ಅಥವಾ
(16) (7) (5) (0) (3) (0) (0) (0) (2) (0) (0) (0) (1) (0) ಅಂ (5) ಅಃ (5) (13) (1) (1) (0) (0) (0) (0) (3) (0) (0) (0) (0) (0) (0) (0) (3) (0) (0) (2) (8) (4) (0) (10) (0) (3) (1) (2) (0) (2) (7) (2) (1) (5) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಧರೆಯ ಮೇಲೆ ನಿಂದು ಹೊಡೆವಡಿಸಿಕೊಂಬ ದೈವದ ಕುರುಹು ಎಲ್ಲಿ ಇದ್ದಿತ್ತು ಹೇಳಿರಣ್ಣಾ ? ಶರೀರದ ಮೇಲೆ ಕಟ್ಟಿ, ಕರ ಚರಣಾದಿ ಅವಯವಂಗಳು ಮುಂತಾದ ಹಲವು ಪರಿಭ್ರಮಣದಿಂದ ಪೂಜಿಸಿಕೊಂಬುದು, ಅದಾವ ಲಿಂಗವಣ್ಣಾ ? ಸರ್ವರೆಲ್ಲರ ಕೈಯಲ್ಲಿ, ಇದು ವಸ್ತು ಅಲ್ಲ, ಅಹುದೆಂದು ಗೆಲ್ಲ ಸೋಲಕ್ಕೆ ಹೋರುವುದು, ಅದಾವ ವಸ್ತುವಿನ ಕುರುಹಣ್ಣಾ ? ಇಂತೀ ಸ್ಥಾವರ ಚರ ಅರಿವಿನ ಕುರುಹೆಂಬುದೊಂದು ಸೆರಗ ತೋರಾ ? ಅದು ನುಡಿವಡೆ ಸಮಯಕ್ಕೆ ದೂರ. ಅದು ಮುನ್ನವೆ ಅರಿದರಿವ ಈಗ ಕುರುಹಿಡುವಲ್ಲಿ, ಅದು ಪರಿಭ್ರಮಣ ಭ್ರಾಂತಿ. ಇಂತೀ ಕರ್ಮಕಾಂಡ, ಇಂತಿವನರಿದು ಬೆರೆದೆನೆಂಬ ಜ್ಞಾನಕಾಂಡ. ಸುಮುದ್ರಿತವಾಗಿ, ಆ ಸುಮುದ್ರೆಯಲ್ಲಿ ಸೂತಕ ನಿಂದು, ಅದೇತಕ್ಕೂ ಒಡಲಿಲ್ಲದಿಪ್ಪುದು, ಕಾಮಧೂಮ ಧೂಳೇಶ್ವರ ತಾನು ತಾನೆ.
--------------
ಮಾದಾರ ಧೂಳಯ್ಯ
ಧೀರೆಯಾದ ಮಾಸ್ತಿಗೆ ವೀರತ್ವವಲ್ಲದೆ, ಧಾರುಣಿಯ ಜನರೆಲ್ಲರೂ ಹೇಡಿ ಮಾಸ್ತಿ ಎಂದ ಬಳಿಕ, ವೀರತ್ವ ಎಲ್ಲಿಯದೋ ? ಧೀರೆಯಾದ ಮಾಸ್ತಿಯ ವೀರರಾಗಿದ್ದವರು ಮುಡಿಯಲರ, ಹಿಡಿದ ನಿಂಬೆಯ ಹಣ್ಣ ಬೇಡಿದಂತೆ ಕೊಡುವಳು. ದೃಢವುಳ್ಳ ವೀರರು ತರುವರು, ದೃಷ್ಟವ ನೋಡಿರಣ್ಣಾ. ಕೊಡುವಾಕೆ ದಹನವಾದಳು, ಕೊಂಬಾತ ರೂಪಾದ. ಈತ ಬೇಡಿದ ಇಷ್ಟವ ಕೊಟ್ಟಾ ತನು ಯಾತವೋ, ಆತ್ಮನೋ ? ಬಲ್ಲಡೆ ನೀವು ಹೇಳಿರಣ್ಣಾ. ನಿಮ್ಮ ಜ್ಞಾನದ ಮುಸುಕ ತೆರೆದು. ನಿಮ್ಮ ಬಲ್ಲಂತಿಕೆಯ ಕಾಣಬಹುದು. ಕಾಮಧೂಮ ಧೂಳೇಶ್ವರಲಿಂಗವನರಿವುದಕ್ಕೆ ಇದೇ ದೃಷ್ಟ.
--------------
ಮಾದಾರ ಧೂಳಯ್ಯ