ಅಥವಾ
(40) (22) (3) (5) (6) (1) (0) (0) (2) (0) (0) (5) (3) (0) ಅಂ (12) ಅಃ (12) (16) (0) (10) (1) (0) (1) (0) (7) (0) (0) (0) (0) (0) (0) (0) (8) (0) (4) (3) (12) (8) (0) (8) (7) (12) (2) (2) (0) (3) (8) (11) (0) (10) (30) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕಂಡುವ ಹೇಳಿಹೆನೆ ? ಸಮಯಕ್ಕೆ ದೂರ, ಎನ್ನ ಇರವನರಿಯರು. ಲೆಂಡನೆಂಬರು, ಸುಮ್ಮನಿದ್ದೇನೆ. ಇವರೆನ್ನ ಆರೈದು ಕಂಡುದ ನುಡಿವರು. ಎನ್ನ ಮುಟ್ಟಿದವರ ಎನ್ನಂತೆ ಮಾಡಿಕೊಂಬೆ. ಎನ್ನ ಅರಿಯದವರ ಹಾದಿಯ ಹೋಗೆ. ಎನ್ನನರಿತ ಜಂಗಮದ ಸಂಗವ ಮಾಡುವೆ. ಜಗದ ಸಂಗವನೊಲ್ಲೆ, ನಿಗಮಾಗಮಶಾಸ್ತ್ರವನೊಲ್ಲೆ. ಅವೆಲ್ಲವು ಸ್ಥಲ ನೆಲೆ ಇಟ್ಟು ಹೇಳುವವು. ಎಮ್ಮ ಶರಣರು ನುಡಿದ ಶಾಸ್ತ್ರಕ್ಕೆ ಸ್ಥಲ ನೆಲೆ ಇಲ್ಲ. ಇಂತಿವೆಲ್ಲವ ಬಲ್ಲೆನಾಗಿ, ಎನ್ನಂಗಕ್ಕೆ ಪ್ರಾಣಕ್ಕೆ ಭವವಿಲ್ಲ, ಬಂಧನವಿಲ್ಲ. ಅದೇಕೆಂದರೆ:ಲಿಂಗವೆಂದ ಕಾರಣ, ನಾನೆಂಬುದಿಲ್ಲ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಕಾಯಸ್ಥಲ, ಕರಸ್ಥಲ, ಉರಸ್ಥಲ, ಶಿ ಸ್ಥಲ, ಪ್ರಾಣಸ್ಥಲ, ಭಾವಸ್ಥಲವೆಂದು ನುಡಿದಾಡುವರು. ಆ ಸ್ಥಲದೊಳಗಣ ಸ್ವಯಸ್ಥಲವನರಿಯರು ಕಾಣಿರೆ. ಸ್ವಯಸ್ಥಲವೆಂತಿಪ್ಪುದೆಂದರೆ, ಕಾಯಸ್ಥಲವನರಿದರೆ, ಅದು ತಾನೇ ಲಿಂಗವಾಯಿತ್ತು. ಕರಸ್ಥಲವನರಿದರೆ, ಕೈಲಾಸ ಮರ್ತ್ಯ ತನ್ನೊಳಗಾಯಿತ್ತು. ಉರಸ್ಥಲವನರಿದರೆ, ಪರವು ತನ್ನೊಳಗಾಯಿತ್ತು. ಶಿರಸ್ಥಲವನರಿದರೆ ಶಿವನೆಂಬುದಕ್ಕೆ ಇಲ್ಲ. ಪ್ರಾಣಸ್ಥಲವನರಿದರೆ, ಭಯ ಮರಣಾದಿಗಳಿಲ್ಲ. ಭಾವಸ್ಥಲವನರಿದರೆ, ಇನ್ನಾವುದೂ ನೆನಹಿಲ್ಲ. ಇದರ ಭೇದವನರಿಯದ, ಸ್ಥಲನೆಲೆಯುಂಟೆಂಬಿರಿ. ಅದರ ಭೇದವ ನೀವು ಅರಿಯಿರಿ ಕಾಣಿರೊ. ಸ್ಥಲವೆಂದರೆ ಅಂಗ, ನೆಲೆಯೆಂದರೆ ಪ್ರಾಣ. ಇದನರಿಯದೆ ತಲೆ ಕೆಳಗಾಗಿ ಹೋದರು. ಆರು? ದೇವದಾನವರು. ನಿಮ್ಮ ಪಾಡೇನೋ ನರಗುರಿಗಳಿರಾ? ಇದನರಿದು, ಇನ್ನಾದರೂ ನಮ್ಮ ಶರಣರಿಗೆರಗಿ ಬದುಕಿರೊ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಕತ್ತಲೆ ಬೆಳಗೆನಬೇಡ, ಸತ್ಯ ತಾನೆನಬೇಡ, ಚಿತ್ತವ ಸುಯಿಧಾನವ ಮಾಡಿ, ಮೊತ್ತಾದ ಹೆಣ್ಣು ಹೊನ್ನು ಮಣ್ಣು ಗೆದ್ದರೆ ನಿರ್ಮುಕ್ತ , ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಕೂಟವಿಲ್ಲದ ಮಾಟ, ಬೇಟವಿಲ್ಲದ ನೋಟ, ಅರಿವಿಲ್ಲದ ಕೂಟ, ಓಟವಿಲ್ಲದ [ಆಟ]. ನಾಲ್ಕರ ಅನುವನರಿಯದೆ ನುಡಿವುದೆ ಜಗದಾಟ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಕಾಯ ಕರಣಾದಿಗಳ ಏಕವ ಮಾಡಿದ ಪ್ರಸಾದಿ. ಪ್ರಾಣ ನಿಃಪ್ರಾಣವನೇಕವ ಮಾಡಿದ ಪ್ರಸಾದಿ. ಭಾವ ನಿರ್ಭಾವವನೇಕವ ಮಾಡಿದ ಪ್ರಸಾದಿ. ಮನಬುದ್ಧಿಚಿತ್ತಹಂಕಾರವನೇಕವ ಮಾಡಿದ ಪ್ರಸಾದಿ. ಸಪ್ತಧಾತು ಷಡುವರ್ಣವನೇಕವ ಮಾಡಿದ ಪ್ರಸಾದಿ. ಇಂತಿವೆಲ್ಲವನೇಕವ ಮಾಡಿದ ಪ್ರಸಾದಿ. ಈ ಪ್ರಸಾದವ ಕಂಡು ಎನ್ನ ಭವಂ ನಾಸ್ತಿಯಾಯಿತ್ತು ಕಾಣಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಕೇಳು ಕೇಳಾ, ಭಕ್ತ, ಮಹೇಶ, ಪ್ರಸಾದಿ, ಪ್ರಾಣಲಿಂಗಿ, ಶರಣ, ಐಕ್ಯರೆಂದು ನುಡಿದಾಡುತಿಪ್ಪಿರಿ, ಇಂತೀ ಷಟ್‍ಸ್ಥಲಸಂಪನ್ನತೆ ಎಲ್ಲರಿಗೆ ಎಂತಾಯಿತ್ತಯ್ಯ ಹೇಳಿರಣ್ಣಾ ! ಭಾಗ್ಯವುಳ್ಳಾತಂಗೆ ಭಕ್ತಿಸ್ಥಲವಾಗದು. ಮಕ್ಕಳುಳ್ಳಾತಂಗೆ ಮಹೇಶ್ವರಸ್ಥಲವಾಗದು. ಪರಧನ ಚೋರಂಗೆ ಪ್ರಸಾದಿಸ್ಥಲವಾಗದು. ಇಹಪರವೆಂದು ಕಾಮಿಸುವಾತಂಗೆ ಪ್ರಾಣಲಿಂಗಿಸ್ಥಲವಾಗದು. ಪರದಲ್ಲಿ ಪರಿಣಾಮವನರಿಯದಾತಂಗೆ ಪ್ರಾಣಲಿಂಗಿಸ್ಥಲವಾಗದು. ಹರುಷವೇ ಹರನಲ್ಲಿ ಲೀಯವಾದಾತಂಗೆ ಐಕ್ಯಸ್ಥಲವಾಗದು. ನೆರೆದ ದೇಹವು ಕರ್ಪುರ ಉರಿಗೊಂಡಂತೆ ಅಲ್ಲದೆ ನಿರವಯಸ್ಥಲವಾಗದು. ಇದು ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಕರಿದೈದು ಬಿಳಿದೈದು ಭಾಸುರವೈದು ಹದಿನೈದು ಬಗೆಯ ಕರಣವ ಸುಟ್ಟು, ಸುರತ ಸುಗ್ಗಿ, ಕಾಲಕಾಮಾದಿಗಳೈವರ ಗೆದ್ದರೆ, ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಕಲ್ಲುದೇವರ ನಂಬಿದವರೆಲ್ಲ ಕಲಿಯುಗದ ಕತ್ತಲೆಯೊಳಗಾಗಿ ಕತ್ತೆಗಳಾಗಿ ಹೋದರು. ಅದೇನು ಕಾರಣವೆಂದರೆ: ತಮ್ಮ ದೇವರು ಇಕ್ಕಿದ ಓಗರವನುಣ್ಣಲೊಲ್ಲದೆ, ಒಡನೆ ಮಾತಾಡದು. ಗುಡಿಯ ಕಲ್ಲು ಮೇಲೆ ಬಿದ್ದರೆ ಒಡೆದು ಹಾಳಾಗಿ ಹೋಗುತ್ತದೆ. ಇಂತಪ್ಪ ಕಲ್ಲ ಪೂಜಿಸಿ, ಸಲ್ಲದೆ ಹೋದರು. ಅದಂತಿರಲಿ, ಮಣ್ಣ ದೇವರು ಎಂದು ಪೂಜಿಸಿ, ಮಜ್ಜನಕ್ಕೆ ನೀಡಲಮ್ಮದೆ, ಲಜ್ಜೆಗೆಟ್ಟು ನಾಯಾಗಿ ಬೊಗುಳಿ ಹೋದರು. ಆದಂತಿರಲಿ, ಮರನ ದೇವರೆಂದು ಪೂಜಿಸಿ ಧೂಪ ದೀಪವ ಮುಂದಿಡಲಮ್ಮರು. ಅದೊಂದು ವ್ಯಾಪಾರಕ್ಕೊಳಗಾಗಿ, ತಾಪತ್ರಯಕ್ಕೆ ಸಿಲ್ಕಿ ಪಾಪಿಗಳಾಗಿ ಸತ್ತುಹೋದರು. ಸಲ್ಲದು ಶಿವನಲ್ಲಿ. ಎಮ್ಮ ಭಕ್ತರಿಗೆ ಈ ಪರಿಯಲ್ಲ ಕೇಳಿರಣ್ಣಾ. ಇದೆಲ್ಲ ಪಾಪಿಗಳ ಹಾಗೆ, ಎನ್ನ ದೇವ ನಡೆವ, ನುಡಿವ, ಇಕ್ಕಿದರುಂಬ, ಕೊಟ್ಟರೆ ತಕ್ಕೊಂಬ, ಪೂಜಿಸಿದರೆ ಪೂಜೆಗೊಂಬ, ಅನೇಕ ಪೂಜೆಯಲ್ಲಿ. ತನ್ನ ನಂಬಿದ ಭಕ್ತರಿಗೆ-ಬುದ್ಧಿಯ ಹೇಳುವ, ಶುದ್ಧಾತ್ಮನ ತೋರುವ. ತಾ ಮುದಿನಲ್ಲಿ ಸಜ್ಜನ ಸದ್ಭಕ್ತರಲ್ಲಿ ಇದ್ದೂ ಇಲ್ಲದಂತಿಪ್ಪ. ಪ್ರಸಿದ್ಧ ಜಂಗಮಲಿಂಗವ ಪೂಜಿಸಿ, ಸ್ವಯಲಿಂಗಿಗಳಾದರು ಎಮ್ಮ ಶರಣರು. ಅವರು ಹೋದ ಹಾದಿಯ ನೋಡಿದರೆ, ಎನಗೊಂದು ಹಾದಿ ಸಿಕ್ಕಿತ್ತು. ಆ ಹಾದಿಗೊಂಡು ಹೋಗಿ ಅವರ ಪಾದವಕಂಡು, ಕೆಟ್ಟು ಬಟ್ಟಬಯಲಾದೆ ನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಕಾಣಬಾರದ ಘನವೆಂದು, ಜಗವೆಲ್ಲ ಹೇಳುತ್ತಿದೆ. ಈ ಕಾಣಬಾರದ ಘನವ ನಾನಾರ ಕೇಳಲಯ್ಯ! ಗುರು ಹೇಳಲಿಲ್ಲ, ಲಿಂಗ ಹೇಳಲಿಲ್ಲ, ಜಂಗಮ ಹೇಳಲಿಲ್ಲ. ಅದು ಹೇಗೆ ಎಂದರೆ:ಗುರು ಒಂದು ಲಿಂಗವ ಕೊಟ್ಟು, ತನ್ನ ಅಂಗದ ಕುರಿತು, ಆ ಲಿಂಗಕ್ಕೆ ಬೆಲೆಯ ತಕ್ಕೊಂಡು ಹೋದನಲ್ಲದೆ, ಆ ಕಾಣಬಾರದ ಘನವ ಹೇಳಿದುದು ಇಲ್ಲ. ಇದ ಲಿಂಗವೆಂದು ಪೂಜಿಸಿದರೆ, ಕಂಗಳ ಕಾಮ ಘನವಾಯಿತ್ತಲ್ಲ ! ಎರಡರ ಸಂಗಸುಖವ ಹೇಳಲರಿಯದೆ, ಜಂಗಮವೆಂದು ಪೂಜೆಯ ಮಾಡಿದರೆ, ಈ ಜಗದೊಳಗೆ ಹುಟ್ಟಿದ ಪದಾರ್ಥಕ್ಕೆ ಒಡೆಯನಾದನಲ್ಲದೆ, ಈ ಕಾಣಬಾರದ ಘನವ, ಹೇಳಿದುದಿಲ್ಲ. ಅದೇನು ಕಾರಣವೆಂದರೆ: ಆ ಕಾಣಬಾರದ ಘನವ, ತಾನೊಬ್ಬ ಕೇಳಲು ಬಾರದು, ತಾನೊಬ್ಬರಿಗೆ ಹೇಳಲು ಬಾರದು. ಏಕೆ? ನಾಮರೂಪಿಲ್ಲವಾಗಿ, ನುಡಿಯಿಲ್ಲ. ಇಂತಪ್ಪ ಘನ ತಾನೆ, ಒಂದು ರೂಪ ತೊಟ್ಟು, ತನ್ನ ಲೀಲೆಯ ಎಲ್ಲ ಶರಣರೊಳು ನಟಿಸಿ, ತನ್ನ ತಾನೆ ಸಾಕಾರ ನಿರಾಕಾರವಾಗಿ, ಏಕವಾದ ಭೇದವನರಿಯದೆ ಈ ಲೋಕದಲ್ಲಿ ಇದ್ದರೇನು? ಆ ಲೋಕದಲ್ಲಿ ಹೋದರೇನು? ಹದಿನಾಲ್ಕುಲೋಕವು ತಾನೆಯಾದ ಚಿನ್ಮಯನ ಹೇಳಿಹೆನೆಂದರೆ ಎನ್ನಳವಲ್ಲ. ಬಸವಪ್ರಿಯ ಕೂಡಲಚೆನ್ನಬಸವಣ್ಣಾ ನೀವೆ ಬಲ್ಲಿರಿ.
--------------
ಹಡಪದ ಅಪ್ಪಣ್ಣ
ಕರವನರಿದಂಗೆ ಕಮಲದ ಹಂಗೇಕೊ? ಇರವನರಿದಂಗೆ ಪರದ ಹಂಗೇಕೊ ? ಪರವನರಿದಂಗೆ ಇರವದ ಹಂಗೇಕೊ? ಇಹ ಪರವೆಂಬ ಉಭಯವಳಿದ ಶರಣಂಗೆ ಮರ್ತ್ಯದ ನರರ ಹಂಗೇಕೊ ಹೇಳಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ?
--------------
ಹಡಪದ ಅಪ್ಪಣ್ಣ
ಕುದುರೆಯ ಕುಪ್ಪಟ ಘನವಾಯಿತ್ತು. ಆನೆಯ ಹರಿದಾಟ ನಿಲಬಾರದು. ಒಂಟೆಯ ಕತ್ತು ನೆಟ್ಟಗಾಯಿತ್ತು. ಬಂಟರ ಹರಿದಾಟ ಉಂಟು ಕಟ್ಟಿಗೆಯವರು ಉಗ್ಗಡಿಸುತ್ತ, ಭಟರುಗಳು ಪೊಗಳುತ್ತ , ಸಕಲವಾದ್ಯ ರಭಸದೊಳಗೆ ಸಂದಳಿಯೆಂಬ ಅಂದಳದ ಮೇಲೆ ಚಂದವಾಗಿ ಮನೋರಾಜ್ಯಂಗೆಯ್ವುತ್ತಿರಲು, ಈ ಸುಖವನೊಲ್ಲದೆ, ಮುಂದೆ ದುಃಖ ಉಂಟೆಂದು ಶರಣನರಿದು, ತಲೆ ಎತ್ತಿ ನೋಡಿ, ಘನಗುರುವಿನ ಹಸ್ತದಿಂದ ಅನುಜ್ಞೆಯಂ ಪಡೆದು, ಧ್ಯಾನ ಧಾರಣ ಸಮಾಧಿಯಿಂದ ತಿಳಿದು ನೋಡಲಾಗಿ, ಇತ್ತ ಶೂನ್ಯವೆಂಬ ಪಟ್ಟಣದೊಳಗೆ ಅನಾಮಿಕನೆಂಬ ಲಿಂಗ ಅರಸು, ಆ ಅರಸಿನ ಗೊತ್ತುವಿಡಿದು ಇತ್ತಲೆ ಮನವೆಂಬ ಅರಸನು ಹಿಡಯಲಾಗಿ ಹಿಡಿದು, ಆನೆ, ಕುದುರೆ, ಸೇನೆಯನೆಲ್ಲ ಸೂರೆಗೊಂಡು, ಭಂಡಾರ ಬೊಕ್ಕಸ ಅರಮನೆಯನೆಲ್ಲ ಸುಟ್ಟು ಬಟ್ಟಬಯಲಮಾಡಿದ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಕಂಗಳ ಮಣಿಯ ಬೆಳಗಿನೊಳು, ಈರೇಳು ಭುವನದ ಶೃಂಗಾರವಡಗಿತ್ತು. ಆರೂ ಅರಿಯರಲ್ಲಾ. ಅತಿ ಶೃಂಗಾರದೊಳಗಣ ಗಂಧವನೊಂದು ಘ್ರಾಣ ನುಂಗಿತ್ತು. ಘ್ರಾಣದೊಳಗಣ ಗಂಧವ ಪ್ರಾಣ ನುಂಗಿತ್ತು. ಪ್ರಾಣದೊಳಗಣ ಗಂಧದ ಭಾವ ನುಂಗಿತ್ತು. ಭಾವದೊಳಗಣ ಗಂಧದ ಬಯಲು ನುಂಗಿತ್ತು. ಬಯಲೊಳಗಣ ಗಂಧವ ಮಹಾಬಯಲ ಕೂಡಿದ ಲಿಂಗೈಕ್ಯಂಗೆ ಭವಬಂಧನವಿಲ್ಲೆಂದಿತ್ತು ಗುರುವಚನ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಕರಕನಿಷ್ಟ ಕಬ್ಬಿಣವ ನೆರಹಿರೆ, ಪರುಷ ಮುಟ್ಟಲು ಚಿನ್ನವಾಗದೆ? ಗುರುಕಾರುಣ್ಯವ ಪಡೆವರು ಇಂದು ಶರಣರೊಳು ಬೆರೆದರೆ, ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಕಟ್ಟಬೇಕು ಮನವ, ಮೆಟ್ಟಬೇಕು ಮದವ, ಸುಟ್ಟುರುಹಬೇಕು ಸಪ್ತವ್ಯಸನಂಗಳ. ಆ ತೊಟ್ಟಿಲ ಮುರಿದು, ಕಣ್ಣಿಯ ಹರಿದು, ಆ ಬಟ್ಟಬಯಲಲ್ಲಿ ನಿಂದಿರೆ, ಬಸವಪ್ರಿಯ ಕೂಡಲಚೆನ್ನಬಸವಣ್ಣ,.
--------------
ಹಡಪದ ಅಪ್ಪಣ್ಣ
ಕೀಡೆ ತುಂಬಿಯ ಬಿಡದೆ ನೆನೆಯೆ, ನೋಡಲಾಕ್ಷಣ ತುಂಬಿಯಾಗಿಹುದು. ರೂಢಿಯೊಳು ಅಗಮ್ಯ ಶರಣರ ಪಾದವೆ ಗೂಡಾಗಿ ನಿಂದಿರೆ, ಬಸವಪ್ರಿಯ ಕೂಡಲಚೆನ್ನ [ಬಸವಣ್ಣ]
--------------
ಹಡಪದ ಅಪ್ಪಣ್ಣ
ಕಾಡಬೇಡ ಕಂಡವರ, ಬೇಡಬೇಡ ನರರುಗಳ, ಆಡಬೇಡ ಅನೃತವ, ನೋಡಬೇಡ ಪರಸ್ತ್ರೀಯರ, ಗಾಢಗಂಭೀರ ಲಿಂಗಾರೂಢವಾದ ಬಸವಪ್ರಿಯ ಕೂಡಲಚೆನ್ನಬಸವಣ್ಣ .
--------------
ಹಡಪದ ಅಪ್ಪಣ್ಣ