ಅಥವಾ
(16) (7) (5) (0) (3) (0) (0) (0) (2) (0) (0) (0) (1) (0) ಅಂ (5) ಅಃ (5) (13) (1) (1) (0) (0) (0) (0) (3) (0) (0) (0) (0) (0) (0) (0) (3) (0) (0) (2) (8) (4) (0) (10) (0) (3) (1) (2) (0) (2) (7) (2) (1) (5) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ವಾರಿ ತೆಂಗಿನ ಮರದಲ್ಲಿ ಏರಿತ್ತೊ ? ಅಲ್ಲಾ, ಬೇರೊಂದು ಮಂತ್ರದಲ್ಲಿ ತುಂಬಿತ್ತೊ ? ಅಲ್ಲಾ ವೃಕ್ಷದ ಸಹಜ ಬೀಜವೊ ? ನೀರು ಬಲಿದು ಅದರೊಳಗೆ ಅರತು, ಆ ಸಾರವೆ ಕಾಯಾದಲ್ಲಿ, ಆ ಕಾಯ ತುಷಾರ ಹಿಂಗಿ, ನೆರೆ ಬಲಿತು, ಹಣ್ಣು ಎಣೆಯಾದಲ್ಲಿ, ನೀರೆಲ್ಲಿ ಅಡಗಿತ್ತು? ಹಿಪ್ಪೆ, ಕವಚವೆಲ್ಲಿದ್ದಿತ್ತು ? ಇಂತೀ ಕಾಯ ಆತ್ಮ ಮೇಲೆಂದರಿವೆಂಬ ಕುರುಹೆಲ್ಲಿದ್ದಿತ್ತು ?, ಎಂಬುದನರಿವುದಕ್ಕೆ ಪುರಾಣವ ಪೋಷಿಸಿಕೊಳ್ಳಿ, ಶಾಸ್ತ್ರವ ಸಂದಣಿಸಿಕೊಳ್ಳಿ, ವೇದದ ಆದ್ಯಂತವ ಸಾದ್ಥಿಸಿಕೊಳ್ಳಿ, ಶ್ರುತದಲ್ಲಿ ಕೇಳಿ ದೃಷ್ಟದಲ್ಲಿ ಕಂಡುಕೊಳ್ಳಿ, ಇಂತೀ ಚಿದಾತ್ಮನು ಬಂಧಮೋಕ್ಷಕರ್ಮಂಗಳಲ್ಲಿ ದ್ವಂದಿತನೋ ? ಆ ಅಂಗಭಾವ ವಿರಹಿತನೋ ? ಈ ಉಭಯದ ಸಂದೇಹವುಳ್ಳನ್ನಕ್ಕ ಕರ್ಮವ ಮಾಡುವಂಗೆ, ನಿರ್ಮಲವೊಂದುಂಟೆಂದು ಅರಿವಂಗೆ, ಇಂತೀ ಭೇದಂಗಳನರಿತು, ನಿರವಯದ ಸಮ್ಮಾನದ ಸುಖಿಯಾದೆನೆಂಬವಂಗೆ, ಅದು ಬ್ಥಿನ್ನರೂಪೋ, ಅಬ್ಥಿನ್ನರೂಪೋ ? ಆ ನಿಜದ ನೆಲೆಯ ನೀವೇ ಬಲ್ಲಿರಿ. ಕಾಮಧೂಮ ಧೂಳೇಶ್ವರನಲ್ಲಿ ಕಾಳಿಕೆ ಹಿಂಗಿದ ಕಣ್ಣಿನವಂಗಲ್ಲದೆ ಕಾಣಬಾರದು.
--------------
ಮಾದಾರ ಧೂಳಯ್ಯ
ವೇದಕ್ಕೆ ಉತ್ತರದವನಲ್ಲ, ಶಾಸ್ತ್ರಕ್ಕೆ ಸಂತೆಯವನಲ್ಲ. ಪುಣ್ಯಕ್ಕೆ ಪುಣ್ಯವಂತನಲ್ಲ, ವಚನದ ರಚನೆಗೆ ನಿಲ್ಲ. ವಾಙ್ಮನ ಅಗೋಚರಕ್ಕೆ ಸಲ್ಲ, ಪ್ರಮಾಣು ಅಪ್ರಮಾಣುವೆಂಬುದಕ್ಕೆ ನಿಲ್ಲ. ಇಂತೀ ಭೇದ ಅಭೇದ್ಯಂಗಳಲ್ಲಿ ವೇದ್ಯವಿಲ್ಲ, ಕಾಮಧೂಮ ಧೂಳೇಶ್ವರನು.
--------------
ಮಾದಾರ ಧೂಳಯ್ಯ
ವಿದ್ಯೆ ಅವಿದ್ಯೆಯಾದಲ್ಲಿ, ಆ ಅರಿವ ಹೊದ್ದುವ ಬಂಧವಾವುದು ? ಕ್ಷುದ್ರ ಇಂದ್ರಿಯಂಗಳೆಂಬ ಸಂದುಸಂಶಯವಾವುದು ? ಅದು ಒಡೆದ ಕುಂಭದ ನೀರಿನ ನೆಳಲಿನಂತೆ, ಅದು ಕುಂಭವ ಹಿಂಗಲಿಕೆ, ಆ ಬಿಂಬ ಅಲ್ಲಿಯೆ ಅಡಗಿತ್ತು, ಮತ್ತೆ ಕುಂಭವ ನೋಡಲಿಕ್ಕೆ ಒಂದೂ ಇಲ್ಲ. ಆ ಅಂಗ ಲಕ್ಷದ ಕುಂಭದಲ್ಲಿ, ಇಂಗಿಹೋದ ಆತ್ಮಂಗೆ ಬಂಧಮೋಕ್ಷಕರ್ಮಂಗಳು, ಒಂದೂ ಇಲ್ಲ, ಕಾಮಧೂಮ ಧೂಳೇಶ್ವರನೆಂಬ ಭಾವಸಂದೇಹ ನಂದಿತ್ತಾಗಿ.
--------------
ಮಾದಾರ ಧೂಳಯ್ಯ
ವ್ಯೋಮದಲ್ಲಿ ತೋರುವ ತೋರಿಕೆ, ಸಾಮವ ಮುಟ್ಟಿ ಬೆರಸಬಲ್ಲುದೆ ? ಸಾಗರ ಸಂಬಂಧಕ್ಕೆ ಕಟ್ಟು ಒಡೆವುದೆ ? ಮಹದಲ್ಲಿ ಬೆರಸಿದ ಮಹಾಯೋಗಿ, ಸಂಸಾರಸಾಗರದ ಸಂಬಂಧಕ್ಕೆ ಒಳಗಪ್ಪನೆ ? ಇಂತೀ ಸೂತಕವಳಿದ ಅಜಾತಂಗೆ ಏತರಲ್ಲಿ ನಿಂದು ನೋಡಿದಡೂ ನಿರ್ಜಾತ ಶೂನ್ಯ ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ವೇದನೆಯಿಂದ ವಸ್ತುವ ವೇದಿಸಿ ಕಾಣಬೇಕೆಂಬುದು ಅದೇನು ಹೇಳಾ. ಸರ್ವೇಂದ್ರಿಯಂಗಳ ಸಂಚವ ಬಿಟ್ಟು, ಏಕೇಂದ್ರಿಯದಲ್ಲಿ ವಸ್ತುವ ಆಚರಿಸಬೇಕೆಂಬುದು ಅದೇನು ಹೇಳಾ. ಅಲ್ಲ ಅಹುದು, ಉಂಟು ಇಲ್ಲ ಎಂಬುದು ಗೆಲ್ಲ ಸೋಲಕ್ಕೆ ಹೋರುವುದು ಅದೇನು ಹೇಳಾ. ಅದು ಪಂಚಲೋಹದ ಸಂಚದಂತೆ ಹಿಂಚು ಮುಂಚಿನ ಭೇದ. ಅರಿದೆ ಮರೆದೆನೆಂಬುದು ಪರಿಭ್ರಮಣದ ಭೇದ. ಅರಿಯಲಿಲ್ಲ ಮರೆಯಲಿಲ್ಲ ಎಂಬುದು ಅದು ಪರತತ್ವದ ಭೇದ. ಇಂತೀ ಗುಣ ಭಾವಂಗಳ ಲಕ್ಷಿಸಿ, ದೃಷ್ಟಿ ಉಂಟೆಂದಲ್ಲಿ ಆತ್ಮ, ದೃಷ್ಟ ನಷ್ಟವಾಯಿತ್ತೆಂಬಲ್ಲಿಯೆ ಪರಮ. ಉಭಯದ ತೊಟ್ಟು ಬಿಟ್ಟಲ್ಲಿ, ನಿಜ ನಿಶ್ಚಯ ಅದೆಂತು ತಾನಂತೆ, ಕಾಮಧೂಮ ಧೂಳೇಶ್ವರನು.
--------------
ಮಾದಾರ ಧೂಳಯ್ಯ
ವಾದ್ಯಕ್ಕೆ ಬಂಧವಲ್ಲದೆ, ನಾದಕ್ಕೆ ಬಂಧವುಂಟೆ ? ಅರಿವಿಂಗೆ ಬಂಧವಲ್ಲದೆ, ಅರುಹಿಸಿಕೊಂಬವಂಗುಂಟೆ ಬಂಧ ? ಅರಿದೆಹೆನೆಂಬ ಭ್ರಮೆ, ಅರುಹಿಸಿಕೊಂಡೆಹೆನೆಂಬ ಕುರುಹು, ಉಭಯನಾಸ್ತಿಯಾಗಿಯಲ್ಲದೆ ಭಾವಶುದ್ಧವಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ವಿದ್ಯುಲ್ಲತೆಯಂತೆ, ಆಕಾಶದ ಗರ್ಜನೆಯಂತೆ, ಬೊಬ್ಬುಳಿಕೆಯಂತೆ, ಸ್ವಪ್ನದಲ್ಲಿ ತೋರುವ ವಿದ್ರುಮ ಸೌಭಾಗ್ಯದಂತೆ, ಇಂತಿವು ಹೊದ್ದದ ನಿಲವು ತನ್ನಾತ್ಮನೊಲು. ಕ್ಷುದ್ರದ ಸೂತಕವ ಹರಿದು ನಿಂದ ಅಬದ್ಧಭವಿ ಅನಾಚಾರಿಗೆ ಆರ ಹೊದ್ದಿಗೆಯೂ ಇಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ