ಅಸಿ ಮಸಿ ಕೃಷಿ ವಾಣಿಜ್ಯ ಗೋಪಾಲ ಯಾಚನ
ಷಟ್‍ಕೃಷಿವ್ಯಾಪಾರವ ಮಾಡುವಾತ ಜಂಗಮವಲ್ಲ.
ಆ ಜಂಗಮದ ಪಾದೋದಕ ಪ್ರಸಾದವ ಕೊಂಬ
ಪಂಚಮಹಾಪಾತಕರ ಅಂಗಳವ ಮೆಟ್ಟಿದಡೆ,
ಸಂಗದಲ್ಲಿ ನುಡಿದಂತೆ, ಕುಂಬ್ಥಿನಿಪಾತಕ.
ಅವರನು ಹಿಂಗದಿರ್ದಡೆ ಲಿಂಗವಿಲ್ಲ, ಜಂಗಮವಿಲ್ಲ
ಪಂಚಾಚಾರಕ್ಕೆ ಹೊರಗು.
ಮಾಟಕೂಟದವರೆಲ್ಲ ಜಗದಾಟದ ಡೊಂಬರೆಂಬೆ.
ಈಶನಾಣೆ ತಪ್ಪದು, ನಿಃಕಳಂಕ ಮಲ್ಲಿಕಾರ್ಜುನಾ