ಅಥವಾ
(15) (4) (0) (2) (1) (0) (0) (0) (1) (2) (0) (3) (0) (0) ಅಂ (3) ಅಃ (3) (15) (0) (0) (1) (0) (0) (0) (3) (0) (0) (0) (0) (0) (0) (0) (9) (0) (2) (0) (13) (2) (0) (9) (0) (18) (0) (1) (0) (0) (1) (1) (0) (4) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಒಂದು ಹುತ್ತಕ್ಕೆ ಒಂಬತ್ತು ಬಾಗಿಲು. ಒಂದು ಸರ್ಪ ಒಂಬತ್ತು ಬಾಗಿಲಲ್ಲಿಯೂ ನೋಡುತ್ತಿಪ್ಪುದು. ಒಂಬತ್ತು ಬಾಗಿಲಿಗೆ ಕದವನಿಕ್ಕಿ, ಒಂದು ಬಾಗಿಲ ಅಗುಳಿ ದಾರವಂದವನಿಕ್ಕಿ ಬಲಿಯಲು, ತಿರುಗುವುದಕ್ಕೆ ಠಾವ ಕಾಣದೆ, ಇರುವುದಕ್ಕೆ ಇಂಬ ಕಾಣದೆ, ನಿಲುವುದಕ್ಕೆ ಎಡೆಯ ಕಾಣದೆ, ಉರಿ ಎದ್ದು ಊರ್ದ್ವಕ್ಕೇರಲು, ಶರಧಿ ಬತ್ತಿತ್ತು, ಅಲ್ಲಿದ್ದ ಖಗಮೃಗವೆಲ್ಲ ದಹನವಾದವು. ಸರೋವರವೆಲ್ಲ ಉರಿದು ಹೋದವು, ಕತ್ತಲೆ ಹರಿಯಿತ್ತು. ಮುಂದೆ ದಿಟ್ಟಿಸಿ ನೋಡುವನ್ನಕ್ಕ ಇಟ್ಟೆಡೆಯ ಬಾಗಿಲು ಸಿಕ್ಕಿತ್ತು. ಆ ಇಟ್ಟೆಡೆಯ ಬಾಗಿಲ ಹೊಕ್ಕು ಹೊಡೆಕರಿಸಿ, ಪಶ್ಚಿಮದ ಕದವ ತೆಗೆದು, ಬಟ್ಟ ಬಯಲಲ್ಲಿ ನಿಂದು ನಾನೆತ್ತ ಹೋದೆಹೆನೆಂದರಿಯೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಒಂದು ಊರಿಗೆ ಒಂಬತ್ತು ಬಾಗಿಲು. ಆ ಊರಿಗೆ ಐವರು ಕಾವಲು, ಆರುಮಂದಿ ಪ್ರಧಾನಿಗಳು, ಇಪ್ಪತ್ತೈದು ಮಂದಿ ಪರಿವಾರ. ಅವರೊಳಗೆ ತೊಟ್ಟನೆ ತೊಳಲಿ ಬಳಲಲಾರದೆ ಎಚ್ಚತ್ತು ನಿಶ್ಚಿಂತನಾದ ಅರಸನ ಕಂಡೆ. ಆ ಅರಸಿನ ಗೊತ್ತುವಿಡಿದು, ಒಂಬತ್ತು ಬಾಗಿಲಿಗೆ ಲಿಂಗಸ್ಥಾಪ್ಯವ ಮಾಡಿ, ಒಂದು ಬಾಗಿಲಲ್ಲಿ ನಿಂದು, ಕಾವಲವನೆ ಕಟ್ಟಿಸಿ, ಪ್ರಧಾನಿಗಳನೆ ಮೆಟ್ಟಿಸಿ, ಪರಿವಾರವನೆ ಸುಟ್ಟು, ಅರಸನ ಮುಟ್ಟಿಹಿಡಿದು ಓಲೈಸಲು ಸಪ್ತಧಾತು ಷಡುವರ್ಗವನೆ ಕಂಡು, ಕತ್ತಲೆಯ ಕದಳಿಯ ದಾಂಟಿ, ನಿಶ್ಚಿಂತದಲ್ಲಿ ಬಚ್ಚಬರಿಯ ಬೆಳಗಿನೊಳಗೋಲಾಡಿ ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಒಡಕುಮಡಿಕೆಯಂತೆ ಒಡೆದುಹೋಗುವ ಹಡಿಕೆಕಾಯವ ನೆಚ್ಚಿ, ತಟತಟನೆ ತಾಗಿ, ಮಠದ ಬೆಕ್ಕಾಗಿ ತಿಟ್ಟನೆ ತಿರುಗಿ, ಬಟ್ಟೆಯಲಿಕ್ಕಿ ಕಡಿವ ಕಳ್ಳನನರಿಯದೆ, ತಿಂಬ ಹುಲಿಯನರಿಯದೆ, ಒಡವೆಯ ಗಳಿಸಿಹೆನೆಂದು ಒಡೆಯನ ಮರೆದು; ತನ್ನ ಮಡದಿ ಮಕ್ಕಳಿಗೆಂದು ಅವರ ಒಡವೆರೆದು ಹೋಗುವ ಮಡಿವರೊಡನೆ ನುಡಿಯರು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ