ಅಥವಾ
(15) (4) (0) (2) (1) (0) (0) (0) (1) (2) (0) (3) (0) (0) ಅಂ (3) ಅಃ (3) (15) (0) (0) (1) (0) (0) (0) (3) (0) (0) (0) (0) (0) (0) (0) (9) (0) (2) (0) (13) (2) (0) (9) (0) (18) (0) (1) (0) (0) (1) (1) (0) (4) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಜಂಗಮವೆ ಗುರು, ಜಂಗಮವೆ ಲಿಂಗ, ಜಂಗಮವೆ ಪ್ರಾಣವೆಂದಡೆ, ಇಲ್ಲವೆಂಬ ಅಂಗಹೀನರಿರಾ, ನೀವು ಕೇಳಿರೊ. ಜಂಗಮವು ಗುರುವಲ್ಲದಿದ್ದಡೆ, ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವ ಹಿಂಗಿಸುವನೆ ? ಜಂಗಮವು ಲಿಂಗವಲ್ಲದಿದ್ದಡೆ, ಪ್ರಾಣಲಿಂಗವ ತೋರುವನೆ ? ಜಂಗಮವು ಪ್ರಾಣವಲ್ಲದಿದ್ದಡೆ, ಪ್ರಾಣಕ್ಕೆ ಪ್ರಸಾದವನೂಡುವನೆ ? ಇದ ಕಂಡು ಕಾಣೆನೆಂಬ ಭಂಗಿತರ ನುಡಿಯ ಮೆಚ್ಚರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಜಂಗಮವೆ ಜಗತ್ಪಾವನವಯ್ಯಾ. ಆ ಜಂಗಮದ ನೆನಹೆ ಲಿಂಗವಾಯಿತ್ತು. ಅವರ ತನುವೆ ಎನ್ನ ಕಾಯವಾಯಿತ್ತು. ಅವರ ದರ್ಶನವೆ ಎನಗೆ ಪರುಷವಾಯಿತ್ತು, ಆ ಪರುಷವಿಡಿದು ಮನವ ಲಿಂಗದಲ್ಲಿ ಬೆರಸಿ, ಕನಸು ಕಳವಳಿಕೆ ಹೆಸರುಗೆಟ್ಟು ಹೋದುವಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಜಗದೊಳಗೆ ಹುಟ್ಟಿ ಜಗದಪ್ರಪಂಚ ಹಿಂಗಿ, ಜಂಗಮದೊಳಗಾಡುತ್ತ, ಲಿಂಗದೊಳಗೆ ನೋಡುತ್ತ, ಅಂಗನೆಯರ ಸಂಗವ ಮಾಡಿಹೆನೆಂಬಿರಿ. ಅದೆಂತೆಂದಡೆ, ನೋಟಕಿಲ್ಲದ ಘನದ ಕೂಟವ ಕೂಡುವ ಪರಿಯೆಂತಯ್ಯಾ ? ರೂಪಿಲ್ಲದುದ ರೂಪಿಗೆತರುವ ಪರಿಯೆಂತಯ್ಯಾ ? ಹೇಳಬಾರದ ಘನವ ಕೇಳುವ ಪರಿಯೆಂತಯ್ಯಾ ? ಅತ್ಯತಿಷ್ಠದ್ದಶಾಂಗುಲಂ ಎಂಬ ವಸ್ತು ಹಿಡಿದಡೆ ಹಿಡಿಗಿಲ್ಲ, ನುಡಿದಡೆ ನುಡಿಗಿಲ್ಲ. ಒಡಲೊಳಗಿಲ್ಲ; ಹೊರಗಿಲ್ಲ, ಒಳಗಿಲ್ಲ. ವಾಚಾತೀತ ಮನೋತೀತ ಭಾವಾತೀತವಾಗಿದ್ದ ವಸ್ತು ತನ್ನೊಳಗೆ ತಾನೆ ತನ್ಮಯವಾಗಿ ಇರುವುದ ತಿಳಿಯಲರಿಯದೆ ಭಿನ್ನವಿಟ್ಟರಸುವಿರಿ. ಅದೆಂತೆಂದಡೆ : ಪುಷ್ಪಪರಿಮಳದಂತೆ, ತುಪ್ಪಕಂಪಿನಂತೆ, ಅಲೆನೀರಿನಂತೆ, ಕಣ್ಣುಕಪ್ಪಿನಂತೆ, ಚಿನ್ನಬಣ್ಣದಂತೆ, ಸಿಪ್ಪೆಹಣ್ಣಿನಂತೆ, ಒಪ್ಪಚಿತ್ರದಂತೆ, ಕರ್ಪೂರ ಜ್ಯೋತಿಯೊಳಡಗಿದಂತೆ ನೆನಹು ನಿಷ್ಪತ್ತಿಯಾದ ಶರಣ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ