ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಭಕ್ತರ ಕಂಡಡೆ ಬೋಳರಪ್ಪಿರಯ್ಯಾ, ಸವಣರ ಕಂಡಡೆ ಬತ್ತಲೆಯಪ್ಪಿರಯ್ಯಾ, ಹಾರುವರ ಕಂಡಡೆ ಹರಿನಾಮವೆಂಬಿರಯ್ಯಾ, ಅವರವರ ಕಂಡಡೆ ಅವರವರಂತೆ ಸೂಳೆಗೆ ಹುಟ್ಟಿದವರ ತೋರದಿರಯ್ಯಾ. ಕೂಡಲಸಂಗಯ್ಯನ ಪೂಜಿಸಿ, ಅನ್ಯದೈವಂಗಳಿಗೆರಗಿ ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯಾ. 103
--------------
ಬಸವಣ್ಣ
ಭಕ್ತನೆನಿಸುವೆನಯ್ಯಾ ಮೆಲ್ಲಮೆಲ್ಲನೆ, ಯುಕ್ತನೆನಿಸುವೆನಯ್ಯಾ ಮೆಲ್ಲಮೆಲ್ಲನೆ, ಸಾರಿ ಶರಣನೆನಿಸುವೆನಯ್ಯಾ ಮೆಲ್ಲಮೆಲ್ಲನೆ, ಎಡಹುಗುಳಿಗಳ ದಾಂಟಿ ಬರಬರ ಲಿಂಗೈಕ್ಯನೆನಿಸುವೆನಯ್ಯಾ. ಕೂಡಲಸಂಗಮದೇವಾ, ನಿಮ್ಮಿಂದಧಿಕನೆನಿಸುವೆನಯ್ಯಾ.
--------------
ಬಸವಣ್ಣ
ಭಕ್ತಿವಿಶೇಷವ ಮಾಡುವಡೆ ಹತ್ತು ಬೆರಳುಂಟು, ಹಾಸಿ ದುಡಿವಡೆ ತನಗುಂಟು, ತನ್ನ ಪ್ರಮಥರಿಗುಂಟು. ಮಾರಿತಂದೆಗಳಂತೆ ಎನಗೇಕಹುದಯ್ಯಾ ರತ್ನದ ಸಂಕಲೆಯನಿಕ್ಕಿ ಕಾಡಿಹ ಕೂಡಲಸಂಗಮದೇವ, ಶಿವಧೋ ಶಿವಧೋ ! 325
--------------
ಬಸವಣ್ಣ
ಭಕ್ತನ ಮುಖದರ್ಪಣದಲ್ಲಿ ಲಿಂಗವ ಕಾಣಬಹುದು, ಭಕ್ತದೇಹಿಕ ದೇವ ಅನಿಮಿಷನಾಗಿ ! ಕೂಡಲಸಂಗಮದೇವ ಭಕ್ತನ ನುಡಿಯ ನಡುವೆ ರಾಶಿಯಾಗಿಪ್ಪನು. 145
--------------
ಬಸವಣ್ಣ
ಭಕ್ತಿಯುಕ್ತಿಯನರಿಯೆ, ಷೋಡಶೋಪಚಾರವನರಿಯೆ, ಭಾವನಿರ್ಭಾವವನರಿಯೆ, ಜ್ಞಾನಮಹಾಜ್ಞಾನವನರಿಯೆ, ಕೂಡಲಸಂಗಮದೇವಯ್ಯಾ, ಮಡಿವಾಳತಂದೆಗಳ ಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಬಸವಣ್ಣ
ಭವಬಂಧನ ಭವಪಾಶವಾದ ಕಾರಣವೇನಯ್ಯಾ ಹಿಂದಣ ಜನ್ಮದಲ್ಲಿ ಲಿಂಗವ ಮರೆದೆನಾಗಿ, ಹಿಂದಣ ಸಿರಿಯಲ್ಲಿ ಜಂಗಮವ ಮರೆದೆನಾಗಿ. ಅರಿದಡೀ ಸಂಸಾರವ ಹೊದ್ದಲೀವೆನೆ, ಕೂಡಲಸಂಗಮದೇವಾ 7
--------------
ಬಸವಣ್ಣ
ಭಕ್ತಿ ಎಂತಹದಯ್ಯಾ ದಾಸಯ್ಯ ಮಾಡಿದಂತಹದಯ್ಯಾ. ಭಕ್ತಿ ಎಂತಹದಯ್ಯಾ ಸಿರಿಯಾಳ ಮಾಡಿದಂತಹದಯ್ಯಾ. ಭಕ್ತಿ ಎಂತಹದಯ್ಯಾ ನಮ್ಮ ಬಲ್ಲಾಳ ಮಾಡಿದಂತಹದಯ್ಯಾ. ಭಕ್ತಿ ಎಂತಹದಯ್ಯಾ ಕೂಡಲಸಂಗಮದೇವಾ, ನೀ ಬಾಣನ ಬಾಗಿಲ ಕಾದಂತಹದಯ್ಯಾ. |146
--------------
ಬಸವಣ್ಣ
ಭಕ್ತಿಯೆಂಬ ಪೃಥ್ವಿಯ ಮೇಲೆ, ಗುರುವೆಂಬಬೀಜವಂಕುರಿಸಿ, ಲಿಂಗವೆಂಬ ಎಲೆಯಾುತ್ತು. ಲಿಂಗವೆಂಬ ಎಲೆಯ ಮೇಲೆ ವಿಚಾರವೆಂಬ ಹೂವಾುತ್ತು, ಆಚಾರವೆಂಬ ಕಾಯಾುತ್ತು. ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ. 526
--------------
ಬಸವಣ್ಣ
ಭೂಮಿಯ ಸಾರಾಯದಲೊಂದು ತರು ಬೆಳೆಯಿತ್ತು, ನವರಸಫಲವನಿತ್ತಿತ್ತು ನೋಡಾ. ಏನೆಂದರಿಯದೆ ಎಂತೆಂದರಿಯದೆ ಮರುಳಾದೆನು, ನಾನು ಮಾರಾರಿಯ ಬಲೆಯಲ್ಲಿ ಸಿಲುಕಿದೆನಯ್ಯಾ. ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನಿಂದಲಾನು ಬದುಕಿದೆನು.
--------------
ಬಸವಣ್ಣ
ಭಕುತಿರತಿಯ ವಿಕಳತೆಯ ಯುಕುತಿಯನೇನ ಬೆಸಗೊಂಬಿರಯ್ಯಾ! ಕಾಮಿಗುಂಟೆ ಲಜ್ಜೆ ನಾಚಿಕೆ ಕಾಮಿಗುಂಟೆ ಮಾನಾಪಮಾನವು ಕೂಡಲಸಂಗನ ಶರಣರಿಗೊಲಿದ ಮರುಳನನೇನ ಬೆಸಗೊಂಬಿರಯ್ಯಾ 515
--------------
ಬಸವಣ್ಣ
ಭವಿರಹಿತ ಭಕ್ತನಾದ ಬಳಿಕ, ಭಕ್ತಿಭಾಜನದಲ್ಲಿ ಮಾಡಿ ಭವಿಗಿಕ್ಕಲಾಗದಯ್ಯಾ. ಯುಕ್ತಿಶೂನ್ಯರಿಗೆ ಮುಂದೆ ಪ್ರಸಾದ ದೂರ, ಮುಕ್ತಿುಲ್ಲ-ಮುಂದೆ ನಾಯ ಬಸುರಲ್ಲಿ ಬಪ್ಪುದು ತಪ್ಪದು ಪೃಥ್ವಿಯೊಳಗೆ. ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದೆ ಅನಾಚಾರಕ್ಕೆಲ್ಲಿಯದೊ 458
--------------
ಬಸವಣ್ಣ
ಭಕ್ತರೇ ಸಮರ್ಥರು, ಅಸಮರ್ಥರೆಂದನಲುಂಟೆ ಚೆನ್ನನೆತ್ತ, ಚೋಳನೆತ್ತ ! ಚೆನ್ನನೊಡನುಂಡ ಶಿವ ಆಹಾ ! ಅಯ್ಯಾ ! ಚೆನ್ನ, ಚೋಳನ ಮನೆಯ ಕಂಪಣಿಗನಯ್ಯಾ ! ಕೂಡಲಸಂಗಮದೇವ ಭಕ್ತಿಲಂಪಟನಯ್ಯಾ !
--------------
ಬಸವಣ್ಣ
ಭಕ್ತನಾಯಿತ್ತೆ ಭಕ್ತಿದಾಸೋಹ, ಯುಕ್ತನಾಯಿತ್ತೆ ಯುಕ್ತಿದಾಸೋಹ, ಐಕ್ಯನಾಯಿತ್ತೆ ಮಮಕಾರ ದಾಸೋಹ, ಸರ್ವದಲೆ ದಾಸೋಹವೇ ಬೇಕು. ಈ ದಾಸೋಹದ ಅನುವ ಕೂಡಲಸಂಗಯ್ಯ ತಾನೆ ಬಲ್ಲ.
--------------
ಬಸವಣ್ಣ
ಭಕ್ತಿಯೆಂಬುದು ಅನಿಯಮ ನೋಡಯ್ಯಾ, ಅದು ವಿಷದ ಕೊಡ; ತುಡುಕಬಾರದು, ಅಂಗಕ್ಕೆ ಹಿತವಲ್ಲ, ಸಿಂಗಿ ನೋಡಯ್ಯಾ, ಅದು ವಿಚಿತ್ರ, ವಿಸ್ಮಯ ಕೂಡಲಸಂಗಮದೇವಾ.
--------------
ಬಸವಣ್ಣ
ಭಕ್ತಿ ಎಳ್ಳನಿತಿಲ್ಲ, ಯುಕ್ತಿಶೂನ್ಯನಯ್ಯಾ ನಾನು. ತನುವಂಚಕ, ಮನವಂಚಕ, ಧನವಂಚಕ ನಾನಯ್ಯಾ. ಕೂಡಲಸಂಗಮದೇವಾ, ಒಳಲೊಟ್ಟೆ ಎನ್ನ ಮಾತು. 308
--------------
ಬಸವಣ್ಣ
ಭೂತ ಒಲಿದು ಆತ್ಮನ ಸೋಂಕಿದ ಬಳಿಕ ಭೂತದ ಗುಣವಲ್ಲದೆ ಆತ್ಮನ ಗುಣವುಂಟೆ ಗುರುಕಾರುಣ್ಯವಾಗಿ ಹಸ್ತಮಸ್ತಕಸಂಯೋಗವಾದ ಬಳಿಕ ಗುರುಲಿಂಗಜಂಗಮವೆ ಗತಿಯಾಗಿ ಇದ್ದೆ, ಕೂಡಲಸಂಗಮದೇವಾ.
--------------
ಬಸವಣ್ಣ
ಭೂ ತೋಯ ಪಾವಕ ಸಮೀರಣ ಅಂಬರಾದಿಗಳೆಲ್ಲ ಆದಿಯಾಧಾರದ ಪರಮಾತ್ಮಲಿಂಗದಲ್ಲಿ ! ಆದಿ ಮಧ್ಯ ಅವಸಾನವನರಿಯದ ಅಗಮ್ಯ ವೇದಾದಿಸಕಲಶಾಸ್ತ್ರಪ್ರಮಾಣರು ಅದನಂತಿಂತೆಂದುಪಮಿಸಲಿಲ್ಲ, ಮಹಾಂತ ಕೂಡಲಸಂಗಮದೇವಾ.
--------------
ಬಸವಣ್ಣ
ಭೇರುಂಡನ ಪಕ್ಷಿಗೆ ದೇಹ ಒಂದೆ, ತಲೆಯೆರಡರ ನಡುವೆ ಕನ್ನಡವ ಕಟ್ಟಿ ಒಂದು ತಲೆಯಲ್ಲಿ ಹಾಲನೆರೆದು ಒಂದು ತಲೆಯಲ್ಲಿ ವಿಷವನೆರೆದಡೆ ದೇಹವೊಂದೇ, ವಿಷ ಬಿಡುವುದೇ ಅಯ್ಯಾ ಲಿಂಗದಲ್ಲಿ ಪೂಜೆಯ ಮಾಡಿ ಜಂಗಮದಲ್ಲಿ ನಿಂದೆಯ ಮಾಡಿದಡೆ ನಾನು ಬೆಂದೆ ಕಾಣಾ, ಕೂಡಲಸಂಗಮದೇವಾ.
--------------
ಬಸವಣ್ಣ