ಅಥವಾ

ಒಟ್ಟು 8 ಕಡೆಗಳಲ್ಲಿ , 5 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಟ್ಟ ಬಯಲಲ್ಲಿ ಒಂದು ಶರಧಿ ಹುಟ್ಟಿತ್ತು. ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು. ಆ ಕಮಲದ ನೆಲೆಯ ಕಾಣಲರಿಯದೆ ತೊಳಲಿ ಬಳಲಿ, ಜಗದೊಳಗೆ ನಚ್ಚುಮಚ್ಚಿಗೊಳಗಾಗಿ, ಚುಚ್ಚಳ ಪೂಜೆಗೆ ಸಿಲ್ಕಿ, ಕುಲಕೆ ಛಲಕೆ ಕೊಂದಾಡಿ, ಭವಕ್ಕೆ ಗುರಿಯಾಗುವ ಮನುಜರ ಕಂಡು ನಾಚಿತ್ತೆನ್ನ ಮನವು. ಆ ಮನದ ಬೆಂಬಳಿಗೊಂಡು ಹೋದವರೆಲ್ಲ ಮರುಳಾಗಿ ಹೋದರು. ಇದ ನೋಡಿ ನಾನು ಬಟ್ಟಬಯಲಲ್ಲಿ ನಿಂದು ನೋಡಿದಡೆ, ಶರಧಿ ಬತ್ತಿತ್ತು ಕಮಲ ಕಾಣಬಂದಿತ್ತು. ಆ ಕಮಲ ವಿಕಾಸವಾಯಿತ್ತು ಪರಿಮಳವೆಂಬ ವಾಸನೆ ತೀಡಿತ್ತು. ಆ ವಾಸನೆವಿಡಿದು ಜಗದಾಸೆಯ ಹಿಂಗಿ ಮಾತು ಮಥನವ ಕೆಡಿಸಿ, ಮಹಾಜ್ಯೋತಿಯ ಬೆಳಗಿನಲಿ ಓಲಾಡುವ ಶರಣರ ಆಸೆ ರೋಷ ಪಾಶಕ್ಕೊಳಗಾದ ಈ ಜಗದ ಹೇಸಿಗಳೆತ್ತಬಲ್ಲರು, ಈ ಮಹಾಶರಣರ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಹಿಂದಣಜನ್ಮದ ಸಂಸಾರವ ಮರೆದು, ಮುಂದಣ ಭವಬಂಧನಂಗಳ ಜರಿದು, ಸಂದೇಹ ಸಂಕಲ್ಪಗಳ ಹರಿದು, ನಿಮ್ಮ ಅವಿರಳಭಕ್ತಿಯ ಬೆಳಗಿನಲ್ಲಿ ಬೆರೆದು ಓಲಾಡುವ ಮಹಾಮಹಿಮರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕಾಳಿಂಗನ ಮಡುವ ಕಲಕಿದವನ ನಾಬ್ಥಿಯ ಕೂಸಿನ ಶಿರಪಾಣಿಯಲ್ಲಿ ಬೇಡುವ, ಆತನ ಶಕ್ತಿಯ ಸಮರಸದಲ್ಲಿ ಓಲಾಡುವ, ಮುಕ್ತಿವಂತರೆಲ್ಲರೂ ಕೇಳುವ ಬನ್ನಿ, ಅರ್ಕೇಶ್ವರಲಿಂಗವ.
--------------
ಮಧುವಯ್ಯ
ಅರಿವಿಂಗೂ ಮರವೆಯ ದೆಸೆಯಲ್ಲಿ ಓಲಾಡುವ ಇಂದ್ರಿಯಂಗಳ ಸಮೂಹ. ಈ ಉಭಯವೂ ಕೂಡಿ, ಮಹವೊಡಗೂಡಿದಲ್ಲಿ ಭರಿತಾರ್ಪಣ. ಅರಿವುಳ್ಳವನೆಂದು, ನಿಬ್ಬೆರಗು ಕರಿಗೊಂಡವನೆಂದು, ಸರ್ವಸಂಗಪರಿತ್ಯಾಗಿಯೆಂದು ತಾನರಿಯದೆ, ಉಳಿದರ ಕೈಯಿಂದ, ಪರಾಧೀನರಿಗೊರೆಯದೆ, ಅಮೃತ ಸುಧೆಯಂತೆ, ಪರಿಪೂರ್ಣ ಕಳೆದಂತೆ, ಅರಿದರಿಯದಂತಿದ್ದುದು ಭರಿತಾರ್ಪಣ. ಹೀಂಗಲ್ಲದೆ ಅಜಯಾಗವ ಮಾಡುವ ವಿಪ್ರನ ಕರ್ಮದಂತೆ ನಾನಲ್ಲ ನೇಣು ಕೊಂದಿತ್ತೆಂದು ದಾಯಗಾರಿಕೆಯಲ್ಲಿ ಹೋಹ ದರ್ಶನ ಢಾಳಕವಂತಂಗೆ, ತನ್ನ ಕಾಲ ವೇಳೆಗೆ ತಕ್ಕಹಾಗೆ ಭಕ್ತಿಯ ಮರೆದು, ಸತ್ಯವ ತೊರೆದ ದುರ್ಮತ್ತಂಗೆ ಭರಿತಾರ್ಪಣದ ಕಟ್ಟುಂಟೆ ? ಇಂತೀ ಭೇದಂಗಳ ಯುಕ್ತಿಯಲ್ಲಿ ಸತ್ತು ಚಿತ್ತು ಆನಂದವೆಂಬ ಗೊತ್ತ ಮುಟ್ಟದೆ, ಮನ ಘನದಲ್ಲಿ ನಿಂದು ಉಭಯದೆಡೆಗೆಟ್ಟುದು ಭರಿತಾರ್ಪಣ. ಈ ಗುಣ ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗ ಸಂಗ.
--------------
ಭರಿತಾರ್ಪಣದ ಚೆನ್ನಬಸವಣ್ಣ
ಆಗಮ ನಿಗಮ ಶಾಸ್ತ್ರ ಪುರಾಣವೆಂಬ ಅಂಧಕನ ಕೈಗೆ ಕೋಲಕೊಟ್ಟು ನಡೆಸಿಕೊಂಡು ಹೋಗುವಾಗ, ತನ್ನ ಕಣ್ಣುಗೆಟ್ಟಡೆ ಮುಂದಕ್ಕೆ ಗಮನವಿಲ್ಲ. ಹಿಂದಕ್ಕೆ ತಿರುಗಲರಿಯದೆ, ಎರಡಕ್ಕೆ ಕೆಟ್ಟ ಜಂಬುಕನಂತೆ ಆಯಿತ್ತು ನೋಡಾ. ಸಜ್ಜನ ಗಂಡನ ಕದ್ದು, ಕಳ್ಳನ ಹಿಂದೆ ಹೋದ ಸತಿಯಂತೆ ಆದರಲ್ಲಾ. ಸಂತೆಯಲ್ಲಿ ಗುಡಿಸಲನಿಕ್ಕಿ ಹಡೆದುಂಬ ಸೂಳೆಯಂತೆ, ಮನವೆ ಸೂಳೆಯಾಗಿ, ಮಾತಿನ ಮಾಲೆಯ ಸರವನಿಕ್ಕಿಕೊಂಡು, ವಾಚಾಳಿಗತನದಿಂದ ಒಡಲ ಹೊರೆವವರೆಲ್ಲರೂ ಶರಣರಪ್ಪರೆ ? ಅಲ್ಲಲ್ಲ. ಅದೆಂತೆಂದಡೆ: ತನು ಕರಗಿ, ಮನ ಪುಳಕವಾದ ಮಹಾಮಹಿಮರಿಗಲ್ಲದೆ ಉಚ್ಚಿಯ ಬಚ್ಚಲಲ್ಲಿ ಓಲಾಡುವ ತೂತಜ್ಞಾನಿಗಳಿಗೆಂತಪ್ಪದು ಹೇಳಾ ? ಕಾಲಾಳು ಆಕಾಶವನಡರಿಹೆನೆಂಬ ಪರಿಯೆಂತೊ ? ಬ್ರಹ್ಮಪುರ ವೈಕುಂಠ ರುದ್ರಪುರ ಅಷ್ಟಾದಿ ಕೈಲಾಸವೆಂಬ ಈ ಪಂಚಗ್ರಾಮಂಗಳ ವರ್ಮ ಕರ್ಮವಳಿದ ಮಹಾದೇವಂಗಲ್ಲದೆ ಮುಂದಕ್ಕೆ ಅಡಿಯಿಡಬಾರದು. ಪಿಪೀಲಿಕ ಕಪಿಯ ಮತವೆಂಬ ಪಥ ಮೀರಿ, ವಿಹಂಗವೆಂಬ ವಾಹನಮಂ ಏರಿ, ಬ್ರಹ್ಮಾಂಡಕ್ಕೆ ದಾಳಿ ಮಾಡಿ, ಸುವರ್ಣಪುರಮಂ ಸುಟ್ಟು ಸೂರೆಗೊಂಡ ಮಹಾನುಭಾವಿಗಳ ತೋರಿ ಬದುಕಿಸಾ. ನಿಜಗುರು ಭೋಗೇಶ್ವರಾ, ನಾ ನಿಮ್ಮ ಧರ್ಮವ ಬೇಡಿಕೊಂಬೆ.
--------------
ಭೋಗಣ್ಣ
ಮಾಯದ ಬೊಂಬೆಯ ಮಾಡಿ, ಕಂಗಳಿಗೆ ಕಾಮನ ಬಾಣವ ಹೂಡಿ, ನಡೆನುಡಿಯೊಳಗೆ ರಂಜಕದ ತೊಡಿಗೆಯನೆ ತೊಡಿಸಿ, ಮುಂದುಗಾಣಿಸದೆ, ಹಿಂದನರಸದೆ, ಲಿಂಗವ ಮರಹಿಸಿ, ಜಂಗಮವ ತೊರೆಯಿಸಿ, ಸಂದೇಹದಲ್ಲಿ ಸತ್ತು ಹುಟ್ಟುವ ಈ ಭವಬಂಧನಿಗಳೆತ್ತ ಬಲ್ಲರೋ ಈ ಶರಣರ ನೆಲೆಯ ? ಅವರ ನೆಲೆ ತಾನೆಂತೆಂದಡೆ ಹಿಂದನರಿದು, ಮುಂದೆ ಲಿಂಗದಲ್ಲಿ ಬೆರೆವ ಭೇದವ ಕಂಡು, ಜಗದ ಜಂಗುಳಿಗಳ ಹಿಂಗಿ, ಕಂಗಳ ಕರುಳನೆ ಕೊಯ್ದು, ಮನದ ತಿರುಳನೆ ಹರಿದು, ಅಂಗಲಿಂಗವೆಂಬುಭಯವಳಿದು, ಸರ್ವಾಂಗಲಿಂಗವಾಗಿ, ಮಂಗಳದ ಮಹಾಬೆಳಗಿನಲ್ಲಿ ಓಲಾಡುವ ಶರಣರ ನೆಲೆಯ ಜಗದ ಜಂಗುಳಿಗಳೆತ್ತ ಬಲ್ಲರು ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ತನ್ನ ತಾನರಿಯದೆ ಅನ್ಯರಿಗೆ ಬೋಧೆಯ ಹೇಳುವ ಅಣ್ಣಗಳಿರಾ, ನೀವು ಕೇಳಿರೊ. ಅವರ ಬಾಳುವೆ ರಿಂತೆಂದಡೆ; ಕುರುಡ ಕನ್ನಡಿಯ ಹಿಡಿದಂತೆ. ತನ್ನ ಒಳಗೆ ಮರೆದು ಇದಿರಿಂಗೆ ಬೋಧೆಯ ಹೇಳಿ, ಉದರವ ಹೊರೆವ ಚದುರರೆಲ್ಲರೂ ಹಿರಿಯರೆ ? ಅಲ್ಲಲ್ಲ. ಇದ ಮೆಚ್ಚುವರೆ ನಮ್ಮ ಶರಣರು ? ಅವರ ನಡೆ ಎಂತೆಂದಡೆ: ಒಳಗನರಿದು, ಹೊರಗ ಮರೆದು, ತನುವಿನೊಳಗಣ ಅನುವ ಹಸುಗೆಯ ಮಾಡಿದರು. ಪೃಥ್ವಿಗೆ ಅಪ್ಪುವಿನ ಅಧಿಕವ ಮಾಡಿದರು. ಅಗ್ನಿಯ ಹುದುಗಿದರು, ವಾಯುವ ಬೀರಿದರು, ಆಕಾಶದಲ್ಲಿ ನಿಂದರು, ಓಂಕಾರವನೆತ್ತಿದರು; ಅದರೊಡಗೂಡಿದರು. ಕಾಣದ ನೆಲೆಯನರಿದರು; ಪ್ರಮಾಣವನೊಂದುಗೂಡಿದರು. ಮಹಾಬೆಳಗಿನಲ್ಲಿ ಓಲಾಡುವ ಶರಣರ ವಾಗ್ಜಾಲವಕಲಿತುಕೊಂಡು ನುಡಿವ ಕಾಕುಮನುಜರೆತ್ತ ಬಲ್ಲರು ನಿಮ್ಮ ನೆಲೆಯ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ನೆನೆವುತ್ತಿದೆ ಮನ; ದುರ್ವಾಸನೆಗೆ ಹರಿವುತ್ತಿದೆ ಮನ; ಕೊನೆಗೊಂಬೆಗೆ ಎಳೆವುತ್ತಿದೆ ಮನ; ಕಟ್ಟಿಗೆ ನಿಲ್ಲದು ಮನ; ಬಿಟ್ಟಡೆ ಹೋಗದು ಮನ. ತನ್ನಿಚ್ಫೆಯಲಾಡುವ ಮನವ ಕಟ್ಟಿಗೆ ತಂದು, ಗೊತ್ತಿಗೆ ನಿಲಿಸಿ, ಬಚ್ಚ ಬರಿಯ ಬಯಲಿನೊಳಗೆ ಓಲಾಡುವ ಶರಣರ ಪಾದದಲ್ಲಿ ನಾ ಬೆಚ್ಚಂತಿದ್ದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
-->