ತ ಪದದಿಂದ ಪ್ರಾರಂಭವಾಗುವ ವಚನಗಳು:
ತನ್ನೊಳಗಣ ಅರಿವು ತನ್ನಲ್ಲಿಯೇ ತೋರಿದಲ್ಲದೆಅನ್ಯರಲ್ಲಿ ತೋರಬಲ್ಲದೆ?ತನ್ನಲ್ಲಿ ತಾನೆ ಇದ್ದಿತ್ತು.ತನ್ನ ತಾನೆ ಪಕ್ಷಕ್ಕೆ ಬಂದುತನ್ನಲ್ಲಿ ಹುಟ್ಟಿದ ನೆನಹಿನ ಬಿನ್ನಾಣವನೇನೆಂಬೆನಯ್ಯಾ ರಾಮನಾಥ.
ತೊಡೆಯಲ್ಲಿ ಮುದ್ರೆಯನೊತ್ತಿದಡೇನು?ಅದು ನಡೆಯಲ್ಲಿ ಶುಚಿಯಾಗಬಲ್ಲುದೆ?ಮಡಿಲಲ್ಲಿ ಲಿಂಗವ ಕಟ್ಟಿದಡೇನೊ?ಲೋಕದ ಆಜ್ಞಾನಿತನ ಬಿಡುವುದೆ?ನಡೆ ನುಡಿ ಸತ್ಯಸದಾಚಾರಿಗಳುಎಡೆಯೆಡೆಗೊಬ್ಬರು ಕಾಣಾ! ರಾಮನಾಥ.
ತೀವಿ ಕುಳ್ಳಿರ್ದ ಸಭೆ ಈಯಬಲ್ಲುದೆ ದಾನವ?ಸಾವರೆ ಸಂಗ್ರಾಮಕ್ಕೆ ಹೋದವರೆಲ್ಲ?ಇರಿಯಬಲ್ಲರೆ ನೂರಕ್ಕೊಬ್ಬ ಸಹಸ್ರಕ್ಕೊಬ್ಬ.ಹುಣಿಸೆಯ ಹೂವೆಲ್ಲ ಕಾಯಾಗಬಲ್ಲುದೆ?ರಾಮನಾಥ.
ತಲೆಯಿಲ್ಲದ ಗುರು, ಕಾಲಿಲ್ಲದೆ ನಿಂದ ನೋಡ!ಒಡಲಿಲ್ಲದ ಶಿಷ್ಯನಾದ ಪರಿಯ ನೋಡ!ಗುರುವಿನ ಒಡಲ ಬಗೆಯ ಹುಟ್ಟಿದಾತಒಡನೆ ಗುರುಸಹಿತ ನಿಂದ ನಿಲವನೇನೆಂಬೆನಯ್ಯಾ!ರಾಮನಾಥ.
ತನು ತನ್ನ ದೆಸೆಯಲೇಸು ದಿನವಿರ್ದಡೇನು?ಮನ ತನ್ನ ಹರಿದತ್ತ ಹರಿದ ಬಳಿಕ.ಕೆನೆಯಿಲ್ಲದ ಮೊಸರ ಕಡೆದಡೆಅಲ್ಲಿ ಒಂದು ಹನಿ ತುಪ್ಪವಿಲ್ಲ ಕಾಣಾ! ರಾಮನಾಥ.
ತಾಯ ಗರ್ಭದ ಶಿಶು ತಾಯ ಕುರುಹನರಿಯದು.ಆ ತಾಯಿ ಶಿಶುವಿನ ಕುರುಹನೆಂದೂ ಅರಿಯಳು.ಮಾಯಾಮೋಹದಲ್ಲಿಪ್ಪ ಭಕ್ತರು ದೇವರನರಿಯರು.ಆ ದೇವರು ಆ ಭಕ್ತರನೆಂದೂ ಅರಿಯನು ಕಾಣಾ! ರಾಮನಾಥ.