ಅಥವಾ
(16) (7) (5) (0) (3) (0) (0) (0) (2) (0) (0) (0) (1) (0) ಅಂ (5) ಅಃ (5) (13) (1) (1) (0) (0) (0) (0) (3) (0) (0) (0) (0) (0) (0) (0) (3) (0) (0) (2) (8) (4) (0) (10) (0) (3) (1) (2) (0) (2) (7) (2) (1) (5) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸಕಲದ್ರವ್ಯಂಗಳೆಂದು ಕಲ್ಪಿಸಿ, ಇದಿರಿಟ್ಟು ಅರ್ಪಿಸಿಕೊಂಬುದು, ಅರ್ಪಿಸಿಹೆನೆಂಬುದು, ಅದಾವ ಚಿತ್ತ ? ಅದು ಉದಕ ವರ್ಣದ ಭೇದ, ವರ್ಣಕೂಟದ ಭಾವ. ಲೆಪ್ಪವ ಲಕ್ಷಿಸಿದಂತೆ, ಅದೆಂತೆಯಿದ್ದಿತ್ತು ಚಿತ್ತವಂತೆ ಇದ್ದಿತ್ತು, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಸುಳಿವ ಅನಿಲಂಗೆ ಮೈಯೆಲ್ಲ ಕೈ. ಸುಡುವ ಅನಲಂಗೆ ಭಾವವೆಲ್ಲ ಬಾಯಿ. ಹಲಿವ ನೀರಿಂಗೆ ತನ್ಮಯವೆಲ್ಲ ಅಡಿ. ಅರಿಯದೆ ಮರೆಯದೆ ಮುಟ್ಟಿಹಂಗೆ ಕಡೆ ನಡು ಮೊದಲೆಂದು ಅರ್ಪಿತವಿಲ್ಲ. ಇಲ್ಲಾ ಎಂಬ ಸೂತಕಕ್ಕೆ ಮುನ್ನವೆ ಇಲ್ಲ, ಕಾಮಧೂಮ ಧೂಳೇಶ್ವರನು.
--------------
ಮಾದಾರ ಧೂಳಯ್ಯ
ಸತ್ತು ಸಾಯದುದ ಕಂಡು, ಸಾಯದುದ ಸತ್ತಿತ್ತೆಂಬುದನರಿದು, ಈ ಉಭಯದ ಗೊತ್ತಿನಲ್ಲಿ ಲಕ್ಷ್ಯದ ಭಾವ ನಷ್ಟವಾಗಿ, ಉರಿ ಸಾರವ ಕೊಂಡು ಉರಿದಂತೆ, ಆ ಉರಿ ನಂದಿದಲ್ಲಿ, ಉಭಯ ನಿರವಯವಾಯಿತ್ತು, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಸರ್ವಘಟಂಗಳಲ್ಲಿ ಸುಖದುಃಖ ಅನುಭವಿಸುವ ಆ ಆತ್ಮ ಒಂದೋ, ಎರಡೋ? ಸರ್ವಯೋನಿಗಳಲ್ಲಿ ಕೂಡುವ ಶಿಶ್ನೆಯ ಸುಖ ಒಂದೋ, ಎರಡೋ ? ಆತ್ಮ ಒಂದೆಂದಡೆ ಘಟಭೇದಕ್ಕೆ ಭಿನ್ನವಾಗಿಪ್ಪುದು. ಆತ್ಮ ಹಲವೆಂದಡೆ ಚೇತನ ಸ್ವಭಾವ ಏಕವಾಗಿಪ್ಪುದು. ಆ ಘಟ ಆತ್ಮನ ಕೂಟ ಎಂತೆಯಿದ್ದಿತ್ತು ಅಂತೆ ಸುಖವಿದ್ದಿತ್ತು. ಯೋನಿಯ ಘಟ ಸಾಕಾರ ಎಂತೆಯಿದ್ದಿತ್ತು ಅಂತೆಯಿದ್ದಿತ್ತು ಶಿಶ್ನೆಯ ಯೋಗ. ಆತ್ಮನ ಘಟಸಂಗ ಜಾತಿಯ ಸುಜಾತಿಯ ಕೂಟಸ್ಥ ವಿಶ್ವಾಸದ ಭ್ರಾಂತಿಯ ಭ್ರಾಮಕಯೆಂತಿದ್ದಿತ್ತು ಅಂತೆಯಿದ್ದಿತ್ತು ಆತ್ಮ. ಇಂತೀ ಘಟದ ಸಾಕಾರವಡಗಿ ತೋರುವ ಆತ್ಮನ ಪರಿ. ಭಿನ್ನ ಇಂದ್ರಿಯಂಗಳ ಹಲವು ಸಂಚಿನ ಯೋನಿ. ಅದ ಸಂಧಿಸಿ ಕೂಡಿಹೆನೆಂಬ ಅರಿಕೆಯ ತೃಷ್ಣೆಯ ಶಿಶ್ನೆ ತಲಹಗೆಟ್ಟಲ್ಲಿ, ಭ್ರಾಂತಿನ ಭ್ರಮೆಯ ಸೂತಕ ಹೋಯಿತ್ತು, ಕಾಮಧೂಮ ಧೂಳೇಶ್ವರನ ತಾನು ತಾನಾದ ಕಾರಣ.
--------------
ಮಾದಾರ ಧೂಳಯ್ಯ
ಸತ್ಯಶುದ್ಧಕಾಯಕವ ಮಾಡಿ ತಂದು, ವಂಚನೆಯಿಲ್ಲದೆ ಪ್ರಪಂಚಳಿದು, ನಿಚ್ಚಜಂಗಮಕ್ಕೆ ದಾಸೋಹವ ಮಾಡುವ ಸದ್ಭಕ್ತನ ಹೃದಯದೊಳಗೆ ಅಚ್ಚೊತ್ತಿದಂತಿಪ್ಪ, ಕಾಮಧೂಮ ಧೂಳೇಶ್ವರ.
--------------
ಮಾದಾರ ಧೂಳಯ್ಯ