ಅಲ್ಲಮಪ್ರಭುದೇವರು

ಅಯ್ಯಾ ನೀನೆನಗೆ ಗುರುವಪ್ಪಡೆ, ನಾ ನಿನಗೆ
ಶಿಷ್ಯನಪ್ಪಡೆ,
ಎನ್ನ ಕರಣಾದಿ ಗುಣಂಗಳ ಕಳೆದು,
ಎನ್ನ ಕಾಯದ ಕರ್ಮವ ತೊಡೆದು,
ಎನ್ನ ಪ್ರಾಣನ ಧರ್ಮವ ನಿಲಿಸಿ,
ನೀನೆನ್ನ ಕಾಯದಲಡಗಿ, ನೀನೆನ್ನ ಪ್ರಾಣದಲಡಗಿ
ನೀನೆನ್ನ ಭಾವದಲಡಗಿ, ನೀನೆನ್ನ ಕರಸ್ಥಲಕ್ಕೆ
ಬಂದು
ಕಾರುಣ್ಯವ ಮಾಡಾ ಗುಹೇಶ್ವರಾ
Back Delete