ಎ ಪದದಿಂದ ಪ್ರಾರಂಭವಾಗುವ ವಚನಗಳು:
ಎಣ್ಣೆಯಿದ್ದು ಎಳ್ಳು ನನೆಯದ ಭೇದವಕಿಚ್ಚಿದ್ದು ಕಲ್ಲು ಸಿಡಿಯದೆ ಭೇದವಕಾಮವಿದ್ದು ಕನ್ನೆಯನನುಭವಿಸದ ಭೇದವಪರವಿದ್ದು ಪ್ರಾಣನ ಪ್ರಕೃತಿಯ ಹರಿಯದ ಭೇದವನರರೆತ್ತ ಬಲ್ಲರೈ? ರಾಮನಾಥ.
ಎತ್ತನೇರಿದ ಕರ್ತನೊಬ್ಬನೆ ಜಗಕ್ಕೆಲ್ಲಎತ್ತು ಬೆಳೆದ ಧಾನ್ಯವನುಂಬದೇವರ್ಕಳೆಲ್ಲ ನಿಮ್ಮ ತೊತ್ತಿನ ಮಕ್ಕಳು ಕಾಣಾ!ರಾಮನಾಥ.
ಎತ್ತು ನಿಮ್ಮ ದಾನ; ಬಿತ್ತು ನಿಮ್ಮ ದಾನ.ಸುತ್ತಿ ಹರಿವ ಸಾಗರವೆಲ್ಲ ನಿಮ್ಮ ದಾನ.ನಿಮ್ಮ ದಾನವನುಂಡು ಅನ್ಯರ ಹೊಗಳುವಕುನ್ನಿಗಳನೇನೆಂಬೆ ಹೇಳ? ರಾಮನಾಥ.
ಎಂಜಲ ತಿಂಬರೆ ಅಂಜದೆ ಅಳುಕದೆ ತಿನಬೇಕು.ಅಂಜುತ ಅಳುಕುತ ತಿಂದರೆಅದು ನಂಜಿನಂತಕ್ಕು ಕಾಣಾ! ರಾಮನಾಥ.
ಎತ್ತಪ್ಪೆ ಶರಣಂಗೆ, ತೊತ್ತಪ್ಪೆ ಶರಣಂಗೆಭೃತ್ಯನಾಗಿ ಸದ್ಭಕ್ತರ ಮನೆಯ ಬಾಗಿಲು ಕಾಯ್ದಿಪ್ಪ ಸೊಣಗನಪ್ಪೆ.ಕರ್ತಾರ! ನಿನಗೆ ಕರವೆತ್ತಿ ಹೊಡವಡುವಭಕ್ತರ ಮನೆಯ ಹಿತ್ತಿಲ ಬೇಲಿಯಾಗಿಪ್ಪೆನಯ್ಯಾ,ರಾಮನಾಥ.
ಎಳ್ಳಿಲ್ಲದ ಗಾಣದಲ್ಲಿ ಎಣ್ಣೆಯುಂಟೆ?ಜಳ್ಳ ತೂರಿದಲ್ಲಿ ಬತ್ತವುಂಟೆ?ಕಳ್ಳ ಹಾದರಿಗರ ಸಂಪಾದನೆಹೊಳ್ಳ ಕುಟ್ಟಿ ಕೈ ಹೊಟ್ಟೆಯಾದಂತೆ ಕಾಣಾ!ರಾಮನಾಥ.
ಎನ್ನ ನಾನರಿವುದಕ್ಕೆ ಮುನ್ನ ಎಲ್ಲಿದ್ದೆಯಯ್ಯ?ಎನ್ನೊಳಗೆ ಇದ್ದೆಯಯ್ಯ!ಎನ್ನ ನಾನರಿಯಲು ಮುಂದೆ ಬಂದು ಗುರುರೂಪಾಗಿಎನ್ನೊಳಗೆ ಅಡಗಿದ್ದೆಯಲ್ಲ! ರಾಮನಾಥ.
ಎನ್ನೊಡಲಾದಡೆ ಎನ್ನಿಚ್ಛೆಯಲ್ಲಿರದೆ?ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ?ಅದು ಎನ್ನೊಡಲೂ ಅಲ್ಲ, ನಿನ್ನೊಡಲೂ ಅಲ್ಲ.ಅದು ನೀ ಮಾಡಿದ ಜಗದ ಬಿನ್ನಾಣದೊಡಲು ಕಾಣಾ!ರಾಮನಾಥ.
ಎಡರಡಸಿದಲ್ಲಿ ಮೃಡ! ನಿಮ್ಮ ನೆನವರು.ಎಡರಡಸಿದ ವಿಪತ್ತು ಕಡೆಯಾಗಲೊಡನೆಮೃಡ! ನಿಮ್ಮನೆಡಹಿಯೂ ಕಾಣರು! ರಾಮನಾಥ.