ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಛಲಮದವೆಂಬುದು ತಲೆಗೇರಿ ಗುರುಹಿರಿಯರ ನೆಲೆಯನರಿಯದೆ ಮದಿಸಿಪ್ಪರಯ್ಯ. ರೂಪಮದ ತಲೆಗೇರಿ ಮುಂದುಗೊಂಡು ತಮ್ಮ ತನುವಿನ ರೂಪ ಚೆಲ್ವಿಕೆ ನೋಡಿ ಮರುಳಾಗಿ ಚಿದ್ರೂಪನ ನೆನವ ಮರೆದರಯ್ಯಾ. ಯವ್ವನಮದ ತಲೆಗೇರಿ ಮದಸೊಕ್ಕಿದಾನೆಯಂತೆ ಪ್ರಯಾಸಮತ್ತರಾಗಿ ಕಾಮನ ಬಲೆಯೊಳಗೆ ಸಿಲ್ಕಿ ಕಾಮಾರಿನೆನವ ಮರೆದರಯ್ಯಾ. ಧನಮದವೆಂಬುದು ತನುವಿನೊಳು ಇಂಬುಗೊಂಡು ಅರ್ಥಭಾಗ್ಯ ಕಾಡಿ ವ್ಯರ್ಥ ಸತ್ತಿತು ಲೋಕ. ವಿದ್ಯಾಮದವೆಂಬುದು ಬುದ್ಧಿಗೆಡಿಸಿ ನಾ ಬಲ್ಲವ ತಾ ಬಲ್ಲವನೆಂದು ತರ್ಕಿಸಿ ಪ್ರಳಯಕಿಳಿದರು. ರಾಜ್ಯಮದವೆದ್ದು ರಾಜ್ಯವನಾಡಿಸಿ ಬೇಡಿಸಿಕೊಂಡೆನೆಂದು ರಾಜರಾಜರು ಹತವಾದರು. ತಪಮದವೆದ್ದು ನಾ ತಪಸಿ ನಾ ಸಿದ್ಧ ನಾ ಯೋಗಿ ನನಗಾರು ಸರಿಯಿಲ್ಲವೆಂದು ಅಹಂಕಾರಕ್ಕೆ ಗುರಿಯಾಗಿ ಭವಕ್ಕೆ ಬಂದರು ಹಲಬರು. ಇಂತೀ ಅಷ್ಟಮದವೆಂಬ ಭ್ರಾಂತು[ವ] ತೊಲಗಿಸಿ ನಿಭ್ರಾಂತನಾಗಿರಬಲ್ಲರೆ ಶಿವಶರಣನೆಂಬೆ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಛಲವನೆತ್ತಿಕೊಂಡ ಬಳಿಕ ಬಲುಹು ಸಲಿಸಲೇಬೇಕು. ತನ್ನ ಮನವ ತಾನರಿದು ಗೆಲಲೇಬೇಕು. ದೇವರೊಲವುಳ್ಳವರ ಕಂಡು ತಾನಾದೆನೆಂದೆಡೆ, ಛಲ ಸಲ್ಲದು ಕಂಡಯ್ಯಾ. ನೇಮವೆಂದಡೆ ಕಡೆ ಮುಟ್ಟಿಸಲೀಯೆ, ತಪ್ಪವಿಡಿವೆ ನೀನು. ಇದು ಕಾರಣ, ನಾನೇನು ಪೆರತೊಂದನರಿಯದಂತಿರಿಸೆನ್ನ, ಸಕಳೇಶ್ವರದೇವಾ.
--------------
ಸಕಳೇಶ ಮಾದರಸ
ಛಲಬೇಕು ಶರಣಂಗೆ ಪರಧನವನೊಲ್ಲೆನೆಂಬ, ಛಲಬೇಕು ಶರಣಂಗೆ ಪರಸತಿಯನೊಲ್ಲೆನೆಂಬ, ಛಲಬೇಕು ಶರಣಂಗೆ ಪರದೈವವನೊಲ್ಲೆನೆಂಬ, ಛಲಬೇಕು ಶರಣಂಗೆ ಲಿಂಗಜಂಗಮವನೊಂದೆಂಬ, ಛಲಬೇಕು ಶರಣಂಗೆ ಪ್ರಸಾದ ದಿಟವೆಂಬ, ಛಲವಿಲ್ಲದವರ ಮೆಚ್ಚ ಕೂಡಲಸಂಗಮದೇವ.
--------------
ಬಸವಣ್ಣ
ಛಲವಿರಬೇಕು ಶಿವಭಕ್ತಿಯ ಮಾಡುವಲ್ಲಿ ಹಿಡಿದುಬಿಡೆನೆಂಬ. ಛಲವಿರಬೇಕು ನಿತ್ಯನೇಮದಲ್ಲಿ ಹಿಡಿದು ಬಿಡೆನೆಂಬ. ಛಲವಿರಬೇಕು ಶೀಲವ್ರತದಲ್ಲಿ ಹಿಡಿದು ಬಿಡೆನೆಂಬ. ಛಲವಿರಬೇಕು ನಮ್ಮ ಅಖಂಡೇಶ್ವರಲಿಂಗವ ಕೂಡಿ ಎಂದೆಂದೂ ಅಗಲಬಾರದೆಂಬ ನೈಷೆ*ಯಲ್ಲಿ.
--------------
ಷಣ್ಮುಖಸ್ವಾಮಿ

-->