ಅಥವಾ

ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಲಿಂಗಜಂಗಮದ ಭಕ್ತನಾದೆನೆಂದು, ಪಂಚವಿಧ ಪತಾಕಿಯ ಮುಂದೆ ನಿಲಿಸಿ ಮಾತನಾಡುವರಯ್ಯಾ. ಪಂಚಾಂಗವ ಕೇಳಿ ನಡೆದಲ್ಲಿ ಗುರುದ್ರೋಹಿಯೆಂಬೆ. ಅನ್ಯ ಸ್ಥಾವರ ಘನವೆಂದು ನಡೆದಲ್ಲಿ ಲಿಂಗದ್ರೋಹಿಯೆಂಬೆ. ಅಪಾತ್ರ ದ್ರವ್ಯನಿತ್ತಲ್ಲಿ ಜಂಗಮದ್ರೋಹಿಯೆಂಬೆ. ತದ್ದಾದಿ ಕುಷ್ಟರೋಗಕ್ಕೆ ಕಸಮಲೌಷಧ ಹಚ್ಚಿದಲ್ಲಿ ಭಸ್ಮದ್ರೋಹಿ. ಚಿನ್ನ ಬೆಳ್ಳಿ ಮೊದಲಾದ ಸಕಲಾಭರಣವ ಧರಿಸಿದಲ್ಲಿ ರುದ್ರಾಕ್ಷಿದ್ರೋಹಿ. ತೀರ್ಥಯಾತ್ರೆ ಘನವೆಂದುಕೊಂಡಲ್ಲಿ ಪಾದೋದಕದ್ರೋಹಿ. ಸಕಲರಿಂದೆ ಔಷಧವ ಭಕ್ಷಿಸಿದಲ್ಲಿ ಪ್ರಸಾದದ್ರೋಹಿ. ಯಂತ್ರ ಮಂತ್ರ ತಂತ್ರಗಳಿಂದೆ ಚರಿಸಿದಲ್ಲಿ ಪಂಚಾಕ್ಷರಿದ್ರೋಹಿ. ಇಂತು ಅಷ್ಟಾವರಣವ ಹೊತ್ತು ಅಷ್ಟದ್ರೋಹಿಯಾದ ಭ್ರಷ್ಟಭವಿಗಳಿಗೆತ್ತಣ ಮುಕ್ತಿಯಯ್ಯಾ ಗುರುನಿರಂಜನ ಚನ್ನಬಸವಲಿಂಗಾ ?
--------------
ದೇಶಿಕೇಂದ್ರ ಸಂಗನಬಸವಯ್ಯ
ಮಣಿಗಳಿಗೆ ಎಜ್ಜ ಹಿಡಿಯುವರಲ್ಲದೆ, ಮನಕ್ಕೆ ಎಜ್ಜ ಹಿಡಿಯುವರಾರೂ ಇಲ್ಲ. ವ್ಯಾಧಿಗೆ ಔಷಧವ ಕೊಡುವವರಲ್ಲದೆ, ಮರಣಕ್ಕೆ ಔಷಧವ ಕೊಡುವವರಾರೂ ಇಲ್ಲ. ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಗರ್ಭದೊಳು ಪ್ರಮಥ ಚಿಂತಾಮಣಿ ಚೆನ್ನಬಸವಣ್ಣನಲ್ಲದೆ ಮತ್ತಾರೂ ಇಲ್ಲ.
--------------
ಸಿದ್ಧರಾಮೇಶ್ವರ
-->