ಇ ಪದದಿಂದ ಪ್ರಾರಂಭವಾಗುವ ವಚನಗಳು:
ಇಂದ್ರಿಯಂಗಳ ಕೊಂದೆಹೆನೆಂದಡೆ, ಅವು ಕಂದರ್ಪನ ಹಂಗು.ಕಂದರ್ಪನ ಕೊಂದೆಹೆನೆಂದಡೆ, ಅವು ಕಂಗಳ ಲಾಭ.ಕಂಗಳು ಮುಚ್ಚಿಯಲ್ಲದೆ ಲಿಂಗವ ಕಾಣಬಾರದು.ಅದು ನಿರಂಗಂಗಲ್ಲದೆ, ಜಗದ ಹಂಗಿನವರಿಗಿಲ್ಲಾ ಎಂದೆ, ಗವರೇಶ್ವರಾ.