ಅಥವಾ
(214) (139) (48) (7) (13) (3) (0) (0) (105) (12) (12) (37) (5) (0) ಅಂ (44) ಅಃ (44) (163) (1) (60) (9) (0) (12) (0) (64) (0) (0) (0) (0) (0) (0) (0) (104) (0) (49) (10) (128) (74) (5) (68) (61) (158) (17) (10) (0) (47) (55) (61) (4) (129) (75) (0)

ಅಃ ಪದದಿಂದ ಪ್ರಾರಂಭವಾಗುವ ವಚನಗಳು:

ಅಂಗೈಯೊಳಗಣ ಲಿಂಗಮ್ರ್ಕೂಯ ಕಂಗಳಲ್ಲಿಂಗಗೊಟ್ಟಡೆ, ತಿಂಗಳ ಸೂಡನಾದೆ ನೋಡಾ ಅಯ್ಯಾ. ಮಂಗಳಮೂರ್ತಿ ಗಂಗಾಜೂಟಾಂಗಮಯ ಕಪಿಲಸಿದ್ಧ ಮಲ್ಲಿಕಾರ್ಜುನಂಗ ಬೇರೆಂದರಿಯಲ್ಲ ನೋಡಾ, ನಿಜದ ನಿರ್ವಯಲಲ್ಲಯ್ಯನೆ.
--------------
ಸಿದ್ಧರಾಮೇಶ್ವರ
ಅಂಗೈಯಲ್ಲಿ ಪೂಜಿಸಿದ ಫಲ ಲಿಂಗಯ್ಯ ಕೊಡನೆಂದು ಮರುಗರಾ ಮನವೆ. ಅಂಗೈಯಲ್ಲಿ ಫಲ ಅಂಗ ಲಿಂಗ ನೋಡಿದಂತೆ ನೋಡಾ ಮನವೆ. ಅಂಗೈಯ ಫಲ ಲಿಂಗಯ್ಯನಾಗರೆ ಪೂಜಿಸುವರೆ ಪ್ರಮಥರು? ನೋಡಾ ಮನವೆ. ಕಪಿಲಸಿದ್ಧಮಲ್ಲಿಕಾರ್ಜುನನ ಪೂಜಿಸಿ ಪೂಜಿಸಿ ಬದುಕು ಮನವೆ.
--------------
ಸಿದ್ಧರಾಮೇಶ್ವರ
ಅಂಗೋದಕಂದ ಅಂಗರಕ್ಷಣಂಗಳ ಮಾಡುವೆ; ಲಿಂಗೋದಕಂದ ಸರ್ವಪವಿತ್ರವ ಮಾಡುವೆ; ಪ್ರಸಾದೋದಕಂದ ಪ್ರಾಣನ ನೆಲೆಯನರಿವೆ ಇಂತೀ ತ್ರಿವಿಧೋದಕಂದ ಶುದ್ಧನಹೆ, ಸಿದ್ಧನಹೆ, ಪ್ರಸಿದ್ಧನಹೆ, ಕಪಿಲಸಿದ್ಧಮಲ್ಲಿಕಾರ್ಜುನ ತಾನಹೆ
--------------
ಸಿದ್ಧರಾಮೇಶ್ವರ
ಅಂಗವರಿತು ನಿಂದವಂಗೆ ಜಗದ ಹಂಗಿನಲ್ಲಿ ಸಿಕ್ಕಿ ಜಂಗುಳಿಗಳ ಕೂಡದೆ ಲಿಂಗವೇ ಅಂಗವಾಗಿ ನಿಂದುದು ಕಪಿಲಸಿದ್ಧಮಲ್ಲಿಕಾರ್ಜುನಂಗವು ತಾನಾದುದ
--------------
ಸಿದ್ಧರಾಮೇಶ್ವರ
ಅಂಗವಿಸದಿರು ಇನ್ನು ಹಿಂಗಿಹೋಗೆಂದೆನುತ ಮಂಗಳಾತ್ಮಕ ನುಡಿದ ಗುರುಕರುಣದಾ ಅಂಗವಿಸದಿರು ಎಂದನಂಗಹರ ಪ್ರಭುರಾಯ ಬಂದು ನೂಕಿದನೆನ್ನನೇಡಿಸುವ ಮಾಯೆಯನು. ಮಂಗಳಾತ್ಮಕ ಕಪಿಲಸಿದ್ಧಮಲ್ಲೇಶ್ವರನೆ ಲಿಂಗ, ನಿಮ್ಮನು ಅರಿವೆ; ಮಾಯೆಯ ಗೆಲುವೆ ಪ್ರಭುವಿನಂದದಲಿ.
--------------
ಸಿದ್ಧರಾಮೇಶ್ವರ
ಅಂಗದಲ್ಲಿ ಲಿಂಗ! ಆ ಲಿಂಗ ಧ್ಯಾನದಲ್ಲಿಪ್ಪ ಒಡಲೊಡವೆ ಒಡೆಯರಿಗೆಂಬ; ಮಾಡಿ ಮನದಲ್ಲಿ ಹೊಳೆಯದೆ ಬಾಳೆ ಫಲದಂತಿಪ್ಪ ಮಾತಿನ ಬಟ್ಟೆಗೆ ಹೋಗದ; ಸೂತಕಶ್ರುತವ ಕೇಳದ; ಸದ್ಭಕ್ತರ ನೆನವುದೆ ಮಂತ್ರವಯ್ಯ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಂಗ ಲಿಂಗ್ವ ಒಂದಾದ ಬಳಿಕ [ಅಂ]ಗೇಂದ್ರಿಯಂಗಳಾಚರಿಸಲಾಗದು. ಅಂಗೇಂ್ರಯಂಗಳು ಹೋಗಿ ಲಿಂಗೇಂದ್ರಿಯಂಗಳಾಗಿ ಆಚರಿಸುವುದು. `ಘೃತೋ ಭೂತ್ವಾ ಕಥಂ ಕ್ಷೀರಂ ಭವತ್ಯೇವಂ ವರಾನನೇ' ಎಂಬಾಗಮೋಕ್ತಿ ಪುಸಿಯಾಯಿತ್ತೆ? ಆಗಿ ಆಚರಿಸಿದಡೆ ಭವ ಹಿಂಗದು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಂದು ಬಸವಣ್ಣ ಬಂದು ಜರಿದು ಹೋದುದ ಮರೆದೆನೆ ಆ ನೋವ! ಜರಿದುದೆ ಎನಗೆ ದೀಕ್ಷೆಯಾಯಿತ್ತು! ಆ ದೀಕ್ಷೆಯ ಗುಣದಿಂದ ಫಲಪದಕ್ಕೆ ದೂರವಾದೆ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ಬಸವಣ್ಣನೆನ್ನ ಪರಮಾರಾಧ್ಯ!
--------------
ಸಿದ್ಧರಾಮೇಶ್ವರ
ಅಂಗವ ಮರೆವನ್ನಕ್ಕರ, ಲಿಂಗಾ, ನಿಮ್ಮ ಚೆಲುವ ಕಂಗಳು ತುಂಬಿ ನೋಡುತ್ತಲೆಂಪ್ಪೆನೊ! ಪರಿಪರಿಯ ನೋಟದಿಂದ ಹರುಷವನೈದಿಕೊಂಡು ಪರಮೇಕಾಂತದೊಳೆಂದಿಪ್ಪೆನೊ! ವರಗುರು ಕಪಿಲಸಿದ್ಧಮಲ್ಲಿಕಾರ್ಜುನ, ನಿಮ್ಮ ಶರಣ ಪ್ರಭುವಿನ ಕರುಣವೆಂದಪ್ಪುದೊ!
--------------
ಸಿದ್ಧರಾಮೇಶ್ವರ
ಅಂಗದಂತೆ ಲಿಂಗ, ಲಿಂಗದಂತೆ ಅಂಗವಾದ ಬಳಿಕ ಅಂಗದಂತೆ ಲಿಂಗೈಕ್ಯ ಲಿಂಗದಂತೆ ಅಂಗೈಕ್ಯ. ಮನವೆ ಲಿಂಗ, ಲಿಂಗವೆ ಮನವಾದ ಬಳಿಕ, ಮಾತು ಮಾತುಗಳೆಲ್ಲ ಹೊಳ್ಳಾದ ಕಾರಣ ಮಾತೇ ಲಿಂಗೈಕ್ಯ :ಲಿಂಗೈಕ್ಯವೆ ಸ್ವರ! ಶಬ್ದಸಂದಣಿಗಿನ್ನು ತೆರಹುಂಟೆ? ಕಪಿಲಸಿದ್ಧಮಲ್ಲಿನಾಥಯ್ಯಾ, ಇನ್ನು ನಿಮ್ಮ ದೇವರೆಂದು ಅರಸಲುಂಟೋ ಇಲ್ಲವೋ ಎಂಬುದನು ತಿಳಿಹಿಕೊಡಾ ಅಯ್ಯಾ2
--------------
ಸಿದ್ಧರಾಮೇಶ್ವರ
ಅಂದೊಮ್ಮೆ ಜಗನ್ನಾಥ ಭಸ್ಮವ ತೊಡೆದು ಕೈಯ ಬಿರ್ಚಿದರೆ ಕೇಳಿರಣ್ಣ! ಅಣ್ಣ! ಅಣ್ಣ ಕೇಳಿರಣ್ಣ! ಬ್ರಹ್ಮ ತಾ ಮರದೊರಗಿ ವಿಷ್ಣು [ತಾ] ಜುಮ್ಮೆಂದು ವೇದಗಳು ಮತಿಗೆಟ್ಟು ದೆಸೆಗೆ ಬಾಯ ಬಿಟ್ಟವಯ್ಯ! ಎನಿಸೆನಿಸು ಲೋಕಂಗಳು ಅನಿಸು ಬಾಯ ಬಿಟ್ಟವು! ಕೇಳಿರಣ್ಣ! ಅಣ್ಣ! ಅಣ್ಣ! ಕೇಳಿರಣ್ಣ! ತಮ್ಮ ಬಲ ಅವಕುಂಟು ಕೇಳಿರಣ್ಣ! ಆಯುಷ ತನಿಗೆನಿಸೆಂಬುದವೈ ಎನ್ನ ಕಪಿಲಸಿದ್ಧಮಲ್ಲಿನಾಥಯ್ಯನ ಕೈಯ ಸಬುದಕಣ್ಣಾ
--------------
ಸಿದ್ಧರಾಮೇಶ್ವರ
ಅಂಗವಳಿದು ನಿಂದವನೆಂದು ನಾನರಿಯೆ; ಘನಲಿಂಗದಲ್ಲಿ ಸಲೆಸಂದವನೆಂದು ನಾನರಿಯೆ; ಆವ ವೇಷದಲ್ಲಿ ಬಂದು ನಿಂದ ಠಾವನರಿಯೆ; ಕ್ರೋಧವೆಂಬ ಸಂಸಾರದ ಸಾಗರದಲ್ಲಿ ಸಾಧನೆಯ ಮಾಡಲಾಗಿ ಪ್ರಭುದೇವರ ಸುಳುಹು ಅಘಟಿತವಾಯಿತ್ತು ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಂದಿನ ಪರಿ ಇಂದಿನ ಪರಿ ಬೇರೆ ಕಂಡೆಯಾ, ಮನವೆ. ಅಂದಿನ ವಿಷ ಇಂದಮೃತವಾಯಿತ್ತು ಕಂಡೆಯಾ, ಮನವೆ. ಅಂದಿನ ದೇವಾಂಗನೆ ಇಂದು ನಿಮಗೆ ಚಿಚ್ಛಕ್ತಿಯಾಯಿತ್ತು ಕಂಡೆಯಾ, ಮನವೆ. ಅಂದಿನವ ನೀನಿಂದು ಕಪಿಲಸಿದ್ಧಮಲ್ಲಿಕಾರ್ಜುನನೆಂದು ನಂಬು ಕಂಡೆಯಾ, ಮನವೆ.
--------------
ಸಿದ್ಧರಾಮೇಶ್ವರ
ಅಂಗವಿಸನನ್ಯಕ್ಕೆ ಸಂಗಮಾಡನು ತತ್ವ ಯೆಂಬ ಮಠಕವನು ತಾನಪ್ರಮಾಣ ಮಂಗಳಾತ್ಮನ ತೆರಹು ಹಿಂದಿಹ ಸೀಮೆಯ ತಂದರುಪಿದಾತ ಗುರು ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಂದು ಅನಾಯಲ್ಲಿ ತಂದು ಬಿತ್ತಿದ ಬೀಜ ಮುಂದಕ್ಕೆ ಮೂಲ ನಾಶವೈ. ಸಾಧಿಸುವ ನಿಜವ ಮೂಲನಾಶವ ಮಾಡಿದರೆ ತಾನೆ ಫಲ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಂಗಾಲಕೋಪವ ಮನಕ್ಕೆ ತಂದಿಪ್ಪವನ, ಆ ಮನದ ಕೋಪವ ಹೃದಯದಲ್ಲಿಟ್ಟುಕೊಂಡಿಪ್ಪವನ ಅವನ ಪಾದಕ್ಕೆ ಎನ್ನ ನೊಸಲ ತಂಪ ತಂದು ತಳಿವೆ, ಎನ್ನ ನೊಸಲ ಅಮೃತದಿಂದ ಅವನ ಮನವ ತಿಳುಹುವೆ, ಕಪಿಲಸಿದ್ಧಮಲ್ಲಿಕಾರ್ಜುನನ
--------------
ಸಿದ್ಧರಾಮೇಶ್ವರ
ಅಂಜನಗಾರನ ಕೈ ನಂಜುಗೊಂಡಿದೆ ಅಯ್ಯಾ. ಅಂಜನಗಾರ ಹರುಷವಾಗಲೆಂದು ಹರಸಿಕೊಂಡ ಹರಕೆ ಈಡೇರಿತ್ತೆನಗಿಂದು. ಕುಂಜರಂಗಳೆಂಟಂಜಿ ಕೆಲ ಸಾರಿದವು. ಅಂಜನವ ಬಲ್ಲ ನೀನೊಬ್ಬನಲ್ಲದಿಲ್ಲ ಕಾಣಾ, ಕಪಿಲಸಿದ್ಧಮಲ್ಲಿನಾಥ.
--------------
ಸಿದ್ಧರಾಮೇಶ್ವರ
ಅಂಧಕಾರದ ಗಿರಿ ಅರಿವೇರಿತು ಅನುವಿಡಿದು ಸುಖವ ಕಂಡು ಅನುಭವದವಳಿಗೆ ಕೆಂಪುವರ್ಣ ಸುಖವನೇಕೀಕರಿಸಿ ನೋಡಲು ಆಯತವಾಯಿತ್ತು ಈ ಅಂಧಕಾರದ ಎರಡೆಸಳಪೀಠ ಆ ಪೀಠದಲ್ಲಿ ಸಮಯಾಚಾರಿಯೆಂಬವ ನಿಂದು ಪರಿಣಾಮವಿಡಿದು ನಡೆಯೆ, ಆತ್ಮನ ಗುಣ ಕೆಟ್ಟು ನೆಲೆಗೊಂಡನಯ್ಯಾ ನಿಮ್ಮ ಶರಣ ಚೆನ್ನಬಸವಣ್ಣನು. ಕಪಿಲಸಿದ್ಧಮಲ್ಲಿನಾಥಯ್ಯಾ, ಚೆನ್ನಬಸವಣ್ಣನ ಧರ್ಮಂ ಬದುಕಿದೆನು
--------------
ಸಿದ್ಧರಾಮೇಶ್ವರ
ಅಂಗಕ್ಕೆ ಭೋಗವ ಕೊಟ್ಟವರ ನೋಡಿದೆನಲ್ಲದೆ, ಲಿಂಗಕ್ಕೆ ಕೊಟ್ಟವರ ನೋಡಲಿಲ್ಲ, ಲಿಂಗಕ್ಕೆ ಷೋಡಶೋಪಚಾರಂಗಳ ಕೊಟ್ಟವರ ನೋಡಿದೆನಲ್ಲದೆ,ಮನವ ಕೊಟ್ಟವರ ನೋಡಲಿಲ್ಲ, ಮನವ ಕೊಟ್ಟವರ ನೋಡಿದೆನಲ್ಲದೆ, ಮನ ಲಿಂಗವಾದವರ ನೋಡಲಿಲ್ಲ, ಕಪಿಲಸಿದ್ಧಮಲ್ಲಯ್ಯಾ
--------------
ಸಿದ್ಧರಾಮೇಶ್ವರ
ಅಂದು ಅರಿಯಲಾದ ಆನಂದ ರೂಪಿನ ನಿಜವನು ತಂದೆನ್ನ ಕರಕ್ಷೇತ್ರದಲ್ಲಿ ಬಿತ್ತಿದ, ಸದ್ಗುರುಸ್ವಾಮಿ. ಕೊಂಬು ಬೇರಾಗಿ ಬೇರು ಕೊಂಬಾಗಿ ಫಲಂಗಳಾರಾದವು. ಆ ಫಲ ಗುರುವಿಂಗೊಂದು ಲಿಂಗಕ್ಕೊಂದು ಉಳಿದ ನಾಲ್ಕ ಜಂಗಮಕ್ಕಿತ್ತು ಹಿಂದು ಮುಂದುಗೆಟ್ಟ ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ
ಅಂಗವೇ ಲಿಂಗವಾಗಿಹೆನೆಂಬವನ ಭಾವ ಇದರಲ್ಲೇ ನಿಶ್ಚಯ ನೋಡಾ, ಮನವೆ. ಸ್ತುತಿ ನಿಂದೆಗಳಲ್ಲಿ ಹರ್ಷರೋಷಗಳಿಲ್ಲದಿರಬೇಕು. ನೀಚಾನೀಚ ಗುಣವ ನೋಡದೆ ನಮ್ಮ ಭಾಷಾವಂತನಾಗಬೇಕು. ಸರ್ವ ಜೀವಿಗಳ ತನ್ನಂತೆ ತಿಳಿದು ನೋಡಬೇಕು. ಸಂಶಯಾಸಂಶಯವಳಿದು ನಿಶ್ಚಿಂತನಾಗಬೇಕು. ಆಕಾಶದ ಬೆಳಗಿನ ಬೆಳಗ ನೋಡಿ ಬೆಳಗುಮಯನಾಗಬೇಕು ನೋಡಾ. ಎಲೆ ಮನವೆ, ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ.
--------------
ಸಿದ್ಧರಾಮೇಶ್ವರ
ಅಂಗೈಯ ನೋಟದೊಳು ಕಂಗಳು ನಟ್ಟು, ಕಂಗಳ ತೇಜ ಲಿಂಗದಲ್ಲರತು, ಲಿಂಗದ ಪ್ರಭೆಯೊಳಗೆ ಅಂಗವೆಲ್ಲ ಲೀಯವಾಗಿ, ಸಂಗನಿಸ್ಸಂಗವೆಂಬ ದಂದುಗ ಹರಿದು, ಹಿಂದು ಮುಂದೆಂಬ ಭಾವವಳಿದು ನಿಂದ, ನಿಜದ ನಿರಾಳದಲ್ಲಿ ಪ್ರಾಣ ಸಮರತಿಯಾಗಿಪ್ಪ ಕಪಿಲಸಿದ್ಧಮಲ್ಲಿನಾಥನಲ್ಲಿ, ಪ್ರಭುದೇವರ ಶ್ರೀಪಾದಕ್ಕೆ `ನಮೋ ನಮೋ' ಎಂದು ಬದುಕಿದೆ ಕಾಣಾ, ಚೆನ್ನಬಸವಣ್ಣಾ.
--------------
ಸಿದ್ಧರಾಮೇಶ್ವರ
ಅಂಗಲಿಂಗಸಂಬಂಧಿಯಾದ ಬಳಿಕ, ಗುರುವಿನನುಮತದಿಂದ ಸ್ವಾನುಭಾವಲಿಂಸಂಬಂಧಿಯಾದ ಬಳಿಕ, ಪ್ರಾಣನಿರ್ಪ ನೆಲೆಯನರಿ. ಆ ಲಿಂಗಮಜ್ಜನೋದಕದಿಂದ ನಿನ್ನ ಕಾಯಶುದ್ಧಿ; ಆ ಲಿಂಗಪ್ರಸಾದೋದಕ ನಿನ್ನ ಪರವಪದವು. ಇಂತು ಪಾದೋದಕತ್ರಯದಲ್ಲಿ ಸುಖಿಯಾಗಿ , ಕಪಿಲಸಿದ್ಧಮಲ್ಲಿಕಾರ್ಜುನನ ಕೂಡಿ ನಿತ್ಯನಾಗು ಸಂದೇಹವಿಲ್ಲದೆ.
--------------
ಸಿದ್ಧರಾಮೇಶ್ವರ
ಅಂತರಾತ್ಮ ಪರಮಾತ್ಮ ಭೂತಾತ್ಮವೊಳಗಾದ ಆಧ್ಯಾತ್ಮಿಕೇಳಾ: ನೀನು ಯೋಗದ ಪ್ರಮಾಣ ಬಲ್ಲ ಅಯ್ಯನು ಶ್ರೋತ್ರೇಯ ಮನೆಯಲ್ಲಿ, ನೇತ್ರೆಯ ಜಿಹ್ವೆಯಲ್ಲಿ ಆನಂದ ಪಾತ್ರೆಯಲ್ಲಿ ಸಂಗತಿ ಸದಾಚಾರ ನಿಷ್ಕಳ ಪರಮಸೀಮೆ ಎಂಬ ಪಾತ್ರೆಯಲ್ಲಿ ಪಂಚಬ್ರಹ್ಮವನೊಡಗೂಡಿದ ಪಂಚಸ್ತ್ರೀಯರಿಗೆ ಪ್ರಸಾದವನಿಕ್ಕುವಾಗ ಪ್ರಸನ್ನತೆಯೆಂಬ ಪ್ರಸಾದವನನುಗ್ರಹಿಸಲರಿಯದೆ ಇದ್ದ ಕಾರಣ ಅಂತರಿಸಿದೆಯಯ್ಯಾ ಆದ್ಯಂತಪ್ರಸಾದವ ಕೊಂಡ ಕಾರಣದಲ್ಲಿ ಆನು ನೀನಾದೆ; ಕಪಿಲಸಿದ್ಧಮಲ್ಲಿಕಾರ್ಜುನನ ಕೂಡಿ ಸಂದಳಿದೆ.
--------------
ಸಿದ್ಧರಾಮೇಶ್ವರ
ಅಂಗವಿಸನನ್ಯಕ್ಕೆ ಹಿಂಗಿಹ ಮಾಯಕ್ಕೆ ಸಂದ ಸುಖವೆ ಶಿವನ ಅಂಘ್ರಿಗಾಗಿ, ಮಂಗಳ ಉರುತರ ಬೆಳಗು ಪ್ರಕಾಶಿಸುವ ನಿಸ್ಸಂಗ ಗುರುವು ಚೆನ್ನಬಸವಣ್ಣನು ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ

ಇನ್ನಷ್ಟು ...