ಅಥವಾ
(2) (0) (3) (0) (0) (0) (0) (0) (2) (0) (0) (1) (0) (0) ಅಂ (1) ಅಃ (1) (4) (0) (14) (0) (0) (1) (0) (3) (0) (0) (0) (0) (0) (0) (0) (1) (0) (0) (0) (3) (1) (0) (1) (1) (0) (0) (1) (0) (2) (0) (2) (0) (3) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಇಷ್ಟಲಿಂಗ ಗುರುವಿನ ಹಂಗು, ಚಿತ್ತ ಕಾಮನ ಹಂಗು, ಪೂಜೆ-ಪುಣ್ಯ ಮಹಾದೇವನ ಹಂಗು; ಎನ್ನ ದಾಸೋಹ ಆರ ಹಂಗೂ ಇಲ್ಲ. ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗವೆ, ಕಣ್ಣಿಯ ಮಾಡಬಲ್ಲಡೆ ಬಾ, ಎನ್ನ ತಂದೆ.
--------------
ನುಲಿಯ ಚಂದಯ್ಯ
ಇಷ್ಟವೆಂಬುದು ಗುರುವಿನ ಹಂಗು ಆ ಗುರುವಿಂಗೆಯು, ಇಷ್ಟಲಿಂಗಕ್ಕೆಯು, ಜಂಗಮವೆ ಪ್ರಾಣಾಪದವೆಂದರಿದ ಬಳಿಕ ಆ ಗುರುವೂ ಇಷ್ಟವೂ ಜಂಗಮದಲ್ಲಿಯೇ ಅಡಕ ನೋಡಾ! ಆ ಗುರುವೂ ಲಿಂಗವೂ ಜಂಗಮದ ಹಂಗಿಗರು! ಇದು ಕಾರಣ ಚಂದೇಶ್ವರಲಿಂಗಕ್ಕೆ ಕಣ್ಣಿಯ ಮಾಡಬಲ್ಲಡೆ ಬಾರಾ ಎನ್ನ ತಂದೆ.
--------------
ನುಲಿಯ ಚಂದಯ್ಯ
ಇದಿರ ಭೂತಹಿತಕ್ಕಾಗಿ ಗುರುಭಕ್ತಿಯ ಮಾಡಲಿಲ್ಲ. ಅರ್ತಿಗಾರಿಕೆಗಾಗಿ ಲಿಂಗವ ಬಿಟ್ಟು ಪೂಜಿಸಲಿಲ್ಲ. ರಾಜ ಚೋರರ ಭಯಕ್ಕಂಜಿ ಜಂಗಮ ದಾಸೋಹವಮಾಡಲಿಲ್ಲ. ಆವ ಕೃಪೆಯಾದಡೂ ಭಾವ ಶುದ್ಧವಾಗಿರಬೇಕು, ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗವನರಿಯ ಬಲ್ಲಡೆ.
--------------
ನುಲಿಯ ಚಂದಯ್ಯ