ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಭಕ್ತನೆಂದಲ್ಲಿ ದೃಷ್ಟವಾಯಿತ್ತು; ಐಕ್ಯನೆಂದಲ್ಲಿ ನಷ್ಟವಾಯಿತ್ತು. ಈ ನಷ್ಟ ದೃಷ್ಟವನೊಳಗೊಂಡು ಅದೃಶ್ಯವಾಗಿಪ್ಪ ಅಖಂಡಗುಹೇಶ್ವರನ ನಿಲವ ಉಪಮಿಸಬಾರದೆ ನಿಶ್ಶಬ್ದಿಯಾದೆನು.
--------------
ಅಲ್ಲಮಪ್ರಭುದೇವರು
ಭಕ್ತ ಭಕ್ತನೆಂಬರು, ಪೃಥ್ವಿಯ ಪೂರ್ವಾಶ್ರಯವ ಕಳೆಯನಲರಿಯಫದನ್ನಕ್ಕ, ಅಪ್ಪುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ತೇಜದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ವಾಯುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಆಕಾಶದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಸೋಮಸೂರ್ಯರ ಕಳೆಗಳ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಆತ್ಮನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,_ ಭಕ್ತರೆಂದು ಲಿಂಗವ ಪೂಜಿಸುವವರ ಕಂಡು ನಾನು ಬೆರಗಾದೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭಾವಿಸಿ ದೃಷ್ಟಿನಟ್ಟು ಸೈವೆರಗಾಗಿದ್ದುದ ಕಂಡೆ, ಕಲ್ಪಿಸಿ ದೃಷ್ಟಿನಟ್ಟು ಸೈವೆರಗಾಯಿತ್ತಯ್ಯಾ. ಗುಹೇಶ್ವರಾ, ನಿಮ್ಮಲ್ಲಿ ಸರ್ವನಿರ್ವಾಣಿ ಸಂಗನಬಸವಣ್ಣ. ಎನ್ನ ಪ್ರಾಣಲಿಂಗವೆಂದರಿದು ಕಂಡೆನಿಂದು.
--------------
ಅಲ್ಲಮಪ್ರಭುದೇವರು
ಭವಿಬೀಜವೃಕ್ಷದ ಫಲದೊಳಗೆ, ಭಕ್ತಿಬೀಜವೃಕ್ಷ ಪಲ್ಲವಿಸಿತ್ತು ! ಭಕ್ತಿಬೀಜವೃಕ್ಷದ ಫಲದೊಳಗೆ, ಶರಣಬೀಜವೃಕ್ಷ ಪಲ್ಲವಿಸಿತ್ತು ! ಶರಣಬೀಜವೃಕ್ಷದ ಫಲದೊಳಗೆ; ಕುಲನಾಶಕನಾದ ಶರಣ ಒಂದೆ ಬಸುರಲ್ಲಿ ಬಂದ_ ಬಂದು, ಬಳಗಕ್ಕೆ ತನ್ನ ಕುಲಕ್ಕೆ ತಾನೆ ಮಾರಿಯಾದ ಶರಣ. ಭವಿಭಕ್ತ ಭವಿಬೀಜವೃಕ್ಷದ ತಂಪು ನೆಳಲ ಬಿಟ್ಟು, ಕುಳ್ಳಿರ್ದಲ್ಲಿಯೆ; ಬಳಿ ಬಳಿಯೆ ಬಯಲಾದ ಶರಣ ! [ನಾದ]ಬಿಂದು ಬೀಜವಟ್ಟ ಹಾಳಾಗಿ ಹಾರಿಹೋದಲ್ಲಿ; ಇನ್ನೇನ ಹೇಳಲುಂಟು ? ಗುಹೇಶ್ವರನೆಂಬ ಲಿಂಗವನರಿದು ಭವಿಗೆ ಭವಿಯಾದಾತಂಗೆ ಇನ್ನೇನು ಪಥ (ಪದ?)ವುಂಟಯ್ಯಾ ?
--------------
ಅಲ್ಲಮಪ್ರಭುದೇವರು
ಭಕ್ತ ಭಕ್ತನೆಂದೇನೊ ? ಭವಿಗಳು ಮನೆಯಲುಳ್ಳನ್ನಕ್ಕ ಭಕ್ತನೆ ? ಭಕ್ತ ಭಕ್ತನೆಂದೇನೊ ? ಅನ್ಯದೈವ ಸುರೆ ಮಾಂಸವುಳ್ಳನ್ನಕ್ಕ ಭಕ್ತನೆ ? ಭಕ್ತ ಭಕ್ತನೆಂದೇನೊ ? ಹರಕೆ ತೀರ್ಥಯಾತ್ರೆಯುಳ್ಳನ್ನಕ್ಕ ಭಕ್ತನೆ ? ಭಕ್ತ ಭಕ್ತನೆಂದೇನೊ ? ತನು ಮನ ಧನ ವಂಚನೆಯುಳ್ಳನ್ನಕ್ಕ ಭಕ್ತನೆ ? ಇವರೆಲ್ಲರು ಎದೆಯಲ್ಲಿ ಕಲ್ಲನಿರಿಸಿಕೊಂಡು ಸಾವಿಂಗೆ ಸಂಬಳಿಗರು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭೂಮಿಯಾಕಾಶ ಒಂದು ಜೀವನದುದರ. ಅಲ್ಲಿ ಘನವೇನು ಘನವೆನ್ನದವಂಗೆ? ಕಿರಿದೇನು ಕಿರಿದೆನ್ನದವಂಗೆ ? ಆ ಘನವು ಮನಕ್ಕೆ ಗಮಿಸಿದಡೆ, ಇನ್ನು ಸರಿಯುಂಟೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಭಾನು ಶಶಿ ಕಳೆಗುಂದಿ, ಪ್ರಾಣ ಅಪಾನ ವ್ಯಾನ ಉದಾನ ಸಮಾನವೆಂಬ ನಾಗ ಕೂರ್ಮ ಕೃಕರ ದೇವದತ್ತ ಧನಂಜಯವೆಂಬ_ ವಾಯುವನರಿಯವೊ! ಆದಿಪ್ರಣಮವನರಿದಹೆನೆಂಬವಂಗೆ, ಬಯಲು ಆಕಾಶದೊಳಗೊಂದು ರಸದ ಬಾವಿ! ಮುನ್ನಾದವರೆಲ್ಲಿಯವರೆಂದೆನಬೇಡ ಗುಹೇಶ್ವರನೆಂಬ ಲಿಂಗವು ತಾನೆ ಕಂಡೆಲವೊ!
--------------
ಅಲ್ಲಮಪ್ರಭುದೇವರು
ಭಾವಕ್ಕೆ ಇಂಬಿಲ್ಲ ಶಬ್ದ ಮೀಸಲು ನೋಡಾ. ನುಡಿಗೆ ಎಡೆಯಿಲ್ಲ ಎಡೆಗೆ ಕಡೆಯಿಲ್ಲ, ಗುಹೇಶ್ವರನೆಂಬ ಶಬ್ದ ವೇದಿಸಲೊಡನೆ
--------------
ಅಲ್ಲಮಪ್ರಭುದೇವರು
ಭಾವದಲೊಬ್ಬ ದೇವರ ಮಾಡಿ, ಮನದಲೊಂದು ಭಕ್ತಿಯ ಮಾಡಿದಡೆ, ಕಾಯದ ಕೈಯಲ್ಲಿ ಕಾರ್ಯವುಂಟೆ? ವಾಯಕ್ಕೆ ಬಳಲುವರು ನೋಡಾ. ಎತ್ತನೇರಿ ಎತ್ತನರಸುವರು, ಎತ್ತ ಹೋದರೈ ಗುಹೇಶ್ವರಾ?
--------------
ಅಲ್ಲಮಪ್ರಭುದೇವರು
ಭಕ್ತಿಯೆಂಬ ಸಮಾಧಾನ ಬಸವಣ್ಣನಿಂದ ಎನಗಾಯಿತ್ತು. ಪ್ರಸಾದವೆಂಬ ಪರಿಣಾಮ ಮರುಳುಶಂಕರದೇವರಿಂದ ಎನಗಾಯಿತ್ತು. ಏಕೋಭಾವದ ನಿಷ್ಠೆ ಸಿದ್ಧರಾಮಯ್ಯದೇವರಿಂದ ಎನಗಾಯಿತ್ತು. ಸರ್ವಜೀವ ಪರಿಪೂರ್ಣಕಳೆ ಚನ್ನಬಸವಣ್ಣನಿಂದ ಎನಗಾಯಿತ್ತು. ಆದ (ಅದರ?) ನಿಜದ ನೆಲೆ ಗುಹೇಶ್ವರಲಿಂಗವೆಂಬ ನಾಮವಾಯಿತ್ತು.
--------------
ಅಲ್ಲಮಪ್ರಭುದೇವರು
ಭಕ್ತಿಯೆ ಓಗರವಾಗಿ, ಸತ್ಯವೆ ಮೇಲೋಗರವಾಗಿ ನಿಜತತ್ವವೆ ಸವಿಯಾಗಿ_ ಗುಹೇಶ್ವರಲಿಂಗಕ್ಕೆ ಇಕ್ಕಬಲ್ಲವ ಸಂಗನಬಸವಣ್ಣನಲ್ಲದಿಲ್ಲ.
--------------
ಅಲ್ಲಮಪ್ರಭುದೇವರು
ಭವವಿರಹಿತಂಗೆ ಭಕ್ತಿಯ ಮಾಡುವರು ನೀವು ಕೇಳಿರಣ್ಣಾ, ಭವದ ಬಾಧೆಯೊಳಗೆ ನೀವಿದ್ದು ಅಭವಭಕ್ತಿಯ ಮಾಡುವ ಪರಿಯಂತೊ ? ತಾನಭವನಾದಲ್ಲದೆ ಸಹಜಭಕ್ತಿಯ ಮಾಡಬಾರದು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭಾವಗೆಟ್ಟು ಭವನಷ್ಟನು ಒಡಹುಟ್ಟಿದ ಐವರ ಕೈಬಿಟ್ಟನು. ಭಂಡನು ಲಜ್ಜೆಭಂಡನು, ಕಂಡಡೆ ನುಡಿಸದಿರಾ ಮಾಯಾದೇವಿ. ಅರಿವೆಯ (ಅರಿವ?)ನುಟ್ಟು ನೆರೆ ಮರುಳಾದನು ಹುಟ್ಟ ಮುರಿದನು ಮಡಕೆಯನೊಡೆದನು ಆದಿ ಪುರಾತನು ಅಚಲ ಲಿಂಗೈಕ್ಯನು. ಗುಹೇಶ್ವರನಲ್ಲಯ್ಯಂಗೆ ಮೂಗಿಲ್ಲ ಮಗಳೆ.
--------------
ಅಲ್ಲಮಪ್ರಭುದೇವರು
ಭುವರ್ಲೋಕದ ಸ್ಥಾವರಕ್ಕೆ, ಸತ್ಯಲೋಕದ ಅಗ್ಘಣಿಯಲ್ಲಿ ಮಜ್ಜನಕ್ಕೆರೆದು, ದೇವಲೋಕದ ಪುಷ್ಪದಲ್ಲಿ ಪೂಜೆಯ ಮಾಡಿದಡೆ ಹತ್ತು ಲೋಕದಾಚಾರ ಕೆಟ್ಟಿತ್ತು. ಮೂರು ಲೋಕದರಸುಗಳು ಮುಗ್ಧರಾದರು. ಗುಹೇಶ್ವರಲಿಂಗವು ಸ್ಥಾವರಕ್ಕೆ ಸ್ಥಾವರವಾದನು.
--------------
ಅಲ್ಲಮಪ್ರಭುದೇವರು
ಭೂವಳಯ ಮಧ್ಯದ ಎಂಟೆಸಳ ಪದ್ಮದ ಮೇಲೆ ಸುಳಿವನ ಎಚ್ಚರಲೀಯ, ಕಂಟಕ ವಿರಹಿತನು, ನಂಟರಿಗೆ ವಿರೋಧಿಸಿ, ಇಳೆಯ ಗುಣ ರಹಿತನು, ಗಗನಕಮಲಕುಸುಮ ಪರಿಣಾಮದೊಳಗೆ ಪರಿಣಾಮಿ ನೋಡಾ ! ತಾನೆಂಬುದ ಹುಸಿ ಮಾಡಿ, ಲಿಂಗಜಂಗಮ ದಿಟವೆಂದು ಸಕಲ ಸುಖಭೋಗಂಗಳನರ್ಪಿಸಿದ. ಗುಹೇಶ್ವರಾ [ಅದು], ನಿಮ್ಮ ಶರಣ ಬಸವಣ್ಣಂಗಲ್ಲದೆ ಇನ್ನಾರಿಗೂ ಅಳವಡದು.
--------------
ಅಲ್ಲಮಪ್ರಭುದೇವರು
ಭಾವದಲ್ಲಿ ಭ್ರಮಿತರಾದವದ ಸೀಮೆಯೇನು ? ನಿಸ್ಸೀಮೆಯೇನು ? ವಚನದ ರಚನೆಯ ರಂಜನೆಯ ಲೀಲೆಯನಾಡುವರು. ಗುಹೇಶ್ವರನಿಪ್ಪ ಗುಪ್ತವೆಂತೆಂದರಿಯರು.
--------------
ಅಲ್ಲಮಪ್ರಭುದೇವರು
ಭಕ್ತನಾಧೀನವಾಗಿ ಭಕ್ತಿಯ ಬೇಡ ಬಂದವನಲ್ಲ. ಮುಕ್ತಿಯಾಧೀನವಾಗಿ ಮುಕ್ತಿಯ ಬೇಡಬಂದವನಲ್ಲ. ಅಶನಾತುರನಾಗಿ ವಿಷಯವ ಬಯಸಿ ಬಂದವನಲ್ಲ. ಗುಹೇಶ್ವರನ ಶರಣ ಸಂಗನಬಸವಣ್ಣ ಮಾಡುವ ಭಕ್ತನಲ್ಲಾಗಿ, ನಾನು ಬೇಡುವ ಜಂಗಮವಲ್ಲ, ಕಾಣಾ, ಚೆನ್ನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಭವಿಯ ಕಳೆದೆವೆಂಬ ಮರುಳು ಜನಂಗಳು ನೀವು ಕೇಳಿರೆ; ಭವಿಯಲ್ಲವೆ ನಿಮ್ಮ ತನುಗುಣಾದಿಗಳು ? ಭವಿಯಲ್ಲವೆ ನಿಮ್ಮ ಮನಗುಣಾದಿಗಳು ? ಭವಿಯಲ್ಲವೆ ನಿಮ್ಮ ಪ್ರಾಣಗುಣಾದಿಗಳು ? ಇವರೆಲ್ಲರೂ ಭವಿಯ ಹಿಡಿದು ಭವಭಾರಿಗಳಾದರು. ನಾನು ಭವಿಯ ಪೂಜಿಸಿ ಭವಂನಾಸ್ತಿಯಾದೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭವಿಯೆಂಬುದು ಹುಸಿ, ಭಕ್ತಿಯೆಂಬುದು ಉಪದೇಶ. ಶೀಲವೆಂಬುದು ಸಂಕಲ್ಪ, ಸಮತೆಯೆಂಬುದು ಸೂತಕ._ ಇಂತೀ ಚತುರ್ವಿಧದೊಳಗಿಲ್ಲ, ಗುಹೇಶ್ವರಾ ನಿಮ್ಮ ಶರಣ ನಿಸ್ಸೀಮ!
--------------
ಅಲ್ಲಮಪ್ರಭುದೇವರು
ಭೂಮಿಯ ಕಠಣವನು, ಆಕಾಶದ ಮೃದುವನು; ತಿಳಿವ ಗಮನ ಅಲ್ಲಿಯೇ ನಿಂದಿತ್ತು. ಉದಕದೊಳಗೆ ಹುಟ್ಟಿದ ತೃಷ್ಣೆ ಉದಕವನರಸಿತ್ತಲ್ಲಾ! ಒಳಗೆ ಸತ್ತು ಹೊರಗೆ ಆಡುತ್ತದೆ ! ಗುಹೇಶ್ವರ ಬೆರಗಾಗಿ ಅಲ್ಲಿಯೇ ನಿಂದನು.
--------------
ಅಲ್ಲಮಪ್ರಭುದೇವರು
ಭಕ್ತರೆಲ್ಲರೂ ಲಂದಣಿಗರಾಗಿ ಹೋಯಿತ್ತು. ಜಂಗಮಗಳೆಲ್ಲರೂ (ಜಂಗಮವೆಲ್ಲ?) ಉಪಜೀವಿಗಳಾಗಿ, ಹೋದರು (ಹೋಯಿತ್ತು?). ಇದೇನೊ? ಇದೆಂತೊ? ಅರಿಯಲೆ ಬಾರದು. ಕಾಯಗುಣ ನಾಸ್ತಿಯಾದಾತ ಭಕ್ತ, ಪ್ರಾಣಗುಣ ನಾಸ್ತಿಯಾದಾತ ಜಂಗಮ, ಉಳಿದವೆಲ್ಲವ ಸಟೆಯೆಂಬೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಭಿತ್ತಿ ಮೂರರ ಮೇಲೆ ಚಿತ್ರ ಬರೆಯಿತ್ತು; ಪ್ರಥಮ ಭಿತ್ತಿಯ ಚಿತ್ರ ಚಿತ್ರದಂತೆ ಇದ್ದಿತ್ತು; ಎರಡನೆಯ ಭಿತ್ತಿಯ ಚಿತ್ರ ಹೋಗುತ್ತ ಬರುತ್ತ ಇದ್ದಿತ್ತು, ಮೂರನೆಯ ಭಿತ್ತಿಯ ಚಿತ್ರ ಹೋಯಿತ್ತು ಮರಳಿ ಬಾರದು. ಗುಹೇಶ್ವರಾ_ನಿಮ್ಮ ಶರಣ ತ್ರಿವಿಧದಿಂದತ್ತತ್ತಲೆ !
--------------
ಅಲ್ಲಮಪ್ರಭುದೇವರು
ಭೂತವೈದರಿಂದ ಸ್ಥೂಲ ತನು. ಮನ ಬುದ್ಧಿ ಚಿತ್ತ ಅಹಂಕಾರದಿಂದ ಸೂಕ್ಷ್ಮತನು. ಭಾವಜ್ಞಾನದಿಂದ ಕಾರಣತನು._ಈ ತ್ರಿವಿಧವು ಚೈತನ್ಯವಿಡಿದ ಕಾರಣ, ಭೂತ ಅಂತಃಕರಣ ಭಾವ ಜ್ಞಾನಕ್ಕೆ ಸ್ವತಂತ್ರತೆಯಿಲ್ಲ. ಆ ಚೈತನ್ಯಕ್ಕೆ ಶರೀರಭಾವವಿಲ್ಲದಿರ್ದಡೆ ತೋರಿಕೆ ಇಲ್ಲವಾಗಿ ಆ ಚೈತನ್ಯವೆ ತನ್ನ ಲೀಲೆಯಿಂದ ಶರಣನೆನಿಸಿತ್ತು. ಆ ಶರಣನ ಪಂಚಭೌತಿಕ ತನುವ ಇಷ್ಟಲಿಂಗ ಇಂಬುಗೊಂಡಿಹ ಕಾರಣ, ಕಾಯ ಪಂಚಬ್ರಹ್ಮಮಯವಾಯಿತ್ತು. ಅಂತಃಕರಣ[ವ] ಅಂತಃಪ್ರೇರಕ ಪ್ರಾಣಚೈತನ್ಯಲಿಂಗವೊಳಕೊಂಡ ಕಾರಣ ಶರಣನ ಕರಣಂಗಳೆ ಲಿಂಗಕಿರಣಂಗಳಾದವು. ಭಾವ ಜ್ಞಾನವೆಡೆಗೊಂಡು [ಲಿಂಗ] ತೃಪ್ತಿಸ್ವರೂಪದಿಂದ ಆನಂದಮಯವಪ್ಪ ಕಾರಣ, ಶರಣ ಸಚ್ಚಿನ್ಮಯನಾದ_ಇದು ಕಾರಣ, ಗುಹೇಶ್ವರಾ ನಿಮ್ಮ ಶರಣರ ದೃಷ್ಟಲಿಂಗವೆಂಬೆ !
--------------
ಅಲ್ಲಮಪ್ರಭುದೇವರು
ಭೂತ ಭೂತವ ಕೂಡಿ ಅದ್ಭುತವಾಯಿತ್ತು, ಕಿಚ್ಚು ಕೋಡಿತ್ತು, [ನೀರು] ನೀರಡಿಸಿತ್ತು_ಅದ್ಭುತವಾಯಿತ್ತು ! ಉರಿ, ಪವನದೋಷದೊಳಡಗಿರ್ದು ವಾಯುವಿಮ್ಮಡಿಸಿತ್ತ ಕಂಡೆ, ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭಕ್ತನಿದgಠ್ಞವಿಂಗೆ ಕರ್ತ ಬಂದಡೆ. ಅತ್ತಿತ್ತ ಹರಿಯದೆ ನಂಬಬೇಕು ನೋಡಾ. ಕರ್ತನ ಕಂಡು ಭೃತ್ಯ ಉರಿಯನುಗುಳಿದಡೆ ಬಳಿಕ ಈ ಕರ್ತನ [ಭೃತ್ಯ] ಭಾವಕ್ಕೆ ಸಂಬಂಧವೇನು ? ತಪ್ಪಿ ತಪ್ಪಿ ತಿದ್ದಿಕೊಂಡೆಹೆನೆಂದಡೆ ಹಸನಾಗಬಲ್ಲುದೆ ? ಗುಹೇಶ್ವರನ ಶರಣನಾರೆಂಬುದನು ನೀನೆತ್ತ ಬಲ್ಲೆ ? ಹೋಗಾ, ಮರುಳ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು

ಇನ್ನಷ್ಟು ...