ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಒಡೆದ ಹಂಚು ಮರಳಿ ಮಡಕೆಯಾಗಬಲ್ಲುದೆ ಕೆಟ್ಟ ವ್ರತಗೇಡಿ ಭಕ್ತನಾಗಬಲ್ಲನೆ ಬಾಳೆಗೆ ಫಲವೆ ಕಡೆ, ಚೇಳಿಗೆ ಗರ್ಭವೆ ಕಡೆ. ಕೂಳು ಮಾರೆಡೆಯುಂಟು, ಸೀರೆ ಮಾರೆಡೆಯುಂಟು, ಭಕ್ತಿ ಮಾರೆಡೆಯುಂಟೆ, ಕೂಡಲಸಂಗಮದೇವಾ
--------------
ಬಸವಣ್ಣ
ಒಂದಕ್ಕೊಂಬತ್ತ ನುಡಿದು, ಕಣ್ಣ ಕೆಚ್ಚನೆ ಮಾಡಿ, ಗಂಡುಗೆದರಿ ಮುಡುಹಿಕ್ಕಿ ಕೆ[ಲೆ]ವರ ಕಂಡಡಂಜುವೆ, ಓಸರಿಸುವೆ ! ಓಡಿದೆನೆಂಬ ಭಂಗವಾದಡಾಗಲಿ. ನಮ್ಮ ಕೂಡಲಸಂಗನ ಶರಣರ ಅನುಭಾವವಿಲ್ಲದವರ ಹೊಲಮೇರೆಯ ಹೊಂದೆ, ಹೊಲನ ಬಿಟ್ಟೋಡುವೆ. 448
--------------
ಬಸವಣ್ಣ
ಒಲ್ಲೆನೆಂಬುದು ವೈರಾಗ್ಯ, ಒಲಿವೆನೆಂಬುದು ಕಾಯಗುಣ. ಆವ ಪದಾರ್ಥವಾದಡೇನು ತನ್ನಿದ್ದೆಡೆಗೆ ಬಂದುದ ಲಿಂಗಾರ್ಪಿತವ ಮಾಡಿ ಭೋಗಿಸುವುದೆ ಆಚಾರ. ಕೂಡಲಸಂಗಮದೇವರನೊಲಿಸ ಬಂದ ಪ್ರಸಾದಕಾಯವ ಕೆಡಿಸಲಾಗದು.
--------------
ಬಸವಣ್ಣ
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ, ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ. ಅಯ್ಯಾ, ನಮ್ಮಯ್ಯನ ಕೈನೊಂದಿತು, ತೆಗೆದುಕೊಡಾ ಎಲೆ ಚಂಡಾಲಗಿತ್ತಿ, ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ ಕೂಡಲಸಂಗಮದೇವನಲ್ಲದೆ ಆರೂ ಇಲ್ಲ.
--------------
ಬಸವಣ್ಣ
ಒಲೆಯಡಿಯನುರುಹಿದಡೆ ಗೋಳಕನಾಥನ ಕೊರಳ ಸುತ್ತಿತ್ತು, ಮಹೀತಳನ ಜಡೆ ಸೀಯಿತ್ತು, ಮರೀಚಿಕನ ಶಿರ ಬೆಂದಿತ್ತು, ರುದ್ರನ ಹಾವುಗೆ ಉರಿಯಿತ್ತು, ದೇವಗಣಂಗಳು ನಿವಾಟವಾದರು, ಮಡದಿಯರೈವರು ಮುಡಿಯ ಹಿಡಿದುಕೊಂಡು ಹೋದರು, ಕೂಡಲಸಂಗಮದೇವ ಭಸ್ಮಧಾರಿಯಾದ.
--------------
ಬಸವಣ್ಣ
ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ: ಆ ಪೂಜೆಯು, ಆ ಮಾಟವು ಚಿತ್ರದ ರೂಹು ಕಾಣಿರಣ್ಣಾ, ಚಿತ್ರದ ಕಬ್ಬು ಕಾಣಿರಣ್ಣಾ, ಅಪ್ಪಿದಡೆ ಸುಖವಿಲ್ಲ, ಮೆಲಿದಡೆ ರುಚಿುಲ್ಲ. ಕೂಡಲಸಂಗಮದೇವಾ, ನಿಜವಿಲ್ಲದವನ ಭಕ್ತಿ. 126
--------------
ಬಸವಣ್ಣ
ಒಡೆಯರು ತಮ್ಮ ಮನೆಗೆ ಒಡಗೊಂಡು ಹೋದಡೆ, ತುಡುಗುಣಿತನದಲ್ಲಿ ಪರವಧುವ ನೋಡುವ ಸರಸ ಬೇಡ. ಕಾಣಿರಣ್ಣಾ ! ಒಡೆಯನರಸಿಯ ಸರಸಬೇಡ. ಕೂಳ ಸೊಕ್ಕು ತಲೆಗೇರಿ ರಾಣಿವಾಸದೊಡನೆ ಸರಸ ಬೇಡ. ಕೂಡಲಸಂಗಮದೇವ ಕರ ಸಿತಗನಯ್ಯಾ.
--------------
ಬಸವಣ್ಣ
ಒಡೆಯರಾಡುವ ಮಾತ ಕಡೆಪರಿಯಂತರ ಕೇಳಿ, ಇದರುವೋಗಿ ಕಿಂಕರನಾಗಿ ನಡುಗುತ್ತ ಬಿನ್ನಹಮಾಡುವ ಸದ್ಭಕ್ತನ ತೋರಯ್ಯಾ. ಒಡೆಯರಾಡುವ ಮಾತ ಕಂಡು, ಕರೆದಲ್ಲಿ ಕೆಡೆಮೆಟ್ಟಿ ಬಾು ಘನವೆಂದು ಆಡುವನ ತೋರದಿರಯ್ಯಾ, ಅವನ ಸಂಗದಲ್ಲಿರಿಸಯ್ಯಾ, ಅವನ ಸಹಪಂಕ್ತ್ತಿಯಲ್ಲಿ ಕುಳ್ಳಿರಿಸದಿರಯ್ಯಾ. ಕೂಡಲಸಂಗಮದೇವಯ್ಯಾ, ನಿಮ್ಮ ಬೇಡುವುದೊಂದೆ ವರವು. 450
--------------
ಬಸವಣ್ಣ
ಒಡೆದೋಡು ಎನ್ನ ಮನೆಯಲಿಲ್ಲದಂತೆ ಮಾಡಯ್ಯಾ, ಕೊಡು ದೇವ, ಎನ್ನ ಕೈಯಲೊಂದು ಕರಿಕೆಯನು. `ಮೃಡದೇವಾ ಶರಣೆಂದು ಭಿಕ್ಷಕ್ಕೆ ಹೋದಡೆ ಅಲ್ಲಿ, `ನಡೆ ದೇವಾ' ಎಂದೆನಿಸು ಕೂಡಲಸಂಗಮದೇವಾ. 457
--------------
ಬಸವಣ್ಣ
ಒಳಗೆ ಕುಟಿಲ, ಹೊರಗೆ ವಿನಯವಾಗಿ ಭಕ್ತರೆನಿಸಿಕೊಂಬವರ ಬಲ್ಲನೊಲ್ಲನಯ್ಯಾ ಲಿಂಗವು, ಅವರು ಪಥಕ್ಕೆ ಸಲ್ಲರು ಸಲ್ಲರಯ್ಯಾ. ಒಳಹೊರಗೊಂದಾಗದವರಿಗೆ ಅಳಿಯಾಸೆದೋರಿ ಬೀಸಾಡುವನವರ ಜಗದೀಶ ಕೂಡಲಸಂಗಮದೇವ. 96
--------------
ಬಸವಣ್ಣ