ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಲೌಕಿಕದನುಸಂಧಾನ ಸಮನಿಸದೆ ಅನ್ಯವ ಸುಟ್ಟರು ಎನ್ನ ಹೃದಯದ ಕಂಗಳು ಲಿಂಗದಲ್ಲಿ ನಟ್ಟು ಬಗೆಯಲಾರಳವು. ಅಲ್ಲದೆ, ನಿಷೆ* ಒಲಿದು ಗಟ್ಟಿಗೊಂಡು ಅಂಗಶಂಕೆಯೆಂಬ ಭಂಗವಿನ್ನೆಲ್ಲಿಯದೊರಿ ಹಾಲು ಬೆರಸಿದ ನೀರ ಹಂಸೆ[ಗಾ]ಗದಂತೆ ಪಾವಕನಾದನಯ್ಯಾ ಕೂಡಲಸಂಗಮದೇವಾ ನಿಮ್ಮ ಶರಣು.
--------------
ಬಸವಣ್ಣ
ಲಿಂಗಮುಖದಿಂದ ಬಂದ ಪ್ರಸಾದವಲ್ಲದೆ ಕೊಂಡೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಲಿಂಗಾರ್ಪಿತವಲ್ಲದೆ ಉದಕವ ಮುಕ್ಕುಳಿಸಿದಡೆ ಸಲ್ಲೆನು ನಿಮ್ಮ ಗಣಾಚಾರಕ್ಕಯ್ಯಾ. ಲಿಂಗಾರ್ಪಿತವಲ್ಲದೆ ಹಲ್ಲುಕಡ್ಡಿಯ ಕೊಂಡಡೆ ಬಲ್ಲೆ, ಮುಂದೆ ಭವ ಘೋರನರಕವೆಂಬುದ. ನಿಮಗೆತ್ತಿದ ಕರದಲ್ಲಿ ಮತ್ತೊಂದಕ್ಕೆ ಕೈಯಾನೆನು. ಅಳವರಿಯದೆ ನುಡಿದೆನು. ಕಡೆ ಮುಟ್ಟಿ ಸಲೆಸದಿದ್ದಡೆ ತಲೆದಂಡ, ತಲೆದಂಡ, ಕೂಡಲಸಂಗಮದೇವಾ.
--------------
ಬಸವಣ್ಣ
ಲಿಂಗದಲ್ಲಿ ಕಠಿಣವುಂಟೆ ಜಂಗಮದಲ್ಲಿ ಕುಲವುಂಟೆ ಪ್ರಸಾದದಲ್ಲಿ ಆರುಚಿಯುಂಟೆ ಈ ತ್ರಿವಿಧದಲ್ಲಿ ಭಾವಭೇದವನರಸುವೆನು, ಕೂಡಲಸಂಗಮದೇವಾ, ಧಾ[ರಾ]ವಟ್ಟಲೆನ್ನ ಭಕ್ತಿ 286
--------------
ಬಸವಣ್ಣ
ಲಿಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ ಲೀಯವಾಯಿತ್ತೆಂದಡೆ, ಅಂಗವ ಲಿಂಗದಲ್ಲಿ ನಿಕ್ಷೇಪಿಸಿಹೆನೆಂಬ ಕಾರಣವೇಕಯ್ಯಾ ಶರಣಂಗೆ ಪ್ರಾಣವ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ, ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿಯೆಂತು ಹೇಳಯ್ಯಾ ಕೂಡಲಸಂಗಮದೇವಯ್ಯಾ, ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯರಾಗಿಪ್ಪುದ ಹೇಳಯ್ಯಾ, ನಿಮ್ಮ ಧರ್ಮ, ನಿಮ್ಮ ಧರ್ಮ
--------------
ಬಸವಣ್ಣ
ಲಿಂಗದ ಉಂಡಿಗೆಯ ಪಶುವಾನಯ್ಯಾ, ವೇಷಧಾರಿಯಾನು, ಉದರಪೋಷಕ ನಾನಯ್ಯಾ, ಕೂಡಲಸಂಗನ ಶರಣರ ಧರ್ಮದ ಕವಿಲೆಯಾನು
--------------
ಬಸವಣ್ಣ
ಲಿಂಗವೆ ಅಂಗ, ಅಂಗವೆ ಲಿಂಗವೆಂದರಿದ ಬಳಿಕ ಅಲ್ಲಿಯೆ ಅದೆ. ಲಿಂಗವೆ ಪ್ರಾಣ, ಪ್ರಾಣವೆ ಲಿಂಗವೆಂದರಿದ ಬಳಿಕ ಅಲ್ಲಿಯೆ ಅದೆ. ಉಂಟೆಂದು ತೋರಲಿಲ್ಲ, ಇಲ್ಲವೆಂದು ಅರಸಲಿಲ್ಲ, ಕೂಡಲಸಂಗಮದೇವಾ, ಲಿಂಗ ನಿರಂತರವಲ್ಲಿಯೇ.
--------------
ಬಸವಣ್ಣ
ಲಿಂಗದರ್ಶನ ಕರಮುಟ್ಟಿ, ಜಂಗಮದರ್ಶನ ಶಿರಮುಟ್ಟಿ, ಆವುದ ಘನವೆಂಬೆ, ಆವುದ ಕಿರಿದೆಂಬೆ ತಾಳಸಂಪುಟಕ್ಕೆ ಬಾರದ ಘನವ ಅರ್ಪಿಸ ಹೋದಡೆ,
--------------
ಬಸವಣ್ಣ
ಲಕ್ಷದ ಮೇಲೆ ತೊಂಬತ್ತಾರುಸಾವಿರ ವಚನ ನಿತ್ಯಭಂಡಾರಕ್ಕೆ ಸಂದಿತ್ತಯ್ಯಾ. ಬೆಟ್ಟಕ್ಕೆ ಬಳ್ಳು ಬಗುಳಿದಂತಾಯಿತ್ತಯ್ಯಾ. ಕ[ರೆದು]ಕೊಳ್ಳಯ್ಯಾ, ಕ[ರೆದು]ಕೊಳ್ಳಯ್ಯಾ, ಓ ಎನ್ನಯ್ಯಾ, ಓ ಎನ್ನಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ಲಿಂಗ ಜಂಗಮ ಒಂದೆ ಎಂದು ನಂಬಿದ ಬಳಿಕ ಅವರಂಗನೆಯರು ಲಿಂಗದ ರಾಣಿವಾಸ. ಅಲ್ಲಿಯೂ ಮೇಳ, ಇಲ್ಲಿಯೂ ಮೇಳ, ಚೌಡೇಶ್ವರಿಯಲ್ಲಿಯೂ ಮೇಳವೇ ಮೊಲೆಯುಂಬ ಭಾವ ತಪ್ಪಿ ಅಪ್ಪಿದವರ ತಲೆಯ ಕೊಂಬ ಕೂಡಲಸಂಗಮದೇವ.
--------------
ಬಸವಣ್ಣ
ಲಿಂಗಗಂಭೀರದೊಳಗೆ ಜಗ ಹುಟ್ಟಿದಡೇನು, ಆ ಲಿಂಗದಿಂದ ಘನವೆ ಶಿವಲಿಂಗದೊಳಗೆ ಜಗ, ಜಗದೊಳಗೆ ಶಿವಲಿಂಗ, ಲೋಕಾದಿ ಲೋಕಂಗಳಿಗೆ ನೀನು ಭಕ್ತಿಯ ಕಂದೆರೆದು ತೋರಿದೆ, ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಾ, ನಿನ್ನ ಶ್ರೀಪಾದಕ್ಕೆ ನಮೋ ನಮೋ ಎನುತ್ತಿರ್ದೆನು.
--------------
ಬಸವಣ್ಣ
ಲಿಂಗಾರ್ಚನೆಯ ಮಾಡುವ ಮಹಿಮರೆಲ್ಲರೂ ಸಲಿಗೆವಂತರಾಗಿ ಒಳಗೈದಾರೆ. ಆನು ದೇವಾ ಹೊರಗಣವನು. `ಸಂಬೋಳಿ ಸಂಬೋಳಿ ಎನುತ್ತ ಇಂಬಿನಲ್ಲಿ ಇದೇನೆ. ಕೂಡಲಸಂಗಮದೇವಾ ನಿಮ್ಮ ನಾಮವಿಡಿದ ಅನಾಮಿಕ ನಾನು.
--------------
ಬಸವಣ್ಣ
ಲೋಕದ ಡೊಂಕ ನೀವೇಕೆ ತಿದ್ದುವಿರಿ ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ; ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ನೆರೆಮನೆಯ ದಃಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮದೇವ. 124
--------------
ಬಸವಣ್ಣ
ಲಿಂಗ ಜಂಗಮ, ಜಂಗಮ ಲಿಂಗವೆಂಬುದ ಎನಗೆ ತೋರಿದವರಾರಯ್ಯಾ ಲಿಂಗವ ಪೂಜಿಸಿದಡೆ ಭವ ಹರಿಯದೆಂದು, ಜಂಗಮಮುಖ ಲಿಂಗವಾಗಿ ಬಂದು ಶಿಕ್ಷಿಸಿ, ರಕ್ಷಿಸಿ, ಎನ್ನ ಆದಿ ಅನಾದಿಯ ತೋರಿ, ಪ್ರಾಣಲಿಂಗ ಜಂಗಮವೆಂದು ಎನಗೆ ಪ್ರತಿಷಿ*ಸಿ ತೋರಿದಿರಾಗಿ, ಕೂಡಲಸಂಗಮದೇವಾ, ನಿಮ್ಮಿಂದಲಾನು ಬದುಕಿದೆನು ಕಾಣಾ, ಪ್ರಭುವೆ.
--------------
ಬಸವಣ್ಣ
ಲಿಂಗವಿರದೆ ಸೀಮೆಯ ಕಲ್ಲಿನಲ್ಲಿ ಲಿಂಗವಿರದೆ ಪಶುವಿನ ತೊಡೆಯಲ್ಲಿ ಕಲ್ಲ ತೆಕ್ಕೊಂಡು ಮೆಳೆಯ ಮೇಲೆ ಇಟ್ಟಡೆ, ಆ ಕಲ್ಲು ಮೆಳೆಯಲ್ಲಿ ಸಿಕ್ಕಿದಡೆ ಆ ಮೆಳೆ ಭಕ್ತನಾಗಬಲ್ಲುದೆ ಇದು ಕಾರಣ ಸತ್ಯ, ಸಹಜ, ಸದ್ಭಾವ, ಸದ್ವರ್ತನೆ ಉಳ್ಳಡೆ ಸದ್ಭಕ್ತ, ಇಲ್ಲದಿದ್ದಡೆ ಆ ಮೆಳೆಯೊಳಗೆ ಸಿಕ್ಕಿ ಕಲ್ಲಿನಂತೆ ಕಾಣಾ ಕೂಡಲಸಂಗಮದೇವಾ.
--------------
ಬಸವಣ್ಣ
ಲಿಂಗಾರ್ಪಿತವ ಮಾಡುವ ಅವಧಾನವೆಂತೆಂದಡೆ; ಅನ್ಯಾಯವು ಸೋಂಕಲೀಯದವಧಾನವು, ಅರಿಷಡ್ವರ್ಗಂಗಳು ಮುಟ್ಟಲೀಯದವಧಾನವು. ಪಂಚಭೂತದ ಭವಿತ್ವವ ಕಳೆದು ಪ್ರಸಾದಕಾಯವಾಗಿಪ್ಪ ಪರಿಯ ನೋಡಾ. ಪಂಚೇಂದ್ರಿಯಂಗಳ ಗುಣವ ಕಳೆದು ಪಂಚವಿಂಶತಿ ತತ್ವದಲ್ಲಿ ಪರಿಣಾಮಿ, ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.
--------------
ಬಸವಣ್ಣ
ಲೌಕಿಕರ ಕಂಡು ಆಡುವೆ, ಹಾಡುವೆ. ತಾರ್ಕಿಕರ ಕಂಡು ಆಡುವೆ, ಹಾಡುವೆ. ಸಹಜಗುಣವೆನ್ನಲಿಲ್ಲಯ್ಯಾ, ನಿಜಭಕ್ತಿಯೆನಗಿಲ್ಲ, ತಂದೆ. ಏಕೋಭಾವ ಎನಗುಳ್ಳಡೆ, ಏಕೆ ನೀ ಕರುಣಿಸೆ ಕೂಡಲಸಂಗಮದೇವಾ. 287
--------------
ಬಸವಣ್ಣ
ಲಿಂಗದ ಪ್ರಾಣದ ಸಕೀಲಸಂಬಂಧವೆಂತಿಪ್ಪುದೆಂದರಿಯೆನು, ಪ್ರಾಣನದಫ ಲಿಂಗದ ಸಕೀಲಸಂಬಂಧವೆಂತಿಪ್ಪುದೆಂದರಿಯೆನು. ಹೂಸಿ ಹುಂಡನ ಮಾಡಿ, ಹೊರಗನೆ ಪೂಜಿಸಿ ವೃಥಾ ದಿನಂಗಳು ಸವೆದುಹೋದವು. ಕೂಡಲಸಂಗಮದೇವರಲ್ಲಿ, ಎನ್ನ ಪ್ರಾಣ ನಿಕ್ಷೇಪವಹ ಭೇದವ ತೋರಾ ಚೆನ್ನಬಸವಣ್ಣಾ.
--------------
ಬಸವಣ್ಣ
ಲಿಂಗಶಿವಾಲಯದ ಮುಂದೆ ಸಿಂಹ ಶೂದ್ರಿಕನಲ್ಲದಿಲ್ಲ, ನಂದಿಕೇಶ್ವರ ಭೃಂಗಿನಾಂಟ್ಯ ನಮ್ಮ ಲಿಂಗನ ಮುಂದೆ. ಇದಕ್ಕೆ ದಿಷ್ಟದೀವಿಗೆ, ನಮ್ಮ ಲಿಂಗನ ಮುಂದೆ ಅನ್ಯದೈವವೆಂಬುದ ತೋರಿಯೂ ಕಾಣಬಾರದು. ನೊಸಲಕಣ್ಣ ಅಭವನೊಬ್ಬನೆ ದೈವ ಕೂಡಲಸಂಗಮದೇವ.
--------------
ಬಸವಣ್ಣ
ಲಾಂಛನವ ಕಂಡು ನಂಬುವೆ, ಅವರಂತರಂಗವ ನೀನೇ ಬಲ್ಲೆ. ತೊತ್ತಿಂಗೆ ತೊತ್ತುಗೆಲಸವಲ್ಲದೆ, ಅರಸರ ಸುದ್ದಿ ಎಮಗೇಕಯ್ಯಾ ರತ್ನಂವಕ್ತಿಕದಚ್ಚು, ಕೂಡಲಸಂಗಮದೇವಾ ನಿಮ್ಮ ಶರಣರು. 402
--------------
ಬಸವಣ್ಣ
ಲಿಂಗವಶದಿಂದ ಬಂದ ನಡೆಗಳು, ಲಿಂಗವಶದಿಂದ ಬಂದ ನುಡಿಗಳು, ಲಿಂಗವಂತರು ತಾವು ಅಂಜಲದೇಕೆ ಲಿಂಗವಿರಿಸಿದಂತಿಪ್ಪುದಲ್ಲದೆ, ಕೂಡಲಸಂಗಮದೇವ ಭಕ್ತರಭಿಮಾನ ತನ್ನದೆಂಬನಾಗಿ.
--------------
ಬಸವಣ್ಣ
ಲಾಂಛನ ಹೊರಗೆ ಬಂದಿರಲು, ಒಳಗೆ ಲಿಂಗಾರ್ಚನೆಯೆಂತಯ್ಯಾ ಮುಖದಲ್ಲಿ ಕಟ್ಟಿದ ಕನ್ನಡಿ, ಮೂಗಿನ ಮೇಲಣ ಕತ್ತಿ ! ಸಮಯಾಚಾರವೆಂತುಟಯ್ಯಾ ರಿ ಕೂಡಲಸಂಗಮದೇವಯ್ಯಾ. 192
--------------
ಬಸವಣ್ಣ