ಅಥವಾ

ಒಟ್ಟು 36 ಕಡೆಗಳಲ್ಲಿ , 19 ವಚನಕಾರರು , 33 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಮ್ಮ ಶಕ್ತಿ ಜಗದೊಳಗಿಪ್ಪುದು, ಜಗದ ಶಕ್ತಿ ನಿಮ್ಮೊಳಗಿಪ್ಪುದು. ಜಗಕ್ಕೆ ನಿಮಗೆ ಭೇದವಾದುದಕ್ಕೆ ಬೆರಗಾದೆನು ! ಅಂದೊಮ್ಮೆ ತ್ರಿಪುರವ ಸುಟ್ಟಲ್ಲಿ ನಾಚಿತ್ತೆನ್ನ ಮನವು. ಕಾಮನನುರುಹಿ ಕಾಮಹರನೆನಿಸಿಕೊಂಡಡೆ ನಿನ್ನ ಅಹಂಕಾರವ ನೋಡಿ ಹೇಸಿತ್ತೆನ್ನ ಮನವು. ಕಾಲನ ಸುಟ್ಟು ಬೊಟ್ಟನಿಟ್ಟಡೆ ನಗೆಗೆಡೆಯಾಯಿತ್ತು ನಿಮ್ಮ ಘನವೆನಗೆ. ಗುಹೇಶ್ವರಾ, ನೀ ಮುನಿದು ನೊಸಲಕಣ್ಣ ತೆಗೆದಡೆ ಎನ್ನ ಅಂಗಾಲೊಳಡಗಿತ್ತಯ್ಯಾ ನಿಮ್ಮ ಕೋಪ.
--------------
ಅಲ್ಲಮಪ್ರಭುದೇವರು
ಹುಸಿಯ ಹಸರವನಿಕ್ಕಿ ವಚನವನರ್ಪಿಸುವನಲ್ಲ. ಆನು ಬಲ್ಲೆನೆಂಬ ಅರಿವಿನ ಕೊರವಂಜಿಯಂತೆ ಜಗಕ್ಕೆ ಹೇಳುವನಲ್ಲ. ಘನಕ್ಕೆ ಮಹಾಘನ ತಾನಾದ ಕಾರಣ ಕೂಡಲಚೆನ್ನಸಂಗನ ಶರಣರು ಕುಟಿಲ ಕುಹಕದೊಳಗೆ ವರ್ತಿಸುವರಲ್ಲ.
--------------
ಚನ್ನಬಸವಣ್ಣ
ನೀನೊಲಿುತ್ತೆ ಪುಣ್ಯ, ನೀನೊಲ್ಲದುವೆ ಪಾಪ, ಸಕಲ ಜಗದೊಳಗೆ ಅನುಶ್ರುತನಾಗಿಪ್ಪೆಯಯ್ಯಾ. ನೀನೊಲಿದವನೆ ನಿಮ್ಮನರಿದವನು. ಪ್ರಸಾದಾದ್ದೇವತಾಭಕ್ತಿಃ ಪ್ರಸಾದೋ ಭಕ್ತಿಸಂಭವಃ ಯಥೈವಾಂಕುರತೋ ಬೀಜಂ ಬೀಜತೋ ವಾ ಯಥಾಂಕುರಃ ನೀನೊಲಿದವನೆ ಧನ್ಯ, ಜಗಕ್ಕೆ ಪಾವನ ಕೂಡಲಸಂಗಮದೇವಾ. 506
--------------
ಬಸವಣ್ಣ
-->