ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಪರುಷದ ಹೊರೆಯಲ್ಲಿ ಕಬ್ಬುನವಿದ್ದು ಹೊನ್ನಾುತ್ತು, ನೋಡಿರೆ ! ಅವ್ವಾ ಚಂಗಳೆ, ನೀನಿದ್ದೇಳು ಕೇರಿಯವರು ಲಿಂಗದ ನೋಂಪಿಯ ನೋಂತರೆ, ಹೇಳಾ ಕೂಡಲಸಂಗಮದೇವಂಗೆ ಚೀಲಾಳನೆಂಬ ಬಾುನವನಿಕ್ಕಿದರೆ ಹೇಳಾ 152
--------------
ಬಸವಣ್ಣ
ಪ್ರಣವಾರೂಢನು, ಪ್ರಣವಪ್ರಕೃತಿಸಂಜ್ಞನು, ಪ್ರಣವಸಂಗಸಮರಸ, ನಮ್ಮ ಕೂಡಲಸಂಗಮದೇವರು.
--------------
ಬಸವಣ್ಣ
ಪಂಚಬ್ರಹ್ಮವ ಕೆಡಿಸಿತ್ತು, ಪ್ರಣವಮಂತ್ರವನೀಡಾಡಿತ್ತಲ್ಲಾ. ಕರ್ಮಂಗಳನೆ ಕಳೆಯಿತ್ತು, ಕ್ರೀಗಳನೆ ಮೀರಿತ್ತಲ್ಲಾ. ಆಗಮದ ಹಲ್ಲನೆ ಕಳೆಯಿತ್ತು ಕೂಡಲಸಂಗಯ್ಯನ ಭಕ್ತಿಗಜ ಹೋ !
--------------
ಬಸವಣ್ಣ
ಪೂರ್ವಬೀಜ ವಾಯುಪ್ರಾಣಿಯಲ್ಲ, ಲಿಂಗಪ್ರಾಣಿಯಾ ಶರಣನು. ಏಕೋಗ್ರಾಹಿ ಭಾವಭೇದವಿಲ್ಲವಾಗಿ ಮನಃಪ್ರವೇಶಿಯಾ ಶರಣನು. ನಿಮ್ಮುವ ಪೂಜಿಸಿ ತನುಧರ್ಮವ ಮರೆದು ನಿಮ್ಮ ಪ್ರತಿಬಿಂಬದಂತಿಪ್ಪ ಕೂಡಲಸಂಗಮದೇವಾ, ನಿಮ್ಮ ಶರಣನು.
--------------
ಬಸವಣ್ಣ
ಪಾತಕ ಶತಕೋಟಿಯನೊರಸಲು ಸಾಲದೆ ಒಂದು ಶಿವನ ನಾಮ ಸಾಲದೆ ಒಂದು ಹರನ ನಾಮ ಕೂಡಲಸಂಗಮದೇವಾ ನಿಮ್ಮ ಉಂಡಿಗೆಯ ಪಶುವ ಮಾಡಿದೆಯಾಗಿ.
--------------
ಬಸವಣ್ಣ
ಪಂಚೇಂದ್ರಿಯಂಗಳರತು ತನುಮನವ ನಿಲಿಸಬಲ್ಲಡೆ ಚೆನ್ನನ ಪ್ರಸಾದ ಲಿಂಗಕ್ಕೋಗರವಾಗದೆ ನಾಲಗೆಯ ರುಚಿಯ ನಾಣಕ್ಕೆ ತಂದು ಮರಳಿ ಲಿಂಗಾರ್ಪಿತವ ಮಾಡಿದಡೆ, ಮನದ ಭಾವವ ಕೈಕೊಂಡ ಕಾರಣ, ನಮ್ಮ ಕೂಡಲಸಂಗಮದೇವನಿಗೆ ಕೊಡಬಹುದು ಕಾಣಾ, ಪ್ರಭುವೆ.
--------------
ಬಸವಣ್ಣ
ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ ಸತ್ಪಾತ್ರಕ್ಕೆ ಸಲ್ಲದಯ್ಯಾ, ನಾಯ ಹಾಲು ನಾುಗಲ್ಲದೆ ಪಂಚಾಮೃತಕ್ಕೆ ಸಲ್ಲದಯ್ಯಾ. ನಮ್ಮ ಕೂಡಲಸಂಗನ ಶರಣರಿಗಲ್ಲದೆ ಮಾಡುವ ಅರ್ಥ ವ್ಯರ್ಥ ಕಂಡಯ್ಯಾ. 223
--------------
ಬಸವಣ್ಣ