ಅಲ್ಲಮಪ್ರಭುದೇವರು

ಹಗಲು ನಾಲ್ಕು ಜಾವ ಅಶನಕ್ಕೆ ಕುದಿವರು.
ಇರುಳು ನಾಲ್ಕು ಜಾವ ವ್ಯಸನಕ್ಕೆ ಕುದಿವರು.
ಕಂಡವರ ಕಂಡು ಮಂಡೆಯ ಬೋಳಿಸಿಕೊಂಬುವರು.
ಉಂಬುವರ ಕಂಡು ಉಂಬುವರು.
ಪುಣ್ಯಕ್ಷೇತ್ರ ಪುರುಷಕ್ಷೇತ್ರ,
ಅಷ್ಟವಿಧಾರ್ಚನೆ ಷೋಡಶೋಪಚಾರವೆಂಬುದಲ್ಲದೆ
ತಮ್ಮ ನಿಧಾನವ ಸಾಧಿಸುವ ಭೇದವನರಿಯದೆ
ಷಡುಸ್ಥಲಜ್ಞಾನಿಗಳೆಲ್ಲಾ ಸತ್ತರಲ್ಲಾ ಗುಹೇಶ್ವರಾ.
Back Delete