ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ವಿಷ್ಣು ವರಾಹವತಾರದಲ್ಲಿ ಹಂದಿಯಂ ತಿಂಬುದಾವಾಚಾರವೋ ವಿಷ್ಣು ಮತ್ಸ್ಯಾವತಾರದಲ್ಲಿ ಮೀನಂ ತಿಂಬುದಾವಾಚಾರವೋ ವಿಷ್ಣು ಕೂರ್ಮಾವತಾರದಲ್ಲಿ ಆಮೆಯ ತಿಂಬುದಾವಾಚಾರವೋ ವಿಷ್ಣು ಹರಿಣಾವತಾರದಲ್ಲಿ ಎರಳೆಯ ತಿಂಬುದಾವಾಚಾರವೋ ಇಂತಿವನೆಲ್ಲ ಅರಿಯದೆ ತಿಂದರು. ಅರಿದರಿದು ನಾಲ್ಕು ವೇದ, ಹದಿನಾರು ಶಾಸ್ತ್ರ, ಹದಿನೆಂಟು ಪುರಾಣ, ಇಪ್ಪತ್ತೆಂಟಾಗಮ ಇಂತಿವೆಲ್ಲನೋದಿ, ಕೇಳಿ, ಹೋಮವನಿಕ್ಕಿ ಹೋತನ ಕೊಂದು ತಿಂಬುದಾವಾಚಾರದೊಳಗೋ ಇಂತೀ ಶ್ರುತಿಗಳ ವಿಧಿಯ ಜಗವೆಲ್ಲ ನೋಡಿರೆ. ನಮ್ಮ ಕೂಡಲಸಂಗಮದೇವಂಗೆ ಅಧಿದೇವತೆಗಳ ಸರಿಯೆಂಬವರ ಬಾಯಲ್ಲಿ ಸುರಿಯುವೆ ಬಾಲಹುಳುಗಳು
--------------
ಬಸವಣ್ಣ
ವೇದ ವೇದಾಂತಗಳಿಗೆ ಅಸಾಧ್ಯವಾದ ಅನುಪಮಲಿಂಗವ ತಂದುಕೊಟ್ಟನಯ್ಯಾ, ಸದ್ಗುರು ಎನ್ನ ಕರಸ್ಥಲಕ್ಕೆ. ನಾದಬಿಂದು ಕಳೆಗೆ ಅಭೇದ್ಯವಾದ ಅಚಲಿತ ಲಿಂಗವ ತಂದುಕೊಟ್ಟನಯ್ಯಾ, ಸದ್ಗುರು ಎನ್ನ ಕರಸ್ಥಲಕ್ಕೆ. ವಾಙ್ಮನಕ್ಕಗೋಚರವಾದ ಅಖಂಡಿತ ಲಿಂಗವ ತಂದುಕೊಟ್ಟನಯ್ಯಾ, ಸದ್ಗುರು ಎನ್ನ ಕರಸ್ಥಲಕ್ಕೆ, ಇನ್ನು ನಾನು ಬದುಕಿದೆನು, ನಾ ಬಯಸುವ ಬಯಕೆ ಕೈಸಾರಿತ್ತಿಂದು ಕೂಡಲಸಂಗಮದೇವಾ.
--------------
ಬಸವಣ್ಣ
ವಚನದಲ್ಲಿ ನಾಮಾಮೃತ ತುಂಬಿ, ನಯನದಲ್ಲಿ ಮೂರುತಿ ತುಂಬಿ, ಮನದಲ್ಲಿ ನಿಮ್ಮ ನೆನಹು ತುಂಬಿ, ಕಿವಿಯಲ್ಲಿ ಕೀರುತಿ ತುಂಬಿ. ಕೂಡಲಸಂಗಮದೇವಾ ನಿಮ್ಮ ಚರಣಕಮಲದೊಳಗಾನು ತುಂಬಿ. 492
--------------
ಬಸವಣ್ಣ
ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯಾ. ಪಶುವೇನ ಬಲ್ಲುದು ಹಸುರೆಂದೆಠಸುವುದು. ವಿಷಯರಹಿತನ ಮಾಡಿ, ಭಕ್ತಿರಸವ ದಣಿಯೆ ಮೇಯಿಸಿ, ಸುಬುದ್ಧಿಯೆಂಬ ಉದಕವನೆರೆದು, ನೋಡಿ ಸಲಹಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ವಾರವೆಂದರಿಯೆ, ದಿನವೆಂದರಿಯೆ, ಏನೆಂದರಿಯೆನಯ್ಯಾ. ಇರುಳೆಂದರಿಯೆ, ಹಗಲೆಂದರಿಯೆ, ಏನೆಂದರಿಯೆನಯ್ಯಾ. ನಿಮ್ಮ ಪೂಜಿಸಿ ಎನ್ನುವ ಮರೆದೆ ಕೂಡಲಸಂಗಮದೇವಾ. 490
--------------
ಬಸವಣ್ಣ