ಛ ಪದದಿಂದ ಪ್ರಾರಂಭವಾಗುವ ವಚನಗಳು:
ಛಲಬೇಕು ಶರಣಂಗೆ ಪರಧನವನೊಲ್ಲೆನೆಂಬ,ಛಲಬೇಕು ಶರಣಂಗೆ ಪರಸತಿಯನೊಲ್ಲೆನೆಂಬ,ಛಲಬೇಕು ಶರಣಂಗೆ ಪರದೈವವನೊಲ್ಲೆನೆಂಬ,ಛಲಬೇಕು ಶರಣಂಗೆ ಲಿಂಗಜಂಗಮವನೊಂದೆಂಬ,ಛಲಬೇಕು ಶರಣಂಗೆ ಪ್ರಸಾದ ದಿಟವೆಂಬ,ಛಲವಿಲ್ಲದವರ ಮೆಚ್ಚ ಕೂಡಲಸಂಗಮದೇವ.