ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಈ ಪರಂಜ್ಯೋತಿ ಪ್ರಕಾಶವಾದ ಬೆಳಗ ನೋಡಿ ನೋಟವ ಮರೆದೆ, ಕೂಡಿ ಕೂಟವ ಮರೆದೆ. ತಾನು ತಾನಾಗಿಪ್ಪ ಮಹಾಬೆಳಗಿನಲ್ಲಿ ನಾನು ಓಲಾಡಿ ಸುಖಿಯಾದೆನಯ್ಯಾ, ಚೆನ್ನಮಲ್ಲೇಶ್ವರನ ಕರುಣವಿಡಿದು ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಈರೇಳುಭುವನವನು ಒಡಲೊ?ಗೆ ಇಂಬಿಟ್ಟುಕೊಂಡು ಲಿಂಗರೂಪನಾಗಿ ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಡಿತ್ತು ನೋಡಾ ! ಅಂತಹ ಅಗಮ್ಯ ಅಗೋಚರ ಲಿಂಗವೆಂದರಿದು ಭಕ್ತನು ತಾನು ಹಿಂದೆ ನಡೆದ ಜೂಜು ಬೇಂಟೆ ಚದುರಂಗ ಲೆತ್ತ ಪಗಡೆಯಾಟಂಗಳಂ ಪರಿಹಾಸಕರ ಕೂಡಿಕೊಂಡು ಕೆಲೆದಾಡುವದಂ ಬಿಟ್ಟು ಬಂಧುವ ತೊರೆದು ಮುಂದೆ ಶಿವಪಥದಲ್ಲಿ ನಡೆಯಬಲ್ಲಾತನೇ ಸದ್ಭಕ್ತನಲ್ಲದೆ, ಹಣದಾಸೆಗೆ ಹಂಗಿಗನಾಗಿ ಗುಣದಾಸೆಗೆ ಅಮೇಧ್ಯವ ತಿಂದು ಬಂಧುಗಳ ಬಿಟ್ಟು ಭಕ್ತಿಯಿಲ್ಲವೇ ಉಂಟೇ ಎಂಬ ಪಂಚಮಹಾಪಾತಕರ ಮುಖವ ನೋಡಲಾಗದು ಅವರ ಮಾತ ಕೇಳಲಾಗದು, ಅದೆಂತೆಂದಡೆ; ಕತ್ತೆ ಭಕ್ತನಾದರೆ ಕಿಸುಕುಳವ ತಿಂಬುದ ಮಾಂಬುದೆ ? ಬೆಕ್ಕು ಭಕ್ತನಾದರೆ ಇಲಿಯ ತಿಂಬುದ ಮಾಂಬುದೆ ? ಹಂದಿ ಭಕ್ತನಾದರೆ ಹಡಿಕೆಯ ತಿಂಬುದ ಮಾಂಬುದೆ ? ಶುನಕ ಭಕ್ತನಾದರೆ ಮೂಳೆ ಮಾಂಸವ ತಿಂಬುದ ಮಾಂಬುದೆ ? ಕೋಳಿಯ ತಂದು ಪಂಜರವ ಕೂಡಿ ಅಮೃತಾನ್ನವನಿಕ್ಕಿ ಸಲಹಿದರೆ ಅದು ತಾನೆ ಮತ್ತೆ ತಿಂಬ ಹಡುವಿಂಗೆ ಚಿತ್ತವನಿಕ್ಕುದುಂ ಮಾಂಬುದೆ ? ಇಂತೀ ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಅನಾಚಾರವ ಬಿಟ್ಟು ಸದಾಚಾರದಲ್ಲಿ ನಡೆಯಬೇಕು. ಗುರುವಾದಡೂ ಆಗಲಿ ಭಕ್ತನಾದಡೂ ಆಗಲಿ ತಾನು ಹಿಂದೆ ಭವಿಯಾಗಿದ್ದಾಗ ಭುಂಜಿಸುತ್ತಿದ್ದ ಸುರೆ ಮಾಂಸ ಭಂಗಿ ಭವಿಸಂಗ ಭವಿಪಾಕ ಇಂತಿವ ಬಿಡದಿರ್ದವರುಗಳು ಆ ಕತ್ತೆ ಬೆಕ್ಕು ಸೂಕರ ಸೊಣಗ ಕೋಳಿಗಿಂದತ್ತತ್ತ ಕಡೆ ನೋಡಿರೇ. ಚಿನ್ನದ ಬೆಟ್ಟವನೇರಿದವನು ಕಣ್ಣುಕಾಣದಿಪ್ಪಂತೆ ಗಣೆಯನೇರಿದ ಡೊಂಬ ಮೈ ಮರೆದಿಪ್ಪಂತೆ ನಡುನೀರಿಗೆ ಹೋದ ಹರಿಗೋಲು ತಲೆ ಕೆಳಗಾದಂತೆ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಈಶ್ವರನ ಕಾಬುದೊಂದಾಸೆಯುಳ್ಳೊಡೆ ಪರದೇಶಕ್ಕೆ ಹೋಗಿ ಬಳಲದಿರು, ಕಾಶಿಯಲ್ಲಿ ಕಾಯವ ವಿನಾಶವ ಮಾಡಲುಬೇಡ. ನಿನ್ನಲ್ಲಿ ನೀ ತಿಳಿದು ನೋಡಾ, ಸರ್ವೇಶ ಮುಳ್ಳಗುತ್ತ ತೆರಹಿಲ್ಲೆಂದಡೆ, ಒಂದು ಗೋಂಟ ಸಾರಿರ್ದನೆ ? ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಈರೇಳು ಲೋಕವನೊಳಕೊಂಡ ಮಹಾಘನಲಿಂಗವು ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಬ ಪರಿಯ ನೋಡಾ. ಅಗಮ್ಯ ಅಗೋಚರ ಅಪ್ರಮಾಣ ಲಿಂಗಸಂಗದಲ್ಲಿ ಇರಬಲ್ಲಾತನೇ ಭಕ್ತನು. ಹೀಗಲ್ಲದೆ ಕೇಡಿಲ್ಲದೆ ಲಿಂಗಕ್ಕೆ ಕೇಡ ಕಟ್ಟಿ ಹೋದೀತೋ ಇದ್ದೀತೋ ಅಳಿದೀತೋ ಹೇಗೋ ಎಂತೋ ಎಂದು ಚಿಂತಿಸಿ ನುಡಿವರು ಬ್ಥಿನ್ನವಿಜ್ಞಾನಿಗಳು. ಆ ಲಿಂಗದೊಳಗೆ ಅಖಿಳಾಂಡಕೋಟಿ ಬ್ರಹ್ಮಾಂಡಗಳಡಗಿದವು. ಸಾಕ್ಷಿ : 'ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮಾಲ್ಲಿಂಗಂ ಪ್ರಪೂಜಯೇತ್ ||' ಎಂದುದಾಗಿ, ಇಂತಪ್ಪ ಘನಲಿಂಗವ ಶ್ರೀಗುರು ಭಕ್ತಂಗೆ ಕರ-ಮನ-ಭಾವಕ್ಕೆ ಪ್ರತ್ಯಕ್ಷವಾಗಿ ಮಾಡಿಕೊಟ್ಟ ಬಳಿಕ ಎಂದಿಗೂ ಅಗಲಬೇಡಿಯೆಂದು ಗಣಸಾಕ್ಷಿಯಾಗಿ ಮಾಡಿಕೊಟ್ಟ ಬಳಿಕ ಅಗಲಲುಂಟೆ ? ಅಗಲಿದಡೆ ಲಿಂಗವು ಗುರುತಲ್ಪಕವೆ ಸರಿ. ಆವ ಶಾಸ್ತ್ರ ಆವ ಆಗಮ ಆವ ವಚನ ಹೇಳಿಲ್ಲವಾಗಿ, ಮತ್ತಂ, ಸಂಪಿಗೆಯ ಪುಷ್ಪದ ಪರಿಮಳ ಬೇರೆ ಆಗಲುಂಟೆ ? ಇಂತಪ್ಪ ಮಹಾಘನಲಿಂಗವು ಹೇಗಿಪ್ಪುದೆಂದಡೆ : ಅವರವರ ಮನ ಭಾವ ಹೇಗಿಪ್ಪುದೊ ಹಾಗಿಪ್ಪುದು. ಇದಕ್ಕೆ ದೃಷ್ಟಾಂತ : ಉದಕ ಒಂದೇ, ಹಲವು ವೃಕ್ಷದ ಹಣ್ಣು ಮಧುರ ಒಗರು ಖಾರ ಹುಳಿ ಕಹಿ ಸವಿ. ಉದಕ ಒಂದೇ, ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ. ಈ ಆರು ವರ್ಣಂಗಳಲ್ಲಿ ಬೆರೆದುದು ಅಭ್ರಕ ಒಂದೇ! ಈ ಅಭ್ರಕ ಹೇಗೊ ಹಾಗೆ ಮನ, ಹಾಗೆ ಮಹಾಲಿಂಗ. ಹೀಗೆಂದರಿದಾತ ನಮ್ಮ ಶಾಂತಕೂಡಲಸಂಗಮದೇವ ಬಲ್ಲನಲ್ಲದೆ ಬ್ಥಿನ್ನಜ್ಞಾನಿಗಳು ಎತ್ತ ಬಲ್ಲರು ನೋಡಾ!
--------------
ಗಣದಾಸಿ ವೀರಣ್ಣ
ಈ ತೆರದಿಂ ತತ್ವಪ್ರಸಾದನಿರೂಪಣಾನಂತರದಲ್ಲಿ ಆದಿಪ್ರಸಾದಮಂ ಪೇಳ್ವೆನೆಂತೆನೆ- ಮೊದಲ ರಾಜಸವರ್ಗವೆನಿಸುವ ಚಂದ್ರಮಂಡಲದಿಂದ್ರದಳದಲ್ಲಿ ನ್ಯಸ್ತವಾದಕಾರಕ್ಕೆ ಹಕಾರದಲ್ಲಿ ಕೂಡಿಸೆ ಹೌ ಎಂದಾಯಿತ್ತದನಾಧಾರಾಧೇಯ ಸಂಜ್ಞಿತನಾದ ಬಿಂದುವಿನೊಡನೆ ಕೂಡಿಸೆ ಪೂರ್ವೋಕ್ತ ತಾಂತ್ರಿಕ ಮೂಲಪ್ರಸಾದಮಾದೊಡಂ ತನ್ನ ಔಯೆಂದಾದಿಶಕ್ತಿಯೊಡನೆ ಕೂಡಿಸೆ ಹೌಂ ಎಂದೆನಿಸಿ ಶಿವಮಯವಾದಾದಿಪ್ರಸಾದವಾದುದೆಂದು ನಿರವಿಸಿದೆಯಯ್ಯಾ, ಪರಶಿವಲಿಂಗ ಪರಿಪೂರ್ಣ ಪ್ರಭಾಂಗಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಈ ಮಂತ್ರೋದ್ಧರಣಕ್ಕೆ ನಾಗರಲಿಪಿಯೆ ಸ್ಪಷ್ಟಮದೆಂತೆನೆ || || ತ-ರಾ ಯಿಂದು ಸ್ವರಂ ಓ0 ಇದು ವ್ಯಂಜನವಿಶಿಷ್ಟ ಮೂಲಪ್ರಸಾದ ಮಂತ್ರಮೂರ್ತಿ. ಮರಲ್ದುಮಾ ಶಿವಾತ್ಮಕ ಮೂಲಪ್ರಸಾದಮಂತ್ರಮೂರ್ತಿಗೆ ಶಾಂಭವೀರೇಖೆಯೆನಿಪಡ್ಡಗೆರೆಗಳ ಶೃಂಗಂಗಳೆ ತೋಳ್ಗ- ಳ್ಬಳಿಕ್ಕಮಗ್ನಿ ಸಂಜ್ಞಿತವಾದಧೋರೇಖೆಗಳೆ ಆ ಶಿವಬೀಜಮೂರ್ತಿಗೆ ಚರಣಂಗಳಿಂತೀ ಮೂಲಪ್ರಸಾದಮಂತ್ರವೆ ಶಿವಮೂತ್ರ್ಯಾಕಾರವೆಂದು ನಿರವಿಸಿದೆಯಯ್ಯಾ, ಮಹಾಗುರು ಶಿವಲಿಂಗೇಶ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಈದ ಪಶುವಿನ ಮೊಲೆಯಲ್ಲಿ ಕೈಯನಿಕ್ಕಿದಡೆ ಕ್ಷೀರವಲ್ಲದೆ, ಬಂಜೆಯಾವಿನ [ಮೊಲೆಯಲ್ಲಿ] ಉಂಟೆ? ಇದರಂದವ ತಿಳಿವುದು ಲಿಂಗಾಂಗಿಗಳು. ಹೊತ್ತು ತುಂಬಿದವಳು ಬಲ್ಲಳು ತನ್ನ ನಿತ್ತರಿಸುವ ಬೇನೆಯ. ಭಕ್ತಿಯುಳ್ಳವರು ಬಲ್ಲರು ನಿಶ್ಚಟದ ಲಿಂಗಾಂಗಿಗಳ. ಇಂತೀ ಸತ್ಯವನರಿಯದೆ ಹೊತ್ತು ಹೋಕನಾಗಿ ನುಡಿವ ಮತ್ರ್ಯರಿಗೇಕೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಈ ಬಚ್ಚಬರಿಯ ಬಯಲ ಕಂಡಿಹೆನೆಂದರೆ, ಕಾಣಬಾರದು. ಕೇಳಿಹೆನೆಂದರೆ ಕೇಳಬಾರದು, ಹೇಳಿಹೆನೆಂದರೆ ಹೇಳಬಾರದು. ಇವ ಮೂರರ ಕಾಳಿಕೆಯ ಕಳೆದು, ಈ ಹನ್ನೆರಡ ಜಾಣಿಯಲ್ಲಿ ದಾಂಟಿ, ಒಂದರ ಮೇಲೆ ನಿಂದು, ಅಂದವಳಿಯದೆ, ಬಿಂದು ತುಳುಕದೆ, ಅಂದಂದಿನ ಹೊಸಪೂಜೆಯ ನೋಡಿ, ಕಣ್ದೆರೆದು ಕರಗಿ ಒಂದಾದ ಶರಣರ ಚರಣವ ತೋರಿ ಬದುಕಿಸಯ್ಯಾ ಎನ್ನ , ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಈಳೆ ನಿಂಬೆ ಮಾವು ಮಾದಲಕೆ ಹುಳಿನೀರನೆರೆದವರಾರಯ್ಯಾ? ಕಬ್ಬು ಬಾಳೆ ಹಲಸು ನಾರಿವಾಳಕ್ಕೆ ಸಿಹಿನೀರನೆರೆದವರಾರಯ್ಯಾ? ಕಳವೆ ರಾಜಾನ್ನ ಶಾಲ್ಯನ್ನಕ್ಕೆ ಓಗರದ ಉದಕವನೆರೆದವರಾರಯ್ಯಾ? ಮರುಗ ಮಲ್ಲಿಗೆ ಪಚ್ಚೆ ಮುಡಿವಾಳಕ್ಕೆ ಪರಿಮಳದುದಕವನೆರೆದವರಾರಯ್ಯಾ? ಇಂತೀ ಜಲವು ಒಂದೆ, ನೆಲನು ಒಂದೆ, ಆಕಾಶವು ಒಂದೆ. ಜಲವು ಹಲವು ದ್ರವ್ಯಂಗಳ ಕೂಡಿ ತನ್ನ ಪರಿಬೇರಾಗಿಹ ಹಾಗೆ, ಎನ್ನದೇವ ಚೆನ್ನಮಲ್ಲಿಕಾರ್ಜುನಯ್ಯನು ಹಲವು ಜಗಂಗಳ ಕೂಡಿಕೊಂಡಿರ್ದಡೇನು? ತನ್ನ ಪರಿ ಬೇರೆ.
--------------
ಅಕ್ಕಮಹಾದೇವಿ
ಈಶ್ವರನು ಅಲಂಕೃತರೂಪಾಗಿ ಜಗವ ತಾಳಿ ಬಂದಲ್ಲಿ ಮಾಯೆಯೆಂಬ ಶಕ್ತಿ ಜ್ಯೋತಿ ಕಾಣದ ಮರೆಯಲ್ಲಿ ತಮವಡಗಿಪ್ಪ ಭೇದದಂತೆ. ಚಿತ್ತಶುದ್ಧವಿಲ್ಲದವರ ಕರ್ತೃ ಭೃತ್ಯ ಸಂಬಂಧ ಉಭಯಕ್ಕೂಸರಿ. ಅರಿದು ಮಾಡುವಲ್ಲಿ ಅವನ ಅನುವನರಿದು ಮಾಡಿಸಿಕೊಂಬಲ್ಲಿ ಲಾಗಿನ ಪಶುವಿನಂತೆ ಉಭಯಗುಣ ಭೇದ. ಉಭಯಸ್ಥಲ ನಿರತ ಕಾಲಾಂತಕ ಬ್ಥೀಮೇಶ್ವರಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಈರೇಳುಲೋಕವ ಕೋಡಗ ನುಂಗಿತ್ತ ಕಂಡೆ. ನುಂಗಿದ ಕೋಡಗವ ಗುಂಗುರ ನುಂಗಿತ್ತು. ಗುಂಗುರ ಬಂದು ಕಣ್ಣ ಕಾಡಲಾಗಿ, ಕಣ್ಣಿನ ಕಾಡಿಗೆ ಅಳಿಯಲಾಗಿ, ಕಣ್ಣಿನ ಬಣ್ಣ ಕೆಟ್ಟಿತ್ತು. ಕಣ್ಣಿನ ಒಡೆಯ ನೋಡಿ ಗುಂಗುರ ಒರಸಲಾಗಿ, ಆ ಗುಂಗುರ ಸತ್ತು, ಕೋಡಗ ಉಳಿಯಿತ್ತು. ಆ ಕೋಡಗವನಾಡಿಸಿಕೊಂಡುಂಬ ಜೋಗಿಗಳಿಗೇಕೆ, ಆ ರೂಢನ ಸುದ್ದಿ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಈ ಸಕಲದೊಳಗೆ ಒಂದು ಸಯವಿಲ್ಲದೆ ನಾವು ಹಿರಿಯರು ನಾವು ಲಿಂಗವಂತರೆಂಬರು. ಇದಿರ ಕೈಯಲ್ಲಿ ಎನಿಸಿಕೊಳ್ಳುತ್ತಿಹರು ಮನ ನಾಚದೆ. ಇಂಥ ಮೂಗುನಾಚಿಗಳ ಮೆಚ್ಚುವನೆ ಮಹಾಲಿಂಗ ಗಜೇಶ್ವರನಲ್ಲಿ ಎನ್ನ ಹೆತ್ತ ತಂದೆ ಪೂರ್ವಾಚಾರ್ಯ ಸಂಗನಬಸವಣ
--------------
ಗಜೇಶ ಮಸಣಯ್ಯ
ಈ ಸಂಸರ್ಗದಲ್ಲಿ ಹುಟ್ಟಿದ ಶಿಶುವೆಂದು ಮಾಯಾಮೋಹದಿಂದ ಲಾಲಿಸಿ, ಸಕಲ ಸುಖಭೋಗಂಗಳಲ್ಲಿ ಪಾಲಿಸಿ, ವಸ್ತು ವಸ್ತ್ರ ಮುಂತಾದ ರತ್ನಮೌಕ್ತಿಕಂಗಳ ಗಳಿಸಿ ನಿಕ್ಷೇಪಿಸಿಪ್ಪವರಿಂದ ಕಡೆಯೆ? ತನ್ನ ಕರಕಮಲದಲ್ಲಿ ಹುಟ್ಟಿದ ಶಿಶುವಿಂಗೆ ಶಿವಜ್ಞಾನದಿಂದ ಬಂದ ಶಿಷ್ಯಂಗೆ ಶಿವಶ್ರದ್ಧೆ ಮೋಹ ಹೀಗಿರಬೇಕು. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ. ಮಾತುಳಂಗ ಮಧುಕೇಶ್ವರನು
--------------
ದಾಸೋಹದ ಸಂಗಣ್ಣ
ಈಶಾನ್ಯಮುರ್ತಿ ಮಲ್ಲಿಕಾರ್ಜುನಲಿಂಗವು, ರೂಪಿಗೆ ಬಂದ ಪರಿಯಿನ್ನೆಂತುಂಟೊ ?
--------------
ಕುರಂಗಲಿಂಗ
ಈ ಪೊಡವಿಯ ಮಡದಿಯ ನಡುನಯನದ ಬೆಡಗಿನ ಬೆಳಗಿನೊಳೆಸೆವಾ ಬಾಳೇಹಳ್ಳಿ ಸಿಂಹಾಸನಾದ್ಥೀಶ ಪೊಡವಿಡಿ ರುದ್ರಮುನಿಸ್ವಾಮಿಗಳ ಕರಕಂಚೋದ್ಭವರಾದ ಚಿಕ್ಕರೇವಣಸಿದ್ಧಸ್ವಾಮಿಗಳು ಎನಿಸಿದರು. ಆ ಚಿಕ್ಕ ರೇವಣಸಿದ್ಧಸ್ವಾಮಿಗಳ ಶಿಷ್ಯ ಗುರುನಂಜಸ್ವಾಮಿ, ಆ ಗುರುನಂಜಸ್ವಾಮಿಗಳ ಶಿಷ್ಯ ರಾಚೋಟಿಸ್ವಾಮಿ, ಆ ರಾಚೋಟಿಸ್ವಾಮಿಗಳ ಶಿಷ್ಯ ನಿಡುಮಾಮಿಡಿ ಕರಿಬಸವಸ್ವಾಮಿ, ಆ ಕರಿಬಸವಸ್ವಾಮಿಗಳ ಶಿಷ್ಯ ಮಲಘಣ ಶಾಂತಸ್ವಾಮಿಗಳು, ಆ ಮಲಘಣದ ಶಾಂತಸ್ವಾಮಿಗಳ ಶಿಷ್ಯ ಜಡೆಶಾಂತಸ್ವಾಮಿಗಳು ಆ ಜಡೆಶಾಂತಸ್ವಾಮಿಗಳ ಶಿಷ್ಯ ಮಹಾಂತಸ್ವಾಮಿಗಳು, ಆತನ ಶಿಷ್ಯ ಮಡಿವಾಳಸ್ವಾಮಿ, ಆತನ ಶಿಷ್ಯ ರಾಚೋಟಿಸ್ವಾಮಿಗಳು, ಆತನ ಶಿಷ್ಯ ಮಹಾಂತಸ್ವಾಮಿ, ಆತನ ಶಿಷ್ಯ ಅತೀತವ ಕೈಕೊಂಡು ಸರ್ವಕ್ಕೆ ಅತೀತನಾದ ಚಿಣಮಗೇರಿ ಚೌಡಾಪೂರ ನಡುಸೀಮಿ ಗುಡ್ಡದ ಯೋಗಿಯೆನಿಸಿದ ಮಹಾಂತಸ್ವಾಮಿಗಳು, ಆತನ ಶಿಷ್ಯ ಮಡಿವಾಳಸ್ವಾಮಿ, ಆತನ ಶಿಷ್ಯ ಮರಿಸ್ವಾಮಿಗಳು, ಆತನ ಶಿಷ್ಯ ಗುರುಬಸವದೇವರು. ಆ ಗುರು ಬಸವದೇವರ ಕನ್ನೆ ಶಿಷ್ಯ ಬಿದನೂರ ಮಡಿವಾಳಾಖ್ಯನು. ಆ ಮಡಿವಾಳಾಖ್ಯನೆಂಬ ನಾಮವಿಡಿದು ನಿರ್ನಾಮಲೀಲಾ ನಟಿಸಬೇಕೆಂಬ ಅರವಿನೊಳಗೆ ಮರವಾಗಿರ್ದಿಯಲ್ಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ

ಇನ್ನಷ್ಟು ...
-->