ಅಥವಾ

ಒಟ್ಟು 16 ಕಡೆಗಳಲ್ಲಿ , 10 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಯನಾಸನ ಪರವಿಲ್ಲೆಂದುದು. ಜ್ಞಾನಾಜ್ಞಾನ ಭಾವ ನೋಟ ತಾನಲ್ಲ, ಅರಿವಿನ ಭಾವ ಸ್ವತಂತ್ರವಿಲ್ಲ ಕಾಣಾ. ಆಕಾಯದಲ್ಲಿ ಅದ್ವೈತ ಚರಿತ್ರ; ಅರಿವಿನಲನುಗ್ರಹಿಸಿ ಸಕಾಯದಲ್ಲಿ ಸದೈವ ಚರಿತ್ರ. ಮರಹು ಉದಯಿಸದ ನಿರುಗೆಯ ಪವನ ಬ್ರಹ್ಮರಂಧ್ರರಹಿತ ! ಶಯನಾಸನವೆಂದಲ್ಲಿ ಗುಹೇಶ್ವರನೆನಲು ಹೇಸಿತ್ತು.
--------------
ಅಲ್ಲಮಪ್ರಭುದೇವರು
-->