ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಜನನಸೂತಕ, ಕುಲಸೂತಕ, ರಜಃಸೂತಕ, ಎಂಜಲಸೂತಕ, ಪ್ರೇತಸೂತಕ ಎಂಬಿವಾದಿಯಾದ ಸರ್ವಸೂತಕಂಗಳು ಅಂಗಲಿಂಗ ಸಂಬಂಧಿಗಳಾದ ಲಿಂಗಭಕ್ತರಿಗಿಲ್ಲ ನೋಡಾ, ಅದೆಂತೆಂದೊಡೆ; ಆದಿಬಿಂದುರ್ಭವೇದ್ಬೀಜಂ ಬೀಜಮಧ್ಯಸ್ಥಿತಂ ಕುಲಂ ಬೀಜಂ ನಾಸ್ತಿ ಕುಲಂ ನಾಸ್ತಿ ತಸ್ಮೈ ಶಿವಕುಲಂ ಭವೇತ್ ಎಂದುದಾಗಿ ಪೂರ್ವಾಚಾರವನಳಿದು ಪುನರ್ಜಾತನಾಗಿ, ಅಂಗದ ಮೇಲೆ ಲಿಂಗಸಾಹಿತ್ಯನಾದ ಭಕ್ತಂಗೆ ಜನನಸೂತಕವೆಂಬುದೆ ಪಾತಕ ನೋಡಾ. ಶಿವಭಕ್ತರಾದ ಬಳಿಕ ಭವಿನೇಮಸ್ತರ ಕಳೆದು ಶಿವಕುಲವೆ ಕುಲವಾದ ಭಕ್ತರಿಗೆ ಕುಲಸೂತಕವೆಂಬುದೆ ಪಾತಕ ನೋಡಾ. ಗುರುಪಾದತೀರ್ಥ, ಲಿಂಗಪಾದತೀರ್ಥ, ಜಂಗಮಪಾದತೀರ್ಥ ಆದಿಯಾದ ಲಿಂಗೋದಕ, ಪಾದೋದಕ, ಪ್ರಸಾದೋದಕ ಎಂಬ ತ್ರಿವಿಧೋದಕದಲ್ಲಿ ಸರ್ವಪಾಕಪ್ರಯತ್ನ, ನಾನಾ ಕ್ರಿಯಾವಿಧಾನ, ಸ್ನಾನಪಾನಂಗಳಿಂದ ಬಾಹ್ಯಾಭ್ಯಂತರಂ ಶುಚಿಯಾದ, ಶುದ್ಧನಿರ್ಮಲದೇಹಿಯಾದ ಭಕ್ತಂಗೆ ರಜಃಸೂತಕವೆಂಬುದೆ ಪಾತಕ ನೋಡಾ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದಯುಕ್ತವಾದ ಸದಾಸನ್ನಹಿತ ಭಕ್ತಂಗೆ ಎಂಜಲಸೂತಕವೆಂಬುದೆ ಪಾತಕ ನೋಡಾ. ಗುರುವಿನಿಂ ಜನನ, ಚರಲಿಂಗದಿಂ ಸ್ಥಿತಿ, ಪರಮಪಾವನ ಘನಮಹಾಲಿಂಗದೊಳೈಕ್ಯ. ಅದೆಂತೆಂದೊಡೆ; ಸದ್ಗುರೋಃ ಪಾಣಿಜಾತಸ್ಯ ಸ್ಥಿತೇ ಸದ್ಭಕ್ತಸಂಗಿನಾಂ ಲೀಯತೇ ಚ ಮಹಾಲಿಂಗೀ ವೀರಶೈವೋತ್ತಮೋತ್ತಮಂ ಎಂದುದಾಗಿ, ನಿಜಲಿಂಗೈಕ್ಯವಾದ ಸದ್ಭಕ್ತಂಗೆ ಪ್ರೇತಸೂತಕವೆಂಬುದೆ ಪಾತಕ ನೋಡಾ. ಇಂತೀ ಪಂಚಸೂತಕವನುಳ್ಳ ಪಾತಕಂಗಳ ಪಂಚಾಚಾರಯುಕ್ತನಾದ ಸದ್ಭಕ್ತಂಗೆ ಕಲ್ಪಿಸುವ ಪಂಚಮಹಾಪಾತಕರ ಅಘೋರ ನರಕದಲ್ಲಿಕ್ಕುವ ಕೂಡಲಸಂಗಯ್ಯ.
--------------
ಬಸವಣ್ಣ
ಜಂಬೂದ್ವೀಪ ನವಖಂಡ ಪೃಥ್ವಿಯೊಳಗೆ ಕೇಳಿರಯ್ಯಾ ಎರಡಾಳಿನ ಭಾಷೆಯ ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ, ಕೂಡಲಸಂಗಮದೇವಾ.
--------------
ಬಸವಣ್ಣ
ಜಂಗಮವಿರಹಿತ ಲಿಂಗಾರ್ಚನೆ :ಓಡ ಬಿಲಲೆರೆದ ಜಲದಂತೆ. ಜಂಗಮಸನ್ನಿಹಿತ ಲಿಂಗಾರ್ಚನೆ :ಇದೆ ಭಕ್ತಿಗೆ ಪಥವಯ್ಯಾ ಜಂಗಮಪ್ರಸಾದಭೋಗೋಪಭೋಗವು :ಎನಗಿದೇ ಲಿಂಗಾರ್ಚನೆ. ಬೇರೆ ಮತ್ತೊಂದನರಿದೆನಾದಡೆ, ಕೂಡಲಸಂಗಮದೇವ ನರಕದಲ್ಲಿಕ್ಕುವ. 398
--------------
ಬಸವಣ್ಣ
ಜಾತಿವಿಡಿದು ಸೂತಕವನರಸುವೆ ಜ್ಯೋತಿವಿಡಿದು ಕತ್ತಲೆಯನರಸುವೆ ! ಇದೇಕೊ ಮರುಳುಮಾನವಾ ಜಾತಿಯಲ್ಲಿ ಅಧಿಕನೆಂಬೆ ! ವಿಪ್ರ ಶತಕೋಟಿಗಳಿದ್ದಲ್ಲಿ ಫಲವೇನೊ `ಭಕ್ತನೆ ಶಿಖಾಮಣ' ಎಂದುದು ವಚನ. ನಮ್ಮ ಕೂಡಲಸಂಗನ ಶರಣರ ಪಾದಪರುಷವ ನಂಬು, ಕೆಡಬೇಡ ಮಾನವಾ.
--------------
ಬಸವಣ್ಣ
ಜಪತಪ ನಿತ್ಯನೇಮವೆನಗುಪದೇಶ, ನಿಮ್ಮ ನಾಮವೆನಗೆ ಮಂತ್ರ, ಶಿವನಾಮವೆನಗೆ ತಂತ್ರ, ಕೂಡಲಸಂಗಮದೇವಯ್ಯಾ ನಿಮ್ಮ ನಾಮವೆನಗೆ ಕಾಮಧೇನು. 76
--------------
ಬಸವಣ್ಣ