ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸಕಳ ನಿಷ್ಕಳವ ಕೂಡಿಕೊಂಡಿಪ್ಪೆಯಾಗಿ ಸಕಳ ನೀನೇ, ನಿಷ್ಕಳ ನೀನೇ ಕಂಡಯ್ಯಾ. `ವಿಶ್ವತಶ್ಚಕ್ಷು' ನೀನೇ ದೇವಾ, `ವಿಶ್ವತೋಮುಖ' ನೀನೇ ದೇವಾ, `ವಿಶ್ವತೋಬಾಹು' ನೀನೇ ದೇವಾ, ಕೂಡಲಸಂಗಮದೇವಾ.±
--------------
ಬಸವಣ್ಣ
ಸ್ವಾಮಿಭೃತ್ಯಸಂಬಂಧಕ್ಕೆ ಆವುದು ಪಥವೆಂದಡೆ: ದಿಟವ ನುಡಿವುದು, ನುಡಿದಂತೆ ನಡೆವುದು. ನುಡಿದು ಹುಸಿವ, ನಡೆದು ತಪ್ಪುವ ಪ್ರಪಂಚಿಯನೊಲ್ಲ ಕೂಡಲಸಂಗಮದೇವ. 237
--------------
ಬಸವಣ್ಣ
ಸಿನೆ ಬಂಜೆಯರಿಬ್ಬರಿಗೊಬ್ಬ ಮಗ ಹುಟ್ಟಿ, ಅವನೆನ್ನ ರಿಣಕ್ಕೊಡೆಯನಾದ, ಅವನೆನ್ನ ಧನಕ್ಕೊಡೆಯನಾದ, ಆನು ಗಳಿಸಿದ ಒಮ್ಮನಕ್ಕೆ ಅಗಲದೆ ಮೋಹಿತನಾದ. ಕೂಡಲಸಂಗಮದೇವನಂತಪ್ಪ ಮಗ ಹುಟ್ಟಿದಡೆ, ಇದ್ದನಯ್ಯಾ ಕಾಯ ಮಾತೆಯಾಗಿ, ಜೀವ ಪಿತನಾಗಿ ನಾನಿರಿಸಿದಂತೆ.
--------------
ಬಸವಣ್ಣ
ಸಂಜೆಯ ಮಂಜಿನ ಕಪ್ಪು- ಅಂಜಿದಡೆ ಶಂಕೆ ತದ್ರೂಪವಾಗಿ ನಿಂದಿತ್ತು. ತನ್ನ ಭಾವದ ನಟನೆ ನಡೆವನ್ನಕ್ಕ ನಡೆಯಿತ್ತು, ಅದು ನಿಂದಲ್ಲಿಯೇ ನಿಂದಿತ್ತು. ಅದರಂತುವನರಿದಡೆ ಹಿಂದೆ ಹುಸಿ, ಮುಂದೆ ಕೂಡಲಸಂಗಮದೇವನ ನಿಲವು ತಾನೆ !
--------------
ಬಸವಣ್ಣ
ಸಬಳದ ತುದಿಯಲ್ಲಿ ಕಟ್ಟಿದ ಗಂಟೆಯಂತೆ, ಮಾತು ಲಿಂಗಾ ಲಿಂಗಾ ಎನುತ್ತ ಮೊನೆ ಇರಿವಂತೆ ಬೇಡವಯ್ಯಾ, ಹುಸಿ. ಮಾತಿನಲ್ಲಿ ದಿಟ, ಮನದಲ್ಲಿ ಸಟೆ ಬೇಡವಯ್ಯಾ. ಮನ ವಚನ ಕಾಯ ಒಂದಾಗದಿದ್ದರೆ ಕೂಡಲಸಂಗಯ್ಯನೆಂತೊಲಿವನಯ್ಯಾ
--------------
ಬಸವಣ್ಣ
ಸಂತವಿದ್ದ ಮನೆಗೆ ಕೊಂತವ ತಂದಂತೆ ಇದನೆಂತು ಸಂತೈಸುವೆನು ಸಂತೆಯ ಗುಡಿಲ ಸೂಳೆಗೆ ಕೊಂತವಳವಡುವುದೆ ಕೂಡಲಸಂಗಮದೇವರ ಮಹತ್ತು ಆರಿಗೂ ಆಳವಡದು. 100
--------------
ಬಸವಣ್ಣ
ಸಾಕಾರ ನಿರಾಕಾರದೊಳಗೆ ನಿರವಯಾಂಗನಾಗಿ ಸುಳಿದು, ಭಕ್ತರ ಭವವ ಹರಿಯಲೆಂದು ಬಂದ ಜಂಗಮದ ಪರಿಯ ನೋಡಾ. ಉಳಲುಡಲು ಬಂದವನಲ್ಲ ಪ್ರಭುದೇವರು, ತ್ರಿವಿಧದಾಸೆ ಮುನ್ನವೆಯಿಲ್ಲ, ಪ್ರಭುದೇವರಿಗೆ. ಭಕ್ತನೆಂಬ ತನ್ನಂಗವ ತನ್ನೊಳೈಕ್ಯವ ಮಾಡಿಕೊಂಡು, ನಿರವಯವಾಗ ಬಂದ ನಿರವಯನಯ್ಯಾ, ಕೂಡಲಸಂಗಮದೇವರಲ್ಲಿ ಪ್ರಭುದೇವರು.
--------------
ಬಸವಣ್ಣ
ಸುರರು ಕಿನ್ನರರು ಕಿಂಪುರುಷರೆಂಬವರನಾರು ಬಲ್ಲರು ಎನ್ನ ಚಿತ್ತವು ನಿಮ್ಮ ಮೇಲೆ ಸಂಗಯ್ಯಾ, ಎನ್ನ ಚಿತ್ತವು ನಿಮ್ಮ ಮೇಲೆ ಲಿಂಗಯ್ಯಾ. ಕೂಡಲಸಂಗಮದೇವಾ ಅನ್ಯವೆಂಬುದನರಿಯೆನಯ್ಯಾ. 496
--------------
ಬಸವಣ್ಣ
ಸ್ಥಾವರಭಕ್ತಂಗೆ ಸೀಮೆಯಲ್ಲದೆ ಘನಲಿಂಗಜಂಗಮಕ್ಕೆ ಸೀಮೆಯೆಲ್ಲಿಯದು ಅಂಬುಧಿಗೆ ಸೀಮೆಯಲ್ಲದೆ ಹರಿವ ನದಿಗೆ ಸೀಮೆಯೆಲ್ಲಿಯದು ಭಕ್ತಂಗೆ ಸೀಮೆಯಲ್ಲದೆ ಜಂಗಮಕ್ಕೆ ಸೀಮೆಯುಂಟೆ ಕೂಡಲಸಂಗಮದೇವಾ. 419
--------------
ಬಸವಣ್ಣ
ಸಾರ ಸಜ್ಜನರ ಸಂಗ ಲೇಸು ಕಂಡಯ್ಯಾ, ದೂರ ದುರ್ಜನರ ಸಂಗವದು ಭಂಗವಯ್ಯಾ. ಸಂಗವೆರಡುಂಟು:ಒಂದ ಹಿಡಿ, ಒಂದ ಬಿಡು, ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣರ. 134
--------------
ಬಸವಣ್ಣ
ಸದಾಚಾರ ಸದ್ಭಕ್ತಿಯಿಲ್ಲದವರನೊಲ್ಲನಯ್ಯಾ, ಅವರಾರಾಧನೆ ದಂಡ. ನಿಚ್ಚ ನಿಚ್ಚ ಪ್ರಾಯಶ್ಚಿತ್ತರನು ಒಲ್ಲ ಕೂಡಲಸಂಗಮದೇವ, ಭೂಮಿಭಾರಕರ.
--------------
ಬಸವಣ್ಣ
ಸರ್ವಭೂತಾತ್ಮನೆಂಬ ಮಾತಿನ ಮಾತಿನಲ್ಲಿ ಹೋಗದು, ತನುಮನಧನವ ಸವೆಸಲೇಬೇಕು. ನಮ್ಮ ಕೂಡಲಸಂಗನ ಶರಣರಿಗೆ ಅಂಜಲೇಬೇಕು 204
--------------
ಬಸವಣ್ಣ
ಸಮರತಿ ಸಮಸಂಧಾನದ ಸಂಗಸುಖವು ನಿನ್ನಿಂದಲೆನಗೆ ಸಾಧ್ಯವಾಯಿತ್ತಲ್ಲದೆ, ಎನಗೆ ತೋರಿದಪರಾರು ಹೇಳಾ ಲಿಂಗೈಕ್ಯದ ಹೊಲಬ ಕೂಡಲಸಂಗಮದೇವರ ಶರಣ ಪ್ರಭುದೇವರಲ್ಲಿ ನೀನೆನ್ನನಿರಿಸದನ್ನಕ್ಕರ, ನಾನು ಬಲ್ಲನೆ ಹೇಳಾ.
--------------
ಬಸವಣ್ಣ
ಸುರರ ಬೇಡಿದಡಿಲ್ಲ, ನರರ ಬೇಡಿದಡಿಲ್ಲ ಬರೆದ ಧೃತಿಗೆಡಬೇಡ ಮನವೆ ! ಆರನಾದಡೆಯೂ ಬೇಡಿ ಬೇಡಿ ಬರಿದೆ ಧೃತಿಗೆಡಬೇಡ ಮನವೆ ! ಕೂಡಲಸಂಗಮದೇವ[ನ]ಲ್ಲದೆ, ಆರ ಬೇಡಿದಡಿಲ್ಲ ಮನವೆ ! 278
--------------
ಬಸವಣ್ಣ
ಸಂಗಸಹಿತ ಶರಣರು ಬಂದರೆ ನಂಬುವುದೆನ್ನ ಮನವು, ನಚ್ಚುವುದೆನ್ನ ಮನವು. ಹಾವು ನೇಣೆಂಬ ಭ್ರಾಂತುಳ್ಳನ್ನಕ್ಕ ನಾನು ಭಕ್ತನೆಂತಪ್ಪೆನು ಅಂಗಲಿಂಗ ಸನ್ನಿಹಿತವಾಗಿ ಬಂದಡೆ, ಸಂಗ ನೀನೆಂದು, ಮತ್ತೆ ಮನದಲ್ಲಿ ಸಂದೇಹ ಹೊಳೆದಡೆ ಬೆಂದೆನಲ್ಲಾ ನಾನು, ಕೂಡಲಸಂಗಮದೇವಾ. 404
--------------
ಬಸವಣ್ಣ
ಸಂಸಾರಸಾಗರದ ತೆರೆ ಕೊಬ್ಬಿ ಮುಖದ ಮೇಲೆ ಅಲೆವುತ್ತಲಿದೆ, ಸಂಸಾರಸಾಗರ ಉರದುದ್ದವೆ ಹೇಳಾ ! ಸಂಸಾರಸಾಗರ ಕೊರಳುದ್ದವೆ ಹೇಳಾ ! ಸಂಸಾರಸಾಗರ ಶಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ ! ಅಯ್ಯಾ ಅಯ್ಯಾ ಎನ್ನ ಹುಯ್ಯಲ ಕೇಳಯ್ಯಾ ಕೂಡಲಸಂಗಮದೇವಾ ನಾನೇವೆನೇವೆನಯ್ಯಾ ! 8
--------------
ಬಸವಣ್ಣ
ಸ್ವಾಮಿ ನೀನು, ಶಾಶ್ವತ ನೀನು, ಎತ್ತಿದೆಬಿರಿದ ಜಗವೆಲ್ಲರಿಯಲು, ಮಹಾದೇವ, ಮಹಾದೇವ, ಇಲ್ಲಿಂದ ಮೇಲೆ ಶಬ್ದವಿಲ್ಲ. ಪಶುಪತಿ ಜಗಕ್ಕೇಕೋದೇವ ಸ್ವರ್ಗ ಮತ್ರ್ಯ ಪಾತಾಳದೊಳಗೆ ಒಬ್ಬನೇ ದೇವ ಕೂಡಲಸಂಗಮದೇವ.
--------------
ಬಸವಣ್ಣ
ಸ್ಥಾವರ ಜಂಗಮ ಒಂದೆಯೆಂದು ಇದಿರ ನುಡಿದು ನಾನೆಡಹುತಿಪ್ಪೆ. ಸಹಜನಲ್ಲಯ್ಯಾ, ಆನು ಸಮ್ಯಕ್ಕನಲ್ಲಯ್ಯಾ. ಆನುಭಯಲಿಂಗಸಂಗಿಯೆಂಬೆನು, ಈ ನುಡಿ ಸುಡದಿಹುದೆ, ಕೂಡಲಸಂಗಮದೇವಾ 382
--------------
ಬಸವಣ್ಣ
ಸದಾಚಾರವ ಕಂಡು, ಲಾಂಛನಪಕ್ಷವನಾ[ಡಿ]ದವರಿಗೆ, ಇಹದೊಳು ಪರದೊಳು ಗತಿಯಿಲ್ಲ, ಕಾಣಿರೋ. ಮಣ್ಣೆತ್ತಾದಡೇನು, ತನ್ನೆತ್ತು ಗೆಲಬೇಕೆಂಬುದಕ್ಕೊಲಿವ ನಮ್ಮ ಕೂಡಲಸಂಗಯ್ಯ.
--------------
ಬಸವಣ್ಣ
ಸೆಟ್ಟಿಯೆಂದೆನೆ ಸಿರಿಯಾಳನ ಮಡಿವಾಳನೆಂಬೆನೆ ಮಾಚಯ್ಯನ ಡೋಹರನೆಂಬೆನೆ ಕಕ್ಕಯ್ಯನ ಮಾದಾರನೆಂಬೆನೆ ಚೆನ್ನಯ್ಯನ ಆನು ಹಾರುವನೆಂದಡೆ ಕೂಡಲಸಂಗಯ್ಯ ನಗುವನಯ್ಯಾ. 345
--------------
ಬಸವಣ್ಣ
ಸುಡಲೀ ಮನವೆನ್ನನುಡುಹನ ಮಾಡಿತ್ತು, ನಡೆವಲ್ಲಿ ನುಡಿವಲ್ಲಿ ಅಧಿಕನೆಂದೆನಿಸಿತ್ತು. ಬೆಡಗಿನ ಕೀಲು ಕಳೆದು ಕೆಡೆದ ಬಳಿಕ ಕಡುಗೂರ್ಪ ಮಡದಿ ತಾ ಮುಟ್ಟಲಮ್ಮಳು, ಒಡಲನುರಿಕೊಂಬುದು, ಒಡವೆಯನರಸ ಕೊಂಬ, ಕಡುಗೂರ್ಪ ಮಡದಿಯ ಮತ್ತೊಬ್ಬ ಚೆನ್ನಿಗ ಕೊಂಬ ಮುನ್ನ ಮಾಡಿದುದು ತನ್ನ ಬೆನ್ನ ಬಿಡದನ್ನಕ್ಕ, ಇನ್ನು ಮಾಡಿದರಳವೆ ಕೂಡಲಸಂಗಮದೇವಾ 40
--------------
ಬಸವಣ್ಣ
ಸ್ವಯಲಿಂಗದನುಭಾವ ತನಗೆ ದೊರೆಕೊಂಡ ಬಳಿಕ ದೇವಲೋಕವೆಂಬುದೇನೋ ಮತ್ರ್ಯಲೋಕವೆಂಬುದೇನೋ ಆವುದರಲ್ಲಿಯೂ ಭೇದವೇನಯ್ಯಾ, ಕೂಡಲಸಂಗಮದೇವನೊಲಿದ ಬಳಿಕ ಆಲಸ್ಯವುಂಟೆ
--------------
ಬಸವಣ್ಣ
ಸಂಸಾರವೆಂಬ ಬಲೆಯಲ್ಲಿ ಸಿಲುಕಿದೆನಯ್ಯಾ, ಎನ್ನುವನು ಕಾಯಯ್ಯಾ, ಕಾಯಯ್ಯಾ. ಹುರುಳಿಲ್ಲ ! ಹುರುಳಿಲ್ಲ ! ಕೂಡಲಸಂಗಮದೇವಾ, ಶಿವಧೋ ! ಶಿವಧೋ ! 13
--------------
ಬಸವಣ್ಣ
ಸಾರ: ಸಜ್ಜನರ ಸಂಗವ ಮಾಡೂದು, ದೂರ ದುರ್ಜನರ ಸಂಗ ಬೇಡವಯ್ಯಾ. ಆವ ಹಾವಾದಡೇನು:ವಿಷವೊಂದೆ, ಅಂತವರ ಸಂಗ ಬೇಡವಯ್ಯಾ. ಅಂತರಂಗ ಶುದ್ಧವಿಲ್ಲದವರ ಸಂಗವು ಸಿಂಗಿ, ಕಾಳಕೂಟ ವಿಷವೊ, ಕೂಡಲಸಂಗಯ್ಯಾ. 119
--------------
ಬಸವಣ್ಣ
ಸುಪಥಮಂತ್ರದುಪದೇಶವ ಕಲಿತು, ಯುಕ್ತಿಗೆಟ್ಟು ನಡೆವಿರಯ್ಯಾ, ತತ್ತ್ವಮಸಿ ಎಂಬುದನರಿದು ಕತ್ತಲೆಗೆ ಓಡುವಿರಯ್ಯಾ. ವೇದವಿಪ್ರರ ವಿಚಾರಿಸಿ ನೋಡಲು, ಉಪದೇಶಪರೀಕ್ಷೆ ನರಕವೆಂದುದು ಕೂಡಲಸಂಗನ ವಚನಸೂಚನೆ. 91
--------------
ಬಸವಣ್ಣ

ಇನ್ನಷ್ಟು ...