ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಅಃ ಪದದಿಂದ ಪ್ರಾರಂಭವಾಗುವ ವಚನಗಳು

ಅಂಥ ಬ್ರಹ್ಮಾಂಡವ ಅರವತ್ತಾ ್ನಲ್ಕು ಸಾವಿರದ ಆರುನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉಗ್ರವೆಂಬ ಭುವನ. ಆ ಭುವನದೊಳು ಲೋಕನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಇಪ್ಪತ್ತುಕೋಟಿ ನಾರಾಯಣ ರುದ್ರ ಬ್ರಹ್ಮಾದಿಗಳಿಹರು ನೋಡಾ. ಮುನ್ನೂರಾ ಇಪ್ಪತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗವು ಲಿಂಗವೇಧೆಯಾದ ಬಳಿಕ ಅಂಗವೆಲ್ಲವೂ ನಷ್ಟವಾಗಿ ಲಿಂಗತನ್ಮಯವಾಗಿಪ್ಪುದಾಗಿ ದಿಟದಿಂದಿಪ್ಪ ಸಜ್ಜನಕ್ಕೆ ಬೇರೆ ಅಂಗವುಂಟೆ ಲಿಂಗವಲ್ಲದೆ? ಇದು ಕಾರಣ ಸೌರಾಷ್ಟ್ರ ಸೋಮೇಶ್ವರನ ಶರಣರು ನಿರ್ದೇಹಿಗಳು.
--------------
ಆದಯ್ಯ
ಅಂದಚಂದದ ಬಣ್ಣವ ಹೊದ್ದು, ಹರನ ಶರಣರೆಂಬ ಅಣ್ಣಗಳೆಲ್ಲರು ಕರಣಂಗಳೆಂಬ ಉರವಣೆಯ ಅಂಬಿಗಾರದೆ, ಭಕ್ತಿಯೆಂಬ ಹರಿಗೆಯ ಹಿಡಿದು, ಮುಕ್ತಿಯೆಂಬ ಗ್ರಾಮವ ಮುತ್ತಿ ಕಾದಿ, ಸತ್ತರೆಲ್ಲರು ರುದ್ರನ ಶೂಲದ ಘಾಯದಲ್ಲಿ. ಎನಗೆ ಹೊದ್ದಿಗೆ ಯಾವುದೋ, ನಿಃಕಳಂಕ ಮಲ್ಲಿಕಾರ್ಜುನಾ?
--------------
ಮೋಳಿಗೆ ಮಾರಯ್ಯ
ಅಂಥ ಬ್ರಹ್ಮಾಂಡವ ಮೂವತ್ತೆಂಟುಸಾವಿರದ ಮುನ್ನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅಂಗುಷ್ಠಮಾತ್ರಭುವನಯೆಂಬ ಭುವನ. ಆ ಭುವನದೊಳು ಅಖಂಡಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾತೊಂಬತ್ತುಕೋಟಿ ದೇವರ್ಕಳು, ಇಂದ್ರಚಂದ್ರಾದಿತ್ಯರು, ವೇದಪುರುಷರು, ಮುನೀಂದ್ರರು, ನೂರಾತೊಂಬತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂತರಂಗ ಬಹಿರಂಗ ಶುದ್ಧನಾದ ಶರಣನ ದಿಟಪುಟವ ನೋಡಿರಯ್ಯ. ಅಂತಪ್ಪ ಶರಣನ ಕಂಡು ನಮೋ ನಮೋ ಎನುತಿರ್ದೆಯಯ್ಯಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಂಗಭಾವದಿಂದ ಲಿಂಗಮುಖವನು ಅಂಗಮುಖವನು ಅರಿದು ಜಂಗಮ ಮುಖವನು ಅರಿದಡೆ ಸಂಸಾರವೆಂಬ ಬಂಧನವಿಲ್ಲವಯ್ಯ. ಜಂಗಮವೆಂದರೆ ಸಾಕ್ಷಾತ್ ಪರವಸ್ತು ತಾನೆ ನೋಡಾ. ಅದೇನು ಕಾರಣವೆಂದಡೆ: ಅಂಗವಾರಕ್ಕೆ ಲಿಂಗವಾರಕ್ಕೆ ಮೇಲಾಗಿ ಆ ಅಂಗವನು ಲಿಂಗವನು ತನ್ನಲ್ಲಿ ಏಕೀಕರಿಸಿಕೊಂಡು ತಾನು ಪರಮ ಚೈತನ್ಯನಾದ ಕಾರಣ. ಆ ಪರವಸ್ತುವಿನ ಪ್ರಸನ್ನ ಪ್ರಸಾದಮುಖವನರಿದು ಇಹ ಪರವ ನಿಶ್ಚೆ ೈಸೂದಿಲ್ಲ ನೋಡಾ. ಅದೇನು ಕಾರಣವೆಂದಡೆ: ಇಹ ಪರಕ್ಕೆ ಹೊರಗಾಗಿ ಪರಮ ಪದದಲ್ಲಿ ಪರಿಣಾಮಿಯಾದನಾಗಿ ಈ ತ್ರಿವಿಧವು ಒಂದೆಯೆಂದರಿದಾತನೆ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ತಾನೆ ಕಾಣಿರೋ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಂಗೋದಕಂದ ಅಂಗರಕ್ಷಣಂಗಳ ಮಾಡುವೆ; ಲಿಂಗೋದಕಂದ ಸರ್ವಪವಿತ್ರವ ಮಾಡುವೆ; ಪ್ರಸಾದೋದಕಂದ ಪ್ರಾಣನ ನೆಲೆಯನರಿವೆ ಇಂತೀ ತ್ರಿವಿಧೋದಕಂದ ಶುದ್ಧನಹೆ, ಸಿದ್ಧನಹೆ, ಪ್ರಸಿದ್ಧನಹೆ, ಕಪಿಲಸಿದ್ಧಮಲ್ಲಿಕಾರ್ಜುನ ತಾನಹೆ
--------------
ಸಿದ್ಧರಾಮೇಶ್ವರ
ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ ಲೀಯವಾಯಿತ್ತೆಂದಡೆ ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ ಕಾರಣವೇಕಯ್ಯಾ ಶರಣಂಗೆ ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ಕೂಡಲಸಂಗಮದೇವಾ, ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ ಹೇಳಯ್ಯಾ ನಿಮ್ಮ ಧರ್ಮ.
--------------
ಬಸವಣ್ಣ
ಅಂಧಕನು ಓಡ ಹಿಡಿದು ಸ್ವರೂಪವ ತಾ ನೋಡುವಂತೆ, ಶೈವ ಗುರುವಿನಲ್ಲಿ ಲಿಂಗ ಸಾಹಿತ್ಯವಾದ ಶಿಷ್ಯನ ವಿಧಿಯ ನೋಡಿರೆ ! ಗುರುವಿಂಗೆ ದೂರಾರ್ಚನೆ ಶಿಷ್ಯಂಗೆ ಇಷ್ಟಲಿಂಗಾರ್ಚನೆ, ಗುರು ವಾಯುಪ್ರಾಣಿ, ಶಿಷ್ಯ ಲಿಂಗಪ್ರಾಣಿ, ಗುರು ಭೂತದೇಹಿ, ಶಿಷ್ಯ ಲಿಂಗದೇಹಿ, ಗುರು ಅನರ್ಪಿತಭುಂಜಕ, ಶಿಷ್ಯ ಲಿಂಗಾರ್ಪಿತಭುಂಜಕ, ಗುರು ಅಗ್ನಿದಹನಸಂಪತ್ತು, ಶಿಷ್ಯ ಸಿದ್ಧಸಮಾಧಿಸಂಪತ್ತು, ಎಂತುಂಟು ಹೇಳಿರಣ್ಣಾ ? ``ಜ್ಞಾನಹೀನಗುgõ್ಞ ಪ್ರಾಪ್ತೇ ಶಿಷ್ಯಜ್ಞಾನಂ ನ ಸಿಧ್ಯತಿ ಮೂಲಚ್ಛಿನ್ನೇ ಯಥಾ ವೃಕ್ಷೇ ಕಥಂ ಪುಷ್ಪಂ ಫಲಂ ಭವೇತ್ ಎಂದುದಾಗಿ ಇವರಿಬ್ಬರ ಗುರುಶಿಷ್ಯಸಂಬಂಧಕ್ಕೆ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಂತರಂಗದಲ್ಲಿ ಆವರಿಸಿ, ಬಹಿರಂಗದಲ್ಲಿ ತೋರುವೆ. ಕಂಗಳ ಕೊನೆಯಲ್ಲಿ ಮೂರುತಿಯಾಗಿ, ಮನದ ಕೊನೆಯಲ್ಲಿ ತೋರುವೆ. ಎನ್ನ ಬ್ರಹ್ಮರಂಧ್ರದಲ್ಲಿ ತೋರುವ ಪರಂಜ್ಯೋತಿ ಉರಿಲಿಂಗದೇವ ನೀನಯ್ಯಾ.
--------------
ಉರಿಲಿಂಗದೇವ
ಅಂಗಕ್ಕಾಚಾರ ಮನಕ್ಕೆ ಜ್ಞಾನ ಸಮರಸಾದ್ವೈತವಾದ ಮತ್ತೆ ಪುನರಪಿ ಪುನರ್ದೀಕ್ಷೆಯುಂಟೆ ? ಗರುಡಿಯಲ್ಲಿ ಕೋಲಲ್ಲದೆ, ಕಾಳಗದಲ್ಲಿ ಉಂಟೆ ಕೋಲು ? ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ, ಭಕ್ತರಿಗುಂಟೆ ? ವ್ರತತಪ್ಪಿ ಅನುಗ್ರಹವಿಡಿದ ನರಕಿಗಳಿಗೆ ಮುಕ್ತಿ ಇಲ್ಲ ಎಂದೆ ಅಮುಗೇಶ್ವರಲಿಂಗದಲ್ಲಿ.
--------------
ಅಮುಗೆ ರಾಯಮ್ಮ
ಅಂತರಂಗದಲ್ಲಿ ಭವಿಯನೊಳಕೊಂಡು, ಬಹಿರಂಗದಲ್ಲಿ ಭಕ್ತಿಯನೊಳಕೊಂಡು, ಆತ್ಮಸಂಗದಲ್ಲಿ ಪ್ರಸಾದವನೊಳಕೊಂಡು, ಇಪ್ಪ ಭಕ್ತರ ಕಾಣೆನಯ್ಯಾ ನಾನು, ಇಂತಪ್ಪ ಲಿಂಗೈಕ್ಯರ ಕಾಣೆನಯ್ಯಾ. ಅಂತರಂಗದಲ್ಲಿ ಸುಳಿದಾಡುವ ತನುಗುಣಾದಿಗಳ, ಮನಗುಣಾದಿಗಳ, ಪ್ರಾಣಗುಣಾದಿಗಳ ಕಳೆದಲ್ಲಿ ಶರಣರಹರೆ ? ತನು ಮನ ಧನವ ಕೊಟ್ಟಲ್ಲಿ ಭಕ್ತರಹರೆ ? ಉಂಬವರ ಕಂಡು ಕೈನೀಡಿದಡೆ ಪ್ರಸಾದಿಗಳಹರೆ ? ಅಂತರಂಗ ಬಹಿರಂಗ ಆತ್ಮಸಂಗ_ಈ ತ್ರಿವಿಧದ ಭೇದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.
--------------
ಅಲ್ಲಮಪ್ರಭುದೇವರು
ಅಂಥ ಬ್ರಹ್ಮಾಂಡವ ತೊಂಬತ್ತೊಂದು ಲಕ್ಷದ ಮೇಲೆ ಸಾವಿರದ ಒಂಬಯಿನೂರಾಯೆಂಟು ಬ್ರಹ್ಮಾಂಡವನೊಳಕೊಂಡುದೊಂದು ಧರ್ಮಪರೇಣವೆಂಬ ಭುವನ. ಆ ಭುವನದೊಳು ಧರ್ಮಾಧರ್ಮರಹಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಐವತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಒಂಬತ್ತುನೂರಾ ಐವತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತೊಂದುಸಾವಿರದ ಐದುನೂರಾಯೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸಂವರ್ತವೆಂಬ ಭುವನ. ಆ ಭುವನದೊಳು ಅನಂತಕಾಮಸಂಹಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ಐವತ್ತೈದುಕೋಟಿ ಬ್ರಹ್ಮ-ನಾರಾಯಣ-ರುದ್ರರು, ಇಂದ್ರಚಂದ್ರಾದಿತ್ಯರಿಹರು ನೋಡಾ. ಇನ್ನೂರಾಐವತ್ತೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತೇಳುಲಕ್ಷದ ಮೇಲೆ ಸಾವಿರದೇಳುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪಾಶಹಸ್ತವೆಂಬ ಭುವನ. ಆ ಭುವನದೊಳು ಗಜಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ

ಇನ್ನಷ್ಟು ...
-->