ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಶ್ರೀ ರುದ್ರಾಕ್ಷಿಯ ಧರಿಸಿದಾತನೆ ಲಿಂಗವೆಂಬೆ, ಶ್ರೀ ರುದ್ರಾಕ್ಷಿಯ ಧರಿಸದ ಅಧಮರನೆ ಭವಿಯೆಂಬೆ, ಕೂಡಲ ಸಂಗಮದೇವಯ್ಯಾ ಶ್ರೀ ರುದ್ರಾಕ್ಷಿಯ ಧರಿಸುವ ಭಕ್ತರ ನೀನೆಂಬೆ.
--------------
ಬಸವಣ್ಣ
ಶರಣ ಲಿಂಗದಲ್ಲಿ ಕೂಡಲು ಮಹಾಪಥವಯ್ಯಾ ! ದೃಢದೃಢಾಂಗಮಧ್ಯಸ್ಥನಾಗಿ, ಕೂಡಲಸಂಗಮದೇವರ ನಾಮವತಿಸುಖವೆಂದುದು.
--------------
ಬಸವಣ್ಣ
ಶ್ವಾನಜ್ಞಾನ, ಗಜಜ್ಞಾನ, ಕುಕ್ಕುಟಜ್ಞಾನವೆಂಬ ಜ್ಞಾನತ್ರಯಂಗಳೇನಾದುವು ಕೂಡಲಸಂಗಮದೇವಾ ನಿಮ್ಮನರಿಯದ ಜ್ಞಾನವೆಲ್ಲಾ ಅಜ್ಞಾನ.
--------------
ಬಸವಣ್ಣ
ಶ್ರೀಗುರುಕರುಣಿಸಿ ಹಸ್ತಮಸ್ತಕಸಂಯೋಗದಿಂದ ಪ್ರಾಣಲಿಂಗವನು ಕರತಳಾಮಳಕವಾಗಿ ಕರಸ್ಥಲಕ್ಕೆ ತಂದುಕೊಟ್ಟನಾಗಿ ಒಳಗೆನ್ನದೆ ಹೊರಗೆನ್ನದೆ, ಆ ಲಿಂಗದಲ್ಲಿ ನಚ್ಚಿ ಮಚ್ಚಿ ಹರುಷದೊಳೋಲಾಡಿದೆ ಅದೆಂತೆಂದಡೆ, ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ನಾದಬಿಂದುಕಲಾತೀತಂ ಗುರುಣಾ ಲಿಂಗಮುದ್ಭವಂ ಎಂದುದಾಗಿ ಆ ಲಿಂಗವ ಪಡೆದು ಆನಂದಿಸುವೆ, ಕೂಡಲಸಂಗಮದೇವಾ.
--------------
ಬಸವಣ್ಣ
ಶರಣೆಂದು ಕರ ಸಂತೋಷವ ಮಾಡಿ, ಮುರಿದು ಮುಂಜೆರಗ ಗಂಟಿಕ್ಕಿ, ನೆಲನ ಹೊಯಿದ ಕೈ ತಪ್ಪುವುದಲ್ಲದೆ, ಆದಿ ಶರಣರ ನುಡಿ ತಪ್ಪುವುದೆ ಕೂಡಲಸಂಗಮದೇವರು ಸಾಕ್ಷಿಯಾಗಿ ಕಟ್ಟುವೆ ಗುಡಿಯನೆತ್ತುವೆನು ಧ್ವಜವ.
--------------
ಬಸವಣ್ಣ
ಶಿಶುವೆನ್ನಬಹುದೆ, ನಂಬಿಯಣ್ಣನ ಸೂಕ್ಷ್ಮನೆನಬಹುದೆ ರವಿಯನು, ಜಗವ ಬೆಳಗುವ ದೃಷ್ಟಿ ಕಿರಿದೆನ್ನಬಹುದೆ, ಸೃಷ್ಟಿಯನು ಕಾಣ್ವ ಭಾವ ಕಿರಿದೆನ್ನಬಹುದೆ, ಬಳ್ಳ ಲಿಂಗವಾದುದನು ಕೂಡಲಸಂಗಮದೇವಯ್ಯಾ, ಯುಗಜುಗವೆಲ್ಲವನೂ ಮೀರಿದ ಶರಣನ ಕಿರಿದೆನಬಹುದೆ, ಚೆನ್ನಬಸವಣ್ಣನ
--------------
ಬಸವಣ್ಣ
ಶುದ್ಧವ ಗುರುವಿಂಗೆ ಕೊಟ್ಟು, ಶುದ್ಧವಾಯಿತ್ತೆಂಬೆನಯ್ಯಾ, ಸಿದ್ಧವ ಲಿಂಗಕ್ಕೆ ಕೊಟ್ಟು, ಸಿದ್ಧವಾಯಿತ್ತೆಂಬೆನಯ್ಯಾ, ಪ್ರಸಿದ್ಧವ ಜಂಗಮಕ್ಕೆ ಕೊಟ್ಟು, ಪ್ರಸಿದ್ಧವಾಯಿತ್ತೆಂಬೆನಯ್ಯಾ. ಗುರುಲಿಂಗಜಂಗಮವ ಏಕತ್ರಯವಾಗಿ ಕಾಣಲರಿಯದಿದ್ದಡೆ ಶುದ್ಧ ಸಿದ್ಧ ಪ್ರಸಿದ್ಧ ಒಡನೆ ನಗುತ್ತೈದಾವೆ. ತನುಮನಧನವ ನಿವೇದಿಸಲರಿಯೆನಾಗಿ ಕೂಡಲಸಂಗಮದೇವ, ಒಲಿ ಎಂದಡೆಂತೊಲಿವ
--------------
ಬಸವಣ್ಣ
ಶಬ್ದಸಂಭಾಷಣೆಯ ನುಡಿಯ ವರ್ತಿಸಿ ನುಡಿವೆ, ತೊಡಹದ ಕೆಲಸದ ಬಣ್ಣದಂತೆ ಕಡಿಹಕ್ಕೆ ಒರೆಗೆ ಬಾರದು, ನೋಡಾ. ಎನ್ನ ಮನದಲೊಂದು, ಹೃದಯದಲೊಂದು, ವಚನದಲೊಂದು ನೋಡಾ. ಕೂಡಲಸಂಗಮದೇವಾ, ಆನು ಭಕ್ತನೆಂಬ ಹುಸಿಯ ಮಸಕವನೇನ ಬಣ್ಣಿಸುವೆನಯ್ಯಾ 290
--------------
ಬಸವಣ್ಣ
ಶ್ರೀವಿಭೂತಿಯ ಬಿಟ್ಟು ತಪಸ್ಸು ಮಾಡಿದಡೆ ಆ ತಪಃಸಿದ್ಧಿ ಬಯಲು, ಶ್ರೀವಿಭೂತಿಯ ಬಿಟ್ಟು ದೀಕ್ಷೆಯ ಕೊಂಡಡೆ ಆ ದೀಕ್ಷೆ ಬಯಲು, ಶ್ರೀವಿಭೂತಿಯ ಬಿಟ್ಟು ಮಂತ್ರಗಳ ಸಾಧಿಸಿದಡೆ ಆ ಮಂತ್ರಸಿದ್ಧಿ ಬಯಲು, ಶ್ರೀವಿಭೂತಿಯ ಬಿಟ್ಟು ಯಜ್ಞಂಗಳ ಸಾಧಿಸಿದಡೆ ಆ ಯಜ್ಞಸಿದ್ಧಿ ಬಯಲು, ಶ್ರೀವಿಭೂತಿಯ ಬಿಟ್ಟು ದೇವತಾರ್ಚನೆಯ ಮಾಡಿದಡೆ ಆ ದೇವತಾರ್ಚನೆಬಯಲು ಶ್ರೀವಿಭೂತಿಯ ಬಿಟ್ಟು ವಿದ್ಯವ ಸಾಧಿಸಿದಡೆ ಆ ವಿದ್ಯಾಸಿದ್ಧಿ ಬಯಲು. ಹಲವು ಕಾಲ ಕೊಂದ ಸೂನೆಗಾರನ ಕೈಯ್ಯ ಕತ್ತಿಯಾದಡೇನು ಪರುಷ ಮುಟ್ಟಲು ಹೊನ್ನಾಗದೇ ಅಯ್ಯಾ ಲಲಾಟದಲ್ಲಿ ವಿಭೂತಿಯ ಧರಿಸಲ್ಕೆ, ಪಾಪಂಗಳು ಬೆಂದು ಹೋಗದಿಹವೇ ಕೂಡಲಸಂಗಮದೇವಾ
--------------
ಬಸವಣ್ಣ
ಶ್ವಪಚನಾದಡೇನು ಲಿಂಗಭಕ್ತನೇ ಕುಲಜನು. ನಂಬಿ ನಂಬದಿದ್ದಡೆ ಸಂದೇಹಿ, ನೋಡಾ. ಕಟಿದಡೇನು, ಮುಟಿದಡೇನು, ಹೂಸಿದಡೇನು ಮನಮುಟ್ಟದನ್ನಕ್ಕ ಭಾವಶುದ್ಧವಿಲ್ಲದವಂಗೆ ಭಕ್ತಿ ನೆಲೆಗೊಳ್ಳದು, ಕೂಡಲಸಂಗಮದೇವ ಒಲಿದಂಗಲ್ಲದೆ.
--------------
ಬಸವಣ್ಣ
ಶಬ್ದಸುಖಕ್ಕೆ ಮಚ್ಚಿ, ಮಾತಿಂಗೆ ಮಾತನೆ ಕೊಟ್ಟು, ಕೆಟ್ಟೆನಯ್ಯಾ ! ಅನುಭಾವದ ಅಕ್ಕವೆಯಾಗದೆ, ಬಿಬ್ಬನೆ ಬಿರಿದೆನಯ್ಯಾ ! ಅಮೃತದ ಕೊಡನ ತುಂಬಿ, ಒಡೆಯ ಹೊಯ್ದು, ಅರಸಲುಂಟೇ ಸ್ವಾಮಿಭೃತ್ಯಸಂಬಂಧವೇ ಎನ್ನ ಭಕ್ತಿ, ಪ್ರತ್ಯುತ್ತರ ನಾಯಕನರಕ ಕೂಡಲಸಂಗಮದೇವಾ. 299
--------------
ಬಸವಣ್ಣ
ಶರಣಸನ್ನಿಹಿತ ಐಕ್ಯವಹಲ್ಲಿ ಹರಿಬ್ರಹ್ಮಾದಿಗಳು ಮೊದಲಾದ ತೆತ್ತೀಸಾದಿ ದೇವರ್ಕಳುಘೇ ಉಘೇ ಎನ್ನುತ್ತಿರಲು ಐಕ್ಯ ಬಸವಣ್ಣಂಗೆಠಾವಾವುದಯ್ಯಾ ಎಂದಡೆ; ಅಂಗದ ಬಲದಲ್ಲಿ ಬ್ರಹ್ಮನ ಸ್ಥಾನ, ಎಡದಲ್ಲಿ ನಾರಾಯಣನ ಸ್ಥಾನ, ಒಲ್ಲೆನಯ್ಯಾ. ಕೊರಳು ಗರಳದ ಸ್ಥಾನ, ಬಾಯಿ ಅಪ್ಪುವಿನ ಸ್ಥಾನ, ನಾಸಿಕ ವಾಯುವಿನ ಸ್ಥಾನ, ಕಣ್ಗಳು ಅಗ್ನಿಯ ಸ್ಥಾನ, ಜಡೆ ಗಂಗೆಯ ಸ್ಥಾನ, ನೊಸಲು ಚಂದ್ರನ ಸ್ಥಾನ, ಹಿಂದು ಸೂರ್ಯನ ಸ್ಥಾನ, ಚರಣಂಗಳು ಅಷ್ಟದಿಕ್ಪಾಲಕರ ಸ್ಥಾನ, ಗುಹ್ಯ ಕಾಮನ ಸ್ಥಾನ, ಹಸ್ತಂಗಳು ಕಪಾಲ ಖಟ್ವಾಂಗ ತ್ರಿಶೂಲ ಡಮರುಗ ಸ್ಥಾನ, ದೇಹ ರುಂಡಮಾಲೆಯ ಸ್ಥಾನ, ಕರ್ಣ ನಾಗೇಂದ್ರನ ಸ್ಥಾನ, ಇಂತೀ ಸ್ಥಾನಂಗಳ ನಾನೊಲ್ಲೆನಯ್ಯಾ. ಹೃದಯಮಧ್ಯದ ಅಂತರಾಳದ ಏಕಪೀಠದ ಸಿಂಹಾಸನವ ತೆರಪ ಕೊಡು ಕೂಡಲಸಂಗಮದೇವಾ.
--------------
ಬಸವಣ್ಣ
ಶಿವಭಕ್ತನಾಗಿ ತನ್ನ ಹಿಡಿದೆಹೆನೆಂದು ಹೋದಡೆ; ನುಗ್ಗು ಮಾಡುವ, ನುಸಿಯ ಮಾಡುವ, ಮಣ್ಣ ಮಾಡುವ, ಮಸಿಯ ಮಾಡುವ. ಕೂಡಲಸಂಗಮದೇವರ ನೆರೆ ನಂಬಿದನಾದಡೆ; ಕಡೆಗೆ ತನ್ನಂತೆ ಮಾಡುವ.
--------------
ಬಸವಣ್ಣ
ಶ್ರುತಿತತಿಯ ಶಿರದ ಮೇಲೆ ಅತ್ಯತಿಷ*ದ್ದಶಾಂಗುಲನ ನಾನೇನೆಂಬೆನಯ್ಯಾ ಘನಕ್ಕೆ ಘನಮಹಿಮನ ಮನಕ್ಕಗೋಚರನ ! `ಅಣೋರಣೀಯಾನ್ ಮಹತೋ ಮಹೀಯಾನ್ ಮಹಾದಾನಿ ಕೂಡಲಸಂಗಮದೇವ.
--------------
ಬಸವಣ್ಣ
ಶಿವಜನ್ಮದಲ್ಲಿ ಹುಟ್ಟಿ, ಲಿಂಗೈಕ್ಯರಾಗಿ, ತನ್ನ ಅಂಗದ ಮೇಲೆ ಲಿಂಗವಿರುತಿರಲು, ಅನ್ಯರನೆ ಹಾಡಿ, ಅನ್ಯರನೆ ಹೊಗಳಿ, ಅನ್ಯರ ವಚನವ ಕೊಂಡಾಡಲು, ಕರ್ಮ ಬಿಡದು, ಭವಬಂಧನ ! ಶ್ವಾನಯೋನಿಯಲ್ಲಿ ಬಪ್ಪುದು ತಪ್ಪದು ! ಇದು ಕಾರಣ, ಕೂಡಲಸಂಗಮದೇವಾ, ನಿಮ್ಮ ನಂಬಿಯೂ ನಂಬದ ಡಂಬಕರಿಗೆ ಮಳಲ ಗೋಡೆಯನಿಕ್ಕಿ, ನೀರಲ್ಲಿ ತೊಳೆದಂತಾುತ್ತಯ್ಯಾ. 107
--------------
ಬಸವಣ್ಣ
ಶ್ರೀವಿಭೂತಿಯ ಹೂಸದವರ, ಶ್ರೀರುದ್ರಾಕ್ಷಿಯ ಧರಿಸದವರ, ನಿತ್ಯಲಿಂಗಾರ್ಚನೆಯ ಮಾಡದವರ, ಜಂಗಮವೇ ಲಿಂಗವೆಂದರಿಯದವರ, ಸದ್ಭಕ್ತರ ಸಂಗದಲ್ಲಿರದವರ ತೋರದಿರು. ಕೂಡಲಸಂಗಮದೇವಾ, ಸೆರಗೊಡ್ಡಿ ಬೇಡುವೆನು. 455
--------------
ಬಸವಣ್ಣ
ಶಿವಮಯ ವಿಷ್ಣುವಲ್ಲ, ವಿಷ್ಣುಮಯ ಶಿವನಲ್ಲ, ನುಡಿಯದಿರಿಂ ಭೋ ! ನಾರಾಯಣ ಹರನಲ್ಲ ನುಡಿಯದಿರಿಂ ಭೋ ! ಶಿವನು ವಿಷ್ಣುವಲ್ಲ ನುಡಿಯದಿರಿಂ ಭೋ ! ನಮ್ಮ ಕೂಡಲಸಂಗಯ್ಯನನರಿಯದ ಸೂನೆಗಾರರೆಲ್ಲ ನುಡಿಯದಿರಿಂ ಭೋ !
--------------
ಬಸವಣ್ಣ