ಅಥವಾ

ಒಟ್ಟು 34 ಕಡೆಗಳಲ್ಲಿ , 20 ವಚನಕಾರರು , 33 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೃಥ್ವಿ ಜಡನೆಂದರಿದವಂಗೆ ಸ್ಥಾವರಾದಿಗಳಲ್ಲಿ ಎರಗಲೇಕಯ್ಯಾ ? ಅಪ್ಪು ಜಡನೆಂದರಿದವಂಗೆ ತೀರ್ಥಸ್ನಾನಂಗಳಲ್ಲಿ ಅತಿಶಯವೇಕಯ್ಯಾ ? ತೇಜ ಜಡನೆಂದರಿದವಂಗೆ ಹೋಮ ಸಮಾಧಿಗಳೇಕಯ್ಯಾ ? ವಾಯು ಜಡನೆಂದರಿದವಂಗೆ ಧ್ಯಾನ ಮೌನಂಗಳ ಹಿಡಿಯಲೇಕಯ್ಯಾ ? ಆಕಾಶ ಜಡನೆಂದರಿದವಂಗೆ ಮಂತ್ರ(ತ್ರಾ ?)ರೂಡಿs ಏಕಯ್ಯಾ ? ಇನಿತೂ ಜಡನೆಂದರಿದವಂಗೆ ವಿಧಿ ಕಿಂಕರತೆ ಇಲ್ಲವಯ್ಯಾ ? ಗುಹೇಶ್ವರನ ನಿಜವು ಇದು ತಾನೆಂದರಿದ ಮಹಾತ್ಮಂಗೆ.
--------------
ಅಲ್ಲಮಪ್ರಭುದೇವರು
ಎನಿಸು ಕಾಲ ಕಲ್ಲು ನೀರೊಳಗಿದ್ದಡೇನು, ನೆನೆದು ಮೃದುವಾಗಬಲ್ಲುದೆ ಎನಿಸು ಕಾಲ ನಿಮ್ಮ ಪೂಜಿಸಿ ಏವೆನಯ್ಯಾ, ಮನದಲ್ಲಿ ದೃಡವಿಲ್ಲದನ್ನಕ್ಕ ನಿದಾನವ ಕಾಯಿದಿರ್ದ ಬೆಂತರನಂತೆ ಅದರ ವಿಧಿ ಎನಗಾಯಿತ್ತು, ಕೂಡಲಸಂಗಮದೇವಾ. 99
--------------
ಬಸವಣ್ಣ
ವಿಧಿಯ ಮೀರಿ ಮೈದೋರುವ ಮಂತ್ರ ತಂತ್ರ ಸಿದ್ಧರ ಕಾಣೆ. ಕಾಲವಶ ಕರ್ಮವಶ ನಿಮ್ಮ ಮಂತ್ರ ತಂತ್ರ ಕಾವುದೆ? ಸಿಮ್ಮಲಿಗೆಯ ಚೆನ್ನರಾಮಲಿಂಗದಲ್ಲಿ ವಿಧಿ ಮುಟ್ಟುವನ್ನಕ್ಕ ವಿಜಯರಾಗಿ ಬದುಕಿರೊ.
--------------
ಚಂದಿಮರಸ
-->