ಅಥವಾ
(244) (65) (104) (2) (1) (0) (1) (0) (3) (7) (1) (0) (3) (0) ಅಂ (219) ಅಃ (219) (5) (0) (5) (3) (0) (4) (0) (9) (0) (0) (0) (0) (0) (0) (0) (16) (0) (1) (0) (37) (30) (0) (8) (10) (15) (0) (4) (0) (2) (5) (16) (1) (18) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಂಥ ಬ್ರಹ್ಮಾಂಡವ ಎಪ್ಪತ್ತುನಾಲ್ಕು ಸಾವಿರದ ಏಳುನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರಜೇಷವೆಂಬ ಭುವನ. ಆ ಭುವನದೊಳು ಕಪಾಲಮಾಲಾಧರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಎಪ್ಪತ್ತುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು, ಮುನ್ನೂರಾ ಎಪ್ಪತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಧಕಾರವಾಗಿಹ ಕತ್ತಲೆಯೊಳು ಮಹಾಮೇರುವಿಹುದು ನೋಡಾ. ಆ ಮಹಾಮೇರುವ ಉದಯಾಸ್ತಮಯವಾಗಿಹ ಚಂದ್ರಸೂರ್ಯರು ತಿರುಗುವರು. ಆ ಚಂದ್ರಸೂರ್ಯರ ದೆಸೆಯಿಂದ ಇರುಳು ಹಗಲೆಂಬ ವೃಕ್ಷ ಹುಟ್ಟಿ, ಆ ವೃಕ್ಷಕ್ಕೆ ಅರವತ್ತು ಶಾಖೆಗಳಾದವು ನೋಡಾ. ಒಂದೊಂದು ಶಾಖೆಗಳಲ್ಲಿ ಮುನ್ನೂರರವತ್ತು ಮುನ್ನೂರರವತ್ತು ಗೂಬೆಗಳು ಕುಳಿತು ಕೂಗುತ್ತಿಹವು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೈದುಸಾವಿರದ ಇನ್ನೂರನಾಲ್ವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಏಕರುದ್ರವೆಂಬ ಭುವನ. ಆ ಭುವನದೊಳು ಕಾಲಾಂತಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಇಪ್ಪತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ಇಂದ್ರಚಂದ್ರಾದಿತ್ಯರು, ನೂರಾ ಇಪ್ಪತ್ತೈದುಕೋಟಿ ವೇದಪುರುಷರು, ಮುನೀಂದ್ರರು, ದೇವರ್ಕಳಿಹರು ನೋಡಾ, ಅಪ್ರಮಾಣಕೂಡಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಗ್ನಿಮಂಡಲ, ಆದಿತ್ಯಮಂಡಲ, ಚಂದ್ರಮಂಡಲವೆಂಬ ಮಂಡಲತ್ರಯಂಗಳ ಹಾಯ್ದು, ಬ್ರಹ್ಮಚಕ್ರ ಶಿಖಾಚಕ್ರವ ಹಾಯ್ದು, ಆಚೆ ಪಶ್ಚಿಮಚಕ್ರವ ಮುಟ್ಟಿ, ಆ ಬ್ರಹ್ಮನಾಡಿ ಏಕನಾಡಿಯಾಗಿಹುದು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತುಲಕ್ಷದ ಮೇಲೆ ಸಾವಿರದಾರುನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸುನಾದವೆಂಬ ಭುವನ. ಆ ಭುವನದೊಳು ನಾದಾಂತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ನಲವತ್ತೈದುಕೋಟಿ ಇಂದ್ರ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು. ಎಂಟುನೂರಾ ನಲವತ್ತೈದುಕೋಟಿ ಬ್ರಹ್ಮನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರುವತ್ತೆರಡು ಸಾವಿರದ ಆರುನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರಚಂಡವೆಂಬ ಭುವನ. ಆ ಭುವನದೊಳು ಪ್ರಳಯಾಂತಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಹತ್ತುಕೋಟಿ ಬ್ರಹ್ಮ ನಾರಾಯಣ ರುದ್ರರಿಹರು. ಮುನ್ನೂರಾ ಹತ್ತುಕೋಟಿ ಇಂದ್ರಚಂದ್ರಾದಿತ್ಯರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರುವತ್ತೈದುಲಕ್ಷದ ಮೇಲೆ ಸಾವಿರದಾ ಆರುನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ತಿಕ್ಷುವೆಂಬ ಭುವನ. ಆ ಭುವನದೊಳು ತ್ರಿಕಾಲಸಂಹಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಿಪ್ಪತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಎಂಟುನೂರಿಪ್ಪತ್ತುಕೋಟಿ ಇಂದ್ರ-ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತು ಲಕ್ಷದ ಮೇಲೆ ಸಾವಿರದ ಎಂಟುನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಧರ್ಮವೆಂಬ ಭುವನ. ಆ ಭುವನದೊಳು ಧರ್ಮಸ್ವರೂಪನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತು ನೂರಾ ನಾಲ್ವತ್ತೈದು ಕೋಟಿ ದೇವರ್ಕಳು ವೇದಪುರುಷರು ಇಂದ್ರಚದ್ರಾದಿತ್ಯರು ಇಹರು ನೋಡಾ. ಒಂಬತ್ತು ನೂರಾ ನಾಲ್ವತ್ತೈದು ಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂದು ಮೊದಲಾಗಿ ಇಂದು ಕಡೆಯಾಗಿ ಆ ಪರಾಪರದಲ್ಲಿ ಲೀಯವಾದ ಶರಣರಿಗೆ ಅಂಥಾದಿಂಥಾದೆಂದು ಹೇಳಬಾರದು. ಉಪಮಾತೀತವ ಹೇಂಗಿದ್ದುದೆಂದಡೆ, ಹಾಂಗೆ ಇದ್ದುದು ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತೊಂದುಸಾವಿರದ ಮುನ್ನೂರಾ ಎಂಟು ಬ್ರಹ್ಮಾಂಡವನೊಳಕೊಂಡುದೊಂದು ರೌದ್ರಿಯೆಂಬ ಭುವನ. ಆ ಭುವನದೊಳು ಸಹಸ್ರಾಕ್ಷನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾಐವತ್ತೈದು ಕೋಟಿದೇವರ್ಕಳು, ಇಂದ್ರಚಂದ್ರಾದಿತ್ಯರು, ವೇದಪುರುಷರು, ಮುನೀಂದ್ರರು, ನೂರಾಐವತ್ತೈದು ಕೋಟಿ ನಾರಾಯಣ ರುದ್ರ ಬ್ರಹ್ಮಾದಿಗಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತಾರುಲಕ್ಷದ ಮೇಲೆ ಸಾವಿರದ ಎಂಟುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉಭಯನಖವೆಂಬ ಭುವನ. ಆ ಭುವನದೊಳು ಉಪಮಾತೀತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬಯಿನೂರಾ ಇಪ್ಪತ್ತೈದು ಕೋಟಿ ಬ್ರಹ್ಮ ನಾರಾಯಣ ರುದ್ರಾದಿಗಳಿಹರು ನೋಡಾ. ಒಂಬಯಿನೂರಾ ಇಪ್ಪತ್ತೈದು ಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂರುಲಕ್ಷದ ಮೇಲೆ ಸಾವಿರ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ನಾಖಲವೆಂಬ ಭುವನ. ಆ ಭುವನದೊಳು ನಾರಾಯಣಮರ್ದನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರಹತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ. ಐನೂರಹತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೆರಡುಲಕ್ಷದ ಮೇಲೆ ಸಾವಿರದಿನ್ನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ವೀರಭದ್ರನೆಂಬ ಭುವನ. ಆ ಭುವನದೊಳು ಪ್ರಳಯಕಾಲನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಆರುನೂರೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತೆರಡುಸಾವಿರದ ಐನೂರಾಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಜ್ಯೋತಿಯೆಂಬ ಭುವನ. ಆ ಭುವನದೊಳು ಅನಂತಮಾಯಾಸಂಹಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ಅರವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರು ಇಂದ್ರಚಂದ್ರಾದಿತ್ಯರಿಹರು ನೋಡಾ. ಇನ್ನೂರಾ ಅರವತ್ತುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತೊಂಬತ್ತುಸಾವಿರದ ಐನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅಜವೆಂಬ ಭುವನ. ಆ ಭುವನದೊಳು ಅಜಕಪಾಲಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ತೊಂಬತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಇನ್ನೂರಾ ತೊಂಬತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಆಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಒಂಬತ್ತುಸಾವಿರದ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ದೀಪಿಕಾದ್ಥಿಕವೆಂಬ ಭುವನ. ಆ ಭುವನದೊಳು ಏಕಪಾದನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾಲ್ವತ್ತೈದುಕೋಟಿ ರುದ್ರ ಬ್ರಹ್ಮ ನಾರಾಯಣರು, ನಾಲ್ವತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು, ನಾಲ್ವತ್ತೆರಡುಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತಾರುಸಾವಿರದ ಇನ್ನೂರ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ನಿಜಾನಂದನೆಂಬ ಭುವನ. ಆ ಭುವನದೊಳು ನಿತ್ಯಾನಂದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾಮೂವತ್ತುಕೋಟಿ ನಾರಾಯಣ ರುದ್ರ ಬ್ರಹ್ಮರು, ನೂರಾಮೂವತ್ತುಕೋಟಿ ಇಂದ್ರಚಂದ್ರಾದಿತ್ಯರು, ವೇದಪುರುಷರು, ಮುನೀಂದ್ರರು, ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ನಾಲವತ್ತೇಳು ಲಕ್ಷದ ಮೇಲೆ ಸಾವಿರದಾ ನಾನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವೇದಪಾಠಕವೆಂಬ ಭುವನ. ಆ ಭುವನದೊಳು ವೇದನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರ ಮೂವತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಏಳುನೂರ ಮೂವತ್ತುಕೋಟಿ ಇಂದ್ರ-ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಒಂಬತ್ತುಕೋಟಿಯ ಮೇಲೆ ಎರಡು ಸಾವಿರದಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪಿನಾಕಿಯೆಂಬ ಭುವನ. ಆ ಭುವನದೊಳು ಮಹಾಘೋರವೀರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಸಾವಿರಕೋಟಿಯ ಮೇಲೆ ಎಂಬತ್ತುಕೋಟಿ ಬ್ರಹ್ಮ ನಾರಾಯಣ ರುದ್ರರಿಹರು. ಸಾವಿರಕೋಟಿಯ ಮೇಲೆ ಎಂಬತ್ತುಕೋಟಿ ವೇದಪುರುಷರು ಇಂದ್ರಚಂದ್ರಾದಿತ್ಯರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅನಂತಕೋಟಿ ಬ್ರಹ್ಮಾಂಡವನೊಳಕೊಂಡುದೊಂದು ಕಾಲಾಗ್ನಿರುದ್ರವೆಂಬ ಭುವನ. ಆ ಭವನದೊಳು ಓಂಕಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಅನಂತಕೋಟಿ ರುದ್ರರು ಅನಂತಕೋಟಿ ಬ್ರಹ್ಮರು ಅನಂತಕೋಟಿ ನಾರಾಯಣರಿಹರು ನೋಡಾ. ಅನಂತಕೋಟಿ ಇಂದ್ರರು ಅನಂತಕೋಟಿ ಚಂದ್ರರು ಅನಂತಕೋಟಿ ವೇದಪುರುಷರು ಅನಂತಕೋಟಿ ಮುನೀಂದ್ರರು ಅನಂತಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೊಂದುಲಕ್ಷದ ಮೇಲೆ ಸಾವಿರದೆಂಟುನೂರಾ ಎಂಟು ಬ್ರಹ್ಮಾಂಡವನೊಳಕೊಂಡುದೊಂದು ದೌಷ್ಟ್ರೇಯವೆಂಬ ಭುವನ. ಆ ಭುವನದೊಳು ಭುವನೇಶ್ವರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರುಕೋಟಿ ರುದ್ರ ಬ್ರಹ್ಮ ಇಂದ್ರ ನಾರಾಯಣರಿಹರು. ಒಂಬತ್ತುನೂರುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರವತ್ತ್ತೈದು ಸಾವಿರದ ಆರುನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಬ್ಥೀಮವೆಂಬ ಭುವನ. ಆ ಭುವನದೊಳು ಬ್ಥೀಮೇಶ್ವರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಇಪ್ಪತ್ತೈದು ಕೋಟಿ ರುದ್ರ-ಬ್ರಹ್ಮ-ನಾರಾಯಣರು, ಮುನ್ನೂರಾ ಇಪ್ಪತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹತ್ತು ಸಾವಿರದ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶಾಂತ್ಯತೀತೆಯೆಂಬ ಭುವನ. ಆ ಭುವನದೊಳು ದ್ವಿಪಾದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐವತ್ತುಕೋಟಿ ಬ್ರಹ್ಮ ನಾರಾಯಣ ರುದ್ರರು, ಐವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು, ನಾಲ್ವತ್ತು ಮೂರುಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎರಡುಲಕ್ಷದ ಮೇಲೆ ಸಾವಿರದ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ನಖಲವೆಂಬ ಭುವನ. ಆ ಭುವನದೊಳು ನಾರಾಯಣಪ್ರಿಯನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳು ಇಂದ್ರಚಂದ್ರಾದಿತ್ಯರಿಹರು ನೋಡಾ. ಐನೂರೈದುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗಾಲಕಣ್ಣವರು ಮೈಯಲ್ಲಾ ಕಣ್ಣವರು ತಾನಿರ್ದಲ್ಲಿ, ಗಂಗಾಧರ ಗೌರೀಶ್ವರರು ತಾನಿರ್ದಲ್ಲಿ, ಶಂಕರ ಶಶಿಧರ ನಂದಿವಾಹನರು ತಾನಿರ್ದಲ್ಲಿ, ತ್ರಿಶೂಲ ಖಟ್ವಾಂಗಧರರು ತಾನಿರ್ದಲ್ಲಿ, ತನ್ನಿಂದದ್ಥಿಕರೊಬ್ಬರಿಲ್ಲವಾಗಿ ತಾನೆ ಸ್ವಯಂಭು ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ

ಇನ್ನಷ್ಟು ...