಸಾದ. ಇನ್ನು ಮುಂದಿನವರಿಗಾದಡು ಇದೇ ಪ್ರಸಾದ. ಇಂತಪ್ಪ ಪರತತ್ವಪ್ರಸಾದಕ್ಕೆ ಸುಜ್ಞಾನಿಗಳಾಗಿ ಸತ್ಕ್ರಿಯಾ ಸಮ್ಯಜ್ಞಾನವೆಂಬ ಎರಡುಕಾಲಿಗೆ ಷಡ್ವಿಧಭಕ್ತಿ ಎಂಬ ಹಲ್ಲು ಜೋಡಿಸಿ, ಏಣಿಯ ಹಚ್ಚಿ, ನಿರ್ವಯಲಪದವನೈದಲರಿಯದೆ, ಅಹಂಕಾರ ಮಮಕಾರವೆಂಬ ಎರಡುಕಾಲಿಗೆ ಅಷ್ಟಮದವೆಂಬ ಹಲ್ಲುಜೋಡಿಸಿ ಸಪ್ತವ್ಯಸನಗಳೆಂಬ ಕೀಲುಜಡಿದು ಷಡ್ವರ್ಗಗಳೆಂಬ ಹಗ್ಗದ ಬಿರಿಯ ಬಂಧಿಸಿ, ಏಣಿಯ ಯಮಲೋಕಕ್ಕೆ ಹಚ್ಚಿ, ನರಕವ ಭುಂಜಿಸುವ ನರಕಜೀವಿಗಳಿಗೆ ಪ್ರಸಾದಿಗಳೆಂದಡೆ ನಿಮ್ಮ ಶರಣ ಚೆನ್ನಬಸವಣ್ಣ ಕಂಡು, ಇಂತಪ್ಪ ಮೂಳಹೊಲೆಯರ ಮೂಗಕೊಯ್ದು ಮೆಣಸಿನ ಹಿಟ್ಟು ತುಂಬಿ ಮೂಡಲದಿಕ್ಕಿಗೆ ಅಟ್ಟೆಂದ ಕಾಣಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಂಥ ಬ್ರಹ್ಮಾಂಡವ ಐವತ್ತೆರಡುಲಕ್ಷದ ಮೇಲೆ ಸಾವಿರದಾ ಐನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರಕಾಮದವೆಂಬ ಭುವನ. ಆ ಭುವನದೊಳು ಪ್ರನಾಥನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ಐವತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಏಳುನೂರಾ ಐವತ್ತೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳು ಇಂದ್ರಚಂದ್ರಾದಿತ್ಯರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ರಾಂಡವ ಎಪ್ಪತ್ತೊಂಬತ್ತು ಸಾವಿರದಾ ಏಳುನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ರಾಕ್ಷಸವೆಂಬ ಭುವನ. ಆ ಭುವನದೊಳು ದೈತ್ಯಸಂಹಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ತೊಂಬತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು, ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಘಟ್ಟಬೆಟ್ಟದ ನಟ್ಟನಡುವಿನ ಗಿರಿಯಲ್ಲಿ ಹುಟ್ಟಿತೊಂದು ಸೋಜಿಗದಗ್ನಿಯ ಕಳೆ. ಆ ಕಳೆಯ ಬೆಳಗ ಕಾಣೆನೆಂದು ಇಬ್ಬರು ಮುಂದುಗೆಟ್ಟರು, ಮೂವರು ತಾಮಸಕ್ಕೊಳಗಾದರು, ನಾಲ್ವರು ನಡೆಗೆಟ್ಟರು, ಐವರು ಅಂಧಕರಾದರು, ಆರುಮಂದಿ ಹೋರಾಟಗೊಳುತಿರೆ, ಏಳುಮಂದಿ ಕೂಪವ ಬಿದ್ದರು, ಎಂಟುಮಂದಿ ತಂಟುಕಕ್ಕೆ ಒಳಗಾದರು. ಒಂಬತ್ತು [ಮಂದಿ] ಕಣವಿಯ ಹರವರಿಯಲ್ಲಿ [ಹೊಕ್ಕರು.] ಹತ್ತು ಬಗೆಯವರು ಹರಿದಾಡುತಿರೆ, ಇದನು ಕಂಡು, ತರುಗಿರಿಯ ನಡುವೆ ಹರಿವ ಉದಕ ಗಾಳಿ ಬಂದು ಬೆಟ್ಟವನಡರಿ, ಉರಿವ ಜ್ಯೋತಿಯ ತಾಗದ ಮುನ್ನ ನೀರಹರಿಯನಡ್ಡಂಗಟ್ಟಿ, ಗಾಳಿಯ ಹಿಮ್ಮೆಟ್ಟಿಸಿ, ಜ್ಞಾನಪರಬ್ರಹ್ಮದಲ್ಲಿ ನಿಂದವರಾರೆಂದರೆ : ಪ್ರಭುದೇವರು, ಚೆನ್ನಬಸವೇಶ್ವರದೇವರು, ಮೋಳಿಗೆಯ್ಯನವರು, ಸಂಗನಬಸವೇಶ್ವರದೇವರು, ನೀಲಾಂಬಿಕೆ ತಾಯಿ, ಅಕ್ಕನಾಗಮ್ಮ, ಮಹಾದೇವಿಯಕ್ಕ, ಮುಕ್ತಾಯಿ ಮುಖ್ಯವಾದ ಏಳುನೂರಾ ಎಪ್ಪತ್ತು ಅಮರಗಣಂಗಳ ಲೆಂಕರ ಲೆಂಕನಾಗಿ ಎನ್ನ ಆದಿಪಿಂಡಿವ ಧರಿಸಿ, ಮತ್ರ್ಯಕ್ಕೆ ಕಳುಹಿದ ಭೇದವ ಪಿಂಡಜ್ಞಾನದಿಂದಲರಿದು ಆಚರಿಸುತ್ತಿದ್ದೆನಯ್ಯಾ ಎನ್ನಾಳ್ದ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಅಂಥ ಬ್ರಹ್ಮಾಂಡವ ಐವತ್ತುಲಕ್ಷದ ಮೇಲೆ ಸಾವಿರದಾ ನಾನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಈಶವೆಂಬ ಭುವನ. ಆ ಭುವನದೊಳು ಈಶಾನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ನಲವತ್ತೈದುಕೋಟಿ ನಾರಾಯಣ-ಬ್ರಹ್ಮ-ರುದ್ರಾದಿಗಳಿಹರು. ಏಳುನೂರಾ ನಲವತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತೆಂಟು ಸಾವಿರದಾ ಏಳುನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಯಕ್ಷವೆಂಬ ಭುವನ. ಆ ಭುವನದೊಳು ಶಂಭುವೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾತೊಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಮುನ್ನೂರಾತೊಂಬತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತೈದುಲಕ್ಷದ ಮೇಲೆ ಸಾವಿರದಾ ಐನೂರಾನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಲಕ್ಷ್ಮೀಧರವೆಂಬ ಭುವನ. ಆ ಭುವನದೊಳು ಗುಣಾತೀತನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ಎಪ್ಪತ್ತುಕೋಟಿ ನಾರಾಯಣ-ಬ್ರಹ್ಮ-ರುದ್ರರಿಹರು. ಏಳುನೂರಾ ಎಪ್ಪತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ನಾಲವತ್ತುನಾಲ್ಕುಲಕ್ಷದ ಮೇಲೆ ಸಾವಿರದಾ ನಾನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಜೇಷ*ವೆಂಬ ಭುವನ. ಆ ಭುವನದೊಳು ವಿಶ್ವಮೂಲನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ಹದಿನೈದುಕೋಟಿ ನಾರಾಯಣ-ಬ್ರಹ್ಮ-ರುದ್ರಾದಿಗಳಿಹರು ನೋಡಾ. ಏಳುನೂರಾ ಹದಿನೈದುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ನಾಲ್ವತ್ಮೂರುಲಕ್ಷದ ಮೇಲೆ ಸಾವಿರದ ನಾನೂರ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭೂತಪಾಲವೆಂಬ ಭುವನ. ಆ ಭುವನದೊಳು ಭೂತೇಶನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ಹತ್ತುಕೋಟಿ ಬ್ರಹ್ಮ-ವಿಷ್ಣು-ರುದ್ರಾದಿಗಳಿಹರು. ಏಳುನೂರಾ ಹತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪ್ರಾಣಲಿಂಗಿ ಪ್ರಾಣಲಿಂಗಿ ಎಂಬರಯ್ಯಾ ; ಪ್ರಾಣಲಿಂಗದ ನಿಲವನಾರು ಬಲ್ಲರಯ್ಯಾ ? ಪ್ರಾಣಲಿಂಗದ ನಿಲವ ಉರಿಲಿಂಗಪೆದ್ದಯ್ಯಗಳು ಬಲ್ಲರು. ಪ್ರಾಣಲಿಂಗದ ನಿಲುಕಡೆಯ ಸಿದ್ಧರಾಮಯ್ಯನವರು ಬಲ್ಲರು. ಪ್ರಾಣಲಿಂಗದ ಸ್ವರೂಪವನು ಹಡಪದಪ್ಪಣ್ಣ ಸತ್ಯಣ್ಣನವರು ಬಲ್ಲರು. ಪ್ರಾಣಲಿಂಗದ ನಿಲವ ನುಲಿಯ ಚಂದಯ್ಯ, ನೀಲಲೋಚನೆಯಮ್ಮನವರು ಮೊದಲಾದ ಬಸವಾದಿ ಪ್ರಮಥರು ಪ್ರಭುದೇವರಾಂತ್ಯಮಾದ ಏಳುನೂರಾ ಎಪ್ಪತ್ತು ಪ್ರಮಥಗಣಂಗಳು ಬಲ್ಲರಲ್ಲದೆ ಮಿಕ್ಕಿನ ಜಡಮತಿ ವೇಷಧಾರಿಗಳಾದ ಜೀವರುಗಳೆತ್ತ ಬಲ್ಲರಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನಷ್ಟು ... -->