ಅಥವಾ
(2) (1) (1) (0) (1) (0) (0) (0) (0) (0) (0) (2) (2) (0) ಅಂ (0) ಅಃ (0) (0) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (1) (0) (0) (1) (0) (0) (0) (0) (0) (0) (0) (1) (0) (0) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಒಂದನೆ ದೆಸೆಯಲ್ಲಿ ಒಂದು ಮುಖದ ಭೈರವನು. ಎರಡನೆಯ ದೆಸೆಯಲ್ಲಿ ಎರಡು ಮುಖದ ಭೈರವನು. ಮೂರನೆಯ ದೆಸೆಯಲ್ಲಿ ಮೂರು ಮುಖದ ಭೈರವನು. ನಾಲ್ಕನೆಯ ದೆಸೆಯಲ್ಲಿ ನಾಲ್ಕು ಮುಖದ ಭೈರವನು. ಐದನೆಯ ದೆಸೆಯಲ್ಲಿ ಐದು ಮುಖದ ಭೈರವನು. ಆರನೆಯ ದೆಸೆಯಲ್ಲಿ ಆರು ಮುಖದ ಭೈರವನು. ಏಳನೆಯ ದೆಸೆಯಲ್ಲಿ ಏಳು ಮುಖದ ಭೈರವನು. ಎಂಟನೆಯ ದೆಸೆಯಲ್ಲಿ ಎಂಟು ಮುಖದ ಭೈರವನು. ಇಂತಿರುವ ಅಷ್ಟಭೈರವರು ಹೊರಸುತ್ತಿನಲ್ಲಿ ಪಹರಿಕರು. ತುತ್ತರಸಿನವೆಂಬ ಚಕ್ರವು ಸುರಗಿಯಂದದಿ ಸುತ್ತಿ, ತೆರಹು ಇಲ್ಲವೆ ತಿರುಗುತ್ತಿಹುದು. ಅದು ಕಾಣಬಾರದಂತಿಹುದು ನೋಡಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ಒಂದು ಲಿಂಗದಿಂದ ಉದ್ಭವಿಸಿತ್ತು, ನಾದ ಬಿಂದು ಕಳೆ. ಆ ನಾದ ಬಿಂದು ಕಳೆಗೆ ಉದ್ಭವಿಸಿತ್ತು, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವನು. ಈ ಪಂಚಬ್ರಹ್ಮದ ಬೆಳೆಯ [ಉತ್ಪತ್ಯವ] ಪೇಳುತಿದನು ಕಾಣಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ