ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಗುರುವಚನವಲ್ಲದೆ ಲಿಂಗವೆಂದೆನಿಸದು, ಗುರುವಚನವಲ್ಲದೆ ಜಂಗಮವೆಂದೆನಿಸದು, ಗುರುವಚನವಲ್ಲದೆ ನಿತ್ಯವೆಂದೆನಿಸದು, ಗುರುವಚನವಲ್ಲದೆ ನೇಮವೆಂದೆನಿಸದು. ತಲೆಯಿಲ್ಲದ ಅಟ್ಟೆಗೆ ಪಟ್ಟವ ಕಟ್ಟುವ ಭಯ ಭ್ರಷ್ಟರ ಮೆಚ್ಚುವನೆ, ನಮ್ಮ ಕೂಡಲಸಂಗಮದೇವ 72
--------------
ಬಸವಣ್ಣ
ಗರಿ ತೋರೆ ಗಂಡರೆಂಬವರ ಕಾಣೆ, ನಿರಿ ಸೋಂಕೆ ಮುನಿ[ಯ]ಲ್ಲ ನೋಡಯ್ಯಾ. ನಂಟುತನವೇನವನ ಬಂಟತನವೇನವನ ಹುಲ್ಲುಕಿಚ್ಚು, ಹೊಲೆಯನ ಮೇಳಾಪ- ಅಲ್ಲಿ ಹುರುಳಿಲ್ಲ, ಕೂಡಲಸಂಗಮದೇವಾ. 112
--------------
ಬಸವಣ್ಣ
ಗುರುವುಪದೇಶವುಳ್ಳವರ ಗುರುವೆಂದೆ ಕಾಬೆನು, ಲಿಂಗಾಂಗಸಂಗಿಗಳ ನಿಜಲಿಂಗವೆಂದೆ ಕಾಬೆನು, ಜಂಗಮಾರ್ಚಕರ ಸರ್ವಾಂಗಲಿಂಗಿಗಳೆಂದೆ ಕಾಬೆನು. ಕೂಡಲಸಂಗಮದೇವರಲ್ಲಿ ಸಹಜಭಕ್ತರ ಕಂಡಡೆ, ಅವರ ನೀನೆಂದೇ ನಚ್ಚಿ ಮೆಚ್ಚಿ ಅಚ್ಚೊತಿದಂತಿಪ್ಪೆನಯ್ಯಾ ಚೆನ್ನಬಸವಣ್ಣಾ.
--------------
ಬಸವಣ್ಣ
ಗುರುಲಿಂಗಜಂಗಮವ ನಂಬಿ ಕರೆದಡೆ, ಓ ಎಂಬ ಶಿವನು. ನಂಬದೆ ಕರೆದಡೆ ಓ ಎಂಬನೇ ಶಿವನು ನಂಬಲರಿಯರು, ನಚ್ಚಲರಿಯರು ಡಂಭಿನ ಭಕ್ತರು. ನಂಬದೆ ನಚ್ಚದೆ ಬರಿದೆ ಕರೆದಡೆ ಶಂಭು ಮೌನದಲ್ಲಿಪ್ಪ ನಮ್ಮ ಕೂಡಲಸಂಗಮದೇವರು.
--------------
ಬಸವಣ್ಣ
ಗರುಡಿಯ ಕಟ್ಟಿ ಅರುವತ್ತುನಾಲ್ಕು ಕೋಲ ಅಭ್ಯಾಸವ ಮಾಡಿದೆನಯ್ಯಾ. ಇರಿವ ಘಾಯ, ಕಂಡೆಯ ಭೇದವಿನ್ನೂ ತಿಳಿಯದು. ಪ್ರತಿಗರುಡಿಕಾರ ಬಿರಿದ ಪಾಡಿಂಗೊದನಗೆಫ ವೀರಪ[ಟ್ಟವ] ಕಟ್ಟಿ, ತಿಗುರನೇರಿಸಿಕೊಂಡು, ಗುರು ಕಳನನೇರಿ, ಕಠಾರಿಯ ಕೊಂಡಲ್ಲಿ `ಹೋಯಿತ್ತು ಗಳೆ' ಎಂದಡೆ ಎನ್ನ ನಿನ್ನಲ್ಲಿ ನೋಡು, ಕೂಡಲಸಂಗಮದೇವಾ.
--------------
ಬಸವಣ್ಣ
ಗುರುವಿಂಗೆ ನೀನೆ ಕರ್ತ, ಲಿಂಗಕ್ಕೆ ನೀನೆ ಕರ್ತ, ಜಂಗಮಕ್ಕೆ ನೀನೆ ಕರ್ತ, ಪ್ರಸಾದಕ್ಕೆ ನೀನೆ ಕರ್ತ, ಉಪದೇಶಕ್ಕೆ ನೀನೆ ಕರ್ತ. ಕೂಡಲಸಂಗಮದೇವರು ಸಾಕ್ಷಿಯಾಗಿ, ಎನಗೆಯೂ ನೀನೆ ಕರ್ತನಾದ ಕಾರಣ, ನಾನು ಬೇಕೆನಲಮ್ಮೆ ಬೇಡೆನಲಮ್ಮೆ ಕಾಣಾ, ಚೆನ್ನಬಸವಣ್ಣಾ.
--------------
ಬಸವಣ್ಣ
ಗಿಳಿಯ ಹಂಜರವಿಕ್ಕಿ, ಸೊಡರಿಂಗೆಣ್ಣೆಯನೆರೆದು, ಬತ್ತಿಯನಿಕ್ಕಿ ಬರವ ಹಾರುತ್ತಿದ್ದೆನೆಲೆಗವ್ವಾ. ತರಗೆಲೆ ಗಿರಿಕೆಂದಡೆ ಹೊರಗನಾಲಿಸುವೆ; ಅಗಲಿದೆನೆಂದೆನ್ನ ಮನ ಧಿಗಿಲೆಂದಿತ್ತೆಲೆಗವ್ವಾ. ಕೂಡಲಸಂಗಮದೇವನ ಶರಣರು ಬಂದು, ಬಾಗಿಲ ಮುಂದೆ ನಿಂದು `ಶಿವಾ' ಎಂದಡೆ, ಸಂತೋಷ ಪಟ್ಟೆನೆಲೆಗವ್ವಾ. 375
--------------
ಬಸವಣ್ಣ