ಅಥವಾ
(6) (13) (1) (2) (0) (0) (0) (0) (0) (0) (0) (3) (0) (0) ಅಂ (1) ಅಃ (1) (1) (0) (2) (1) (0) (2) (0) (1) (0) (0) (0) (0) (0) (0) (0) (6) (0) (1) (0) (4) (5) (0) (5) (2) (3) (0) (2) (0) (0) (0) (3) (0) (7) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಎಂಬ ಈ ನಿರ್ಣಯ ಹೇಳಿದ ವಿಚಾರಕ್ಕೆ ಇನ್ನೊಂದು ಸಂಜ್ಞೆ ಅಲ್ಲವೆ, ಇದು ಅಪೂರ್ವವೇ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ ?
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಭೂಮಿ ಜಲ ಅಗ್ನಿ ಗಾಳಿ ಆಕಾಶ ಇವು ಮೊದಲಾದ ಪಂಚಕದಿಂದುದಿಸಿದುದೆ ಬ್ರಹ್ಮಾಂಡವೆನಿಸಿತ್ತು. ಅದರ ಸೂತ್ರವಿಡಿದು ಬಂದದ್ದೇ ಪಿಂಡಾಂಡವೆನಿಸಿತ್ತು. ರವಿ ಚಂದ್ರ ಆತ್ಮದಿ ಅಂಗವೆನಿಸಿತ್ತು. ಪಿಂಡಾಂಡದಿ ತೋರುವ ಕಾಯವೇ ಗುರುವಾಗಿ, ಪ್ರಾಣವೆ ಲಿಂಗವಾಗಿ, ಜ್ಞಾನವೆ ಜಂಗಮವಾಗಿ, ಮುಂದೆ ಕಾಯದೊಳು ಕಾಂಬ ಅರುವಿನ ಬೆಳಗೆ ವಿಭೂತಿ, ಅರುವಿನ ಕರಣವೇ ಪಾದೋದಕ, ಅರುವಿನ ಆನಂದವೇ ಪ್ರಸಾದ, ಅರುವಿನ ಕೃಪೆಯೇ ರುದ್ರಾಕ್ಷಿ, ಅರುವು ತಾನೇ ಆಗು ಮೆರೆದುದೇ ಮಂತ್ರ ಇಂತು ಪಿಂಡಾಂಡಪಂಚಕ ಅಷ್ಟತನು ಒಳಗೊಂಡು ಕಾಂಬುದೊಂದೀಪರಿಯ ಅಷ್ಟಾವರಣವಾದ ಶ್ರೇಷ*ಗುರುವೆ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ