ಅಥವಾ

ಒಟ್ಟು 17 ಕಡೆಗಳಲ್ಲಿ , 12 ವಚನಕಾರರು , 17 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವ ತೋರಿಹ ಆವಿಂಗೆ ಕೊಳಗದ ತೋರಿಹ ಕೆಚ್ಚಲು. ತಾಳುದ್ದ (ತಾಳ ಮರದುದ್ದ ?)ವೆರಡು ಕೋಡು ನೋಡಾ ! ಆದನರಸ ಹೋಗಿ ಆರುದಿನ, ಅದು ಕೆಟ್ಟು ಮೂರುದಿನ ! ಅಘಟಿತ ಘಟಿತ ಗುಹೇಶ್ವರಾ, [ಅರಸುವ ಬಾರೈ]s
--------------
ಅಲ್ಲಮಪ್ರಭುದೇವರು
ಅಘಟಿತ ಘಟಿತವೆಂಬ ಮಹಾಘನವ ಸಾಧಿಸುವಡೆ, ಮಡಿವಾಳನ ಕೃಪೆಯಿಲ್ಲದನ್ನಕ್ಕರ, ಎಂತರಿಯಬಪ್ಪುದು ನಿಜಲಿಂಗೈಕ್ಯವನು ? ಎನ್ನ ಆರೂಡಿsಯ ಅರಿವಿಂಗೆ ನೀನೆ ಶೃಂಗಾರ. ಕೂಡಲಚೆನ್ನಸಂಗಮದೇವರಲ್ಲಿ ಮಡಿವಾಳನ ಕೈಯ ಸ್ವಾಯತವಾದೆನು ಕಾಣಾ ಪ್ರಭುವೆ.
--------------
ಚನ್ನಬಸವಣ್ಣ
-->