ಅಥವಾ
(214) (139) (48) (7) (13) (3) (0) (0) (105) (12) (12) (37) (5) (0) ಅಂ (44) ಅಃ (44) (163) (1) (60) (9) (0) (12) (0) (64) (0) (0) (0) (0) (0) (0) (0) (104) (0) (49) (10) (128) (74) (5) (68) (61) (158) (17) (10) (0) (47) (55) (61) (4) (129) (75) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಶ್ರೀಕರ ಬ್ರಹ್ಮಾದಿಗಳೇನು ಕಾರಣ ಯೋನಿ, ನಾನಾ ಭವಂಗಳಲಿ ಬಂದರಯ್ಯ. ಧ್ಯಾನ ಮೌನ ಸಮಾದ್ಥಿಕಾರಣದ ಸಮತೆಯನು ಭೇದಿಸಲು ಅರಿಯದೆ, ನಾನಾ ಭವಂಗಳ ಮಗ್ನವಾಗಿ, ಅನಾದಿ ಸಂಸಿದ್ಧ ಕಪಿಲಸಿದ್ಧಮಲ್ಲಿಕಾರ್ಜುನ ಆದಿಯಕ್ಷರ ಸಮತೆ ಸಮಗೂಡದು
--------------
ಸಿದ್ಧರಾಮೇಶ್ವರ
ಶುದ್ಧ ಪದ್ಮಾಸನದೊಳು ಕುಳ್ಳಿರ್ದು ಅರ್ಧೋದಯವನೆತ್ತುತೈದಾನೆ, ಹ್ದೊರ್ದ ಪ್ರಪಂಚುಗಳನೆಲ್ಲವ ಸುಟ್ಟು ಅರ್ಧೋದಯವನೆತ್ತುತ್ತೈದಾನೆ, ಅರ್ಧೋದಯಾಗ್ನಿ ಶುಚಿ ತನ್ನ ಪ್ರವೇಶಿಸಲು ಮುಗ್ಧತ್ವ ಹೋಯಿತ್ತು ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಶಿವಂಗೆ ಪಂಚಮುಖವೆಂಬುದ ಮೂಲೋಕವೆಲ್ಲ ಬಲ್ಲುದು; ನರಂಗೆ ಪಂಚಮುಖವೆಂಬುದ ಆರೂ ಅರಿಯರು. ಮುಂಭಾಗವದು ಸದ್ಯೋಜಾತ, ಬಲಭಾಗವದು ತತ್ಪುರುಷ, ಎಡಭಾಗವದು ಅಘೋರ, ಹಿಂಭಾಗವದು ವಾಮದೇವ, ಮಧ್ಯಭಾಗವದು ಕಪಿಲಸಿದ್ಧಮಲ್ಲಿಕಾರ್ಜುನನ ಈಶಾನ್ಯಮುಖ ನೋಡಾ, ಕಲ್ಲಯ್ಯಾ.
--------------
ಸಿದ್ಧರಾಮೇಶ್ವರ
ಶ್ವಾನನ ಗುಣ ನೋಡದು ನೋಡಾ ಮದಗಜವು. ಕಾನನದ ಗುಣ ನೋಡದು ನೋಡಾ ಮಹದಗ್ನಿಯು. ಕಾವಳದ ಗುಣ ನೋಡದು ನೋಡಾ ಮಹತ್ಪ್ರಕಾಶವು. ಜನನದ ಗುಣ ನೋಡದು ನೋಡಾ ಶಿವಾನುಭಾವಜ್ಞಾನವು. ಎನ್ನ ಗುಣ ನೋಡದು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನನ ಪೂಜಿಸಿದ ಫಲವು.
--------------
ಸಿದ್ಧರಾಮೇಶ್ವರ
ಶುದ್ಧಗುರು ಬಸವಣ್ಣ, ಸಿದ್ಧಗುರು ಚೆನ್ನಬಸವಣ್ಣ, ಪ್ರಸಿದ್ಧಗುರು ಪ್ರಭುರಾಯನು. ತನುತ್ರಯ ಮಲತ್ರಯ ಆರನತಿಗಳೆದು, ಲಿಂಗತ್ರಯ ಪ್ರಸಾದ ಮೂರನು ಪರಿಭವಿಸಿ ವಶಮಾಡಿ ಎನ್ನ ರಕ್ಷಿಸಿದ ಬಸವ, ಚೆನ್ನಬಸವ, ಪ್ರಭು ಶರಣೆಂದು ಬದುಕಿದೆನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಶಬ್ದ ನೋಡುವಡೆ ನಪುಂಸಕ; ಅದರ ಕಾರ್ಯ ನೋಡುವಡೆ, ಹರಿಹರ ಬ್ರಹ್ಮಾದಿಗಲನ್ನಲ್ಲ ಮುರಿದಿಕ್ಕಿತ್ತು. ಅದರಂತೆ ಹೋದಡೆ ತನ್ನ ಕಡೆ ಬರದು ನೋಡಾ, ಕಪಿಲಸಿದ್ಧಮಲ್ಲಯ್ಯಾ.
--------------
ಸಿದ್ಧರಾಮೇಶ್ವರ
ಶರಣನ ನೋಟ ಭವಕ್ಕೆ ಓಟ ನೋಡಯ್ಯಾ. ಶರಣನ ದೃಷ್ಟಿ ಶಿವದೃಷ್ಟಿ ನೋಡಯ್ಯಾ. ಶರಣನ ದೇಹ ಶಿವದೇಹ ನೋಡಯ್ಯಾ. ಶರಣನ ಪಾದುಕೆ ಎಮ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಚಮ್ಮಾವುಗೆ ನೋಡಾ, ಮಡಿವಾಳ ಮಾಚಣ್ಣಾ.
--------------
ಸಿದ್ಧರಾಮೇಶ್ವರ
ಶಿವಪೂಜೆಯನು ಮಾಡುವ ಕಾಲಕ್ಕೆ ಅವಿತಥವಿಲ್ಲದೆ ಬಯಸದೀ ಮನವು, ಇನ್ನೇವೆ ಇನ್ನೇವೆನಯ್ಯಾ. ಕಾಮಕಿಚ್ಛೆ ೈಸೂದು ಕ್ರೋಧಕಿಚ್ಛೆ ೈಸೂದು ಇನ್ನೇವೆ, ಇನ್ನೇವೆನಯ್ಯಾ. ನಿನ್ನ ಮನದಲು ಇರಲೀಯದು ತನ್ನ ಮಯವ ಮಾಡೂದು. ಈ ಮಾಯದ ಮನಕ್ಕಂಜುವೆ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಶಿಶು ಕಂಡ ಕನಸು ತಾ ಪಸರಿ ಪರ್ಬಿತು, ಮೂರು ದೆಸೆದೆಸೆಯ ಬಣ್ಣಗಳು ಹಲವಾಗಿ ಆ ಬೆಳಕನೆ ನುಂಗಿ, ಆಲಿಸುತ ಕಂಬನಿಯ ಲೋಲನ್ನ ಕಂಡು ತಾ ಮುಗ್ಧೆಯಿಂದೂ ಸಾನುವಿನ ಕೊಡನ ಹೊತ್ತಾನತದ ಲೋಕದೊಳು ತಾನು ತಾನಾಗಿ, ತತ್ತ್ವದ ತುಯ ಹಮ್ಮಡಗಿದಕ್ಷರದ ಸೊಮ್ಮ ಮೀರಿದ ಬ್ರಹ್ಮಕರ್ಮಿಗಳಿಗದು ತಾನು ವಶವಲ್ಲದೆ ಇನ್ನು ಕಪಿಲಸಿದ್ಧಮಲ್ಲಿನಾಥನೆಂದೆಂಬ ಸೊಮ್ಮಿನ ಬ್ರಹ್ಮಕ್ಕೆ ಸೇರಿತ್ತಯ್ಯ.
--------------
ಸಿದ್ಧರಾಮೇಶ್ವರ
ಶರಣ ಎಂಬ ಶಬ್ದವಂ್ಕಂತಲ್ಲ. [ನೋಣಃ] ಎಂಬ ಸೂತ್ರಂದ ಶರಣನೆನಿಸಿದನು. ಶರ ಎಂದರೆ ಬಾಣ, ನ ಎಂದಡೆ ಅಂಥ ಮನ್ಮಥಬಾಣವಿಲ್ಲದವ. [ಅವ್ವನೇ ಶರಣ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಶರಣನ ಸಂಭ್ರಮ ಂಗಪೂಜೆ, ಜಂಗಮದಾಸೋಹ ನೋಡಯ್ಯಾ. ಶರಣನ ಸಂಭ್ರಮ ಅನುಭವ ಓ ಭವ ಗೆಯುವುದು. ಅದೆ ಸಂಭ್ರಮಕಾರ್ಯ ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯಾ
--------------
ಸಿದ್ಧರಾಮೇಶ್ವರ
ಶಿವನಿರ್ಮಿತ ಮಂತ್ರಂಗಳು ಕೋಟಾನುಕೋಟಿ. ಶಿವನಿರ್ಮಿತ ಯಂತ್ರಂಗಳು ಕೋಟಾನುಕೋಟಿ. ಶಿವನಿರ್ಮಿತ ಮಹಾಮೂಲಿಕೆಗಳು ಕೋಟಾನುಕೋಟಿ. ಶಿವನಿರ್ಮಿತ ವಿದ್ಯಾದಿಗಳು ಕೋಟಾನುಕೋಟಿ. ಇದರಂದವನರಿಯಬೇಕೆಂಬವರು ಕೋಟಾನುಕೋಟಿ. ಸಿದ್ಧಿಯ ಹೊಂ ಪ್ರಸಿದ್ಧಿಗೆ ಬಂದವರು, ಕೋಟಾನುಕೋಟಿಯೊಳಗೆ ಕೋಟಿಯಿಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಲಿಂಗವೆ.
--------------
ಸಿದ್ಧರಾಮೇಶ್ವರ
ಶಾಸ್ತ್ರದ ರಂಜನೆ ಲೋಕಕ್ಕಲ್ಲದೆ ಲೋಕವಿರಹಿತಂಗೆಲ್ಲಿಹದೊ? ವೇದ ವೇದಾಂತದ ರಂಜನೆ ಮುಮುಕ್ಷುಗಳಿಗಲಗಲದೆ ಮೋಕ್ಷವಿರಹಿತಂಗೆಲ್ಲಿಯದೊ? ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಮಾಯಾಕೀಲವ ತಿಳಿವಡೆ, ತಿಳಿವವರಿಗಲ್ಲದೆ ನಿಶ್ಯೂನ್ಯರಿಗೆಲ್ಲಿಹದೊ?
--------------
ಸಿದ್ಧರಾಮೇಶ್ವರ
ಶುದ್ಧದಲ್ಲಿ ಪ್ರವೇಶಿಸಿ, ಸಿದ್ಧದಲ್ಲಿ ಪ್ರಕಟಿಸಿ, ಪ್ರಸಿದ್ಧದಲ್ಲಿ ಭೇದಿಸಿಯಿಪ್ಪ ಸಜ್ಜನ ಶುದ್ಧಶಿವಾಚಾರಂಗೆ ನಿತ್ಯ ಲಿಂಗಾರ್ಚನೆ, ನಿತ್ಯ ಜಂಗಮಾರ್ಚನೆ, ನಿತ್ಯ ಕೊಂಬುದು ಪಾದೋದಕ, ನಿತ್ಯ ಕೊಂಬುದು ಪ್ರಸಾದ. ತಾಂ ನಿತ್ಯನಾಗಿ ಅನ್ಯದೈವಕ್ಕೆರಗ, ಅನನ್ಯತವ ಬಗೆಯ, ಪಾದೋದಕಕ್ಕಲ್ಲದೆ ಬಾಯ್ದೆರೆಯ, ಪ್ರಸಾದವನಲ್ಲದೆ ಗ್ರಹಿಸ, ಪಾದೋದಕ ಪ್ರಸಾದವಲ್ಲದೆ ಕೊಂಡಡೆ ಅನಾಚಾರ ಹೊದ್ದೀತೆಂದು ಕಪಿಲಸಿದ್ಧಮಲ್ಲಿಕಾರ್ಜುನನ ಏಕೀಭವಿಸಿದ ಲಿಂಗತ್ರಯದಲ್ಲಿ ನಿತ್ಯ ಪ್ರಸಾದಿ
--------------
ಸಿದ್ಧರಾಮೇಶ್ವರ
ಶುದ್ಧಸಂಗಮದಲ್ಲಿ ಸಂಯೋಗವಾದಳವ್ವೆ, ಸಿದ್ಧ ಗುರುವಿನಲ್ಲಿ ನಿತ್ಯಳಾದಳವ್ವೆ, ಪ್ರಸಿದ್ಧ ಜಂಗಮದಲ್ಲಿ ಪ್ರಾಣಸಂಯೋಗವಾದಳೆವ್ವೆ. ಶುದ್ಧಸಿದ್ಧಪ್ರಸಿದ್ಧವ ಕೂಡಿದ ಪ್ರಕಟಿತ ಸಂಯೋಗದಲ್ಲಿ ಸಮನಿಸಿದಳವ್ವೆ. ಆಧಾರಮೂಲಪಂಚಿಕ ತೊಡಗಿ ಬಹುವಿಧ ನಾಳಂಗಳಿಗೆ ಸಹಸ್ರ ಮುಚ್ಚಳಂ ಮುಚ್ಚಿದಳವ್ವೆ. ಅಜ್ಞಾನವೆಂಬ ಬಿದ್ದಿನ ಬಂದಡೆ ಇಕ್ಕಲಿಲ್ಲದಚ್ಚಿಗಂಬಟ್ಟು ಉದಾಸೀನಂ ಮಾಡಿದವಳವ್ವೆ. ಸುಜ್ಞಾನವೆಂಬ ಆತಂಗೆ ನಿರ್ಮಳದಲೊಮ್ಮನವನಟ್ಟು, ಕಪಿಲಸಿದ್ಧಮಲ್ಲಿಕಾರ್ಜುನಯ್ಯನೆಂಬ ನಿತ್ಯರ್ಪಿತವಂ ಮಾಡಿ, ಪ್ರಸಾದವ ಸ್ವೀಕಾರವಂ ಮಾಡಿ ನಿತ್ಯಮುಕ್ತಳಾದಳವ್ವೆ.
--------------
ಸಿದ್ಧರಾಮೇಶ್ವರ
ಶುದ್ಧ ಸಂಯೋಗದಲ್ಲಿ ನಿನ್ನ[ನೆ] ನೆರೆವೆ; ಸಿದ್ಧ ಸಂಯೋಗದಲ್ಲಿ ನಿನ್ನನೆ ಸಂಯೋಗಿಸುವೆ; ಪ್ರಸಿದ್ಧ ಸಂಯೋಗದಲ್ಲಿ ನಿನ್ನನೆ ಕೂಡುವೆ; ತಾತ್ಪರ್ಯದಿಂದ ನಿನ್ನ ನೆರೆವೆ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಶುದ್ಧಲಿಂಗವನು ಪ್ರಸಿದ್ಧ ಕರದಲಿ ಇಟ್ಟು ಶುದ್ಧ ಸಿದ್ಧ ಪ್ರಸಿದ್ಧ ಪಾವನಾಂಗನ ಮಾಡಿ ಹೊದ್ದಿದ ಪ್ರಪಂಚುವ ಕಳೆದು ನಿತ್ಯನೆನಿಸಿ ಸದ್ಯೋನ್ಮುಕ್ತನ ಮಾಡಿ ಕೈವಲ್ಯಪದವಿದೆಂದು ಆನಂದವ ಕರದಲ್ಲಿಟ್ಟು ಅರುಪಿದನಿದ ವಿಸ್ತಾರವೆಂದು ಎನ್ನ ಜನ್ಮ ಕರ್ಮ ನಿರ್ವರ್ತನೆಯ ಮಾಡಿದ ಗುರು ಚೆನ್ನಬಸವಣ್ಣನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಶಿವಾಂಶಿಕಭಕ್ತನ ಸೊಮ್ಮು ಶಿವಜಂಗಮರಿಗೆ ಸಲ್ಲುವುದಲ್ಲದೆ, ಶಿವ ಬಸವೆಯರೆಂಬ ವಾರಾಂಗನೆಯರಿಗೆ ಸಲ್ಲುವುದೆ, ಅಯ್ಯಾ? ಡಾಂಭಿಕ ಭಕ್ತನ ಸೊಮ್ಮು ಡಾಂಭಿಕಯ್ಯಗಳಿಗೆ ಸಲ್ಲುವುದಲ್ಲದೆ. ಡಂಭವಿರಹಿತಂಗೆ ಸಲ್ಲುವುದೆ, ಅಯ್ಯಾ? ಎಮ್ಮ ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಷಟ್‍ಸ್ಥಲಬ್ರಹ್ಮಿ ಚೆನ್ನಬಸವನ ಜಿಹ್ವಾಶೇಷದ ಸೊಮ್ಮು ಎನಗೆ ಸಲ್ಲುವುದಲ್ಲದೆ, ಜಗದ ಭಂಡಯ್ಯಗಳಿಗೆ ಸಲ್ಲುವುದೇನಯ್ಯಾ?
--------------
ಸಿದ್ಧರಾಮೇಶ್ವರ
ಶಿವನೆ, ನಿಮ್ಮನಲ್ಲದೆ ಮತ್ತೊಂದ ನಾನರಿಯೆನಯ್ಯಾ. ಶಿವನೆ, ನಿಮ್ಮ ಸೇವೆಯನಲ್ಲದೆ, ಮತ್ತೊಂದಕ್ಕೆ ಮನ ಹಾರೈಸದಂತೆ ಮಾಡಯ್ಯಾ, ಕಪಿಲಸಿದ್ಧಮ್ಲನಾಥಯ್ಯಾ.
--------------
ಸಿದ್ಧರಾಮೇಶ್ವರ
ಶಿಷ್ಯನಿಲ್ಲದಡೆ ಗುರು ಎಲ್ಲಿಹನಯ್ಯಾ? ಪೂಜಕನಿಲ್ಲದಡೆ ಲಿಂಗವೆಲ್ಲಹುದಯ್ಯಾ? ಭಕ್ತನಿಲ್ಲದಡೆ ಜಂಗಮವ್ಲೆಹನಯ್ಯಾ? ಜಲವಿಲ್ಲದಡೆ ಪಾದೋದಕವೆಲ್ಲಹುದಯ್ಯಾ? ಧೇನುವಿಲ್ಲದಡೆ ಭೂತಿಯೆಹುದಯ್ಯಾ? ತ್ರೈಪುರವಿಲ್ಲದಡೆ ರುದ್ರಾಕ್ಷಿಗಳೆಲ್ಲಿಹವಯ್ಯಾ? ವರ್ಣಂಗಳಿಲ್ಲದಡೆ ಮಂತ್ರಂಗಳೆಲ್ಲಿಹವಯ್ಯಾ? ನಾನಿಲ್ಲದಡೆ ನೀನೆಲ್ಲಿಯವನಯ್ಯಾ? ಇವೆಲ್ಲ ಭಾವಭ್ರಮೆಯಲ್ಲದೆ, ನಿರ್ಭಾವ ನಿಜಾನಂದ ತೂರ್ಯಾತೀತ ಪರವಸ್ತುವಿನ ಕೂಟದಲ್ಲಿ ಆನು ನೀನೆಂಬುಭಯ ಭಾವ ಇದ್ದಡೆ ತೋರ ಬಾರಾ, ಮಾರಹರ ಧೀರ ಗಂಭೀರ ಕಪಿಲಸಿದ್ಧಮಲ್ಲಿಕಾರ್ಜುನವೀರ.
--------------
ಸಿದ್ಧರಾಮೇಶ್ವರ
ಶೇಷವ ಫಣಿಯಲ್ಲಾಡುವುದು ಲೇಸು ಕಂಡಯ್ಯಾ, ಮೃತ್ಯುವಿನ ಬಾಯೊಳಗಿರುವುದು ಬಹು ಲೇಸು ಕಂಡಯ್ಯಾ. ನಮ್ಮ ಕಪಿಲಸಿದ್ಧಮಲ್ಲಿನಾಥನ ನಡೆದ ದಾರಿಯಲ್ಲಿ ನಡೆವುದು ಲೇಸು ಕಂಡಯ್ಯಾ.
--------------
ಸಿದ್ಧರಾಮೇಶ್ವರ
ಶಾಸ್ತ್ರವ ಹೇಳುವವರೊಂದು ಕೋಟಿ, ವೇದ ವೇದಾಂತವ ಹೇಳುವವರೊಂದು ಕೋಟಿ. ನ್ಯಾಯಾನ್ಯಾಯವ ಹೇಳುವವರೊಂದು ಕೋಟಿ. ಕಪಿಲಸಿದ್ಧಮಲ್ಲಿಕಾರ್ಜುನನ ಮಾಯಾಕೀಲವ ಹೇಳುವವರೊಬ್ಬರೂ ಇಲ್ಲ ಎಲ್ಲಾದರೂ.
--------------
ಸಿದ್ಧರಾಮೇಶ್ವರ
ಶುದ್ಧವೆ ತದ್ರೂಪವಾಗಿ ಬಾರನೆ ಅಂದು ಅನಾಹತನೆಂಬ ಗಣೇಶ್ವರನು ಬಂದೆನ್ನ ಜರಿಯನೆ? ಜರಿದರೆ ನೀನು ಕೊಟ್ಟ ತಲೆಯ ಹುಣ್ಣ ಕಣ್ಣೆಂದು ತೆರೆದು ಲಜ್ಜೆಗೆಡನೆ ಆನಾ ಗಣೇಶ್ವರನ ಕೈಯಲ್ಲಿ? ಶುದ್ಧಕಾತನೊಡೆಯ, ಸಿದ್ಧಕಾತನೊಡೆಯ, ಪ್ರಸಿದ್ಧಕಾತನೊಡೆಯ! ಒಪ್ಪಿಪ್ಪಾರು ಆತನ ಸೀಮೆ. ಮೂವತ್ತಾರರ ಮೇಲಿಂದಾತನ ಸಂಯೋಗ. ಇಂತಪ್ಪಾತನ ನೀನೆನ್ನಲರಿಯದೆ ನೊಂದೆ ಕೆಲವು ದಿನ. ಈ ನೋವ ಮಾಣಿಸಿದಾತನೂ ಆತನೆ, ಎನ್ನ ಭವವ ತಪ್ಪಿಸಿದಾತನೂ ಆತನೆ, ಆತನಿಂದ ಉರುತರ ಕೈವಲ್ಯಕ್ಕೆ ಕಾರಣಿಕನಾದೆ! ಆತನ ಪ್ರಸಾದದಿಂದ ನಿನ್ನವರ ಪಾದೋದಕ ಪ್ರಸಾದಕ್ಕೆ ಯೋಗ್ಯನಾದೆ. ಫಲಪದಕ್ಕೆ ದೂರವಾದೆ ಕಪಿಲಸಿದ್ಧಮಲ್ಲಿಕಾರ್ಜುನ, ಬಸವಣ್ಣನಿಂದ!
--------------
ಸಿದ್ಧರಾಮೇಶ್ವರ
ಶುದ್ಧ ತತ್ವದೊಳಗೆ ಸಿದ್ಧ ಬ್ರಹ್ಮದೊಳಗೆ ಪ್ರಸಿದ್ಧವೂ ತನುಮನ ತವಕದಲ್ಲಿ. ಶುದ್ಧ ಸಿದ್ಧ ಭೇದ ಪ್ರಸಿದ್ಧದನುಮತವು ನಿರ್ದೈವರಿಗುಂಟೆ? ಕಪಿಲಸಿದ್ಧಮಲ್ಲೇಶ್ವರಾ.
--------------
ಸಿದ್ಧರಾಮೇಶ್ವರ

ಇನ್ನಷ್ಟು ...