ಅಥವಾ

ಒಟ್ಟು 6 ಕಡೆಗಳಲ್ಲಿ , 4 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದವನೋದಿದಡೇನು? ಶಾಸ್ತ್ರವ ಕಲಿತಡೇನು? ಮಾಘವ ಮಿಂದಡೇನು? ಮೂಗ ಹಿಡಿದಡೇನು? ಹಲ್ಲ ಕಿರಿದಡೇನು? ಬಾಯ ಹುಯ್ದುಕೊಂಡಡೇನು? ಉಟ್ಟುದನೊಗೆದಡೇನು? ಮಟ್ಟಿಯನಿಟ್ಟಡೇನು? ಮಂಡೆಯ ಬಿಟ್ಟಡೇನು? ತಿಟ್ಟನೆ ತಿರುಗಿದಡೇನು? ಕಣ್ಣು ಮುಚ್ಚಿದಡೇನು? ಕೈಗಳ ಮುಗಿದಡೇನು? ಬೊಟ್ಟನಿಟ್ಟಡೇನು? ಬಯಲಿಂಗೆ ನೆನೆದಡೇನು? ಮುಸುಡ ಹಿಡಿದಡೇನು? ಮೌನದಲ್ಲಿರ್ದಡೇನು? ಅವಕ್ಕೆ ಶಿವಗತಿ ಸಿಕ್ಕದು. ಕುಲವಳಿದು ಛಲವಳಿದು ಮದವಳಿದು ಮತ್ಸರವಳಿದು, ಗುರುಕಾರುಣ್ಯವ ಪಡೆದು, ಅಂಗದ ಮೇಲೆ ಲಿಂಗವ ಧರಿಸಿ, ಗುರುಲಿಂಗಜಂಗಮಕ್ಕೆ ಭಕ್ತಿಯ ಮಾಡಬಲ್ಲಡೆ, ಶಿವಗತಿ ಸಿಕ್ಕುವುದು. ಶಿವಭಕ್ತನಾಗಿ ಸತ್ಯ ಸದಾಚಾರ ಭಕ್ತಿವಿಡಿದು ನಡೆಯಬಲ್ಲಡೆ, ಕೈಲಾಸದ ಬಟ್ಟೆ ಬೇರಿಲ್ಲವೆಂದ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಮೊಲೆ ಬಿದ್ದು, ಮುಡಿ ಸಡಲಿ, ಗಲ್ಲ ಬತ್ತಿ, ತೋಳು ಕಂದಿದವಳ ಎನ್ನನೇಕೆ ನೋಡುವಿರಿ ಎಲೆ ಅಣ್ಣಗಳಿರಾ ? ಕುಲವಳಿದು ಛಲವಳಿದು ಭವಗೆಟ್ಟು ಭಕ್ತೆಯಾದವಳ, ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ ? ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದು ಛಲವಳಿದವಳನು.
--------------
ಅಕ್ಕಮಹಾದೇವಿ
ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ? ಉಟ್ಟ ಉಡುಗೆಯ ಸೆಳೆದುಕೊಂಡರೆ, ಮುಚ್ಚಿ ಮುಸುಕಿದ ನಿರ್ವಾಣವ ಸೆಳೆಯಬಹುದೆ ? ನೋಡುವಿರಿ ಎಲೆ ಅಣ್ಣಗಳಿರಾ, ಕುಲವಳಿದು ಛಲವಳಿದು ಭವಗೆಟ್ಟು ಭಕ್ತೆಯಾದವಳ. ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ, ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದು ಛಲವುಳಿದವಳನು.
--------------
ಅಕ್ಕಮಹಾದೇವಿ
ಅಯ್ಯಾ, ಎನ್ನ ಕುಲವಳಿದು ಗುರುವಿನೊಳಗಾದೆ, ಛಲವಳಿದು ಲಿಂಗದೊಳಗಾದೆ, ಧನವಳಿದು ಜಂಗಮದೊಳಗಾದೆ, ರೂಪುಮದವಳಿದು ಭಸ್ಮದೊಳಗಾದೆ, ಯವ್ವನಮದವಳಿದು ರುದ್ರಾಕ್ಷಿಯೊಳಗಾದೆ, ವಿದ್ಯಾಮದವಳಿದು ಮಂತ್ರದೊಳಗಾದೆ, ರಾಜಮದವಳಿದು ಪಾದೋದಕದೊಳಗಾದೆ, ತಪಮದವಳಿದು ಪ್ರಸಾದದೊಳಗಾದೆ, ಇಂತು ಸಕಲವಳಿದು ಗುರುನಿರಂಜನ ಚನ್ನಬಸವಲಿಂಗಕ್ಕೆ ಅಂಗವಾದೆ ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಮುಡಿಬಿಟ್ಟು ಮೊಗಬಾಡಿ ತನುಕರಗಿದವಳ ಎನ್ನನೇಕೆ ನುಡಿಸುವಿರಿ ? ಎಲೆ ತಂದೆಗಳಿರಾ, ಬಲುಹಳಿದು ಭವಗೆಟ್ಟು ಛಲವಳಿದು ಭಕ್ತೆಯಾಗಿ ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದವಳ ¯
--------------
ಅಕ್ಕಮಹಾದೇವಿ
ಕುಲವಳಿದು, ಛಲವಳಿದು, ಮದವಳಿದು, ಮಚ್ಚರವಳಿದು, ಆತ್ಮತೇಜವಳಿದು, ಸರ್ವಾಹಂಭಾವವಳಿದು, ನಿಜ ಉಳಿಯಿತ್ತು. ಲಿಂಗಜಂಗಮವೆಂಬ ಶಬ್ದವಿಡಿದು ಸಾಧ್ಯವಾಯಿತ್ತು ನೋಡಾ, ತಾನಳಿದು ತಾನುಳಿದು ತಾನು ತಾನಾದ ಸಹಜ ನಿಜಪದವಿಯಲ್ಲಿ ಕೂಡಲಚೆನ್ನಸಂಗ ಲಿಂಗೈಕ್ಯವು.
--------------
ಚನ್ನಬಸವಣ್ಣ
-->