ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ದಶವಿಧಪಾದೋದಕವೆಸಗಿದ[ರೆಸ]ಕ ಎಂತೆಂದಡೆ; ಗುರುಲಿಂಗಜಂಗಮ ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಪಂಚಾಕ್ಷರಿ ಗಣವ್ರತನೇಮ ಆಚಾರ ಶೀಲ ಸಂಬಂಧದೊಳಗು ಹೊರಗು ತ್ರಿವಿಧ ಸಂಪೂರ್ಣವಾದ ಕಾರಣ ನಿತ್ಯಪಾದೋದಕವೆನಿಸಿತ್ತು ಕೂಡಲಸಂಗಮದೇವಪ್ರಭುವೆ.
--------------
ಬಸವಣ್ಣ
ದೇಹವೆಂಬೆರಡಕ್ಕರವನು ಜೀವವೆಂದರಿದೆನಯ್ಯಾ, ಜೀವವೆಂಬೆರಡಕ್ಕರವನು ಹಂಸನೆಂಬ ದಳಕ್ಕೆ ವಿಭಾಗಿಸಿದೆನಯ್ಯಾ. ಹಂಸವೆಂಬೆರಡಕ್ಕರವನು ಜ್ಞಾನಚಕ್ಷುವಿನ ಭ್ರೂಮಧ್ಯದಲ್ಲಿ ವಿಭಾಗಿಸಿದೆನಯ್ಯಾ. ಒಂದು ದಳವ ಕರ್ತನ ಮಾಡಿ ಒಂದು ದಳವ ಭೃತ್ಯನ ಮಾಡಿ ಈ ಎರಡು ದಳದ ನಡುವಿರ್ಪ ಪರಂಜ್ಯೋತಿಯನು ತ್ರಿಕೂಟವೆಂದರಿದು ಕೂಡಿದೆನಯ್ಯಾ. ಇಂತು ಕೂಡಿದಲ್ಲಿ ಪರಿಚರ್ಯವ ಮಾಡುತಿರ್ದೆನಯ್ಯಾ. ಮೊದಲ ಪರಿಚರ್ಯದಲ್ಲಿ ನಿರ್ಮಳೋದಕವ ತುಂಬಿದೆ, ಒಂದು ದಳದೊಳಗೆ. ಎರಡನೆಯ ಪರಿಚರ್ಯದಲ್ಲಿ ಒಂದು ದಳದಲ್ಲಿ ಆ ಉದಕವ ಗಡಣಿಸುತಿರ್ದೆನಯ್ಯಾ. ಇರಲಿರಲು ಎರಡು ದಳವು ಅಳಿದು ಜಲ ಮೇರೆದಪ್ಪಲು ಮನ ಮೇರೆದಪ್ಪಿ ಆರೋಗಿಸಿದೆನಯ್ಯಾ. ಆರೋಗಿಸಿದ ತೃಪ್ತಿಯ ನೀನೆ ಬಲ್ಲೆ, ಕೂಡಲಸಂಗಮದೇವಾ.
--------------
ಬಸವಣ್ಣ
ದೇವನಿಂತಹನೆಂದು ತೋರಿಯೆ ಕೊಡುವೆನು ಗಣಂಗಳಿಗೆ; ಬಲ್ಲಾಳನ ವಧುವ ಬೇಡಿದಾತನೀ ದೇವ. ದೇವನಿಂತಹನೆಂದು ತೋರಿಯೆ ಕೊಡುವೆನು ಗಣಂಗಳಿಗೆ; ದಾಸನ ವಸ್ತ್ರವ ಬೇಡಿದಾತನೀ ದೇವ. ದೇವನಿಂತಹನೆಂದು ತೋರಿಯೆ ಕೊಡುವೆನು ಗಣಂಗಳಿಗೆ; ಸಿರಿಯಾಳನ ಮಗನ ಬೇಡಿದಾತನೀ ದೇವ. ಕೂಡಲಸಂಗಮದೇವ ಜಂಗಮಮುಖಲಿಂಗವಾಗಿ ಕಾಡಿ ನೋಡುವ, ಬೇಡಿ ನೋಡುವ. 435
--------------
ಬಸವಣ್ಣ