ಅಥವಾ

ಒಟ್ಟು 24 ಕಡೆಗಳಲ್ಲಿ , 11 ವಚನಕಾರರು , 20 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಮಾರ್ಗಾಚಾರ ಸತ್ಕ್ರಿಯಾಭಕ್ತಿಜ್ಞಾನವೈರಾಗ್ಯ ಷಟ್ಸ್ಥಲಮಾರ್ಗವಿಡಿದು ಆಚರಿಸುವ ಅಚ್ಚಪ್ರಸಾದಿ ನಿಚ್ಚಪ್ರಸಾದಿ ಸಮಯಪ್ರಸಾದಿ ಸ್ವಯಚರಪರಮೂರ್ತಿಗಳು ಮೊದಲಾಗಿ ಲಿಂಗಾರ್ಚನೆಯ ವೇಳೆ ತ್ರಿಕಾಲಂಗಳಲ್ಲಿ ದಂತಪಙÂ್ತಚೇತನ ಪರಿಯಂತರ ಮಧುರ ಒಗರು ಖಾರ ಆಮ್ಲ ಕಹಿಯುಕ್ತವಾದ ಕಾಷ*ದೊಳಗೆ ಅರ್ಪಿತಕ್ಕೆ ಅಯೋಗ್ಯವಾದುದನುಳಿದು, ಯೋಗ್ಯವಾದ ಕಾಷ*ವ ದ್ವಾದಶಾಂಗುಲವಾದಡೂ ಸರಿಯೆ, ಅಷ್ಟಾಂಗುಲವಾದಡೂ ಸರಿಯೆ, ಮೀರಿದಡೆ ಷಡಂಗುಲದಿಂದಾಗಲಿ ದಂತಧಾವನ ಕ್ರಿಯೆಗಳ ಮಾಡುವದು. ದಂತಪಙÂ್ತಯ ಚೇತನ ತಪ್ಪಿದಲ್ಲಿ ಪರ್ಣದಿಂದಾಗಲಿ, ಗುರುಪಾದೊದಕಮಿಶ್ರವಾದ ವಿಭೂತಿಯಿಂದಲಾ[ಗಲಿ] ದಂತಪಙÂ್ತಯ ತೀಡಿ, ಮುಖಸ್ನಾನವ ಮಾಡಿ, ಲಿಂಗಾರ್ಚನೆ ಲಿಂಗಾರ್ಪಣವ ಮಾಡಬೇಕಲ್ಲದೆ ಇಂತು ಗುರುವಾಕ್ಯವ ಮೀರಿ, ಸಂಸಾರಲಂಪಟದಿಂದ ಹಾಂಗೆ ಭುಂಜಿಸುವಾತಂಗೆ ಪ್ರಸಾದಿಸ್ಥಲ ಮೊದಲು, ಪರಸ್ಥಲ ಕಡೆಯಾಗಿ ಪಿಂಡಾದಿ ಜ್ಞಾನಶೂನ್ಯಸ್ಥಲಕ್ಕೆ ಹೊರಗು ನೋಡ, ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಗುರುವೆಂಬವನೇ ಹೊಲೆಯ. ಲಿಂಗಾಂಗಿ ಎಂಬವನೇ ಮಾದಿಗ. ಜಂಗಮವೆಂಬವನೇ ಸಮಗಾರ. ಈ ಮೂವರೊಳಗೆ ಹೊಕ್ಕು ಬಳಕೆಯ ಮಾಡಿದಾತನೇ ಭಕ್ತ. ಆ ಭಕ್ತನೆಂಬುವನೇ ಡೋರ. ಇಂತೀ ಚತುರ್ವಿಧ ಭೇದವ ತಿಳಿದು, ಪಾದೋದಕ ಪ್ರಸಾದವ ಕೊಡಬಲ್ಲರೆ ಗುರುಲಿಂಗಜಂಗಮವೆಂಬೆ. ಈ ನಿರ್ಣಯವ ತಿಳಿದು ಪಾದೋದಕ ಪ್ರಸಾದ ಕೊಳ್ಳಬಲ್ಲರೆ ಭಕ್ತ, ಮಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣೈಕ್ಯರೆಂಬ ಷಟ್‍ಸ್ಥಲಬ್ರಹ್ಮಿ ಎಂಬೆ. ಆತನೇ ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿ, ಏಕಪ್ರಸಾದಿ. ಇಂತೀ ಕ್ರಮವರಿತು ಪಾದೋದಕ ಪ್ರಸಾದವ ಕೊಳ್ಳಬಲ್ಲರೆ ಮೋಕ್ಷವಾಗುವುದಕ್ಕೆ ತಡವಿಲ್ಲವಯ್ಯ. ಈ ಭೇದವ ತಿಳಿಯದೆ ಅಯ್ಯಾ, ಹಸಾದ ಮಹಾಪ್ರಸಾದ ಪಾಲಿಸಿರೆಂದು, ಕರುಣಿಸಿರೆಂದು ಕೃಪೆ ಮಾಡಿ ಭೂತದೇಹಿಗಳೆದುರಿಗೆ ಪಾತಕಮನುಜರು ಅಡ್ಡಡ್ಡ ಬಿದ್ದು ಎದಿ ವಡ್ಡುಗಟ್ಟಿ ಮೊಳಕಾಲು ಗೂಡುಗಟ್ಟಿ ಹಣೆ ಬುಗುಟಿ ಎದ್ದು ಈ ಪರಿಯಲ್ಲಿ ಅಯ್ಯಾ ಪ್ರಸಾದ ಪಾಲಿಸೆಂದು ಪಡಕೊಂಡು ಲಿಂಗಕ್ಕೆ ತೋರಿ ತೋರಿ ತಮ್ಮ ಉದರಾಗ್ನಿ ಅಡಗಿಸಿಕೊಂಡು, ಕಡೆಯಲ್ಲಿ ಎಣ್ಣೆಯ ನಾತಕ್ಕೆ ಅಲಗ ನೆಕ್ಕುವ ಶ್ವಾನನ ಹಾಗೆ ತಮ್ಮ ನಾಲಿಗಿಯಲಿ ತಳಗಿ ತಾಬಾಣವ ನೆಕ್ಕಿ ನೆಕ್ಕಿ, ಆ ತಳಗಿ ತಾಬಾಣ ಸವೆದು ಸಣ್ಣಾಗಿ ಹೋದವಲ್ಲದೆ, ಇಂತಪ್ಪ ಮತಿಭ್ರಷ್ಟ ಹೊಲೆಯ ಮಾದಿಗರಿಗೆ ಪರಶಿವನ ಮಹಾಪ್ರಸಾದ ಸಾಧ್ಯವೇ? ಸಾಧ್ಯವಲ್ಲ. ಮುಂದೆ ಎಂಬತ್ತುನಾಲ್ಕುಲಕ್ಷ ಯೋನಿದ್ವಾರದಲ್ಲಿ ತಿರುಗಿ ತಿರುಗಿ ಭವದತ್ತ ಮುಖವಾಗಿ ನರಕವನೆ ಭುಂಜಿಸುವದು ಉಂಟೆಂದ ನಿಮ್ಮ ಶರಣ ವೀರಾಧಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶೀಲ ಶೀಲವೆಂತೆಂಬಿರಯ್ಯಾ, ಶೀಲದ ನೆಲೆಯ ಬಲ್ಲರೆ ಹೇಳಿರೊ, ಅರಿಯದಿರ್ದಡೆ ಕೇಳಿರೊ. ಕಾಮ ಒಂದನೆಯ ಭವಿ, ಕ್ರೋಧ ಎರಡನೆಯ ಭವಿ, ಲೋಭ ಮೂರನೆಯ ಭವಿ, ಮೋಹ ನಾಲ್ಕನೆಯ ಭವಿ, ಮದ ಐದನೆಯ ಭವಿ, ಮತ್ಸರ ಆರನೆಯ ಭವಿ, ಆಮಿಷ ಏಳನೆಯ ಭವಿ. ಇಂತೀ ಏಳು ಭವಿಗಳ ತಮ್ಮೊಳಗಿಟ್ಟುಕೊಂಡು, ಲಿಂಗವಿಲ್ಲದವರ ಭವಿ ಭವಿ ಎಂಬರು. ತಮ್ಮಂತರಂಗದಲ್ಲಿರ್ದ ಲಿಂಗಾಂಗದ ಸುದ್ದಿಯನರಿದೆ, ಅಚ್ಚಪ್ರಸಾದಿ ನಿಚ್ಚಪ್ರಸಾದಿ ಸಮಯಪ್ರಸಾದಿಗಳೆಂದು ಜಲಕ್ಕೆ ಕನ್ನವನಿಕ್ಕಿ, ಉದಕವ ತಂದು, ಲಿಂಗಕ್ಕೆ ಮಜ್ಜನಕ್ಕೆರೆವ ಪಗಲುಗಳ್ಳರಿಗೆ ಮೆಚ್ಚುವನೇ, ನಿಃಕಳಂಕ ಮಲ್ಲಿಕಾರ್ಜುನ ?
--------------
ಮೋಳಿಗೆ ಮಾರಯ್ಯ
ಭಕ್ತಿವಿಡಿದು ಭಕ್ತನಾದ ಪ್ರಸಾದಿ. ಮೋಕ್ಷವಿಡಿದು, ಧೈರ್ಯವಿಡಿದು ಆ ಭಕ್ತಂಗೆ ಮಾಹೇಶ್ವರನಾದ ಪ್ರಸಾದಿ; ಕಾರಣವಿಡಿದು ಅವಧಾನ ತಪ್ಪದ ಆ ಭಕ್ತಂಗೆ ಪ್ರಸಾದಿಯಾದ ಪ್ರಸಾದಿ; ಕರ್ಮರಹಿತನಾಗಿ ಕಾಲಕಲ್ಪಿತವಿಲ್ಲದ ಆ ಭಕ್ತಂಗೆ ಪ್ರಾಣಲಿಂಗಿಯಾದ ಪ್ರಸಾದಿ. ಪತಿಭಕತ್ತಿವಿಡಿದು ಧರ್ಮಾರ್ಥಕಾಮಮೋಕ್ಷಂಗಳಾಸೆಯ ನಿವೃತ್ತಿಯಂ ಮಾಡಿದ ಆ ಭಕ್ತಂಗೆ ಶರಣನಾದ ಪ್ರಸಾದಿ. ಈ ಉಭಯ ಸಮರಸವೇಕವೆಂದು ತಿಳಿದು, ಉಭಯಭಾವ ಉರಿಕರ್ಪೂರ ಸಂಯೋಗವಾದ ಆ ಭಕ್ತಂಗೆ ಐಕ್ಯನಾದ ಪ್ರಸಾದಿ. ನಮ್ಮ ಕಪಿಲಸಿದ್ದ ಮಲ್ಲಿನಾಥನಲ್ಲಿ, ಸರ್ವಕ್ಕೆ ಚೈತನ್ಯವಾದ ನಮ್ಮ ಚೆನ್ನಬಸವಣ್ಣನೆಂಬ ಅಚ್ಚಪ್ರಸಾದಿ.
--------------
ಸಿದ್ಧರಾಮೇಶ್ವರ
ಅಂತೊಪ್ಪುವ ಸಚ್ಚಿದಾನಂದ ಧ್ಯಾನದಿಂದ, ನಿಮ್ಮ ಪರಿಪೂರ್ಣ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ಎಂದು ಬೇಡಿಕೊಂಡು ಅಭಯವಾದ ಮೇಲೆ ಬಂದು ಮೊದಲಹಾಗೆ ಅಲ್ಲಿ ಮೂರ್ತವ ಮಾಡಿ, ಆ ಜಂಗಮಮೂರ್ತಿಗಳು ಸಲಿಸಿದೋಪಾದಿಯಲ್ಲಿ ಅನಾದಿಮೂಲಮಂತ್ರಸೂತ್ರವಿಡಿದು ತಾನು ಸಲಿಸುವುದು. ಆ ಮೇಲೆ, ಅಚ್ಚಪ್ರಸಾದಿ ನಿಚ್ಚಪ್ರಸಾದಿ ಸಮಯಪ್ರಸಾದಿ ಚಿತ್ಕಲಾಪ್ರಸಾದಿ ಮೊದಲಾದ ಷಟ್ಸ್ಥಲ ಭಕ್ತ ಮಹೇಶ್ವರರು, ಅದೇ ರೀತಿಯಲ್ಲಿ ಸಲಿಸುವುದು ಪೂರ್ವಪುರಾತನೋಕ್ತವು. ಉಳಿದ ತ್ರಿವಿಧ ದೀಕ್ಷೆಗಳರಿಯದೆ, ಕ್ರಿಯಾಪ್ರಸಾದದ ಕುರುಹ ಕಾಣದೆ, ಷಟ್ಸ ್ಥಲಮಾರ್ಗವರಿಯದೆ, ಇಷ್ಟಲಿಂಗಧಾರಕ ಉಪಾಧಿಗಳು ಆ ಗದ್ದುಗೆಯ ತೆಗೆದು, ಲಿಂಗಕ್ಕರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ : ಅವರಿಗೆ ತ್ರಿವಿಧದೀಕ್ಷಾನುಗ್ರಹ ಪ್ರಸನ್ನಪ್ರಸಾದ ಷಟ್ಸ್ಥಲಮಾರ್ಗ ಸರ್ವಾಚಾರಸಂಪತ್ತಿನ ಆಚರಣೆ ಮುಂದಿಹುದರಿಂದ ಅವರು ಬಟ್ಟಲ ಎತ್ತಲಾಗದು. ಹೀಂಗೆ ಸರ್ವರು ಸಲಿಸಿದ ಮೇಲೆ ಕೊಟ್ಟ ಕೊಂಡ ಭಕ್ತ ಜಂಗಮವು ಇರ್ವರೂ ಕೂಡಿ, ಅನಾದಿ ಮೂಲಮಂತ್ರಸೂತ್ರವಿಡಿದು, ಮುಕ್ತಾಯವ ಮಾಡಿದಲ್ಲಿಗೆ ದಶವಿಧಲಿಂಗಸಂಬಂಧದಿಂದ ದಶವಿಧಪಾದೋದಕ ಲಿಂಗೋದಕ ಪ್ರಸಾದೋದಕಂಗಳಲ್ಲಿ ಪರಿಪೂರ್ಣತೃಪ್ತರೆ ನಿಮ್ಮ ಪ್ರತಿಬಿಂಬರಯ್ಯ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
-->