ಅಥವಾ
(153) (60) (11) (2) (21) (3) (0) (0) (26) (3) (2) (13) (5) (0) ಅಂ (54) ಅಃ (54) (91) (2) (73) (4) (0) (4) (0) (33) (0) (0) (0) (0) (0) (0) (0) (55) (0) (17) (4) (48) (61) (1) (30) (49) (62) (6) (20) (0) (58) (24) (65) (2) (69) (42) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಏಕಭಾಜನ ಏಕಭಾಜನವೆಂದೆಂಬರು; ನಾವಿದನರಿಯೆವಯ್ಯಾ. ಅಂಗದ ಮೇಲೆ ಪ್ರಾಣಲಿಂಗಪ್ರತಿಷೆ*ಯಾದ ಬಳಿಕ, ಲಿಂಗಕ್ಕೆಯೂ ತನಗೆಯೂ ಏಕಭಾಜನವಲ್ಲದೆ ಭಿನ್ನಭಾಜನವುಂಟೆ ? ಲಿಂಗಕ್ಕೆಯೂ ತನಗೆಯೂ ಏಕಭಾಜನವಾಗದನ್ನಕ್ಕರ ಅಂಗದ ಕಳೆಯಲ್ಲಿ ಲಿಂಗವ ಧರಿಸಿಕೊಳಬಹುದೆ ? ಇದನರಿದು ಏಕಭಾಜನವಾಗದಿರ್ದಡೆ ಅಂತು ದೋಷ. ಅರಿಯದೆ ಏಕಭಾಜನವಾದಡೆ ಇಂತು ದೋಷ. ಈ ಕುಳಸ್ಥಳದ ಭೇದವ ಭೇದಿಸಬಲ್ಲ ಕೂಡಲಚೆನ್ನಸಂಗಾ, ನಿಮ್ಮ ಶರಣ.
--------------
ಚನ್ನಬಸವಣ್ಣ
ಏನೆಂಬೆನೇನೆಂಬೆ ಆಶ್ರಯವಿರಹಿತವ, ಏನೆಂಬೆನೇನೆಂಬೆ ನಾಮ ನಿರ್ನಾಮವ, ಏನೆಂಬೆನೇನೆಂಬೆ ಸಾರಾಯ ಸನುಮತವಲ್ಲದುದ, ಏನೆಂಬೆನೇನೆಂಬೆ ದೇವಾ ಕ್ರೀಯ ಮೀರಿದ ಸಂಬಂಧವ, ಕೂಡಲಚೆನ್ನಸಂಗಮದೇವಾ. ಆನೆಂಬುದಿಲ್ಲದುದನೇನೆಂದುಪಮಿಸುವೆ.
--------------
ಚನ್ನಬಸವಣ್ಣ
ಏಕೋವರ್ಣ ಷಡುವರ್ಣವೆಂಬೆನೆ ಪ್ರಭುವೆ? ಎನ್ನ ದೃಷ್ಟಿ ಕಾಣದು. ಅಂಗವನೂ ಲಿಂಗವನೂ ಸಂಗವ ಮಾಡಿ ತೋರಿದರೆ ಕೂಡಲಚೆನ್ನಸಂಗಯ್ಯಾ ನೀನೆಂಬೆನು.
--------------
ಚನ್ನಬಸವಣ್ಣ