ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಯ್ಯಾ, ಶ್ರೀಮಹಾವಿಭೂತಿಯಿಂದ ಕಂಡೆ ಆ ನಿಮ್ಮ ದಿವ್ಯ ಬೆಳಗಿನ ಹೊಳಹ, ಈ ಎನ್ನ ಕರಸ್ಥಲದೊಳಗೆ. ಅಯ್ಯಾ, ಶ್ರೀಮಹಾರುದ್ರಾಕ್ಷಿಯಿಂದ ಕಂಡೆ ಆ ನಿಮ್ಮ ದಿವ್ಯಮೂರ್ತಿಯ ಗೂಢವ, ಈ ಎನ್ನ ಕರಸ್ಥಲದೊಳಗೆ. ಅಯ್ಯಾ, ಶ್ರೀಮಹಾಪಂಚಾಕ್ಷರಿಯಿಂದ ಕಂಡೆ ಆ ನಿಮ್ಮ ದಿವ್ಯವಕ್ತ್ರಂಗಳ, ಈ ಎನ್ನ ಕರಸ್ಥಲದೊಳಗೆ. ನಾ ಬಯಸುವ ಬಯಕೆ ಕೈಸಾರಿತ್ತಿಂದು ಕೂಡಲಸಂಗಮದೇವಾ.
--------------
ಬಸವಣ್ಣ
ಅವಲಕ್ಷಣ ನಾಯನುಡಿಯ ನಾಲಗೆಯ ಸಡಗರ ಡೊವಿಗೆ ಮೃತ್ಯುವಿನ ನುಡಿಗೊಳಗಾಯಿತ್ತು. ಬೇಡವೋ ಪರವಾದಿ ಗಳುಹದಿರು. ಬೇಡವೊ ದೂಷಕ ಬಗುಳದಿರು. ಭಕ್ತಿಗೆಯೂ ಬೋಟ್ಟಕ್ಕೆಯೂ ಜಾತಿಸೂತಕವುಂಟೆ ಪರುಷ ಮುಟ್ಟಲು ಕಬ್ಬುನ ಹೊನ್ನಾಯಿತ್ತು, ಕಾಣಾ. ನಮ್ಮ ಕೂಡಲಸಂಗನ ಶರಣರನವರಿವರೆಂದಡೆ ಕುಂಭಿಪಾತಕ ನಾಯಕನರಕ ತಪ್ಪದು ಕಾಣಾ.
--------------
ಬಸವಣ್ಣ
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಕಾರಣವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಾಧನವು, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಿದ್ಧಿ, ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾಪಕ್ಷಯವು. ಅಯ್ಯಾ ನಿಮ್ಮ ಪಂಚವಕ್ತ್ರಂಗಳೆ ಪಂಚಮುಖದ ರುದ್ರಾಕ್ಷಿಗಳಾದವಾಗಿ, ಅಯ್ಯಾ ಕೂಡಲಸಂಗಮದೇವಯ್ಯಾ, ಎನ್ನ ಮುಕ್ತಿಪಥಕ್ಕೆ ಶ್ರೀಮಹಾರುದ್ರಾಕ್ಷಿಯೆ ಸಾಧನವಯ್ಯಾ.
--------------
ಬಸವಣ್ಣ
ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ, ನಿಮ್ಮ ಶರಣರ ಕೂಡೆ ಸಮಗೋಷಿ*ಯ ಮಾಡುವುದನುಪಮಿಸಲಮ್ಮೆನಯ್ಯಾ. ಕೂಡಲಸಂಗಾ, ನಿಮ್ಮ ಪ್ರಮಥರೆಲ್ಲರೂ ನೆರೆದ ಗಣತಿಂಥಿಣಿಯೊಳಗೆನ್ನನೇನೆಂದರಿಯದೆ ಅಗಲದಂತಿರಿಸಯ್ಯಾ, ನಾ ನಿಮ್ಮ ಧರ್ಮದ ಕವಿಲೆ.
--------------
ಬಸವಣ್ಣ
ಅಡ್ಡ ತ್ರಿಪುಂಡ್ರದ, ಮಣಿಮಕುಟವೇಷದ ಶರಣರ ಕಂಡಡೆ ನಂಬುವುದೆನ್ನ ಮನವು, ನಚ್ಚುವುದೆನ್ನ ಮನವು, ಸಂದೇಹವಿಲ್ಲದೆ. ಇವಿಲ್ಲದವರ ಕಂಡಡೆ ನಂಬೆ ಕೂಡಲಸಂಗಮದೇವಾ. 88
--------------
ಬಸವಣ್ಣ
ಅಕಟಕಟಾ, ಶಿವ ನಿನಗಿನಿತು ಕರುಣವಿಲ್ಲ, ಅಕಟಕಟಾ ಶಿವ ನಿನಗಿನಿತು ಕೃಪೆಯಿಲ್ಲ, ಏಕೆ ಹುಟ್ಟಿಸಿದೆ, ಇಹಲೋಕ ದುಃಖಿಯ ಪರಲೋಕದೂರನ ಏಕೆ ಹುಟ್ಟಿಸಿದೆ ಕೂಡಲಸಂಗಮದೇವಾ ಕೇಳಯ್ಯಾ, ಎನಗಾಗಿ ಮತ್ತೊಂದು ತರುಮರನಿಲ್ಲವೆ 64
--------------
ಬಸವಣ್ಣ
ಅಶನ ಕುಂದದು, ವ್ಯಸನ ಮಾಣದು, ಆರತವಡಗದು, ಬೆವಹಾರ ಮಾಣದು. ಮಜ್ಜನಕ್ಕೆರೆವೆನಯ್ಯಾ:ಕಾಯವಿಕಾರಿಯಾನು. ಮಜ್ಜನಕ್ಕೆರೆವೆನಯ್ಯಾ:ಜೀವವಿಕಾರಿಯಾನು. ಮಜ್ಜನಕ್ಕೆರೆವೆನಯ್ಯಾ:ಶರಣನಲ್ಲ, ಲಿಂಗೈಕ್ಯನಲ್ಲ. ಕೂಡಲಸಂಗಮದೇವರಲ್ಲಿ ಅಂತರಬೆಂತರ ನಾನಯ್ಯಾ. 259
--------------
ಬಸವಣ್ಣ
ಅರಸುವ ಬಳ್ಳಿ ಕಾಲ ತೊಡರಿದಂತಾಯಿತ್ತು, ಬಯಸುವ ಬಯಕೆ ಕೈಸಾರಿದಂತಾಯಿತ್ತು, ಹಲವು ದಿವಸಕೆ ನಂಟರ ಕಂಡಂತಾಯಿತ್ತು. ಅಂದೊಮ್ಮೆ ಅನಿಮಿಷಂಗೆ ಕೋಳುಹೋದ ಲಿಂಗವೆಂದು ಉಮ್ಮಹದಿಂದ ಮಂಗಳಾರತಿಯ ಬೆಳಗಿ, ನವರತ್ನದ ಹಾರ ತೋರಣವ ಕಟ್ಟಿ, ಸಂತೋಷದಿಂದೆನ್ನ ಮನವು ತೊಟ್ಟನೆ ತೊಳಲಿ, ತಿಟ್ಟನೆ ತಿರುನಗೆಫ, ದೃಷ್ಟವ ಕಂಡೆನಯ್ಯಾ. ಬಿಟ್ಟು ಹಿಂಗಿದವೆನ್ನ ಭವಮಾಲೆಗಳು, ಗೋಹೇಶ್ವರನ ಶರಣ ಪ್ರಭುದೇವರ ಕರಸ್ಥಲದೊಳಗೆ, ಕೂಡಲಸಂಗಮದೇವರೆಂಬ ಲಿಂಗವ ಕಂಡೆನಾಗಿ.
--------------
ಬಸವಣ್ಣ
ಅಯ್ಯಾ, ನಿಮ್ಮ ವಂಶವಳಿಯಲು ಒಬ್ಬ ತೊತ್ತಿನ ಮಗ ಹುಟ್ಟಿದ. ಆತನ ತೊತ್ತಿನ ಮಗ ನಾನಯ್ಯಾ, ಬಳಿದೊತ್ತು, ಬಳಗದೊತ್ತು, ವಂಶದೊತ್ತು ನಾನಯ್ಯಾ. ಕೂಡಲಸಂಗಮದೇವಯ್ಯಾ, ನಿಮ್ಮ ಒಡೆತನಕ್ಕೆ ಕೇಡಿಲ್ಲವಾಗಿ, ಎನ್ನ ತೊತ್ತುತನಕ್ಕೆ ಕೇಡಿಲ್ಲ. 354
--------------
ಬಸವಣ್ಣ
ಅನ್ಯವಿಚಾರವ ಮರೆದು ನಿಮ್ಮ ವಿಚಾರವೆಡೆಗೊಂಡಿತ್ತಾಗಿ, ಪ್ರಾಣದ ನೆಲೆಗೆಟ್ಟಿತ್ತಯ್ಯಾ, ದಶವಾಯುಗಳ ಸಂಚ ತಪ್ಪಿತ್ತಯ್ಯಾ, ಕರಣಂಗಳ ಲಿಂಗಕಿರಣಂಗಳು ನುಂಗಿದವಯ್ಯಾ, ಒಳಗೆ ಕರತಳಾಮಳಕಗೊಂಡೆನಯ್ಯಾ, ಹೊರಗೆ ಅದೆಂತೆಂದರಿಯದೆ ನೀನೆ ಗತಿಯಾಗಿದ್ದೆ, ಕೂಡಲಸಂಗಮದೇವಾ.
--------------
ಬಸವಣ್ಣ
ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ. ಪ್ರಥಮಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿ ಎನನ್ನಿರಿಸಿಕೊಂಡಿರ್ದಿರಯ್ಯಾ. ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರ್ದಿರಯ್ಯಾ. ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರ್ದಿರಯ್ಯಾ. ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ಸರ್ವಕಾಲಸಂಹಾರವ ಮಾಡಿಸುತ್ತಿರ್ದಿರಯ್ಯಾ. ಆರನೆಯ ಭವಾಂತರದಲ್ಲಿ ವೃಷಭನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ. ಏಳನೆಯ ಭವಾಂತರದಲ್ಲಿ ಬಸವದಣ್ಣಾಯಕನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಒಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಇದು ಕಾರಣ ಕೂಡಲಸಂಗಮದೇವಾ, ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ. 4
--------------
ಬಸವಣ್ಣ
ಅಶ್ವಮೇಧಯಾಗವಂತಿರಲಿ, ಅಜಪೆ ಉಪದೇಶ ಸಮಾಧಿಯಂತಿರಲಿ, ಹೋ ! ಗಾಯತ್ರಿಯ ಜಪವಂತಿರಲಿ, ಹೋ ! ಜನಮೋಹನ ಮಂತ್ರವಂತಿರಲಿ, ಹೋ ! ಕೂಡಲಸಂಗನ ಶರಣರ ನುಡಿಗಡಣ ಎಲ್ಲಕ್ಕಧಿಕ ನೋಡಾ.
--------------
ಬಸವಣ್ಣ
ಅರ್ಥಪ್ರಾಣಾಭಿಮಾನ ನಿಮ್ಮದೆಂಬೆ, ಮತ್ತೆಯೂ ಆಸೆ ಬಿಡದನ್ನಕ್ಕ ಭಕ್ತನೆಂತಪ್ಪೆನಯ್ಯಾ ಶರಣನೆಂತೆನಿಸುವೆನಯ್ಯಾ, ಕೂಡಲಸಂಗನ ಶರಣರ ಸಕಲರತಿಗೆ ಸಲ್ಲದನ್ನಕ್ಕ 311
--------------
ಬಸವಣ್ಣ
ಅರ್ಪಿತವ ಮಾಡುವ ಅವಧಾನವು, ಅನ್ಯವ ಸೋಂಕದ ಅವಧಾನವು, ಅರಿಷಡ್ವರ್ಗಂಗಳ ಮುಟ್ಟಲೀಯದವಧಾನದ ಪರಿಯ ನೋಡಾ, ಪಂಚಭೂತವೆಂಬ ಭವಿಯ ಕಳೆದು ಪ್ರಸಾದಿಯಾಗಿಪ್ಪ ಪರಿಯ ನೋಡಾ, ಪಂಚೇಂದ್ರಿಯಂಗಳ ಗುಣವಳಿದು ಪಂಚವಿಂಶತಿತತ್ವದಲ್ಲಿ ಪರಿಣಾಮಿ ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.
--------------
ಬಸವಣ್ಣ
ಅರಿವುವಿಡಿದು, ಅರಿವನರಿದು, ಅರಿವೆ ನೀವೆಂಬ ಭ್ರಾಂತು ಎನಗಿಲ್ಲವಯ್ಯಾ, ಮರಹುವಿಡಿದು, ಮರಹ ಮರೆದು, ಮರಹು ನೀವೆಂಬ ಮರಹಿನವ ನಾನಲ್ಲವಯ್ಯಾ. ದೇಹ ಪ್ರಾಣಂಗಳ ಹಿಂಗಿ, ದೇಹವಿಡಿದು, ದೇಹ ನಿಮ್ಮದೆಂಬ ಭ್ರಾಂತುಸೂತಕಿ ನಾನಲ್ಲವಯ್ಯಾ. ನಿಮ್ಮ ಅರಿದ ಅರಿವ ಭಿನ್ನವಿಟ್ಟ ಕಂಡೆನಾದಡೆ ನಿಮ್ಮಾಣೆ ಕಾಣಾ, ಕೂಡಲಸಂಗಮದೇವಾ.
--------------
ಬಸವಣ್ಣ
ಅಯ್ಯಾ, ನಿಮ್ಮ ಶರಣನ ಮತ್ರ್ಯಕ್ಕೆ ತಂದೆಯಾಗಿ ನೆನೆದು ಸುಖಿಯಾಗಿ ಆನು ಬದುಕಿದೆಯ್ಯಾ, ಅದೇನು ಕಾರಣ ತಂದೆಯೆಂದರಿದೆನಯ್ಯಾ, ಎನ್ನ ಕಾರಣ ತಂದೆಯೆಂದರಿದೆನಯ್ಯಾ, ಅರಿದರಿದು, ನಿಮ್ಮ ಶರಣನು ಆಚರಿಸುವ ಆಚರಣೆಯ ಕಂಡು ಕಣ್ದೆರೆದೆನಯ್ಯಾ, ಕೂಡಲಸಂಗಮದೇವಾ. 5
--------------
ಬಸವಣ್ಣ
ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ಞಾನವೆಂಬ ವಾಹನವಾಗಿರ್ದೆ ಕಾಣಾ. ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ ಕಾಣಾ. ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಷಭನೆಂಬ ವಾಹನವಾಗಿರ್ದೆ ಕಾಣಾ, ಅಯ್ಯಾ, ನೀನೆನ್ನ ಭವವ ಕೊಂದೆಹೆನೆಂದು ಜಂಗಮಲಾಂಛನವಾಗಿ ಬಂದಡೆ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ. s 3
--------------
ಬಸವಣ್ಣ
ಅಯ್ಯಾ, ನಿಮ್ಮ ಶರಣರೆನ್ನ ಪಾವನವ ಮಾಡಿ, ತಿಳುಹಿ ತಮ್ಮಂತೆ ಎನ್ನ ಮಾಡಿದ ಬಳಿಕ, ನಾನು ಅವರು ಮಾಡಿದಂತಾದೆನಯ್ಯಾ. ನಾನೊಬ್ಬನು ನಿಮ್ಮ ಶರಣರ ಬಳಿಬಳಿಯವನು. ಕೂಡಲಸಂಗನ ಶರಣರು ಮೆಚ್ಚಿ ಎನಗೊಲಿದಡೆ ನಾನು ಬದುಕಿದೆನಲ್ಲದೆ, ಸಮರಸ ಸಂಗಕ್ಕೆ ಸರಿಯೆ ಹೇಳಾ ಚೆನ್ನಬಸವಣ್ಣಾ.
--------------
ಬಸವಣ್ಣ
ಅರ್ಥಕ್ಕೆ ತಪ್ಪಿದಡೇನು, ಪ್ರಾಣಕ್ಕೆ ತಪ್ಪಿದಡೇನು, ಅಭಿಮಾನಕ್ಕೆ ತಪ್ಪಿದಡೇನು ಶರಣರು ಶರಣರಲ್ಲಿ ಗುಣವನರಸುವರೆ ಕೂಡಲಸಂಗನ ಶರಣರು ನೊಂದು ಸೈರಿಸಬೇಕು. 249
--------------
ಬಸವಣ್ಣ
ಅಯ್ಯಾ, ನಿಮ್ಮ ಶರಣರ ಸಂಗವೆನಗೆ ಪರಮಸುಖವಯ್ಯಾ, ಅಯ್ಯಾ, ನಿಮ್ಮ ಶರಣರ ಅಗಲಿಕೆ ಎನ್ನ ಪ್ರಾಣವಿಯೋಗವಯ್ಯಾ, ಶಿವಶಿವಾ ಸಂತವಿಡುವೆನು, ಇನ್ನೆಂತಯ್ಯಾ ಎನಗೇನು ಗತಿ, ಕೂಡಲಸಂಗಮದೇವಾ ನಿಮ್ಮ ಶರಣರ ಮುನಿಸು ಎನಗೆ ಬಿಡಿಸಬಾರದ ತೊಡಕು
--------------
ಬಸವಣ್ಣ
ಅಯ್ಯಾ, ನಿಮ್ಮ ಶರಣರ ಕಂಡ ಕಡು ಸುಖವನೇನೆಂಬೆನಯ್ಯಾ ಅದು ಸಾಲೋಕ್ಯದಂತುಟಲ್ಲ, ಸಾಮೀಪ್ಯದಂತುಟಲ್ಲ, ಸಾರೂಪ್ಯದಂತುಟಲ್ಲ, ಸಾಯುಜ್ಯದಂತುಟಲ್ಲ. ಕೂಡಲಸಂಗಯ್ಯಾ, ನಿಮ್ಮ ಶರಣರ ಚರಣದ ದರುಶನ ಸ್ಪರುಶನದಿಂದಾನು ಧನ್ಯನಾದೆನು.
--------------
ಬಸವಣ್ಣ
ಅರಿದರಿದರಿದು ! ಸಮಗಾಣಿಸಬಾರದು, ತ್ರಾಸಿನ ಕಟ್ಟಳೆಯಂತಿನಿತು ವೆಗ್ಗಳವಾದಡೆ ಈಶ್ವರನು ಒಡೆಯಿಕ್ಕದೆ ಮಾಣುವನೆ ಪಾತ್ರ ಅಪಾತ್ರವೆಂದು ಕಂಡಡೆ ಶಿವನೆಂತು ಮೆಚ್ಚುವನು ಜೀವ ಜೀವಾತ್ಮವ ಸರಿಯೆಂದು ಕಂಡಡೆ ಸಮವೇದಿಸದಿಪ್ಪನೆ ಶಿವನು ತನ್ನ ಮನದಲ್ಲಿ `ಯತ್ರ ಜೀವಃ ತತ್ರ ಶಿವ'ನೆಂದು ಸರ್ವಜೀವದಯಾಪಾರಿಯಾದಡೆ, ಕೂಡಲಸಂಗಮದೇವನು ಕೈಲಾಸದಿಂದ ಬಂದು ಎತ್ತಿಕೊಳ್ಳದಿಪ್ಪನೆ
--------------
ಬಸವಣ್ಣ
ಅನುದಿನದಲ್ಲಿ ಮಜ್ಜನಕ್ಕೆರೆದು ನೆನೆದು ಲಿಂಗ ಕರಿಗಟ್ಟಿತ್ತು. ನೀರನೊಲ್ಲದು, ಬೋನವ ಬೇಡದು, ಕರೆದಡೆ ಓ ಎನ್ನದು. ಸ್ಥಾವರ ಪೂಜೆ, ಜಂಗಮದ ಉದಾಸೀನ- ಕೂಡಲಸಂಗಯ್ಯನೊಲ್ಲ ನೋಡಾ.
--------------
ಬಸವಣ್ಣ
ಅರಸನ ಕಂಡು ತನ್ನ ಪುರುಷನ ಮರೆದಡೆ ಮರನನೇರಿ ಕಯ್ಯ ಬಿಟ್ಟಂತಾುತ್ತಯ್ಯಾ. ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ ! ನಮ್ಮ ಕೂಡಲಸಂಗಮದೇವಯ್ಯ ಜಂಗಮಮುಖ ಲಿಂಗವಾದ ಕಾರಣ. 426
--------------
ಬಸವಣ್ಣ
ಅಯ್ಯಾ, ನಿಮ್ಮ ಮಹಾವ್ರತಿಗಳನಗಲಿ ಬದುಕಲಾರೆನು. ಶಿವಧೋ ಶಿವಧೋ ! ಕಂಗಳಶ್ರುಗಳಲ್ಲಿ ಮುಂದುಗಾಣೆನು. ಲಿಂಗಸಂಗಿಗಳನಗಲಿ ಆನೆಂತು ಬದುಕುವೆ, ಕೂಡಲಸಂಗಮದೇವಾ. 369
--------------
ಬಸವಣ್ಣ

ಇನ್ನಷ್ಟು ...