ಅಲ್ಲಮಪ್ರಭುದೇವರು

ಕಾಯವೆಂಬ ಕಲ್ಪಿತವ ಕಳೆದು, ಪ್ರಾಣವೆಂಬ ಸೂತಕವ ಹರಿದು,
ನಿಜಭಕ್ತಿ ಸಾಧ್ಯವಾದಲ್ಲದೆ ಲಿಂಗಪರಿಣಾಮವನೆಯ್ದಿಸಬಾರದು (ವೇಧಿಸಬಾರದು
?)
ಅನು ಮಾಡಿದೆ, ನೀವು ಕೈಕೊಳ್ಳಿ ಎಂದಡೆ ಅದೇ ಅಜಾÕನ.
ನಮ್ಮ ಗುಹೇಶ್ವರಲಿಂಗಕ್ಕೆ ಕುರುಹಳಿದು ನಿಜ ಉಳಿದವಂಗಲ್ಲದೆ
ಪದಾರ್ಥವ ನೀಡಬಾರದು ಕಾಣಾ ಸಂಗನಬಸವಣ್ಣಾ.
Back Delete