ಅಥವಾ
(15) (4) (0) (2) (1) (0) (0) (0) (1) (2) (0) (3) (0) (0) ಅಂ (3) ಅಃ (3) (15) (0) (0) (1) (0) (0) (0) (3) (0) (0) (0) (0) (0) (0) (0) (9) (0) (2) (0) (13) (2) (0) (9) (0) (18) (0) (1) (0) (0) (1) (1) (0) (4) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಮಚ್ಚಬೇಡ, ಮರಳಿ ನರಕಕ್ಕೆರಗಿ ಕರ್ಮಕ್ಕೆ ಗುರಿಯಾಗಬೇಡ. ನಿಶ್ಚಿಂತವಾಗಿ ನಿಜದಲ್ಲಿ ಚಿತ್ತವ ಸುಯಿದಾನವಮಾಡಿ, ಲಿಂಗದಲ್ಲಿ ಮನವ ಅಚ್ಚೊತ್ತಿದಂತಿರಿಸಿ ಕತ್ತಲೆಯನೆ ಕಳೆದು, ಬಚ್ಚಬರಿಯ ಬೆಳಗಿನೊಳಗೆ ಓಲಾಡಿ ಸುಖಿಯಾಗೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮಾಣಿಕವ ಕಂಡವರು ತೋರುವರೆ ಅಯ್ಯಾ, ಮುತ್ತ ಕಂಡವರು ಅಪ್ಪಿಕೊಂಬರಲ್ಲದೆ ? ಬಿಚ್ಚಿ ಬಿಚ್ಚಿ ತೋರುವರೆ ಅಯ್ಯಾ, ಆ ಮುತ್ತಿನ ನೆಲೆಯನು, ಮಾಣಿಕದ ಬೆಲೆಯನು ? ಬಿಚ್ಚಿ ಬೇರಾಗಿ ತೋರಿ ರಕ್ಷಣೆಯ ಮಾಡಿದ ಕಾರಣದಿಂದ ಬಚ್ಚಬರಿಯ ಬೆಳಗಿನೊಳಗೋಲಾಡಿ ನಿಮ್ಮ ಪಾದದೊಳಗೆ ನಿಜಮುಕ್ತಳಾದೆನಯ್ಯಾ, ಚೆನ್ನಮಲ್ಲೇಶ್ವರ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮನವೆಂದಡೆ ಮರವೆಗೆ ಒಳಗುಮಾಡಿತ್ತು. ತನುವೆಂದಡೆ ತಾಮಸಕ್ಕೊಳಗುಮಾಡಿತ್ತು. ಧನವೆಂದಡೆ ಆಶೆಯೆಂಬ ಪಾಶಕ್ಕೊಳಗುಮಾಡಿತ್ತು. ಇವೀಸು ಮಾಯಾಪಾಶವೆಂದು ಬಿಟ್ಟು ಹುಟ್ಟನರಿದು, ಬಟ್ಟಬಯಲಲ್ಲಿ ನಿಂದು, ಚಿತ್ತನಿರ್ಮಲನಾಗಿ ನೋಡಿ ಕಂಡ ಶರಣಂಗೆ ತನುವೆ ಗುರುವಾಯಿತ್ತು. ಮನವೆ ಘನವಾಯಿತ್ತು, ಧನವೆ ಜಂಗಮವಾಯಿತ್ತು. ಈ ತ್ರಿವಿಧವನು ತ್ರಿವಿಧಕಿತ್ತು, ತಾ ಬಯಲದೇಹಿಯಾದನಯ್ಯಾ ಆ ಮಹಾಶರಣನು. ಇದರ ನೆಲೆಯನರಿಯದೆ, ಆ ಮನದ ಬೆಂಬಳಿಗೊಂಡಾಡಿದವರೆಲ್ಲ ನರಗುರಿಗಳಾದರಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮೂಲಪ್ರಣವವನರಿದು ಮೂಲಮಂತ್ರದೊಳಗಾಡುತ್ತ, ಮುಂದನರಿದು, ಹಿಂದ ಹರಿದು, ಸಂದು ಸಂಶಯವಿಲ್ಲದೆ, ಸ್ವಯವ ನೋಡುತ್ತ, ಪರವ ಕೂಡುತ್ತ, ಶಬ್ದವ ಕೇಳುತ್ತ, ನಿರ್ಧರವಾಗಿ ನಿರ್ಬುದ್ಧಿಯಲ್ಲಿ ನಿರಾಳವನೊಡಗೂಡಿ, ನಿಜದಲ್ಲಿ ಆನಂದಾಮೃತವ ಆರೋಗಣೆಯ ಮಾಡುವ ಪರಿಯೆಂತೆಂದಡೆ; ಬೇಯದ ಬೆಂಕಿಯಲಿ ಬೆಂದು, ಕಾಯದ ಅಗ್ಗವಣಿಯಲಿ ಅಡಿಗೆಯ ಮಾಡಿ, ಕಂದಲೊಡೆದು ಒಂದಾಗಿ ಉಂಡು, ಮಂಡೆಯಲ್ಲಿ ನಿಂದು, ಮಡದಿಯ ಸಂಗವ ಮಾಡಿ, ಮಾರುತನ ನಿಲಿಸಿ, ಮದನನ ಮರ್ದಿಸಿ, ನಿರ್ಧರವಾಗಿ ನಿಂದ ಶರಣ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮದ ಮತ್ಸರ ಬಿಡದು, ಮನದ ಕನಲು ನಿಲ್ಲದು, ಒಡಲಗುಣ ಹಿಂಗದು. ಇವ ಮೂರನು ಬಿಡದೆ ನಡಸುವನ್ನಕ್ಕ ಘನವ ಕಾಣಬಾರದು. ಘನವ ಕಾಂಬುದಕ್ಕೆ ಮದಮತ್ಸರವನೆ ಬಿಟ್ಟು, ಮನದ ಕನಲನೆ ನಿಲಿಸಿ, ಒಡಲಗುಣ ಹಿಂಗಿ, ತಾ ಮೃಡರೂಪಾದಲ್ಲದೆ ಘನವ ಕಾಣಬಾರದೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮನವ ನಿಲಿಸಿಹೆನೆಂದು, ಆ ಮನದ ನೆಲೆಯ ಕಾಣದೆ, ಅರುಹು ಮರವೆಗೊಳಗಾಗಿ, ಕಳವಳವ ಮುಂದುಮಾಡಿ, ಚಿಂತೆ ಸಂತೋಷವನೊಡಲುಮಾಡಿ, ಭ್ರಾಂತುಗೊಂಡು ತಿರುಗುವ ಮನುಜರಿರಾ, ನೀವು ಕೇಳಿರೊ. ಮನವ ನಿಲಿಸುವುದಕ್ಕೆ ಶರಣರ ಸಂಗಬೇಕು, ಜನನಮರಣವ ಗೆಲಬೇಕು. ಗುರುಲಿಂಗಜಂಗಮದಲ್ಲಿ ವಂಚನೆಯಿಲ್ಲದೆ, ಮನಸಂಚಲವ ಹರಿದು, ನಿಶ್ಚಿಂತವಾಗಿ ನಿಜವ ನಂಬಿ ಚಿತ್ತ ಸುಯಿದಾನವಾದಲ್ಲದೆ, ಮನದೊಳಗೆ ಲಿಂಗವು ಅಚ್ಚೊತ್ತಿದಂತಿರದೆಂದರು ಬಸವಣ್ಣನ ಶರಣರು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮನ ಮಂಕಾಯಿತ್ತು; ತನು ಮರೆಯಿತ್ತು; ವಾಯು ಬರತಿತ್ತು. ಉರಿ ಎದ್ದಿತ್ತು, ಹೊಗೆ ಹರಿಯಿತ್ತು, ಸರೋವರವೆಲ್ಲ ಉರಿದು ಹೋಯಿತ್ತು. ಒಳಕ್ಕೆ ಹೊಕ್ಕು ಕದವ ತೆಗೆದು ಬಯಲು ನೋಡಿ ಬೆಳಗ ಕೂಡಿದಲ್ಲದೆ ನಿಜಮುಕ್ತಿ ಇಲ್ಲವೆಂದರು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮಹಾಬೆಳಗ ನೋಡಿ ಮನವ ನಿಮ್ಮ ವಶವ ಮಾಡಿ, ತನುವ ಮರೆದು ಧನವ ಜಂಗಮಕಿತ್ತು, ತಾನು ಬಯಲದೇಹಿಯಾದಲ್ಲದೆ ನಿಜಮುಕ್ತಿ ಇಲ್ಲವೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮನವ ನಿರ್ಮಲವ ಮಾಡಿಹೆನೆಂದು ತನುವ ಕರಗಿಸಿ ಮನವ ಬಳಲಿಸಿ ಕಳವಳಿಸಿ, ಕಣ್ಣುಕಾಣದ ಅಂಧಕರಂತೆ ಮುಂದುಗಾಣದೆ, ಸಂದೇಹದಲ್ಲಿ ಮುಳುಗಿರುವ ಮನುಜರಿರಾ, ನೀವು ಕೇಳಿರೊ, ಹೇಳಿಹೆನು. ಮನವ ನಿರ್ಮಲವ ಮಾಡಿ, ಆ ಘನವ ಕಾಂಬುದಕ್ಕೆ ಆ ಮನವೆಂತಾಗಬೇಕೆಂದಡೆ ಗಾಳಿಬೀಸದ ಜಲದಂತೆ, ಮೋಡವಿಲ್ಲದ ಸೂರ್ಯನಂತೆ, ಬೆಳಗಿದ ದರ್ಪಣದಂತೆ ಮನ ನಿರ್ಮಲವಾದಲ್ಲದೆ ಆ ಮಹಾಘನವ ಕಾಣಬಾರದೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮಾಯದ ಬೊಂಬೆಯ ಮಾಡಿ, ಕಂಗಳಿಗೆ ಕಾಮನ ಬಾಣವ ಹೂಡಿ, ನಡೆನುಡಿಯೊಳಗೆ ರಂಜಕದ ತೊಡಿಗೆಯನೆ ತೊಡಿಸಿ, ಮುಂದುಗಾಣಿಸದೆ, ಹಿಂದನರಸದೆ, ಲಿಂಗವ ಮರಹಿಸಿ, ಜಂಗಮವ ತೊರೆಯಿಸಿ, ಸಂದೇಹದಲ್ಲಿ ಸತ್ತು ಹುಟ್ಟುವ ಈ ಭವಬಂಧನಿಗಳೆತ್ತ ಬಲ್ಲರೋ ಈ ಶರಣರ ನೆಲೆಯ ? ಅವರ ನೆಲೆ ತಾನೆಂತೆಂದಡೆ ಹಿಂದನರಿದು, ಮುಂದೆ ಲಿಂಗದಲ್ಲಿ ಬೆರೆವ ಭೇದವ ಕಂಡು, ಜಗದ ಜಂಗುಳಿಗಳ ಹಿಂಗಿ, ಕಂಗಳ ಕರುಳನೆ ಕೊಯ್ದು, ಮನದ ತಿರುಳನೆ ಹರಿದು, ಅಂಗಲಿಂಗವೆಂಬುಭಯವಳಿದು, ಸರ್ವಾಂಗಲಿಂಗವಾಗಿ, ಮಂಗಳದ ಮಹಾಬೆಳಗಿನಲ್ಲಿ ಓಲಾಡುವ ಶರಣರ ನೆಲೆಯ ಜಗದ ಜಂಗುಳಿಗಳೆತ್ತ ಬಲ್ಲರು ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮನ ಮರವೆಗೆ ಮುಂದುಮಾಡಿತ್ತು. ತನು ಕಳವಳಕ್ಕೆ ಮುಂದುಮಾಡಿತ್ತು. ಆಸೆ ರೋಷವೆಂಬವು ಅಡ್ಡಗಟ್ಟಿದವು.. ಇವರೊಳಗೆ ಜಗದೀಶ್ವರನೆನಿಸಿಕೊಂಬವರ ನುಡಿಯು ಓಸರಿಸುವದು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮನ ಕತ್ತಲೆ, ತನು ಹಮ್ಮು, ನೆನಹು ಮರವೆ, ಇವರೊಳಗೆ ಇದ್ದು ಘನವ ಕಂಡೆಹೆನೆಂಬ ಅಣ್ಣಗಳಿರಾ, ನೀವು ಕೇಳಿರೊ. ಘನವ ಕಾಂಬುದಕ್ಕೆ ಮನವೆಂತಾಗಬೇಕೆಂದಡೆ, ಅಕ್ಕಿಯ ಥಳಿಸಿದಂತೆ, ಹಲ್ಲ ಸುಲಿದಂತೆ, ಕನ್ನಡಿಯ ನೋಡಿದಂತೆ, ಮನ ನಿರ್ಮಲವಾದಲ್ಲದೆ ಘನವ ಕಾಣಬಾರದು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮುಕ್ತಿಯ ಪಥವನರಿವುದಕ್ಕೆ ತತ್ವದ ಭಿತ್ತಿಯ ಕಾಣಬೇಕು ಚಿತ್ತ ಲಿಂಗದಲ್ಲಿ ಅಚ್ಚೊತ್ತಿದಂತಿರಬೇಕು ಮರ್ತ್ಯದ ಮಾನವರ ಸಂಗ ಹಿಂಗಬೇಕು ತಾನು ತಾನಾದ ಲಿಂಗೈಕ್ಯವನರಿವಡೆ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮರ್ತ್ಯದ ಮನುಜರು ಸತ್ತರೆಲ್ಲ ! ಕತ್ತಲೆಯೊಳು ಮುಳುಗಿ, ಮಾತು ಕಲಿತುಕೊಂಡು, ತೂತುಬಾಯೊಳಗೆ ನುಡಿದು, ಕಾತರಿಸಿ ಕಂಗೆಟ್ಟು, ಹೇಸಿಕೆಯ ಮಲದ ಕೊಣದ ಉಚ್ಚೆಯ ಬಾವಿಗೆ ಮೆಚ್ಚಿ, ಕಚ್ಚಿಯಾಡಿ ಹುಚ್ಚುಗೊಂಡು ತಿರುಗುವ ಕತ್ತೆಮನುಜರ ಮೆಚ್ಚರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮರ್ತ್ಯದಲ್ಲಿ ಹುಟ್ಟಿ ಎತ್ತಲೆಂದರಿಯದೆ, ಕತ್ತಲೆಯೊಳು ಮುಳುಗಿ, ಕಾಮನ ಬಲೆಯೊಳಗೆ ಸಿಕ್ಕಿದ ಎಗ್ಗ ಮನುಜರಿರಾ, ನೀವು ಕೇಳಿರೋ. ನಿಮ್ಮ ಇರವು ಎಂತೆಂದಡೆ; ಕಾಯವೆಂದಡೆ ಕಳವಳಕ್ಕೊಳಗಾಯಿತ್ತು; ಜೀವವೆಂದಡೆ ಅರುಹು ಮರವೆಗೊಳಗಾಯಿತ್ತು; ಮನವೆಂದಡೆ ಸಚರಾಚರವನೆಲ್ಲವ ಚರಿಸುವುದಕ್ಕೆ ಒಳಗಾಯಿತ್ತು; ಪ್ರಾಣವೆಂದಡೆ ಇವೆಲ್ಲವನು ಆಡಿಸಿ ನೋಡುವುದಕ್ಕೆ ಒಳಗಾಯಿತ್ತು. ಇವರೊಳಗೆ ಬಿದ್ದು ಏಳಲಾರದ ಬುದ್ಧಿಹೀನರಿರಾ, ನೀವು ಕೇಳಿ, ಹೇಳಿಹೆನು. ನಮ್ಮ ಶರಣರು ಜಗದೊಳಗೆ ಹುಟ್ಟಿ ಜಗವನೆ ಮರೆದು, ಎಚ್ಚತ್ತು ಚಿತ್ತವ ಸುಯಿದಾನವ ಮಾಡಿ, ಕಳವಳಕ್ಕೊಳಗಾಗಿದ್ದ ಕಾಯವನೆ ಸರ್ವಾಂಗಲಿಂಗವ ಮಾಡಿದರು. ಅರುಹು ಮರವೆಯೊಳಗಾಗಿದ್ದ ಜೀವನ ಬುದ್ಧಿಯನೆ ಪರಮನ ಬುದ್ಧಿಯ ಮಾಡಿದರು. ಸಚರಾಚರವ ಚರಿಸುವುದಕ್ಕೊಳಗಾಗಿದ್ದ ಮನವನೆ ಅರುಹು ಮಾಡಿದರು. ಆಡಿಸಿ ನೋಡುವುದಕ್ಕೆ ಒಳಗಾಗಿದ್ದ ಪ್ರಾಣವನೆ ಲಿಂಗವಮಾಡಿದರು. ಈ ಸರ್ವಾಂಗವನು ಲಿಂಗವ ಮಾಡಿ ಆ ಲಿಂಗವನು ಕಂಗಳಲ್ಲಿ ಹೆರೆಹಿಂಗದೆ ನೋಡಿ, ಆ ಮಂಗಳದ ಮಹಾಬೆಳಗಿನಲ್ಲಿ ಬಯಲಾದರಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮರ್ತ್ಯದ ಮನುಜರು ತಾವು ಸತ್ಯರು ಸತ್ಯರು ಎನುತಿಪ್ಪರು, ಮತ್ತೆ ಮತ್ತೆ ಮರಳಿ, ಮಲಮೂತ್ರ ಕೀವಿನಕೊಣದ ಉಚ್ಚೆಯ ಬಚ್ಚಲ ಮೆಚ್ಚಿ, ಹುಚ್ಚುಗೊಂಡು ತಿರುಗುವ ಕತ್ತೆ ಮನುಜರ ಮೆಚ್ಚರು ನಮ್ಮ ಶರಣರು, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮನವ ಗೆದ್ದೆಹೆನೆಂದು, ತನುವ ಕರಗಿಸಿ ಕಾಯವ ಮರುಗಿಸಿ, ನಿದ್ರೆಯ ಕೆಡಿಸಿ ವಿದ್ಯೆಯ ಕಲಿತೆಹೆನೆಂಬ ಬುದ್ಧಿಹೀನರಿರಾ ನೀವು ಕೇಳಿರೋ, ನಮ್ಮ ಶರಣರು ಮನವನೆಂತು ಗೆದ್ದಹರೆಂದಡೆ ಕಾಮ ಕ್ರೋಧವ ನೀಗಿ, ಲೋಭ ಮೋಹ ಮದ ಮತ್ಸರವ ಛೇದಿಸಿ, ಆಸೆ ರೋಷವಳಿದು, ಜಗದ ಪಾಶವ ಬಿಟ್ಟು, ಆ ಮರುಗಿಸುವ ಕಾಯವನೆ ಪ್ರಸಾದಕಾಯವ ಮಾಡಿ ಸಲಹಿದರು. ಕೆಡಿಸುವ ನಿದ್ರೆಯನೆ ಯೋಗಸಮಾಧಿಯ ಮಾಡಿ, ಸುಖವನೇಡಿಸಿ ಜಗವನೆ ಗೆದ್ದ ಶರಣರ ಬುದ್ಧಿಹೀನರೆತ್ತಬಲ್ಲರೊ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮರನನೇರಿದೆ, ಬೇರ ಸವರಿದೆ, ಕೊನೆಯ ತರಿದೆ, ಬುಡವ ಕೆಡಹಿದೆ, ನಿರಾಲಂಬಿಯಾಗಿ, ನಿಮ್ಮ ಬೆಳಗನೆ ನೋಡಿ ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ