ಅಥವಾ

ಒಟ್ಟು 20 ಕಡೆಗಳಲ್ಲಿ , 12 ವಚನಕಾರರು , 18 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯ ಎತ್ತಿದ (ಇಕ್ಕಿದ?) ಮಣಿ ಮುಕುಟದ ಮೇಲೆ ಸುತ್ತಿದ ನಾಗಭೂಷಣದ ಪಡೆಯೊಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಇಕ್ಕಿದ ಕರೋಟಿಮಾಲೆಯೊಳಗಿಪ್ಪ ರುದ್ರರು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಇಕ್ಕಿದ ರುಂಡಮಾಲೆಯೊಳಗಿಪ್ಪ ಮುಂಡಧಾರಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಉಟ್ಟ ಗಜಚರ್ಮದೊಳಗಿಪ್ಪ ಋಷಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಖಟ್ವಾಂಗದೊಳಗಿಪ್ಪ ಮನುಮುನಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಗಂಗೆ ಗೌರಿ ಭೃಂಗಿ ಮೊದಲಾಗಿ ಶಿವನಿಪ್ಪ ನೆಲೆಯನರಿಯರು, ಗುಹೇಶ್ವರ ನಿಮ್ಮ ಶರಣ ಸಂಗನಬಸವಣ್ಣ ಬಲ
--------------
ಅಲ್ಲಮಪ್ರಭುದೇವರು
ಲಿಂಗದ ಸಂಗದಲ್ಲಿಪ್ಪ ಅಂಗ ಹಿಂಗದೆ ಅಂಗಜನ ಸರಳಿಂಗೆ ಭಂಗವಾಗದ ಅಭಂಗಂಗೆ ಗಂಗೆ ಗೋದಾವರಿ ತುಂಗಭದ್ರೆಯ ಸಂಗಮದ ಸಂಗದ ಆಲಿಂಗನದ ಹಂಗು ಸಂಘಟಿಸಲುಂಟೆ ? ಸಂಗ ನಿಸ್ಸಂಗವೆಂಬುಭಯ ಸಂಗವಳಿದ ನಿರಂಗ ನಿರುಪಾಧಿಕ ನಿರಂಜನ ನಿರಾಶ್ರಯ ನಿರ್ಮಳ ನಿಃಕಲ ನಿಶ್ಚಲ ನಿರವಯ ನಿರ್ಭಿನ್ನ ನಿರುಪಮ್ಯ ನಿರ್ವಿಕಲ್ಪ ನಿರಹಂಕಾರ ನಿರಪೇಕ್ಷ ನಿರವಸ್ಥ ನಿರ್ಮೋಹಿ ನಿರ್ಮಾಯ ನಿರಾವರಣ ನಿರಾಲಂಬ ನಿತ್ಯನಿರಾಳ ನಿಃಪ್ರಿಯ ನೀನೆ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಅಯ್ಯ ! ನಿರಾಳ ನಿಃಶೂನ್ಯ ಪರಮ ಭಕ್ತ_ಜಂಗಮ ತಾನಾಗಲರಿಯದೆ ಬರಿದೆ ಅಹಂಕರಿಸಿ ಮುಂದುಗೊಂಡು ಮೂರು ಮಲಗಳ ಸ್ವೀಕರಿಸಿ, ನಾವೆ ಭಕ್ತ_ಜಂಗಮವೆಂದು ನುಡಿವ ಕರ್ಮಕಾಂಡಿಗಳು ಕಾಶಿ, ಕೇತಾರ, ಶ್ರೀಶೈಲ, ಗಯಾ, ಪ್ರಯಾಗ, ಶಿವಗಂಗೆ, ಕಂಚಿ, ಕಾಳಹಸ್ತಿ, ಪಂಪಾಕ್ಷೇತ್ರ, ವೀರಣ್ಣ, ಬಸವಣ್ಣ, ಕಲ್ಲಣ್ಣ, ಮಲ್ಲಣ್ಣ, ಕಂಥೆ, ಕಮಂಡಲ, ಗದ್ದಿಗೆ, ಪಾವುಗೆ, ಭಸ್ಮ, ಘಂಟಿಕೆ, ಪುರಾಣ, ದಂಡಾಗ್ರ, ಗಿಳಿಲು, ಶಂಖು, ತಿಥಿ, ವಾರ, ನಕ್ಷತ್ರ, ಹುಣ್ಣಿವೆ, ಅಮಾವಾಸ್ಯೆ, ಸೂರ್ಯ, ಚಂದ್ರಾಗ್ನಿ, ದೀಪಾರತಿ ಗಂಗೆ, ಗೌರಿ, ವಿಘ್ನೇಶ್ವರ ಮೊದಲಾದವು ಇವು ದೈವಂಗಳೆಂದು ಕಲ್ಲು, ಮಣ್ಣು, ಮರದಿಂದ ರಚಿಸಿ, ಸಂದಿ-ಗೊಂದಿ_ಮಾಡು- ಜಗುಲಿಯ ಮಾಡಿಟ್ಟು, ಅದರ ತೊಳೆದ ನೀರು, ಎಂಜಲವ ತಿಂಬವರ ದೇವ_ಭಕ್ತರೆನಬಹುದೆ ? ಇಂತಪ್ಪ ಅನಾಚಾರಿ ಶ್ವಪಚರ, ಭಕ್ತ_ಜಂಗಮ_ದೇವರೆಂದು ಪೂಜಿಸಲಾಗದು. ನಿರಾಭಾರಿ ವೀರಶೈವಾಚಾರ ಕ್ರಿಯಾಜ್ಞಾನ ವೈರಾಗ್ಯ ಸದ್ಭಕ್ತಿಯುಳ್ಳ ಸದ್ಭಕ್ತ ಶಿವಶರಣನ ಪೂಜಿಸಿ ಪಾದೋದಕ_ಪ್ರಸಾದವ ಕೊಂಡಡೆ ಭವಪಾಶಕರ್ಮಂಗಳು ಮಾಣ್ಬವು ಕಾಣಾ ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
-->